AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೂಟ್​ಗೆ ಬರದ ಪವನ್ ಕಲ್ಯಾಣ್; ಆ ಸಿನಿಮಾ ಬಿಟ್ಟು ಸಲ್ಮಾನ್ ಖಾನ್ ಮೊರೆ ಹೋದ ನಿರ್ದೇಶಕ

ಪವನ್ ಕಲ್ಯಾಣ್ ಅವರ ‘ಉಸ್ತಾದ್ ಭಗತ್ ಸಿಂಗ್’ ಚಿತ್ರದ ವಿಳಂಬದಿಂದಾಗಿ ನಿರ್ದೇಶಕ ಹರೀಶ್ ಶಂಕರ್ ಅವರು ಸಲ್ಮಾನ್ ಖಾನ್ ಅವರ ಮುಂದಿನ ಚಿತ್ರವನ್ನು ನಿರ್ದೇಶಿಸಲು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಪವನ್ ಕಲ್ಯಾಣ್ ಅವರ ಚಿತ್ರದಲ್ಲಿನ ತೊಂದರೆಗಳಿಂದಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ. ಸಲ್ಮಾನ್ ಖಾನ್ ಅವರ ಹೊಸ ಚಿತ್ರಕ್ಕೆ ‘ಮೈತ್ರಿ ಮೂವೀ ಮೇಕರ್ಸ್’ ಬಂಡವಾಳ ಹೂಡುತ್ತಿದೆ.

ಶೂಟ್​ಗೆ ಬರದ ಪವನ್ ಕಲ್ಯಾಣ್; ಆ ಸಿನಿಮಾ ಬಿಟ್ಟು ಸಲ್ಮಾನ್ ಖಾನ್ ಮೊರೆ ಹೋದ ನಿರ್ದೇಶಕ
ಪವನ್-ಸಲ್ಮಾನ್
ರಾಜೇಶ್ ದುಗ್ಗುಮನೆ
|

Updated on:Apr 02, 2025 | 8:55 AM

Share

ತೆಲುಗು ನಿರ್ದೇಶಕ ಹರೀಶ್ ಶಂಕರ್ (Harish Shankar) ಅವರು ಪವನ್ ಕಲ್ಯಾಣ್ ಜೊತೆ ‘ಉಸ್ತಾದ್ ಭಗತ್ ಸಿಂಗ್’ ಹೆಸರಿನ ಸಿನಿಮಾ ಮಾಡುತ್ತಿದ್ದಾರೆ. ಆದರೆ, ರಾಜಕೀಯದಲ್ಲಿ ಬ್ಯುಸಿ ಇರುವುದರಿಂದ ಈ ಚಿತ್ರದ ಶೂಟ್​ಗೆ ಪವನ್ ಕಲ್ಯಾಣ್ ಪದೇ ಪದೇ ಗೈರಾಗುತ್ತಿದ್ದಾರೆ. ಹೀಗಾಗಿ, ಈ ಸಿನಿಮಾ ಮುಂದುವರಿಯೋದು ಅನುಮಾನ ಎನ್ನಲಾಗುತ್ತಿದೆ. ಈ ಕಾರಣಕ್ಕೆ ಹರೀಶ್ ಶಂಕರ್ ಅವರು ಸಲ್ಮಾನ್ ಖಾನ್ ಮುಂದಿನ ಚಿತ್ರಕ್ಕೆ ನಿರ್ದೇಶನ ಮಾಡಲು ಮುಂದಾಗಿದ್ದಾರೆ ಎಂದು ವರದಿ ಆಗಿದೆ.

ಸಲ್ಮಾನ್ ಖಾನ್ ಅವರು ದಕ್ಷಿಣದ ನಿರ್ದೇಶಕ ಎಆರ್ ಮುರುಗದಾಸ್ ಅವರನ್ನು ಅತಿಯಾಗಿ ನಂಬಿದ್ದರು. ಈ ನಂಬಿಕೆ ಮೇರೆಗೆ ‘ಸಿಕಂದರ್’ ಸಿನಿಮಾ ಮಾಡಿದರು. ಈ ಸಿನಿಮಾ ಹಿಟ್ ಆಗಿಲ್ಲ. ಆದಾಗ್ಯೂ ಸಲ್ಲುಗೆ ದಕ್ಷಿಣದ ನಿರ್ದೇಶಕರ ಮೇಲಿನ ನಂಬಿಕೆ ಕಳೆದು ಹೋಗಿಲ್ಲ. ಹೀಗಾಗಿ, ಸಲ್ಮಾನ್ ಖಾನ್ ಹಾಗೂ ಹರೀಶ್ ಶಂಕರ್ ಅವರು ಇತ್ತೀಚೆಗೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಹರೀಶ್ ಹೇಳಿದ ಸಿನಿಮಾದ ಒಂದೆಳೆ ಸಲ್ಲು ಭಾಯ್​ಗೆ ಇಷ್ಟ ಆಗಿದೆ ಎನ್ನಲಾಗಿದೆ.

ಪವನ್ ಕಲ್ಯಾಣ್ ಅವರ ‘ಉಸ್ತಾದ್ ಭಗತ್ ಸಿಂಗ್’ ಸೆಟ್ಟೇರಿ ಬಹಳ ಸಮಯ ಕಳೆದಿದೆ. ಆದರೆ, ಎಷ್ಟೇ ಪ್ರಯತ್ನಿಸಿದರೂ ಸಿನಿಮಾ ಮಾತ್ರ ನಿಂತಲ್ಲೆ ನಿಂತಿದೆ. ಪವನ್ ಕಲ್ಯಾಣ್ ಕೂಡ ಸಿನಿಮಾಗೆ ಡೇಟ್​ ಕೊಡುವ ಲಕ್ಷಣ ಕಾಣುತ್ತಿಲ್ಲ. ಹೀಗಾಗಿ, ಈ ಚಿತ್ರವನ್ನಿ ಬಿಟ್ಟು ಹರೀಶ್ ಶಂಕರ್ ಮುಂದುವರಿಯುವ ನಿರ್ಧಾರಕ್ಕೆ ಬಂದಿದ್ದಾರೆ.

ಇದನ್ನೂ ಓದಿ
Image
52ನೇ ವಯಸ್ಸಿನಲ್ಲೂ ಸಿಂಗಲ್; ಈ ಸ್ಟಾರ್ ನಟಿ ಮದುವೆ ಆಗದಿರಲು ಅಜಯ್ ಕಾರಣ್
Image
ಅಜಯ್ ದೇವಗನ್ ಐಷಾರಾಮಿ ಜೀವನ; 60 ಕೋಟಿ ಮನೆ, ದುಬಾರಿ ಕಾರು, ಬಿಸ್ನೆಸ್
Image
ಪಾತಾಳ ಕಾಣುತ್ತಿದೆ ಸಲ್ಮಾನ್ ಖಾನ್ ನಟನೆಯ ‘ಸಿಕಂದರ್’ ಕಲೆಕ್ಷನ್
Image
ನಟನೆ ಮಾತ್ರವಲ್ಲ ಈ ವಿಶೇಷ ವಿದ್ಯೆ ಕಲಿತಿದ್ದಾರೆ ಅಜಯ್ ರಾವ್

ಈ ಮೊದಲು ಸನ್ ಪಿಕ್ಚರ್ಸ್ ಅವರು ಸಲ್ಮಾನ್ ಸಿನಿಮಾಗೆ ಬಂಡವಾಳ ಹೂಡಲು ಬಂದಿದ್ದರು. ಈ ಚಿತ್ರಕ್ಕೆ ಅಟ್ಲಿ ನಿರ್ದೇಶನ ಮಾಡಬೇಕಿತ್ತು. ಆದರೆ, ಇದು ಸೆಟ್ಟೇರಿಲ್ಲ. ಈಗ ಸಲ್ಮಾನ್ ಹಾಗೂ ಹರೀಶ್ ಶಂಕರ್ ಚಿತ್ರಕ್ಕೆ ‘ಪುಷ್ಪ 2’ ಖ್ಯಾತಿಯ ‘ಮೈತ್ರಿ ಮೂವೀ ಮೇಕರ್ಸ್’ ಬಂಡವಾಳ ಹೂಡುತ್ತಿದೆ.

ಇದನ್ನೂ ಓದಿ: ಪಾತಾಳ ಕಾಣುತ್ತಿದೆ ಸಲ್ಮಾನ್ ಖಾನ್ ನಟನೆಯ ‘ಸಿಕಂದರ್’ ಕಲೆಕ್ಷನ್; ಮೂರು ದಿನದ ಗಳಿಕೆ ಇಷ್ಟೇನಾ?

ಸಲ್ಮಾನ್ ಖಾನ್ ಅವರು ಇತ್ತೀಚೆಗೆ ದೊಡ್ಡ ಗೆಲುವು ಕಂಡಿಲ್ಲ. ಹೀಗಾಗಿ, ಸಲ್ಲುಗೆ ಒಂದು ದೊಡ್ಡ ಗೆಲುವು ಕೊಡಿಸೋ ಜವಾಬ್ದಾರಿ ಅವರ ಹೆಗಲು ಏರಿದೆ. ಆದರೆ, ಅಚ್ಚರಿಯ ವಿಚಾರ ಎಂದರೆ  ಹರೀಶ್ ಶಂಕರ್ ಅವರು ಇತ್ತೀಚೆಗೆ ದೊಡ್ಡ ಗೆಲುವು ಕಂಡಿಲ್ಲ. ಹೀಗಿರುವಾಗ ಅವರು ಸಲ್ಲುಗೆ ಗೆಲುವು ಕೊಡಿಸೋದು ಹೇಗೆ ಎಂಬ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:47 am, Wed, 2 April 25

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ