AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ಮಕ್ಕಳ ತಂದೆ ಜೊತೆ ಸಾಯಿ ಪಲ್ಲವಿ ಡೇಟಿಂಗ್​? ಹೊಟ್ಟೆಕಿಚ್ಚಿಗೆ ಅಪಪ್ರಚಾರ ಶುರು

ಜನಪ್ರಿಯ ನಟಿ ಸಾಯಿ ಪಲ್ಲವಿ ಅವರ ಖಾಸಗಿ ಜೀವನದ ಬಗ್ಗೆ ಸಖತ್ ಚರ್ಚೆ ಆಗುತ್ತಿದೆ. ಮದುವೆಯಾಗಿ, ಎರಡು ಮಕ್ಕಳನ್ನು ಹೊಂದಿರುವ ನಟನ ಜೊತೆ ಸಾಯಿ ಪಲ್ಲವಿ ಡೇಟಿಂಗ್​ ಮಾಡುತ್ತಿದ್ದಾರೆ ಎಂದು ಗುಸುಗುಸು ಹಬ್ಬಿದೆ. ಸಾಯಿ ಪಲ್ಲವಿ ಬಗ್ಗೆ ಹೊಟ್ಟೆ ಕಿಚ್ಚು ಹೊಂದಿರುವ ಬಾಲಿವುಡ್​ ಸೆಲೆಬ್ರಿಟಿಗಳು ಇಂಥ ಗಾಳಿಸುದ್ದಿ ಹಬ್ಬಿಸುತ್ತಿದ್ದಾರೆ ಎಂಬ ಮಾತು ಕೇಳಿಬಂದಿದೆ.

2 ಮಕ್ಕಳ ತಂದೆ ಜೊತೆ ಸಾಯಿ ಪಲ್ಲವಿ ಡೇಟಿಂಗ್​? ಹೊಟ್ಟೆಕಿಚ್ಚಿಗೆ ಅಪಪ್ರಚಾರ ಶುರು
ಸಾಯಿ ಪಲ್ಲವಿ
ಮದನ್​ ಕುಮಾರ್​
|

Updated on: Jul 26, 2024 | 5:16 PM

Share

ನಟಿ ಸಾಯಿ ಪಲ್ಲವಿ ಅವರು ವಿವಾದಗಳಿಂದ ಸಾಧ್ಯವಾದಷ್ಟು ದೂರ ಇರಲು ಪ್ರಯತ್ನಿಸುತ್ತಾರೆ. ಹಾಗಿದ್ದರೂ ಕೂಡ ಅವರ ಬಗ್ಗೆ ಕೆಲವರು ಗಾಸಿಪ್​ ಹಬ್ಬಿಸುತ್ತಿದ್ದಾರೆ. ದಕ್ಷಿಣ ಭಾರತದಲ್ಲಿ ತುಂಬ ಫೇಮಸ್​ ಆಗಿರುವ ಸಾಯಿ ಪಲ್ಲವಿ ಅವರು ಈಗ ಬಾಲಿವುಡ್​ನ ಕದ ತಟ್ಟಿದ್ದಾರೆ. ಬಿ-ಟೌನ್​ಗೆ ಕಾಲಿಡುತ್ತಿದ್ದಂತೆಯೇ ಅಲ್ಲಿನ ಕೆಲವರು ಸಾಯಿ ಪಲ್ಲವಿ ಬಗ್ಗೆ ಗಾಸಿಪ್​ ಹರಡುತ್ತಿದ್ದಾರೆ. 2 ಮಕ್ಕಳನ್ನು ಹೊಂದಿರುವ ವಿವಾಹಿತ ಪುರುಷನ ಜೊತೆ ಸಾಯಿ ಪಲ್ಲವಿ ಡೇಟಿಂಗ್​ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಸಾಯಿ ಪಲ್ಲವಿ ಅವರ ಇಮೇಜ್​ಗೆ ಹಾನಿ ಮಾಡುವ ಉದ್ದೇಶದಿಂದ ಈ ರೀತಿ ಗಾಳಿಸುದ್ದಿ ಹರಡಲಾಗಿದೆ ಎನ್ನಲಾಗಿದೆ.

ಆಮಿರ್​ ಖಾನ್​ ಮಗ ಜುನೈದ್​ ಖಾನ್​ ನಟನೆಯ ಸಿನಿಮಾದಲ್ಲಿ ಸಾಯಿ ಪಲ್ಲವಿ ನಾಯಕಿ ಆಗಿ ನಟಿಸುತ್ತಿದ್ದಾರೆ. ಅಲ್ಲದೇ, ರಣಬೀರ್​ ಕಪೂರ್​ ನಟನೆಯ ರಾಮಾಯಣ ಸಿನಿಮಾದಲ್ಲಿ ಸಾಯಿ ಪಲ್ಲವಿ ಅವರು ಸೀತೆಯ ಪಾತ್ರ ಮಾಡುತ್ತಿದ್ದಾರೆ. ದಕ್ಷಿಣದ ನಟಿಗೆ ಇಂಥ ಮಹತ್ವದ ಪ್ರಾಜೆಕ್ಟ್​ಗಳು ಸಿಕ್ಕಿದ್ದಕ್ಕೆ ಬಿ-ಟೌನ್​ನ ಕೆಲವರಿಗೆ ಹೊಟ್ಟೆಕಿಚ್ಚು ಉಂಟಾಗಿದೆ. ಆ ಕಾರಣದಿಂದಲೇ ಸಾಯಿ ಪಲ್ಲವಿ ಬಗ್ಗೆ ಡೇಟಿಂಗ್​ ವದಂತಿ ಹಬ್ಬಿಸುವ ಕುತಂತ್ರ ನಡೆದಿದೆ.

ಸಾಯಿ ಪಲ್ಲವಿ ಅವರು ಪ್ರತಿಭಾನ್ವಿತ ನಟಿ ಎಂಬುದರಲ್ಲಿ ಅನುಮಾನವೇ ಇಲ್ಲ. ಸೌತ್​ ಸಿನಿಮಾಗಳಲ್ಲಿ ಅವರು ಛಾಪು ಮೂಡಿಸಿದ್ದಾರೆ. ಇಂಥ ನಟಿ ಬಾಲಿವುಡ್​ಗೆ ಎಂಟ್ರಿ ನೀಡಿರುವುದರಿಂದ ಅಲ್ಲಿನ ಕೆಲವು ನಟಿಯರಿಗೆ ಅಭದ್ರತೆ ಕಾಡಲು ಆರಂಭಿಸಿದೆ. ಒಂದು ವೇಳೆ ಸಾಯಿ ಪಲ್ಲವಿ ಅವರು ಬಾಲಿವುಡ್​ ಸಿನಿಮಾಗಳಲ್ಲಿ ಮಿಂಚಲು ಶುರು ಮಾಡಿದರೆ ಹಿಂದಿಯ ಕೆಲವು ಹೀರೋಯಿನ್​ಗಳಿಗೆ ಕೆಲಸ ಇಲ್ಲದಂತೆ ಆಗುತ್ತದೆ. ಹಾಗಾಗಿ, ಸಾಯಿ ಪಲ್ಲವಿಯ ಬಗ್ಗೆ ಅಪಪ್ರಚಾರ ಮಾಡುವ ಹಿನ್ನಾರ ನಡೆದಿದೆ ಎಂದು ಫ್ಯಾನ್ಸ್​ ವಾದಿಸುತ್ತಿದ್ದಾರೆ.

ಇದನ್ನೂ ಓದಿ: ‘ರಾಮಾಯಣ’ ನಟಿ ಸಾಯಿ ಪಲ್ಲವಿ ಅಭಿನಯದ ಇನ್ನೊಂದು ಚಿತ್ರ 40 ಕೋಟಿ ರೂ.ಗೆ ಸೇಲ್​

ಬಾಲಿವುಡ್​ನ ಕೆಲವು ನಟಿಯರು ತಮ್ಮ ಪಿ.ಆರ್​. ತಂತ್ರವನ್ನು ಬಳಸಿ ಇಂಥ ಗಾಸಿಪ್ ಹಬ್ಬಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಯಾವ ವ್ಯಕ್ತಿಯ ಜೊತೆ ಸಾಯಿ ಪಲ್ಲವಿ ಡೇಟಿಂಗ್​ ಮಾಡುತ್ತಿದ್ದಾರೆ ಎಂಬುದು ಇಲ್ಲಿಯೂ ಬಹಿರಂಗ ಆಗಿಲ್ಲ. ಈ ಮೊದಲು ಕೂಡ ಸಾಯಿ ಪಲ್ಲವಿ ಬಗ್ಗೆ ಇಂಥ ಗಾಳಿಸುದ್ದಿ ಹರಡಿತ್ತು. ಆದರೆ ಅವುಗಳಿಗೆ ನಟಿಯ ಕಡೆಯಿಂದ ಪ್ರತಿಕ್ರಿಯೆ ಬರಲಿಲ್ಲ. ಇಂಥ ಗಾಸಿಪ್​ಗಳನ್ನು ನಿರ್ಲಕ್ಷಿಸಿ, ಕೆಲಸದ ಕಡೆಗೆ ಸಾಯಿ ಪಲ್ಲವಿ ಗಮನ ನೀಡಿದ್ದಾರೆ.

‘ರಾಮಾಯಣ’ ಸಿನಿಮಾಗೆ ನಿತೇಶ್​ ತಿವಾರಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಭಾರಿ ಬಜೆಟ್​ನಲ್ಲಿ ಈ ಸಿನಿಮಾ ಸಿದ್ಧವಾಗುತ್ತಿದೆ. ಶೂಟಿಂಗ್​ ಸೆಟ್​ನಿಂದ ಕೆಲವು ಫೋಟೋಗಳು ಲೀಕ್ ಆಗಿದ್ದವು. ಸಾಯಿ ಪಲ್ಲವಿ ಅವರು ಸೀತೆಯ ಲುಕ್​ನಲ್ಲಿ ಕಾಣಿಸಿಕೊಂಡಿದ್ದು ನೋಡಿ ಅಭಿಮಾನಿಗಳು ಥ್ರಿಲ್ ಆದರು. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಬೆಟ್ಟದಷ್ಟು ನಿರೀಕ್ಷೆ ಮನೆ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು