Gangubai Kathiawadi Trailer: ಕಾಮಾಟಿಪುರದ ಗಂಗೂಬಾಯಿಗೆ ಭರ್ಜರಿ ಗತ್ತು; ನಟನೆಯಲ್ಲಿ ಆಲಿಯಾ ಭಟ್​ಗೆ ಫುಲ್​ ಮಾರ್ಕ್ಸ್​

ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನದ ‘ಗಂಗೂಬಾಯಿ ಕಾಠಿಯಾವಾಡಿ’ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ ಪ್ರೇಕ್ಷಕರು. ಕಾಮಾಟಿಪುರದ ಡಾನ್​ ಆಗಿ ಮೆರೆದಿದ್ದ ಗಂಗೂಬಾಯಿ ಅವರ ಜೀವನದ ಕಥೆ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ.

Gangubai Kathiawadi Trailer: ಕಾಮಾಟಿಪುರದ ಗಂಗೂಬಾಯಿಗೆ ಭರ್ಜರಿ ಗತ್ತು; ನಟನೆಯಲ್ಲಿ ಆಲಿಯಾ ಭಟ್​ಗೆ ಫುಲ್​ ಮಾರ್ಕ್ಸ್​
ಆಲಿಆ ಭಟ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Feb 04, 2022 | 2:23 PM

ಆಲಿಯಾ ಭಟ್​ (Alia Bhat) ಬಾಲಿವುಡ್​ನಲ್ಲಿ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಸಿನಿಮಾ ಹಿನ್ನೆಲೆಯಿಂದ ಬಂದರೂ, ತಂದೆ ಹೆಸರನ್ನು ಎಲ್ಲಿಯೂ ಬಳಕೆ ಮಾಡಿಕೊಳ್ಳದೇ, ತಮ್ಮ ನಟನೆ ಮೂಲಕ ಅಭಿಮಾನಿಗಳಿಗೆ ಇಷ್ಟವಾಗಿದ್ದಾರೆ. ಪ್ರತಿ ಸಿನಿಮಾಗೂ ಭಿನ್ನ ಪಾತ್ರ ಆಯ್ಕೆ ಮಾಡಿಕೊಳ್ಳೋದು ಅವರ ಸ್ಪೆಷಾಲಿಟಿ. ಪಕ್ಕದ ಮನೆ ಹುಡುಗಿ ಪಾತ್ರದಿಂದ ಹಿಡಿದು, ಪಾಕಿಸ್ತಾನದಲ್ಲಿ ಸ್ಪೈ ಮಾಡೋ ದಿಟ್ಟ ಮಹಿಳೆಯ ಪಾತ್ರವನ್ನೂ ಮಾಡಿ ಅವರು ಭೇಷ್​ ಎನಿಸಿಕೊಂಡಿದ್ದಾರೆ. ಈ ಬಾರಿ ಅವರು ‘ಗಂಗೂಬಾಯಿ ಕಾಠಿಯಾವಾಡಿ’ (Gangubai Kathiawadi) ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ಕೊವಿಡ್​ ಕಾರಣದಿಂದ ಸತತವಾಗಿ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಡುತ್ತಲೇ ಇತ್ತು. ಈ ಸಿನಿಮಾವನ್ನು ಕಣ್ತುಂಬಿಕೊಳ್ಳೋಕೆ ಕೊನೆಗೂ ದಿನಾಂಕ ನಿಗದಿ ಆಗಿದ್ದು, ಫೆಬ್ರವರಿ 25ರಂದು ಚಿತ್ರ ತೆರೆಗೆ ಬರುತ್ತಿದೆ. ಇದಕ್ಕೂ ಮೊದಲು ಚಿತ್ರತಂಡ ಟ್ರೇಲರ್​ ರಿಲೀಸ್​ ಮಾಡಿದೆ. ಈ ಮೂಲಕ ಸಿನಿಮಾದ ಝಲಕ್​ ಬಿಟ್ಟುಕೊಟ್ಟಿದೆ.

ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನದ ‘ಗಂಗೂಬಾಯಿ ಕಾಠಿಯಾವಾಡಿ’ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ ಪ್ರೇಕ್ಷಕರು. ಕಾಮಾಟಿಪುರದ ಡಾನ್​ ಆಗಿ ಮೆರೆದಿದ್ದ ಗಂಗೂಬಾಯಿ ಅವರ ಜೀವನದ ಕಥೆ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಸಿನಿಮಾದಲ್ಲಿ ಏನೆಲ್ಲ ಇದೆ ಎಂಬುದರ ಝಲಕ್​ ಟ್ರೇಲರ್​ನಲ್ಲಿದೆ. ಇಡೀ ಟ್ರೇಲರ್​ನಲ್ಲಿ ಆಲಿಯಾ ಭಟ್​ ಅವರ ನಟನೆ, ಬನ್ಸಾಲಿ ಸಿನಿಮಾ ಮೇಕಿಂಗ್​ ಗಮನ ಸೆಳೆಯುತ್ತಿದೆ. ಅಜಯ್​ ದೇವಗನ್​ ಪಾತ್ರ ಕೂಡ ಟ್ರೇಲರ್​ನಲ್ಲಿ ಬಂದು ಹೋಗುತ್ತದೆ. ಅವರ ಪಾತ್ರ ಏನು ಎಂಬ ರಹಸ್ಯವನ್ನು ನಿರ್ದೇಶಕರು ಬಿಟ್ಟುಕೊಟ್ಟಿಲ್ಲ. ಇಡೀ ಚಿತ್ರ ರೆಟ್ರೋ ಶೈಲಿಯಲ್ಲಿ ಮೂಡಿ ಬಂದಿದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸಾಕ್ಷ್ಯ ಸಿಕ್ಕಿದೆ. ಟ್ರೇಲರ್​ ರಿಲೀಸ್​ ಆದ ಗಂಟೆಗಳಲ್ಲಿ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ.

ಫೆಬ್ರವರಿ 25ರಂದು ‘ಗಂಗೂಬಾಯಿ ಕಾಠಿಯಾವಾಡಿ’ ತೆರೆಗೆ ಬರುತ್ತಿದೆ. ಕೊವಿಡ್​ ಮೂರನೇ ಅಲೆ ಕಡಿಮೆ ಆಗದ ಕಾರಣ ಚಿತ್ರಮಂದಿರಗಳಲ್ಲಿ ಶೇ.50 ಭರ್ತಿಗೆ ಮಾತ್ರ ಅವಕಾಶ ಇದೆ. ಈ ಕಾರಣಕ್ಕೆ ಸಿನಿಮಾದ ಕಲೆಕ್ಷನ್​ ತಗ್ಗಬಹುದು. ಆದರೆ, ಇದನ್ನು ಲೆಕ್ಕಿಸದೇ ಚಿತ್ರತಂಡ ಸಿನಿಮಾ ರಿಲೀಸ್​ ಮಾಡಲು ಮುಂದೆ ಬಂದಿದೆ. ಬರ್ಲಿನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಸಿನಿಮಾ ಪ್ರದರ್ಶನ ಕಾಣುತ್ತಿದೆ.

ಎಸ್​.ಎಸ್​. ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾದಲ್ಲಿ ಆಲಿಯಾ ಭಟ್​ ನಟಿಸಿದ್ದಾರೆ. ಈ ಸಿನಿಮಾ ಜನವರಿ 7ರಂದು ತೆರೆಗೆ ಬರಬೇಕಿತ್ತು. ಆದರೆ, ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿತ್ತು. ಮಾರ್ಚ್​ 25ರಂದು ಈ ಸಿನಿಮಾ ತೆರೆಗೆ ಬರುತ್ತಿದೆ.

‘ಆರ್​ಆರ್​ಆರ್​’ ಸಿನಿಮಾದಲ್ಲಿ ಆಲಿಯಾ ಭಟ್​ ಅವರು ಸೀತಾ ಎಂಬ ಪಾತ್ರವನ್ನು ನಿಭಾಯಿಸಿದ್ದಾರೆ. ಆದರೆ ಅದೊಂದು ಚಿಕ್ಕ ಪಾತ್ರ ಎಂಬ ಮಾಹಿತಿ ಈಗ ತಿಳಿದುಬಂದಿದೆ. ಆ ಬಗ್ಗೆ ರಾಜಮೌಳಿ ಕೂಡ ಯಾವುದೇ ಮುಚ್ಚುಮರೆ ಮಾಡಿಲ್ಲ. ‘ಆಲಿಯಾ ಮತ್ತು ಅಜಯ್​ ದೇವಗನ್​ ಅವರು ಅತಿಥಿ ಪಾತ್ರ ಮಾಡಿದ್ದಾರೆ. ಅದನ್ನು ಮುಚ್ಚಿಟ್ಟು ನಾನು ಪ್ರೇಕ್ಷಕರಿಗೆ ಮೋಸ ಮಾಡುವುದಿಲ್ಲ. ಆದರೆ ಆ ಪಾತ್ರಗಳಿಗೆ ಹೀರೋಗಳಷ್ಟೇ ಮಹತ್ವ ಇದೆ’ ಎಂದು ರಾಜಮೌಳಿ ಹೇಳಿದ್ದರು.

ಇದನ್ನೂ ಓದಿ: ಪುರುಷರ ಟಾಯ್ಲೆಟ್​ಗೆ ನುಗ್ಗಿದ್ದ ದೀಪಿಕಾ ಪಡುಕೋಣೆ-ಆಲಿಯಾ ಭಟ್​; ಇದರ ಹಿಂದಿದೆ ಅಚ್ಚರಿಯ ಕಥೆ

ತೆರೆಗೆ ಬರುತ್ತಿದೆ ಆಲಿಯಾ ಹೊಸ ಸಿನಿಮಾ

Published On - 1:45 pm, Fri, 4 February 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ