AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hema Malini: ಅಲ್ಲು ಅರ್ಜುನ್​ಗೆ ಭರಪೂರ ಮೆಚ್ಚುಗೆ ನೀಡಿದ ಹೇಮಾ ಮಾಲಿನಿ; ಆದ್ರೆ ಹಿಂದಿ ಮಂದಿಗೆ ಕೋಪ ಬಂದಿದ್ದೇಕೆ?

Allu Arjun: ‘ಪಾತ್ರಕ್ಕಾಗಿ ಅಲ್ಲು ಅರ್ಜುನ್​ ಅವರು ಅಂಥ ಲುಕ್​ನಲ್ಲಿ ಕಾಣಿಸಿಕೊಳ್ಳಲು ಒಪ್ಪಿದರು ಎಂಬುದು ಗಮನಾರ್ಹ ವಿಷಯ. ನಮ್ಮ ಹಿಂದಿ ಸಿನಿಮಾದ ಹೀರೋಗಳು ಈ ರೀತಿ ಕಾಣಿಸಿಕೊಳ್ಳಲ್ಲ’ ಎಂದು ಹೇಮಾ ಮಾಲಿನಿ ಹೇಳಿದ್ದಾರೆ.

Hema Malini: ಅಲ್ಲು ಅರ್ಜುನ್​ಗೆ ಭರಪೂರ ಮೆಚ್ಚುಗೆ ನೀಡಿದ ಹೇಮಾ ಮಾಲಿನಿ; ಆದ್ರೆ ಹಿಂದಿ ಮಂದಿಗೆ ಕೋಪ ಬಂದಿದ್ದೇಕೆ?
ಅಲ್ಲು ಅರ್ಜುನ್, ಹೇಮಾ ಮಾಲಿನಿ
ಮದನ್​ ಕುಮಾರ್​
|

Updated on: May 12, 2023 | 11:09 AM

Share

ನಟ ಅಲ್ಲು ಅರ್ಜುನ್​ (Allu Arjun) ಅವರು ದೇಶಾದ್ಯಂತ ಜನಪ್ರಿಯತೆ ಹೊಂದಿದ್ದಾರೆ. ಒಂದು ಕಾಲದಲ್ಲಿ ಕೇವಲ ಟಾಲಿವುಡ್​ಗೆ ಸೀಮಿತ ಆಗಿದ್ದ ಅವರು ಈಗ ಪ್ಯಾನ್​ ಇಂಡಿಯಾ ಹೀರೋ ಆಗಿ ಮಿಂಚುತ್ತಿದ್ದಾರೆ. ‘ಪುಷ್ಪ’ ಸಿನಿಮಾ (Pushpa Movie) ಸೂಪರ್​ ಹಿಟ್​ ಆದ ಬಳಿಕ ಅವರ ಚಾರ್ಮ್​ ಹೆಚ್ಚಿತು. ದಕ್ಷಿಣ ಭಾರತದ ಸಿನಿಪ್ರಿಯರು ಮಾತ್ರವಲ್ಲದೇ ಹಿಂದಿ ಪ್ರೇಕ್ಷಕರು ಕೂಡ ‘ಪುಷ್ಪ’ ಸಿನಿಮಾ ನೋಡಿ ಮೆಚ್ಚಿಕೊಂಡರು. ಬಾಲಿವುಡ್​ ಸೆಲೆಬ್ರಿಟಿಗಳಿಗೂ ಈ ಚಿತ್ರ ಸಖತ್​ ಇಷ್ಟ ಆಯಿತು. ಹಿರಿಯ ನಟಿ ಹೇಮಾ ಮಾಲಿನಿ (Hema Malini) ಕೂಡ ಈ ಸಿನಿಮಾ ನೋಡಿ ಖುಷಿಪಟ್ಟಿದ್ದಾರೆ. ಹಾಗಾಗಿ ಅವರು ಅಲ್ಲು ಅರ್ಜುನ್​ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಅಲ್ಲು ಅರ್ಜುನ್​ ಅವರನ್ನು ಹೊಗಳುವ ಭರದಲ್ಲಿ ಹಿಂದಿ ಹೀರೋಗಳನ್ನು ತೆಗಳಿದ್ದಾರೆ ಎಂದು ಕೆಲವರು ತಕರಾರು ತೆಗೆದಿದ್ದಾರೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

ಹೇಮಾ ಮಾಲಿನಿ ಹೇಳಿದ್ದೇನು?

‘ನಾನು ಪುಷ್ಪ ಸಿನಿಮಾವನ್ನು ನೋಡಿ ತುಂಬ ಎಂಜಾಯ್​ ಮಾಡಿದೆ. ಆ ಚಿತ್ರದಲ್ಲಿ ಅಲ್ಲು ಅರ್ಜುನ್​ ಅವರು ನಡೆಯುವ ಶೈಲಿಯಲ್ಲಿ ಅನೇಕರು ಡ್ಯಾನ್ಸ್​ ಮಾಡಿದ್ದಾರೆ. ನಾನು ಅಲ್ಲು ಅರ್ಜುನ್​ ಅವರ ನಟನೆಯನ್ನು ಗಮನಿಸಿದೆ. ಅವರ ಬೇರೆ ಸಿನಿಮಾಗಳನ್ನೂ ನೋಡಿದೆ. ಅವರು ತುಂಬ ಸುಂದರವಾದ ನಟ. ಆದರೆ ಪುಷ್ಪ ಚಿತ್ರಕ್ಕಾಗಿ ಆ ರೀತಿ ರಗಡ್​ ಲುಕ್​ನಲ್ಲಿ, ಲುಂಗಿ ಧರಿಸಿ ನಟಿಸಿದ್ದಾರೆ. ಅಂಥ ಮಾತ್ರ ಮಾಡಿ ಅವರು ಹೀರೋ ಎನಿಸಿಕೊಂಡಿದ್ದಾರೆ’ ಎಂದು ಹೇಮಾ ಮಾಲಿನಿ ಹೊಗಳಿದ್ದಾರೆ.

ಇದನ್ನೂ ಓದಿ: 2023ರ ಬಹುನಿರೀಕ್ಷಿತ ಹಿಂದಿ ಚಿತ್ರಗಳಲ್ಲಿ ‘ಪುಷ್ಪ 2’ಗೆ ಸ್ಥಾನ; ಶಾರುಖ್​ನ ಹಿಂದಿಕ್ಕಿದ ಅಲ್ಲು ಅರ್ಜುನ್

ಇದನ್ನೂ ಓದಿ
Image
‘ನನ್ನ ಪುಷ್ಪರಾಜ್​​ಗೆ ಹುಟ್ಟುಹಬ್ಬದ ಶುಭಾಶಯ’; ಅಲ್ಲು ಅರ್ಜುನ್​ಗೆ ಶುಭಾಶಯ ತಿಳಿಸಿದ ರಶ್ಮಿಕಾ ಮಂದಣ್ಣ
Image
Pushpa 2: ಕಥಾನಾಯಕನೇ ನಾಪತ್ತೆ; ಎಲ್ಲಿದ್ದಾನೆ ಪುಷ್ಪರಾಜ್​? ಅಲ್ಲು ಅರ್ಜುನ್​ ಜನ್ಮದಿನಕ್ಕೂ ಮುನ್ನ ದೊಡ್ಡ ಟ್ವಿಸ್ಟ್​
Image
Allu Arjun: ಚಿತ್ರರಂಗದಲ್ಲಿ 20 ವರ್ಷ ಪೂರೈಸಿದ ಅಲ್ಲು ಅರ್ಜುನ್​; ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ಸ್ಟಾರ್​ ನಟ
Image
Sai Pallavi: ‘ಪುಷ್ಪ 2’ ಸಿನಿಮಾದಲ್ಲಿ ಸಾಯಿ ಪಲ್ಲವಿಗೆ ನೆಗೆಟಿವ್​ ಪಾತ್ರ? ಟಾಲಿವುಡ್​ ಅಂಗಳದಲ್ಲಿ ಗುಸುಗುಸು

‘ಪಾತ್ರಕ್ಕಾಗಿ ಅವರು ಅಂಥ ಲುಕ್​ನಲ್ಲಿ ಕಾಣಿಸಿಕೊಳ್ಳಲು ಒಪ್ಪಿದರು ಎಂಬುದು ಗಮನಾರ್ಹ ವಿಷಯ. ನಮ್ಮ ಹಿಂದಿ ಸಿನಿಮಾದ ಹೀರೋಗಳು ಈ ರೀತಿ ಕಾಣಿಸಿಕೊಳ್ಳಲ್ಲ. ‘ರಜಿಯಾ ಸುಲ್ತಾನ್​’ ಸಿನಿಮಾದಲ್ಲಿ ಧರ್ಮೇಂದ್ರ ಅವರು ಆ ರೀತಿ ಕಾಣಿಸಿಕೊಳ್ಳಲು ಹಿಂಜರಿಕೆಪಟ್ಟುಕೊಂಡಿದ್ದು ನನಗೆ ನೆನಪಿದೆ’ ಎಂದು ಹೇಮಾ ಮಾಲಿನಿ ಹೇಳಿದ್ದಾರೆ. ಈ ಮೂಲಕ ಹಿಂದಿ ಚಿತ್ರರಂಗದ ಹೀರೋಗಳನ್ನು ತೆಗಳಿದ್ದಾರೆ ಎಂದು ಅನೇಕರು ತಕರಾರು ತೆಗೆದಿದ್ದಾರೆ.

ಇದನ್ನೂ ಓದಿ: 150 ಮಕ್ಕಳ ದತ್ತು ಪಡೆದು ಶಿಕ್ಷಣ ನೀಡುತ್ತಿರುವ ತಮಿಳು ನಟ, ಭೇಷ್ ಎಂದ ಅಲ್ಲು ಅರ್ಜುನ್

ಅಲ್ಲು ಅರ್ಜುನ್​ ಅವರು ಈಗ ‘ಪುಷ್ಪ 2’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರಕ್ಕೆ ಸುಕುಮಾರ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ಪ್ರತಿಷ್ಠಿತ ಮೈತ್ರಿ ಮೂವೀ ಮೇಕರ್ಸ್​ ಸಂಸ್ಥೆ ಇದಕ್ಕೆ ಬಂಡವಾಳ ಹೂಡುತ್ತಿದೆ. ರಶ್ಮಿಕಾ ಮಂದಣ್ಣ ಅವರು ಅಲ್ಲು ಅರ್ಜುನ್​ಗೆ ಜೋಡಿಯಾಗಿ ನಟಿಸುತ್ತಿದ್ದಾರೆ. ಡಾಲಿ ಧನಂಜಯ್​, ಫಹಾದ್​ ಫಾಸಿಲ್​ ಮುಂತಾದವರು ಕೂಡ ಈ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?