AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಿಂದ ಅವರಿಂದ ಬೇರೆ ಆಗಿ ಉಳಿದುಕೊಳ್ಳಲು ಕಾರಣ ನೀಡಿದ ಸುನಿತಾ

ಗೋವಿಂದ ಮತ್ತು ಸುನಿತಾ ಅಹುಜಾ ಅವರ ಬೇರ್ಪಡುವಿಕೆ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸುನಿತಾ ಅವರು 12 ವರ್ಷಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎಂಬ ಸುದ್ದಿ ಹರಡಿದ್ದರೂ, ಇತ್ತೀಚಿನ ಸಂದರ್ಶನದಲ್ಲಿ ಅವರು ವಿಚ್ಛೇದನದ ಬಗ್ಗೆ ಯಾವುದೇ ಯೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅವರು ಪ್ರತ್ಯೇಕವಾಗಿ ವಾಸಿಸಲು ಕಾರಣಗಳನ್ನು ವಿವರಿಸಿದ್ದಾರೆ.

ಗೋವಿಂದ ಅವರಿಂದ ಬೇರೆ ಆಗಿ ಉಳಿದುಕೊಳ್ಳಲು ಕಾರಣ ನೀಡಿದ ಸುನಿತಾ
ಗೋವಿಂದ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Mar 01, 2025 | 8:44 AM

Share

ಬಾಲಿವುಡ್ ನಟ ಗೋವಿಂದ ಹಾಗೂ ಅವರ ಪತ್ನಿ ಸುನಿತಾ ಅಹುಜಾ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎನ್ನುವ ಸುದ್ದಿ ಇದೆ. ಆರು ತಿಂಗಳ ಹಿಂದೆ ಡಿವೋರ್ಸ್ ನೋಟಿಸ್​ನ ಸುನಿತಾ ಕಳುಹಿಸಿದ್ದರು ಎನ್ನಲಾಗಿದೆ. ಈಗ ಈ ವಿಚಾರದಲ್ಲಿ ಇಬ್ಬರೂ ತಮ್ಮ ಕಡೆಯಿಂದ ಸ್ಪಷ್ಟನೆ ನೀಡುತ್ತಿದ್ದಾರೆ. ಈಗ ಸುನಿತಾ ಅವರ ವಿಡಿಯೋ ಒಂದು ವೈರಲ್ ಆಗಿದೆ. ಅವರು 12 ವರ್ಷಗಳಿಂದ ಗೋವಿಂದ ಅವರಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎನ್ನಲಾಗಿತ್ತು. ಈ ವಿಡಿಯೋದಲ್ಲಿ ಸ್ಪಷ್ಟನೆ ನೀಡಿದ್ದು, ವಿಚ್ಛೇದನದ ಮಾತೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

‘ಗೋವಿಂದ ಹಾಗೂ ನಾನು ಕಳೆದ 12 ವರ್ಷಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದೇವೆ. ನಾನು 12 ವರ್ಷಗಳಿಂದ ಒಬ್ಬಳೇ ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದೇನೆ’ ಎಂದು ಸುನಿತಾ ಅವರು ಸಂದರ್ಶನದಲ್ಲಿ ಹೇಳಿಕೊಂಡಿದ್ದರು. ಈ ವಿಚಾರ ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿತ್ತು. ಆದರೆ, ವಿಚ್ಛೇದನದ ಮಾತೇ ಇಲ್ಲ ಎಂದು ಸುನಿತಾ ಅಹುಜಾ ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ
Image
ಗೋವಿಂದ ಜಾತಕದಲ್ಲಿ ಬರೆದಿದೆ ಎರಡನೇ ಮದುವೆ; ಆ ದಿನ ಹತ್ತಿರ ಬಂದೇ ಬಿಡ್ತಾ?
Image
ವಿಚ್ಛೇದನ ವದಂತಿಗೆ ಸ್ಪಷ್ಟನೆ ನೀಡಿದ ಗೋವಿಂದ; ಒಪ್ಪಿಕೊಂಡ್ರಾ?
Image
37 ವರ್ಷ ಸಂಸಾರ ಮಾಡಿ ಈಗ ವಿಚ್ಛೇದನ ಪಡೆಯಲು ಮುಂದಾದ ನಟ ಗೋವಿಂದ?

‘ನಾವು ಪ್ರತ್ಯೇಕವಾಗಿ ವಾಸಿಸುತ್ತಿದ್ದೇವೆ. ಇದಕ್ಕೆ ಕಾರಣವೂ ಇದೆ. ಗೋವಿಂದ ಅವರು ರಾಜಕೀಯ ಸೇರುವಾಗ ನಮ್ಮ ಮಗಳು ದೊಡ್ಡವಳಾಗುತ್ತಿದ್ದಳು. ನಮ್ಮ ಮನೆಗೆ ಪಕ್ಷದ ಕಾರ್ಯಕರ್ತರು ಆಗಾಗ ಭೇಟಿ ಕೊಡುತ್ತಾ ಇದ್ದರು. ನಾವು ಮನೆಯಲ್ಲಿ ಶಾರ್ಟ್ಸ್ ಹಾಕಿಕೊಂಡು ಓಡಾಡುತ್ತೇವೆ. ಇದಕ್ಕೆ ಸ್ವಲ್ಪ ಅಡ್ಡಿ ಆಯಿತು. ಹೀಗಾಗಿ ಮನೆಯ ಸಮೀಪ ಒಂದು ಕಚೇರಿ ಮಾಡಿದೆವು. ನನ್ನ ಹಾಗೂ ಗೋವಿಂದ ಅವರನ್ನು ಪ್ರತ್ಯೇಕ ಮಾಡಲು ಯಾರಿಗಾದರೂ ಧೈರ್ಯ ಇದ್ದರೆ ಅವರು ಮುಂದೆ ಬರಲಿ’ ಎಂದು ಅವರು ಚಾಲೆಂಜ್ ಮಾಡಿದ್ದಾರೆ.

ಇದನ್ನೂ ಓದಿ: 37 ವರ್ಷ ಸಂಸಾರ ಮಾಡಿ ಈಗ ವಿಚ್ಛೇದನ ಪಡೆಯಲು ಮುಂದಾದ ನಟ ಗೋವಿಂದ?

ಗೋವಿಂದ ಹಾಗೂ ಸುನಿತಾ 1987ರಲ್ಲಿ ವಿವಾಹ ಆದರು. ಟೀನಾ 1988ರಲ್ಲಿ ಜನಿಸಿದರು. ಈ ದಂಪತಿಗೆ ಯಶ್​​ವರ್ಧನ್ ಹೆಸರಿನ ಮಗ ಇದ್ದಾನೆ. ಗೋವಿಂದ ಅವರು ಸೋಶಿಯಲ್ ಮೀಡಿಯಾದಲ್ಲಿ ಕುಟುಂಬದ ಜೊತೆಗಿನ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಗೋವಿಂದ ಅವರು ನಟಿಯ ಜೊತೆ ರಿಲೇಶನ್​ಶಿಪ್ ಹೊಂದಿದ್ದಾರೆ ಎಂದು ವರದಿ ಆಗಿತ್ತು. ಆದರೆ, ಈ ವಿಚಾರ ಇನ್ನೂ ಅಧಿಕೃತ ಆಗಿಲ್ಲ. ಇದನ್ನು ಎಲ್ಲರೂ ಅಲ್ಲಗಳೆಯುತ್ತಲೇ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ