AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಎದೆ ಮೇಲೆ ಆಟೋಗ್ರಾಫ್​ ಹಾಕಿ ಅಂತ ಹಠ ಹಿಡಿದ ರಶ್ಮಿಕಾ ಮಂದಣ್ಣ ಅಭಿಮಾನಿ; ಮುಂದೇನಾಯ್ತು?

Rashmika Mandanna Autograph: ಸೋಶಿಯಲ್​ ಮೀಡಿಯಾದಲ್ಲಿ ಈ ಕ್ಯೂಟ್​ ವಿಡಿಯೋ ವೈರಲ್​ ಆಗಿದೆ. ಇದನ್ನು ಕಂಡು ರಶ್ಮಿಕಾ ಮಂದಣ್ಣ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

Rashmika Mandanna: ಎದೆ ಮೇಲೆ ಆಟೋಗ್ರಾಫ್​ ಹಾಕಿ ಅಂತ ಹಠ ಹಿಡಿದ ರಶ್ಮಿಕಾ ಮಂದಣ್ಣ ಅಭಿಮಾನಿ; ಮುಂದೇನಾಯ್ತು?
ರಶ್ಮಿಕಾ ಮಂದಣ್ಣ
TV9 Web
| Updated By: ಮದನ್​ ಕುಮಾರ್​|

Updated on:Sep 28, 2022 | 7:47 AM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ದೇಶಾದ್ಯಂತ ಜನಪ್ರಿಯತೆ ಪಡೆದುಕೊಂಡಿದ್ದಾರೆ. ‘ಪುಷ್ಪ’ ಸಿನಿಮಾ ಗೆದ್ದ ಬಳಿಕ ಅವರು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಶೈನ್​ ಆಗುತ್ತಿದ್ದಾರೆ. ಅವರ ಅಭಿಮಾನಿಗಳ (Rashmika Mandanna Fans) ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಎಲ್ಲ ಭಾಷೆಯಲ್ಲೂ ರಶ್ಮಿಕಾ ಮಂದಣ್ಣ ಅವರನ್ನು ಇಷ್ಟಪಡುವ ಜನರಿದ್ದಾರೆ. ಅವರ ಜೊತೆ ಒಂದು ಫೋಟೋ ಕ್ಲಿಕ್ಕಿಸಿಕೊಳ್ಳಬೇಕು ಎಂದು ಲಕ್ಷಾಂತರ ಮಂದಿ ಹಂಬಲಿಸುತ್ತಾರೆ. ಆಟೋಗ್ರಾಫ್​ (Rashmika Mandanna Autograph) ಪಡೆಯಲು ಎಲ್ಲಿಲ್ಲದ ಸಾಹಸ ಮಾಡುತ್ತಾರೆ. ತುಂಬ ಲಕ್ಕಿ ಎಂಬಂತಹ ಅಭಿಮಾನಿಗಳಿಗೆ ಮಾತ್ರ ಅದೆಲ್ಲವೂ ಸಿಗುತ್ತದೆ. ಅದಕ್ಕಿಂತಲೂ ಹೆಚ್ಚು ಅದೃಷ್ಟವಂತರಾಗಿದ್ದರೆ ಎದೆ ಮೇಲೆ ಆಟೋಗ್ರಾಫ್​ ಸಿಗುತ್ತದೆ ಎಂಬುದಕ್ಕೆ ಈ ಹೊಸ ಘಟನೆ ಸಾಕ್ಷಿ!

ಹಿಂದಿ ಚಿತ್ರರಂಗಕ್ಕೆ ಕಾಲಿಟ್ಟ ಬಳಿಕ ರಶ್ಮಿಕಾ ಮಂದಣ್ಣ ಅವರ ಚಾರ್ಮ್​ ಹೆಚ್ಚಾಗಿದೆ. ಸದ್ಯ ಅವರು ‘ಗುಡ್​ಬೈ’ ಚಿತ್ರದ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಅಕ್ಟೋಬರ್​ 7ರಂದು ಆ ಚಿತ್ರ ಬಿಡುಗಡೆ ಆಗಲಿದೆ. ಹಲವು ನಗರಗಳಿಗೆ ತೆರಳಿ ಅವರು ಪ್ರಚಾರ ಮಾಡುತ್ತಿದ್ದಾರೆ. ಈ ವೇಳೆ ಅಪ್ಪಟ ಅಭಿಮಾನಿಗಳು ಮುಗಿ ಬೀಳುತ್ತಿದ್ದಾರೆ. ಇತ್ತೀಚೆಗೆ ಎದುರಾದ ಅಭಿಮಾನಿಯೊಬ್ಬ ಆಟೋಗ್ರಾಫ್​ ಮತ್ತು ಫೋಟೋ ಸಲುವಾಗಿ ಗೋಗರೆದಿದ್ದಾನೆ.

ಇದನ್ನೂ ಓದಿ
Image
Pushpa 2: ರಶ್ಮಿಕಾ ಮಂದಣ್ಣ ಪಾತ್ರ ಸಾಯುತ್ತೆ ಅನ್ನೋದು ನಿಜವೇ? ‘ಪುಷ್ಪ 2’ ನಿರ್ಮಾಪಕರು​ ನೀಡಿದ ಪ್ರತಿಕ್ರಿಯೆ ಇಲ್ಲಿದೆ..
Image
Rashmika Mandanna: ರಶ್ಮಿಕಾ ಮಂದಣ್ಣ ಗುಟ್ಟಾಗಿ ‘777 ಚಾರ್ಲಿ’ ನೋಡಿದ್ರಾ? ಜನರ ಅನುಮಾನಕ್ಕೆ ಕಾರಣ ಆಗಿದೆ ಈ ವಿಡಿಯೋ
Image
ಅತಿ ಹೆಚ್ಚು ಸಂಬಳ ಪಡೆಯುವ ದಕ್ಷಿಣ ಭಾರತದ ಟಾಪ್​ 10 ನಟಿಯರು ಇವರು; ರಶ್ಮಿಕಾ, ಸಮಂತಾ ಸಂಭಾವನೆ ಎಷ್ಟು?
Image
ರಶ್ಮಿಕಾ ಮಂದಣ್ಣ ಹೊಸ ವಿಡಿಯೋ ವೈರಲ್​; ಎನರ್ಜಿ ಕಂಡು ವಾವ್​ ಎಂದ ಅಭಿಮಾನಿಗಳು

ಓಡೋಡಿ ಬಂದ ಅಭಿಮಾನಿಯು ‘ನಾನು ನಿಮ್ಮ ದೊಡ್ಡ ಫ್ಯಾನ್​’ ಎಂದು ಹೇಳಿ ಪರಿಚಯ ಮಾಡಿಕೊಂಡ. ನಂತರ ಫೋಟೋ ಬೇಕು ಅಂತ ಅದನ್ನೂ ಗಿಟ್ಟಿಸಿಕೊಂಡ. ಬಳಿಕ ‘ನನ್ನ ಎದೆ ಮೇಲೆ ಆಟೋಗ್ರಾಫ್​ ಹಾಕಿ’ ಎಂದು ಮನವಿ ಮಾಡಿಕೊಂಡ. ಅದಕ್ಕೆ ರಶ್ಮಿಕಾ ಮಂದಣ್ಣ ಹಿಂದೆ-ಮುಂದೆ ಯೋಚಿಸಲಿಲ್ಲ. ಕೂಡಲೇ ಮಾರ್ಕರ್​ ಕೈಗೆತ್ತಿಕೊಂಡು ಅಭಿಮಾನಿಯ ಎದೆ ಮೇಲೆ ಹಸ್ತಾಕ್ಷರ ಹಾಕಿಯೇ ಬಿಟ್ಟರು. ಈ ಕ್ಯೂಟ್​ ಘಟನೆ ಪಾಪರಾಜಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿರುವ ಈ ವಿಡಿಯೋ ಕಂಡು ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಕೈಯಲ್ಲಿ ಈಗ ಹಲವು ಸಿನಿಮಾಗಳಿವೆ. ಸಿದ್ದಾರ್ಥ್​ ಮಲ್ಹೋತ್ರಾ ಜೊತೆ ‘ಮಿಷನ್​ ಮಜ್ನು’ ಚಿತ್ರದಲ್ಲಿ ಅವರು ನಟಿಸಿದ್ದಾರೆ. ರಣಬೀರ್​ ಕಪೂರ್​ ನಟನೆಯ ‘ಅನಿಮಲ್​’ ಚಿತ್ರಕ್ಕೂ ರಶ್ಮಿಕಾ ನಾಯಕಿ. ದಕ್ಷಿಣ ಭಾರತದ ಸ್ಟಾರ್​ ಹೀರೋಗಳ ಸಿನಿಮಾಗಳು ಕೂಡ ಅವರನ್ನೇ ಹುಡುಕಿಕೊಂಡು ಬರುತ್ತಿವೆ. ಸಿನಿಮಾ ಮಾತ್ರವಲ್ಲದೇ ಜಾಹೀರಾತು ಕ್ಷೇತ್ರದಲ್ಲೂ ರಶ್ಮಿಕಾ ಮಂದಣ್ಣ ಅವರಿಗೆ ಸಖತ್​ ಡಿಮ್ಯಾಂಡ್​ ಇದೆ. ಹಲವಾರು ಬ್ರ್ಯಾಂಡ್​ಗಳಿಗೆ ಅವರು ಪ್ರಚಾರ ರಾಯಭಾರಿ ಆಗಿದ್ದಾರೆ. ಜಾಹೀರಾತುಗಳಲ್ಲಿ ನಟಿಸುವ ಮೂಲಕ ಅವರು ಕೈ ತುಂಬ ಸಂಬಳ ಪಡೆಯುತ್ತಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:42 am, Wed, 28 September 22

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ