ಗಾಂಧಿ-ಗೋಡ್ಸೆ ನಡುವಿನ ಸೈದ್ಧಾಂತಿಕ ಯುದ್ಧದ ಕಥೆ ಹೇಳ ಹೊರಟ ನಿರ್ದೇಶಕ ರಾಜ್​ಕುಮಾರ್ ಸಂತೋಷಿ

Gandhi Godse Ek Yudh Movie Trailer: ಜನವರಿ 26 ಗಣರಾಜ್ಯೋತ್ಸವ. ಈ ವಿಶೇಷ ದಿನದಂದು ‘ಗಾಂಧಿ ಗೋಡ್ಸೆ ಏಕ್​ ಯುದ್ಧ್​’ ಸಿನಿಮಾ ರಿಲೀಸ್ ಆಗುತ್ತಿದೆ. ಎಆರ್​ ರೆಹಮಾನ್ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ.

ಗಾಂಧಿ-ಗೋಡ್ಸೆ ನಡುವಿನ ಸೈದ್ಧಾಂತಿಕ ಯುದ್ಧದ ಕಥೆ ಹೇಳ ಹೊರಟ ನಿರ್ದೇಶಕ ರಾಜ್​ಕುಮಾರ್ ಸಂತೋಷಿ
‘ಗಾಂಧಿ ಗೋಡ್ಸೆ ಏಕ್​ ಯುದ್ಧ್​’ ಸಿನಿಮಾ ದೃಶ್ಯ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jan 11, 2023 | 3:35 PM

ಭಾರತಕ್ಕೆ ಸ್ವಾತಂತ್ರ್ಯ ಕೊಡಿಸಲು ಹೋರಾಡಿದ ಪ್ರಮುಖರಲ್ಲಿ ಕರಮ್​ಚಂದ್ ಗಾಂಧಿಜೀ ಕೂಡ ಪ್ರಮುಖರು. ಆದರೆ, ನಾಥೂರಾಮ್ ಗೋಡ್ಸೆಯಿಂದ ಗಾಂಧೀಜಿ (Gandhiji) ಹತ್ಯೆಗೊಳಗಾದರು. ಗಾಂಧಿ ಹಾಗೂ ಗೋಡ್ಸೆ ಬೇರೆಬೇರೆ ಸೈದ್ಧಾಂತಿಕ ನಿಲುವುಗಳನ್ನು ಹೊಂದಿದ್ದರು. ಈ ವಿಚಾರವನ್ನು ಇಟ್ಟುಕೊಂಡು ನಿರ್ದೇಶಕ ರಾಜ್​ಕುಮಾರ್ ಸಂತೋಷಿ ಸಿನಿಮಾ ಮಾಡಿದ್ದಾರೆ. ವಿಶೇಷ ಎಂದರೆ ಇದೊಂದು ಕಾಲ್ಪನಿಕ ಕಥೆ. ನಾಥೂರಾಮ್ ಗೋಡ್ಸೆ (Nathuram Godse) ಗುಂಡು ಹಾರಿಸಿದ ನಂತರದಲ್ಲಿ ಗಾಂಧೀಜಿ ಬದುಕಿದ್ದರೆ ಏನಾಗುತ್ತಿತ್ತು ಎಂಬ ಕಲ್ಪನೆಯಲ್ಲಿ ಈ ಸಿನಿಮಾ ಮೂಡಿ ಬಂದಿದೆ.

ಗಾಂಧಿ ಹಾಗೂ ಗೋಡ್ಸೆ ಯಾವ ರೀತಿಯ ಸೈದ್ಧಾಂತಿಕ ನಿಲುವನ್ನು ಹೊಂದಿದ್ದರು ಎಂಬುದನ್ನು ಈ ಸಿನಿಮಾದಲ್ಲಿ ಹೇಳಲಾಗುತ್ತಿದೆ. ಚಿನ್ಮಯ್ ಮಂಡ್ಲೇಕರ್ ಅವರು ಗೋಡ್ಸೆಯಾಗಿ ಹಾಗೂ ದೀಪಕ್ ಅಂತಾನಿ ಅವರು ಗಾಂಧಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಎರಡೂ ಪಾತ್ರಗಳು ಟ್ರೇಲರ್​ನಲ್ಲಿ ಸಾಕಷ್ಟು ಗಮನ ಸೆಳೆದಿವೆ.

‘ಗಾಂಧಿ ಗೋಡ್ಸೆ ಏಕ್​ ಯುದ್ಧ್​’ ಸಿನಿಮಾ ಕಾಲ್ಪನಿಕ ಎಂದು ನಿರ್ದೇಶಕರು ಈ ಮೊದಲೇ ತಿಳಿಸಿದ್ದರು. ಅದೇ ರೀತಿಯಲ್ಲಿ ಟ್ರೇಲರ್ ಮೂಡಿಬಂದಿದೆ. ಗಾಂಧೀಜಿಗೆ ಗೋಡ್ಸೆ ಗುಂಡು ಹಾರಿಸುತ್ತಾರೆ. ನಂತರ ಗೋಡ್ಸೆ ಅರೆಸ್ಟ್ ಆಗುತ್ತಾರೆ. ಅದೃಷ್ಟವಶಾತ್ ಗಾಂಧಿ ಬದುಕುತ್ತಾರೆ. ‘ನಾನು ಗೋಡ್ಸೆಯನ್ನು ಭೇಟಿ ಮಾಡಬೇಕು’ ಎಂಬ ಇಚ್ಛೆಯನ್ನು ಗಾಂಧಿ ವ್ಯಕ್ತಪಡಿಸುತ್ತಾರೆ. ಇಬ್ಬರೂ ಭೇಟಿ ಆಗುತ್ತಾರೆ. ಇಬ್ಬರ ಮಧ್ಯೆ ಸೈದ್ಧಾಂತಿಕ ಯುದ್ಧ ನಡೆಯುತ್ತದೆ. ಇದನ್ನು ಟ್ರೇಲರ್​ನಲ್ಲಿ ತೋರಿಸಲಾಗಿದೆ.

ಜನವರಿ 26 ಗಣರಾಜ್ಯೋತ್ಸವ. ಈ ವಿಶೇಷ ದಿನದಂದು ‘ಗಾಂಧಿ ಗೋಡ್ಸೆ ಏಕ್​ ಯುದ್ಧ್​’ ಸಿನಿಮಾ ರಿಲೀಸ್ ಆಗುತ್ತಿದೆ. ಎಆರ್​ ರೆಹಮಾನ್ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಮನಿಲಾ ಸಂತೋಷಿ ಅವರು ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ರಾಜ್​ಕುಮಾರ ಸಂತೋಷಿ ಅವರು ಈ ಮೊದಲು ‘ಅಜಬ್ ಪ್ರೇಮ್​ ಕಿ ಗಜಬ್ ಕಹಾನಿ’  ಮೊದಲಾದ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದರು. ಇದನ್ನೂ ಓದಿ:  Pathan Trailer: ವನವಾಸ ಮುಗಿಸಿ ಬಂದ ‘ಪಠಾಣ್’; ಶಾರುಖ್ ಚಿತ್ರದ ಟ್ರೇಲರ್​ನಲ್ಲಿ ಭರಪೂರ ಆ್ಯಕ್ಷನ್

ಶಾರುಖ್ ಖಾನ್ ನಟನೆಯ ‘ಪಠಾಣ್​’ ಸಿನಿಮಾ ಜನವರಿ 25ರಂದು ರಿಲೀಸ್ ಆಗುತ್ತಿದೆ. ಈ ಸಿನಿಮಾದ ಜತೆಗೆ ‘ಗಾಂಧಿ ಗೋಡ್ಸೆ ಏಕ್​ ಯುದ್ಧ್​’ ಸಿನಿಮಾ ಸ್ಪರ್ಧೆಗೆ ಇಳಿದಿದೆ. ಈ ಚಿತ್ರವನ್ನು ಜನರು ಯಾವ ರೀತಿಯಲ್ಲಿ ಸ್ವೀಕರಿಸಲಿದ್ದಾರೆ ಎಂಬುದು ಸದ್ಯದ ಕುತೂಹಲ.