AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಕ್ಸ್‌ ಆಫೀಸ್‌ನಲ್ಲಿ ‘ಹನುಮಾನ್‌ ಅಂಶ್’ ಅಬ್ಬರ: 7ನೇ ಶನಿವಾರವೂ ದಾಖಲೆ

ಶೋಭಿನಾವ್ ಸತ್ಯ ಅವರು ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ಹನುಮಾನ್ ಅಂಶ್’ ಚಿತ್ರವು ಬ್ಲಾಕ್ ಬಸ್ಟರ್ ಹಿಟ್ ಆಗಿದೆ. ನೀಮ್ ಕರೋಲಿ ಬಾಬಾ ಜೀವನದ ಕಥೆ ಹೊಂದಿರುವ ಈ ಸಿನಿಮಾಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಬಿಡುಗಡೆಯಾಗಿ 7 ವಾರ ಕಳೆದಿದ್ದರೂ ಈ ಸಿನಿಮಾದ ಹವಾ ಕಡಿಮೆ ಆಗಿಲ್ಲ.

ಬಾಕ್ಸ್‌ ಆಫೀಸ್‌ನಲ್ಲಿ ‘ಹನುಮಾನ್‌ ಅಂಶ್’ ಅಬ್ಬರ: 7ನೇ ಶನಿವಾರವೂ ದಾಖಲೆ
Hanuman Ansh Poster
ಮದನ್​ ಕುಮಾರ್​
|

Updated on: Sep 20, 2026 | 12:02 PM

Share

ಭಕ್ತಿಪ್ರಧಾನ ಕಥಾಹಂದರ ಇರುವ ‘ಹನುಮಾನ್‌ ಅಂಶ್’ ಚಿತ್ರವು ತನ್ನ ಅಭೂತಪೂರ್ವ ಪ್ರದರ್ಶನವನ್ನು ಮುಂದುವರಿಸಿದೆ. ಏಳನೇ ವಾರದಲ್ಲೂ ಅದ್ಭುತ ಕಲೆಕ್ಷನ್ ಮಾಡುತ್ತಿರುವ ಈ ಸಿನಿಮಾ, ಏಳನೇ ಶನಿವಾರದಂದು ಭಾರತೀಯ ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 9.50 ಕೋಟಿ ರೂಪಾಯಿ ನಿವ್ವಳ ಕಲೆಕ್ಷನ್ ಮಾಡುವ ಮೂಲಕ ಎಲ್ಲರನ್ನೂ ಹುಬ್ಬೇರಿಸುವಂತೆ ಮಾಡಿದೆ. ಶನಿವಾರದ (ಸೆಪ್ಟೆಂಬರ್ 19) ಈ ಭರ್ಜರಿ ಗಳಿಕೆಯೊಂದಿಗೆ ಚಿತ್ರವು ತನ್ನ ಬ್ಲಾಕ್‌ಬಸ್ಟರ್ ಸ್ಥಾನವನ್ನು ಮತ್ತಷ್ಟು ಬಲಪಡಿಸಿಕೊಂಡಿದೆ.

7ನೇ ಶುಕ್ರವಾರದಂದು ‘ಹನುಮಾನ್ ಅಂಶ್’ ಸಿನಿಮಾ ಸುಮಾರು 5 ಕೋಟಿ ರೂಪಾಯಿ ಗಳಿಸಿತ್ತು. ಅಲ್ಲಿಗೆ ಕೇವಲ ಎರಡೇ ದಿನಗಳಲ್ಲಿ 14.50 ಕೋಟಿ ರೂಪಾಯಿ ಬಾಚಿಕೊಂಡಂತಾಗಿದೆ. ಭಾರತದ ಭಾಕ್ಸ್ ಆಫೀಸ್​ನಲ್ಲಿ ಈ ಚಿತ್ರದ ಒಟ್ಟು ನಿವ್ವಳ ಗಳಿಕೆ 245.85 ಕೋಟಿ ರೂಪಾಯಿಗೆ ಬಂದು ತಲುಪಿದೆ. ಪ್ರೇಕ್ಷಕರಿಂದ ಸಿಗುತ್ತಿರುವ ನಿರಂತರ ಬೆಂಬಲವನ್ನು ನೋಡಿದರೆ, ಈ ಸಿನಿಮಾ ಶೀಘ್ರದಲ್ಲೇ ಒಟ್ಟು 300 ಕೋಟಿ ರೂಪಾಯಿ ನಿವ್ವಳ ಗಳಿಕೆಯ ಮೈಲಿಗಲ್ಲನ್ನು ದಾಟುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.

ಹನುಮಾನ್ ಅಂಶ್ ಬಾಕ್ಸ್ ಆಫೀಸ್ ಕಲೆಕ್ಷನ್:

ಈ ಚಿತ್ರದ ಬಾಕ್ಸ್ ಆಫೀಸ್ ಪ್ರಯಾಣ ಅತ್ಯಂತ ರೋಚಕವಾಗಿದೆ. ಮೊದಲ ವಾರದಲ್ಲಿ ಕೇವಲ 90 ಲಕ್ಷ ರೂಪಾಯಿ ಗಳಿಸಿದ್ದ ಈ ಸಿನಿಮಾ, ಎರಡನೇ ವಾರದಲ್ಲಿ 45 ಲಕ್ಷ ರೂಪಾಯಿ ಕಲೆಕ್ಷನ್ ಮಾಡಿತ್ತು. ಆದರೆ, ಮೂರನೇ ವಾರದಿಂದ ಪ್ರೇಕ್ಷಕರ ಬಾಯಿ ಮಾತಿನ ಪ್ರಚಾರದಿಂದಾಗಿ ಗಳಿಕೆಯಲ್ಲಿ ಭಾರಿ ಜಿಗಿತ ಕಂಡಿತು. ಮೂರನೇ ವಾರದಲ್ಲಿ 10.25 ಕೋಟಿ ರೂಪಾಯಿ ಕಲೆಕ್ಟ್ ಮಾಡಿದರೆ, ನಾಲ್ಕನೇ ವಾರದಲ್ಲಿ ಬರೋಬ್ಬರಿ 58.25 ಕೋಟಿ ರೂಪಾಯಿ ಬಾಚಿಕೊಂಡಿತು.

ಐದನೇ ವಾರದಲ್ಲಿ ತನ್ನ ಸಾರ್ವಕಾಲಿಕ ಗರಿಷ್ಠ ಗಳಿಕೆಯಾದ 85 ಕೋಟಿ ರೂಪಾಯಿಯನ್ನು ಗಳಿಸಿ ದಾಖಲೆ ಬರೆಯಿತು. ಆ ನಂತರ ಆರನೇ ವಾರದಲ್ಲೂ ತನ್ನ ಅಬ್ಬರ ತಗ್ಗಿಸದೆ 76.50 ಕೋಟಿ ರೂಪಾಯಿ ಬಾಚಿಕೊಂಡಿತ್ತು. ಈಗ ಏಳನೇ ವಾರದ ಆರಂಭದಲ್ಲೇ ಶುಕ್ರವಾರ 5 ಕೋಟಿ ಹಾಗೂ ಶನಿವಾರ 9.50 ಕೋಟಿ ರೂಪಾಯಿ ಸೇರಿ ಒಟ್ಟು 245.85 ಕೋಟಿ ರೂಪಾಯಿಗಳನ್ನು ತನ್ನ ಬೊಕ್ಕಸಕ್ಕೆ ಹಾಕಿಕೊಂಡಿದೆ.

ಇದನ್ನೂ ಓದಿ: ಆಸ್ಕರ್ ರೇಸ್‌ನಿಂದ ‘ಹನುಮಾನ್ ಅಂಶ್’ ಹೊರಗೆ: ಅವಕಾಶ ತಪ್ಪಿದ್ದಕ್ಕೆ ಕಾರಣ ತಿಳಿಸಿದ ನಿರ್ಮಾಪಕಿ

ನೀಮ್ ಕರೋಲಿ ಬಾಬಾ ಜೀವನಚರಿತ್ರೆ:

ವಿಶಾಲ್ ಚತುರ್ವೇದಿ ನಿರ್ದೇಶನದ ‘ಹನುಮಾನ್‌ ಅಂಶ್’ ಚಿತ್ರವು ಪ್ರಸಿದ್ಧ ಸಂತ ನೀಮ್ ಕರೋಲಿ ಬಾಬಾರವರ ಜೀವನ ಆಧಾರಿತ ಬಯೋಪಿಕ್ ಸಿನಿಮಾವಾಗಿದೆ. ತಾಯಿಯ ಅಗಲಿಕೆಯಿಂದ ಕಂಗಾಲಾದ ಸಣ್ಣ ಬಾಲಕನೊಬ್ಬ ದೇವರನ್ನು ಹುಡುಕುತ್ತ ಹೊರಟು, ಕಾಲಕ್ರಮೇಣ ದೇಶವೇ ಪೂಜಿಸುವ ಪೂಜ್ಯ ಸಂತ ನೀಮ್ ಕರೋಲಿ ಬಾಬಾರಾಗಿ ಹೇಗೆ ಬದಲಾಗುತ್ತಾನೆ ಎಂಬುದನ್ನು ಚಿತ್ರದಲ್ಲಿ ಅತ್ಯಂತ ಭಾವನಾತ್ಮಕವಾಗಿ ತೋರಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ