AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿದ್ರೆಯಲ್ಲೇ ಕೊನೆಯುಸಿರೆಳೆದ ಬಾಲಿವುಡ್ ನಟಿ ಅನನ್ಯಾ; ಸಾವಿನ ತಿಂಗಳ ಬಳಿಕ ವಿಷಯ ರಿವೀಲ್

'ಘೋಸ್ಟ್' ಸಿನಿಮಾ ಖ್ಯಾತಿಯ ನಟಿ ಅನನ್ಯಾ ರಾಜ್ 35ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಕಳೆದ ಒಂದು ವರ್ಷದಿಂದ ದೈಹಿಕ ಹಾಗೂ ಮಾನಸಿಕ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಿದ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಆಘಾತಕಾರಿ ಸುದ್ದಿಯನ್ನು ಅವರ ಕುಟುಂಬಸ್ಥರು ತಡವಾಗಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಚಿತ್ರರಂಗ ಕಂಬನಿ ಮಿಡಿದಿದೆ.

ನಿದ್ರೆಯಲ್ಲೇ ಕೊನೆಯುಸಿರೆಳೆದ ಬಾಲಿವುಡ್ ನಟಿ ಅನನ್ಯಾ; ಸಾವಿನ ತಿಂಗಳ ಬಳಿಕ ವಿಷಯ ರಿವೀಲ್
ಅನನ್ಯಾ
ರಾಜೇಶ್ ದುಗ್ಗುಮನೆ
|

Updated on:Aug 17, 2026 | 8:08 AM

Share

ಮುಖ್ಯಾಂಶಗಳು

  • 35ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದ 'ಘೋಸ್ಟ್' ನಟಿ
  • ವರ್ಷದಿಂದ ಸೈಲೆಂಟ್ ಆಗಿ ಅನಾರೋಗ್ಯ ಎದುರಿಸಿದ್ದ ಅನನ್ಯಾ
  • ಬಾಲಿವುಡ್ ಹಾಗೂ ಸೌತ್ ಸಿನಿಮಾಗಳಲ್ಲಿ ಮಿಂಚಿದ್ದ ಸುಂದರಿ

ಚಿತ್ರರಂಗದಲ್ಲಿ ಮತ್ತೊಂದು ಆಘಾತಕಾರಿ ಘಟನೆ ಸಂಭವಿಸಿದೆ. 2019ರಲ್ಲಿ ರಲೀಸ್ ಆದ ‘ಘೋಸ್ಟ್’ ಚಿತ್ರದ ಮೂಲಕ ಗಮನ ಸೆಳೆದಿದ್ದ ನಟಿ ಅನನ್ಯಾ ರಾಜ್ 35ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ದೈಹಿಕ ಹಾಗೂ ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಈ ಕಹಿ ಸುದ್ದಿಯನ್ನು ಅವರ ಕುಟುಂಬವು ತಡವಾಗಿ ತಿಳಿಸಿದ್ದು, ಅಭಿಮಾನಿಗಳಿಗೆ ತೀವ್ರ ದುಃಖ ತಂದಿದೆ.

ನಟಿ ಅನನ್ಯಾ ರಾಜ್ ಜುಲೈ 15 ರಂದು ನಿದ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ವಿಚಾರವನ್ನು ಅವರ ಕುಟುಂಬವು ಈಗ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಕುಟುಂಬಸ್ಥರು ಈ ನೋವಿನಿಂದ ಹೊರಬರಲು ಒಂದು ತಿಂಗಳು ಕಾಲಾವಕಾಶ ತೆಗೆದುಕೊಂಡಿದ್ದಾರೆ. ಈ ಸಮಯದಲ್ಲಿ ಗೌಪ್ಯತೆಯನ್ನು ಕಾಯ್ದುಕೊಳ್ಳುವಂತೆ ಅವರು ವಿನಂತಿಸಿದ್ದಾರೆ.

‘ಅನನ್ಯಾ ಕಳೆದ ಒಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರು ದೈಹಿಕ ಹಾಗೂ ಮಾನಸಿಕ ಕಷ್ಟಗಳನ್ನು ಎದುರಿಸುತ್ತಿದ್ದರು. ಆದರೂ ಅವರು ಧೈರ್ಯದಿಂದ ಹೋರಾಟ ನಡೆಸಿದ್ದರು. ಅವರ ಮನಸ್ಸು ತುಂಬಾನೇ ಗಟ್ಟಿಯಾಗಿತ್ತು. ಅವರು ಸದಾ ಜೀವನವನ್ನು ಉತ್ಸಾಹದಿಂದ ನೋಡುತ್ತಿದ್ದರು.ಅವರು ಧೈರ್ಯವಂತೆ’ ಎಂದು ಕುಟು ಹೇಳಿದೆ.

ಅನನ್ಯಾ ರಾಜ್ ಮುಂಬೈನಲ್ಲಿ ನೆಲೆಸಿದ್ದರು. ಅವರು ಹಿಂದಿ ಹಾಗೂ ದಕ್ಷಿಣ ಭಾರತದ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. 2016 ರಲ್ಲಿ ‘7 ಹವರ್ಸ್ ಟು ಗೋ’ ಚಿತ್ರದ ಮೂಲಕ ಬಾಲಿವುಡ್ ಪ್ರವೇಶಿಸಿದರು. 2017 ರಲ್ಲಿ ‘ದಿ ಫೈನಲ್ ಎಕ್ಸಿಟ್’ ಸಿನಿಮಾದಲ್ಲಿ ನಟಿಸಿದರು. 2019 ರ ‘ಘೋಸ್ಟ್’ ಹಾರರ್ ಸಿನಿಮಾ ಅವರಿಗೆ ಒಳ್ಳೆಯ ಹೆಸರು ತಂದುಕೊಟ್ಟಿತು.

ಇದನ್ನೂ ಓದಿ: ಒಟಿಟಿಗೆ ಬಂತು ಶಿವಣ್ಣ ನಟನೆಯ ‘ಘೋಸ್ಟ್’; 10,000 ಅಡಿ ಪೋಸ್ಟರ್ ಲಾಂಚ್  

ದಕ್ಷಿಣ ಭಾರತದಲ್ಲೂ ಅವರು ತಮ್ಮ ಛಾಪು ಮೂಡಿಸಿದ್ದರು. 2022 ರ ತೆಲುಗಿನ ‘ತಗ್ಗೇದೆ ಲೆ’ ಸಿನಿಮಾದಲ್ಲಿ ಲಿಜಾ ಪಾತ್ರ ಮಾಡಿದ್ದರು. ‘ಮದ್ರಾಸಿ ಗ್ಯಾಂಗ್’ ಚಿತ್ರದಲ್ಲಿ ಸರಿತಾ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇದಲ್ಲದೆ ಟಿ-ಸಿರೀಸ್ ಹಾಗೂ ಝೀ ಮ್ಯೂಸಿಕ್ ಜೊತೆ ಆಲ್ಬಮ್ ಹಾಡುಗಳಲ್ಲೂ ಅಭಿನಯಿಸಿದ್ದರು.

ಪ್ರಶ್ನೆ:  ಅನನ್ಯಾ ರಾಜ್ ಯಾರು? ಉತ್ತರ: ಹಿಂದಿಯ ಘೋಸ್ಟ್​ ಸಿನಿಮಾ ನಟಿ

ಪ್ರಶ್ನೆ: ಅನನ್ಯಾ ರಾಜ್​ಗೆ ಏನಾಗಿತ್ತು? ಉತ್ತರ: ದೈಹಿಕ ಹಾಗೂ ಮಾನಸಿಕ ಅನಾರೋಗ್ಯ

ಪ್ರಶ್ನೆ: ಅನನ್ಯಾ ರಾಜ್ ಸಾವಿನ ಸುದ್ದಿ ಯಾವಾಗ ರಿವೀಲ್? ಉತ್ತರ: ಒಂದು ತಿಂಗಳ ಬಳಿಕ ರಿವೀಲ್

Published On - 8:02 am, Mon, 17 August 26

Follow Us
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ