Sign In

By signing in or creating an account, you agree with Associated Broadcasting Company's Terms & Conditions and Privacy Policy.

Gangubai Kathiawadi: ರಾಜಮೌಳಿಗೆ ಸೆಡ್ಡು ಹೊಡೆಯುವ ಪ್ಲ್ಯಾನ್​ ಕೈಬಿಟ್ಟ ಬನ್ಸಾಲಿ; ರೇಸ್​ನಿಂದ ಹಿಂದೆ ಸರಿದ ‘ಗಂಗೂಬಾಯಿ ಕಾಠಿಯಾವಾಡಿ’

ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನದ ‘ಗಂಗೂಬಾಯಿ ಕಾಠಿಯಾವಾಡಿ’ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ ಪ್ರೇಕ್ಷಕರು. ಕಮಾಟಿಪುರದ ಡಾನ್​ ಆಗಿ ಮೆರೆದಿದ್ದ ಗಂಗೂಬಾಯಿ ಅವರ ಜೀವನದ ಕಥೆ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ.

Gangubai Kathiawadi: ರಾಜಮೌಳಿಗೆ ಸೆಡ್ಡು ಹೊಡೆಯುವ ಪ್ಲ್ಯಾನ್​ ಕೈಬಿಟ್ಟ ಬನ್ಸಾಲಿ; ರೇಸ್​ನಿಂದ ಹಿಂದೆ ಸರಿದ ‘ಗಂಗೂಬಾಯಿ ಕಾಠಿಯಾವಾಡಿ’
ಆಲಿಯಾ ಭಟ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 15, 2021 | 2:34 PM

ಕೊವಿಡ್​ ಎರಡನೇ ಅಲೆ (Covid Second Wave) ತಣ್ಣಗಾಗುತ್ತಿದ್ದಂತೆ ಸ್ಟಾರ್​ ಸಿನಿಮಾಗಳು ರಿಲೀಸ್​ ಡೇಟ್​ ಅನೌನ್ಸ್​ ಮಾಡುತ್ತಿವೆ. ಸ್ಟಾರ್​ ಸಿನಿಮಾಗಳು ಒಟ್ಟೊಟ್ಟಿಗೆ ಬಿಡುಗಡೆ​ ಆಗುತ್ತಿರುವುದರಿಂದ ಬಾಕ್ಸ್​ ಆಫೀಸ್​ನಲ್ಲಿ ಕ್ಲ್ಯಾಶ್​ ಏರ್ಪಡುತ್ತಿದೆ. ಸಾಲುಸಾಲು ಸಿನಿಮಾಗಳು ರಿಲೀಸ್​ ಆಗುತ್ತಿರುವುದರಿಂದ ವೀಕ್ಷಕರಿಗೆ ಯಾವ ಸಿನಿಮಾ ವೀಕ್ಷಿಸಬೇಕು ಎನ್ನುವ ಗೊಂದಲ ಏರ್ಪಡುತ್ತಿದೆ. ಈ ಮಧ್ಯೆ ಕೆಲ ಸಿನಿಮಾಗಳು ರಿಲೀಸ್​ ದಿನಾಂಕವನ್ನು ಮುಂದೂಡುತ್ತಿವೆ. ಸಿನಿಮಾ ಕೆಲಸಗಳು ಪೂರ್ಣಗೊಳ್ಳದೇ ಇರೋದು ಒಂದು ಕಾರಣವಾದರೆ, ಒಟ್ಟೊಟ್ಟಿಗೆ ಹಲವು ಸಿನಿಮಾಗಳು ರಿಲೀಸ್​ ಆಗುತ್ತಿರುವುದರಿಂದ ಚಿತ್ರಮಂದಿರದ ಅಭಾವದಿಂದಲೂ ಕೆಲವರು ರೇಸ್​​ನಿಂದ ಹಿಂದೆ ಸರಿದಿದ್ದಾರೆ. ಈಗ ಆಲಿಯಾ ಭಟ್​ (Alia Bhat) ನಟನೆಯ ‘ಗಂಗೂಬಾಯಿ ಕಾಠಿಯಾವಾಡಿ’ (Gangubai Kathiawadi) ಸಿನಿಮಾ ತಂಡ ಕೂಡ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಿದೆ.

ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನದ ‘ಗಂಗೂಬಾಯಿ ಕಾಠಿಯಾವಾಡಿ’ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ ಪ್ರೇಕ್ಷಕರು. ಕಮಾಟಿಪುರದ ಡಾನ್​ ಆಗಿ ಮೆರೆದಿದ್ದ ಗಂಗೂಬಾಯಿ ಅವರ ಜೀವನದ ಕಥೆ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಈ ಮೊದಲು ಬಿಡುಗಡೆ ಆದ ಚಿತ್ರದ ಟೀಸರ್​ ಸಾಕಷ್ಟು ಚರ್ಚೆ ಹುಟ್ಟು ಹಾಕಿತ್ತು. ಬನ್ಸಾಲಿ ಸಿನಿಮಾ ಕೆಲಸದ ಬಗ್ಗೆ ಗೊತ್ತಿದ್ದವರು ಖಂಡಿತವಾಗಿಯೂ ಸಿನಿಮಾ ನೋಡೋಕೆ ತೆರಳುತ್ತಾರೆ. ಸಿನಿಮಾ ಜನವರಿ 6ರಂದು ತೆರೆಗೆ ಬರಬೇಕಿತ್ತು. ಆದರೆ, ಈಗ ರಿಲೀಸ್​ ದಿನಾಂಕ ಫೆಬ್ರವರಿ 18, 2022ಕ್ಕೆ ಮುಂದೂಡಲ್ಪಟ್ಟಿದೆ.

‘ಗಂಗೂಬಾಯಿ ಕಾಠಿಯಾವಾಡಿ’ ಕೆಲಸಗಳು ಪೂರ್ಣಗೊಂಡು ಹಲವು ತಿಂಗಳೇ ಆಗಿದೆ. ಕೊವಿಡ್​ ಕಾರಣದಿಂದ ರಿಲೀಸ್​ ದಿನಾಂಕ ಈಗಾಗಲೇ ಸಾಕಷ್ಟು ಬಾರಿ ಮುಂದೂಡಲ್ಪಟ್ಟಿದೆ. ಚಿತ್ರತಂಡ ಮತ್ತೆ ಬಿಡುಗಡೆ​ ದಿನಾಂಕ ಮುಂದೂಡ್ಡಿದ್ದೇಕೆ ಎಂಬುದಕ್ಕೆ ಕಾರಣ ನೀಡಿಲ್ಲ. ಎಸ್​.ಎಸ್​. ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾದಲ್ಲಿ ಆಲಿಯಾ ಭಟ್​ ನಟಿಸುತ್ತಿದ್ದಾರೆ. ಈ ಸಿನಿಮಾ ಜನವರಿ 7ರಂದು ತೆರೆಗೆ ಬರುತ್ತಿದೆ. ಈ ಕಾರಣಕ್ಕೂ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ತಂಡ ರಿಲೀಸ್​ ದಿನಾಂಕ ಮುಂದೂಡಿರಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿ: Nykaa IPO: ಅಬ್ಬಬ್ಬಾ.. ನೈಕಾ ಕಂಪನಿಯಲ್ಲಿ ಹೂಡಿಕೆ ಮಾಡಿ ಕತ್ರಿನಾ ಕೈಫ್​ ಮತ್ತು ಆಲಿಯಾ ಭಟ್​ ಗಳಿಸಿದ್ದು ಇಷ್ಟೊಂದಾ?

ಗಂಗೂಬಾಯಿ ಕಾಠಿಯಾವಾಡಿ ಸಿನಿಮಾಗೆ ಸಂಕಷ್ಟ; ಆಲಿಯಾ, ಬನ್ಸಾಲಿಗೆ ಸಮನ್ಸ್​ ​

ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್