AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pankaj Udhas: ‘ಬರೆಯದ ಮೌನದ ಕವಿತೆ..’ ಗಾಯಕ ಪಂಕಜ್​ ಉಧಾಸ್​ ಇನ್ನಿಲ್ಲ; ತೀವ್ರ ಅನಾರೋಗ್ಯದಿಂದ ನಿಧನ

‘ಸ್ಪರ್ಶ’ ಚಿತ್ರದಲ್ಲಿನ ‘ಬರೆಯದ ಮೌನದ ಕವಿತೆ ಹಾಡಾಯಿತು..’ ಮತ್ತು ‘ಚಂದಕಿಂತ ಚಂದ ನೀನೇ ಸುಂದರ..’ ಗೀತೆಗಳು ಪಂಕಜ್​ ಉಧಾಸ್​ ಅವರ ಕಂಠದಲ್ಲಿ ಮೂಡಿಬಂದಿದ್ದವು. ಇಂದು (ಫೆಬ್ರವರಿ 26) ಪಂಕಜ್​ ಉಧಾಸ್​ ಅವರ ನಿಧನಕ್ಕೆ ಅಭಿಮಾನಿಗಳು, ಆಪ್ತರು ಮತ್ತು ಸೆಲೆಬ್ರಿಟಿಗಳು ಕಂಬಿನಿ ಮಿಡಿಯುತ್ತಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು.

Pankaj Udhas: ‘ಬರೆಯದ ಮೌನದ ಕವಿತೆ..’ ಗಾಯಕ ಪಂಕಜ್​ ಉಧಾಸ್​ ಇನ್ನಿಲ್ಲ; ತೀವ್ರ ಅನಾರೋಗ್ಯದಿಂದ ನಿಧನ
ಪಂಕಜ್​ ಉಧಾಸ್​
TV9 Web
| Edited By: |

Updated on:Feb 26, 2024 | 5:12 PM

Share

ಜನಪ್ರಿಯ ಗಾಯಕ ಪಂಕಜ್​ ಉಧಾಸ್​ (Pankaj Udhas) ಅವರು ನಿಧನರಾಗಿದ್ದಾರೆ. ಹಲವು ತಿಂಗಳಿಂದ ಅವರು ಅನಾರೋಗ್ಯಕ್ಕೆ ಒಳಗಾಗಿದ್ದರು. 73ರ ಪ್ರಾಯದ ಅವರು ಇಂದು (ಫೆಬ್ರವರಿ 26) ಕೊನೆಯುಸಿರು ಎಳೆದರು. ಅವರ ನಿಧನದ (Pankaj Udhas Death) ಸುದ್ದಿಯನ್ನು ಪುತ್ರಿ ನಯಾಬ್​ ಉಧಾಸ್​ ಖಚಿತಪಡಿಸಿದ್ದಾರೆ. 1980ರ ದಶಕದಲ್ಲಿ ಪಂಕಜ್​ ಉಧಾಸ್​ ಅವರು ಗಝಲ್​ ಗಾಯನದ ಮೂಲಕ ಫೇಮಸ್​ ಆಗಿದ್ದರು. ಬಳಿಕ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಬಾಲಿವುಡ್​ನ ಅನೇಕ ಸೂಪರ್​ ಹಿಟ್​ ಹಾಡುಗಳಿಗೆ (Pankaj Udhas Songs) ಅವರು ಧ್ವನಿ ನೀಡಿದ್ದರು. ಕಿಚ್ಚ ಸುದೀಪ್​ ಅಭಿನಯದ ‘ಸ್ಪರ್ಶ’ ಸಿನಿಮಾದ ಗೀತೆಗಳನ್ನು ಹಾಡುವ ಮೂಲಕ ಕನ್ನಡಿಗರನ್ನು ಅವರು ರಂಜಿಸಿದ್ದರು.

ಪಂಕಜ್​ ಉಧಾಸ್​ ಅವರ ನಿಧನಕ್ಕೆ ಸೆಲೆಬ್ರಿಟಿಗಳು, ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ‘ಸ್ಪರ್ಶ’ ಸಿನಿಮಾದಲ್ಲಿನ ‘ಬರೆಯದ ಮೌನದ ಕವಿತೆ ಹಾಡಾಯಿತು..’, ‘ಚಂದಕಿಂತ ಚಂದ ನೀನೇ ಸುಂದರ..’ ಹಾಡುಗಳು ಪಂಕಜ್​ ಉಧಾಸ್​ ಅವರ ಕಂಠದಲ್ಲಿ ಮೂಡಿಬಂದಿದ್ದವು. ಕೇಳುಗರ ಫೇವರಿಟ್​ ಲಿಸ್ಟ್​ನಲ್ಲಿ ಈ ಹಾಡುಗಳು ಈಗಲೂ ಜಾಗ ಪಡೆದುಕೊಂಡಿವೆ. ಪಂಕಜ್​ ಉಧಾಸ್​ ಅವರ ಅಗಲಿಕೆಗೆ ಕರುನಾಡಿನಲ್ಲಿನ ಅಭಿಮಾನಿಗಳು ಕೂಡ ಕಂಬನಿ ಮಿಡಿಯುತ್ತಿದ್ದಾರೆ.

ಪಂಕಜ್​ ಉಧಾಸ್​ ಕುಟುಂಬದವರ ಸೋಶಿಯಲ್​ ಮೀಡಿಯಾ ಪೋಸ್ಟ್​:

View this post on Instagram

A post shared by Nayaab Udhas (@nayaabudhas)

ಹಲವಾರು ಆಲ್ಬಂ ಗೀತೆಗಳಿಗೆ ಪಂಕಜ್​ ಉಧಾಸ್​ ಧ್ವನಿಯಾಗಿದ್ದರು. ಅವರದ್ದು ಸಂಗೀತಗಾರರ ಕುಟುಂಬ. ಅವರ ಸಹೋದರರಾದ ಮನ್​ಹರ್​ ಉಧಾಸ್​, ನಿರ್ಮಲ್​ ಉಧಾಸ್​ ಅವರು ಕೂಡ ಗಾಯಕರಾಗಿ ಗುರುತಿಸಿಕೊಂಡಿದ್ದಾರೆ. 1986ರಲ್ಲಿ ತೆರೆಕಂಡ ‘ನಾಮ್​’ ಸಿನಿಮಾದಲ್ಲಿನ ‘ಚಿಟ್ಟಿ ಆಯಿ ಹೈ..’ ಹಾಡಿಗೆ ಧ್ವನಿ ನೀಡುವ ಮೂಲಕ ಪಂಕಜ್​ ಉಧಾಸ್​ ಅವರು ಬಹಳ ಜನಪ್ರಿಯತೆ ಪಡೆದರು. ಸಂಜಯ್​ ದತ್​ ಅಭಿನಯದ ಆ ಸಿನಿಮಾದಲ್ಲಿ ಪಂಕಜ್​ ಅವರು ಗಾಯಕನಾಗಿ ಕಾಣಿಸಿಕೊಂಡಿದ್ದರು.

ಇದನ್ನೂ ಓದಿ: ಖ್ಯಾತ ಕಿರುತೆರೆ ಕಲಾವಿದೆಗೆ ಹೃದಯಾಘಾತ; ನಟಿ, ನಿರ್ದೇಶಕಿ ಕವಿತಾ ಚೌಧರಿ ನಿಧನ

2006ರಲ್ಲಿ ಪಂಕಜ್ ಉಧಾಸ್​ ಅವರಿಗೆ ಭಾರತ ಸರ್ಕಾರ ‘ಪದ್ಮಶ್ರೀ’ ಪ್ರಶಸ್ತಿ ನೀಡಿ ಗೌರವಿಸಿತ್ತು. ಅಲ್ಲದೇ, ಅನೇಕ ಪ್ರತಿಷ್ಠಿತ ಪ್ರಶಸ್ತಿ, ಪುರಸ್ಕಾರಗಳು ಪಂಕಜ್​ ಉಧಾಸ್​ ಅವರನ್ನು ಅರಸಿ ಬಂದಿದ್ದವು. ಭಾರತದ ಮಾತ್ರವಲ್ಲದೇ ವಿದೇಶದ ಹಲವು ವೇದಿಕೆಗಳಲ್ಲಿ ಅವರು ಸಂಗೀತ ಕಾರ್ಯಕ್ರಮ ನೀಡಿದ್ದರು. ಲೆಜೆಂಡರಿ ಗಾಯಕನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 4:52 pm, Mon, 26 February 24

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ