ಜಾಕ್ವೆಲಿನ್ ಫರ್ನಾಂಡಿಸ್ ನಿವಾಸದ ಕಟ್ಟಡದಲ್ಲಿ ಅಗ್ನಿ ಅವಘಡ; ಎಲ್ಲರೂ ಅಪಾಯದಿಂದ ಪಾರು

13ನೇ ಅಂತಸ್ತಿನ ಕಟ್ಟಡದ ಕಿಚನ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಇದೇ ಬಿಲ್ಡಿಂಗ್​ನಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ವಾಸವಾಗಿದ್ದಾರೆ. ಅವರದ್ದು ಐದು ಬಿಎಚ್​ಕೆ ಮನೆ ಹೊಂದಿದ್ದಾರೆ. 2023ರಲ್ಲಿ ಅವರು ಇಲ್ಲಿ ಮನೆ ಖರೀಸಿ ಮಾಡಿದ್ದರು.

ಜಾಕ್ವೆಲಿನ್ ಫರ್ನಾಂಡಿಸ್ ನಿವಾಸದ ಕಟ್ಟಡದಲ್ಲಿ ಅಗ್ನಿ ಅವಘಡ; ಎಲ್ಲರೂ ಅಪಾಯದಿಂದ ಪಾರು
ಜಾಕ್ವೆಲಿನ್
Follow us
ರಾಜೇಶ್ ದುಗ್ಗುಮನೆ
|

Updated on: Mar 07, 2024 | 6:56 AM

ಮುಂಬೈನ ಬಾಂದ್ರಾದಲ್ಲಿರುವ ಪಾಲಿ ಹಿಲ್​ನ ನವ್ರೋಜ್ ಹಿಲ್ ಸೊಸೈಟಿ ಅಪಾರ್ಟ್​ಮೆಂಟ್​ನ ಕಟ್ಟಡದಲ್ಲಿ ಬುಧವಾರ (ಮಾರ್ಚ್ 6) ಅಗ್ನಿ ಅವಘಡ ನಡೆದಿದೆ. ಮಾಹಿತಿ ತಿಳಿದ ತಕ್ಷಣ ನಾಲ್ಕು ಅಗ್ನಿ ಶಾಮಕ ವಾಹನ, ಮೂರು ಜಂಬೋ ಟ್ಯಾಂಕರ್ಸ್ ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿದ್ದಾರೆ. ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಇಲ್ಲಿಯೇ ವಾಸವಾಗಿದ್ದಾರೆ. 17 ಅಂತಸ್ತನ್ನು ಈ ಕಟ್ಟಡ ಹೊಂದಿದೆ. ಸದ್ಯದ ಮಟ್ಟಿಗೆ ಯಾರಿಗೂ ಹಾನಿ ಉಂಟಾಗಿಲ್ಲ. ಬೆಂಕಿ ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ ಎನ್ನಲಾಗಿದೆ.

13ನೇ ಅಂತಸ್ತಿನ ಕಟ್ಟಡದ ಕಿಚನ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಇದೇ ಬಿಲ್ಡಿಂಗ್​ನಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ವಾಸವಾಗಿದ್ದಾರೆ. ಅವರದ್ದು ಐದು ಬಿಎಚ್​ಕೆ ಮನೆ ಹೊಂದಿದ್ದಾರೆ. 2023ರಲ್ಲಿ ಅವರು ಇಲ್ಲಿ ಮನೆ ಖರೀಸಿ ಮಾಡಿದ್ದರು. ಕಳೆದ ವರ್ಷ ಜುಲೈ ತಿಂಗಳಲ್ಲಿ ಅವರ ಮನೆಯ ವಿಡಿಯೋ ವೈರಲ್​ ಆಗಿತ್ತು.

ಈ ಕಟ್ಟಡದಲ್ಲಿ ಹಲವು ಉದ್ಯಮಿಗಳು, ಗಣ್ಯರು ವಾಸವಾಗಿದ್ದಾರೆ ಎನ್ನಲಾಗಿದೆ. ಈ ಭಾಗದಲ್ಲಿ ಸ್ಯೂಟ್ಸ್, ಪೆಂಟ್​ಹೌಸ್, ಸ್ಕೈ ವಿಲ್ಲಾ ಹಾಗೂ ಮ್ಯಾನ್ಶನ್ ರೀತಿಯ ಆಯ್ಕೆಗಳು ಇಲ್ಲಿವೆ. ಇಲ್ಲಿ ಅಕ್ಕಪಕ್ಕದಲ್ಲಿ ಸೈಫ್ ಅಲಿ ಖಾನ್, ಕರೀನಾ ಕಪೂರ್, ರಣಬೀರ್ ಕಪೂರ್, ಆಲಿಯಾ ಭಟ್ ಹಾಗೂ ಇತರರು ವಾಸವಾಗಿದ್ದಾರೆ. ಶಾರುಖ್ ಖಾನ್ ಹಾಗೂ ಸಲ್ಮಾನ್ ಖಾನ್ ಮನೆ ಕೂಡ ಈ ಕಟ್ಟಡದಿಂದ ಸಮೀಪದಲ್ಲಿ ಇದೆ. ರಣವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ ಕೂಡ ಈ ಭಾಗದಲ್ಲಿ ಮನೆ ಖರೀದಿಸುವ ಆಲೋಚನೆಯಲ್ಲಿ ಇದ್ದಾರೆ.

ಇದನ್ನೂ ಓದಿ: ಜಾಕ್ವೆಲಿನ್ ಫರ್ನಾಂಡಿಸ್​​ಗೆ ಮತ್ತೆ ಶುರುವಾಯ್ತು ಸಂಕಷ್ಟ

ಜಾಕ್ವೆಲಿನ್ ಫರ್ನಾಂಡಿಸ್ ಅವರು ಹಾಲಿವುಡ್​ಗೆ ಕಾಲಿಡುತ್ತಿದ್ದಾರೆ. ಆ್ಯಕ್ಷನ್ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ಇತ್ತೀಚೆಗೆ ಸೆಟ್​ನ ಫೋಟೋ ಹಂಚಿಕೊಂಡು ಅವರು ಸುದ್ದಿ ಆಗಿದ್ದರು. ಈ ಸಿನಿಮಾದ ಶೂಟಿಂಗ್ ಇಟಲಿಯಲ್ಲಿ ನಡೆಯುತ್ತಿದೆ. ಇದು ಅವರ ಮೊದಲ ಹಾಲಿವುಡ್ ಸಿನಿಮಾ. 200 ಕೋಟಿ ರೂಪಾಯಿ ವಂಚನೆ ಪ್ರಕರಣದ ಆರೋಪಿ ಸುಕೇಶ್ ಚಂದ್ರಶೇಖರ್ ಜೊತೆಗಿನ ರಿಲೇಶನ್​ಶಿಪ್​ನಿಂದ ಅವರು ಸಾಕಷ್ಟು ಸಾಕಷ್ಟು ಅನುಭವಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.