AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾಗಳನ್ನು ಬಿಟ್ಟು ವಾಚ್‌ಮ್ಯಾನ್ ಆದ ನಟ; ಈ ಪರಿಸ್ಥಿತಿ ಯಾರಿಗೂ ಬರಬಾರದು

ಸವಿ ಸಿದ್ಧು, ಒಮ್ಮೆ ಬಹುನಿರೀಕ್ಷಿತ ನಟ, ಇಂದು ಮುಂಬೈನ ಅಪಾರ್ಟ್‌ಮೆಂಟ್‌ನಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದಾರೆ. ‘ಟಕ್ಕರ್’, ‘ಬ್ಲ್ಯಾಕ್ ಫ್ರೈಡೇ’ ಮುಂತಾದ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದ ಸವಿ, ಕುಟುಂಬದವರ ನಷ್ಟ ಮತ್ತು ಆರ್ಥಿಕ ಸಂಕಷ್ಟದಿಂದಾಗಿ ಈ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಅವರ ಕಥೆ ಚಲನಚಿತ್ರ ರಂಗದ ಉದಯೋನ್ಮುಖ ಕಲಾವಿದರಿಗೆ ಎಚ್ಚರಿಕೆಯ ಸಂದೇಶವಾಗಿದೆ.

ಸಿನಿಮಾಗಳನ್ನು ಬಿಟ್ಟು ವಾಚ್‌ಮ್ಯಾನ್ ಆದ ನಟ; ಈ ಪರಿಸ್ಥಿತಿ ಯಾರಿಗೂ ಬರಬಾರದು
ಪಟಿಯಾಲಾ ಹೌಸ್
ರಾಜೇಶ್ ದುಗ್ಗುಮನೆ
|

Updated on: Apr 28, 2025 | 11:56 AM

Share

ಸಿನಿಮಾ ರಂಗ ನಿತ್ಯವೂ ನೂರಾರು ಮಂದಿಯನ್ನು ಆಕರ್ಷಿಸುತ್ತದೆ. ಆದರೆ, ಗೆಲುವು ಎಲ್ಲರಿಗೂ ಸಿಗೋದಿಲ್ಲ. ಅಲ್ಲಿ ಗೆಲುವು ಬೇಕು ಎಂದರೆ ನಿಜಕ್ಕೂ ಹೆಚ್ಚಿನ ತಾಳ್ಮೆ ಬೇಕು. ಆದರೂ ಗೆಲುವು ಸಿಕ್ಕೇ ಬಿಡುತ್ತದೆ ಎಂಬ ನಂಬಿಕೆ ಇಲ್ಲ. ಈ ರೀತಿ ಅವಕಾಶ ಹುಡುಕಿಕೊಂಡು ಬಂದವರ ಕಥೆ ಇದು. ಚಿತ್ರರಂಗದಲ್ಲಿ ಅವಕಾಶ ಪಡೆದುಕೊಳ್ಳಲು ಪ್ರಯತ್ನಿಸಿ, ಯಶಸ್ಸು ಸಿಗದೇ ಅವರು ಈಗ ಮುಂಬೈನ ಅಪಾರ್ಟ್‌ಮೆಂಟ್‌ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದಾರೆ. ಅವರೇ ಸವಿ ಸಿಧು (Savi Sidhu).

ಒಂದು ಕಾಲದಲ್ಲಿ ಅವರು ಹಲವು ಚಿತ್ರಗಳಲ್ಲಿ ನಟಿಸಿ ಒಳ್ಳೆಯ ಹೆಸರು ಗಳಿಸಿದ್ದರು ಸವಿ. ಅವರು ಸಣ್ಣ ಪಾತ್ರಗಳಲ್ಲಿ ನಟಿಸಿ ಗಮನ ಸೆಳೆದರು.  ಆದರೆ ಈಗ ಅವನು ಎಲ್ಲವನ್ನೂ ಕಳೆದುಕೊಂಡು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಅವರು ಸಹಾಯದ ನಿರೀಕ್ಷೆಯಲ್ಲಿ ಇದ್ದಾರೆ. ಒಂದೊಮ್ಮೆ ಚಿತ್ರರಂಗಕ್ಕೆ ಬರದೇ ಇದ್ದಿದ್ದರೆ ಬೇರೆ ಯಾವುದಾದರೂ ವೃತ್ತಿಯಲ್ಲಿ ಅವರು ತೊಡಗಿಕೊಂಡಿರುತ್ತಿದ್ದರೇನೋ. ಆದರೆ, ಈಗ ಭದ್ರತಾ ಸಿಬ್ಬಂದಿ ಆಗೋ ಸ್ಥಿತಿ ಬಂದಿದೆ.

ಲಕ್ನೋ ಮೂಲದ ಸವಿ ಸಿಧು, ಮಾಡೆಲಿಂಗ್ ಮೂಲಕ ಮಿಂಚಲು ಪ್ರಯತ್ನಿಸಿದರು. ಅಷ್ಟೇ ಅಲ್ಲ, ಅವರು ನಟನಾ ತರಬೇತಿ ಕೂಡ ಪಡೆದಿದ್ದಾರೆ. 1995ರಲ್ಲಿ ‘ಟಕ್ಕರ್’ ಚಿತ್ರದೊಂದಿಗೆ ಅವರು ವೃತ್ತಿ ಜೀವನ ಆರಂಭಿಸಿದರು. ನಂತರ ಅವರು ‘ಬ್ಲ್ಯಾಕ್ ಫ್ರೈಡೇ’, ‘ಗುಲಾಲ್’, ‘ಪಟಿಯಾಲ ಹೌಸ್’ ಮೊದಲಾದ ಚಿತ್ರಗಳಲ್ಲಿ ಸಣ್ಣಪುಟ್ಟ ಪಾತ್ರ ಮಾಡಿದರು. ಅವರು ಕೊನೆಯ ಬಾರಿಗೆ ‘ಬೆವಕೂಫಿಯಾ’ (2014) ಚಿತ್ರದಲ್ಲಿ ಕಾಣಿಸಿಕೊಂಡರು.

ಇದನ್ನೂ ಓದಿ
Image
ಇಡಿ ವಿಚಾರಣೆಗೆ ಹಾಜರಿ ಹಾಕಲ್ಲ ಮಹೇಶ್ ಬಾಬು; ಕಾರಣ ಇಲ್ಲಿದೆ
Image
ಉಗ್ರರ ಉದ್ದೇಶ ಹಾಳು ಮಾಡಲು ಕಾಶ್ಮೀರಕ್ಕೆ ಹೋದ ನಟ ಅತುಲ್ ಕುಲಕರ್ಣಿ
Image
ನಾನಿಗೆ ಕನ್ನಡ ಪಾಠ ಮಾಡಿದ ಶ್ರೀನಿಧಿ ಶೆಟ್ಟಿ; ಎಷ್ಟು ಕ್ಯೂಟ್ ನೋಡಿ
Image
ಮುಂಜಾನೆ ಎದ್ದು ತಮ್ಮದೇ ಮೂತ್ರ ಕುಡಿಯುತ್ತಾರೆ ನಟ ಪರೇಶ್ ರಾವಲ್

ಆ ಬಳಿಕ ಅವರಿಗೆ ಆಫರ್ ಸಿಗಲಿಲ್ಲ. ಜೀವನ ನಡೆಸೋದು ಕೂಡ ಕಷ್ಟ ಆಯಿತು. ನಂತರ ಏನು ಮಾಡಬೇಕು ಎಂದು ತಿಳಿಯದೇ ಅಂಧೇರಿ ಪಶ್ಚಿಮದ ಲೋಖಂಡ್​ವಾಲಾದಲ್ಲಿರುವ ದೊಡ್ಡ ಅಪಾರ್ಟ್‌ಮೆಂಟ್‌ನಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: ಉಗ್ರರ ಉದ್ದೇಶ ಹಾಳು ಮಾಡಲು ಕಾಶ್ಮೀರಕ್ಕೆ ಹೋದ ನಟ ಅತುಲ್ ಕುಲಕರ್ಣಿ

ಸವಿ ಚಲನಚಿತ್ರಗಳಿಂದ ದೂರ ಇರುವುದಕ್ಕೆ ಕಾರಣಗಳೇನು ಎಂದು ಹುಡುಕಿ ಹೋದಾಗ ಉತ್ತರ ಸಿಕ್ಕಿದೆ. ಅವರು ಪತ್ನಿಯನ್ನು ಕಳೆದುಕೊಂಡರು. ಅವರ ಹೆತ್ತವರು ಸಹ ನಿಧನರಾದರು. ನಂತರ ಅವರ ಅತ್ತೆ-ಮಾವ ಕೂಡ ನಿಧನ ಹೊಂದಿದರು. ಹೀಗಾಗಿ, ಅವರು ಒಂಟಿಯಾಗಬೇಕಾಯಿತು. ಈಗ ಅವರು ಒಬ್ಬಂಟಿಯಾಗಿ ವಾಸಿಸುತ್ತಾರೆ. ‘ಆರ್ಥಿಕ ತೊಂದರೆಗಳು ನನ್ನನ್ನು ಇನ್ನಷ್ಟು ಕುಗ್ಗಿಸಿದೆ. ಅದಕ್ಕಾಗಿಯೇ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದೇನೆ’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್