AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೇರಾ ಫೇರಿ 3’ ಚಿತ್ರದಿಂದ ಪರೇಶ್ ಹೊರ ನಡೆದ ವಿಚಾರ; ಅಚ್ಚರಿಯ ಹೇಳಿಕೆ ನೀಡಿದ ನಿರ್ದೇಶಕ

ಬಾಲಿವುಡ್‌ನ ಜನಪ್ರಿಯ 'ಹೇರಾ ಫೇರಿ 3' ಸಿನಿಮಾ ಮತ್ತೆ ವಿವಾದದ ಸುಳಿಯಲ್ಲಿದೆ. ಬಾಬುರಾವ್ ಖ್ಯಾತಿಯ ಪರೇಶ್ ರಾವಲ್ ಚಿತ್ರದಿಂದ ಹೊರಬಂದಿದ್ದಾರೆ ಎಂಬ ಬಲವಾದ ವದಂತಿ ಹಬ್ಬಿದ್ದು, 11 ಲಕ್ಷ ರೂ. ಸೈನಿಂಗ್ ಅಮೌಂಟ್ ಹಿಂದಿರುಗಿಸಿದ್ದಾರೆ ಎನ್ನಲಾಗಿದೆ. ಆದರೆ ನಿರ್ದೇಶಕ ಪ್ರಿಯದರ್ಶನ್ ಈ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಸಂಭಾವನೆ ವಿಳಂಬ ಮತ್ತು ಚಿತ್ರೀಕರಣದ ಸುದೀರ್ಘ ಕಾಯುವಿಕೆಯೇ ಪರೇಶ್ ನಿರ್ಗಮನಕ್ಕೆ ಕಾರಣ ಎನ್ನಲಾಗಿದೆ.

‘ಹೇರಾ ಫೇರಿ 3’ ಚಿತ್ರದಿಂದ ಪರೇಶ್ ಹೊರ ನಡೆದ ವಿಚಾರ; ಅಚ್ಚರಿಯ ಹೇಳಿಕೆ ನೀಡಿದ ನಿರ್ದೇಶಕ
ಹೇರಾ ಫೇರಿ Image Credit source: Hera Pheri
ರಾಜೇಶ್ ದುಗ್ಗುಮನೆ
|

Updated on: May 25, 2026 | 2:45 PM

Share

ಬಾಲಿವುಡ್‌ನ ಅತ್ಯಂತ ಜನಪ್ರಿಯ ಕಾಮಿಡಿ ಫ್ರಾಂಚೈಸಿ ‘ಹೇರಾ ಫೇರಿ’ಯಲ್ಲಿ ಮೂರನೇ ಸಿನಿಮಾ ಬರುತ್ತಿದೆ. ಈ ಸಿನಿಮಾ ಆರಂಭದಿಂದಲೂ ಒಂದಲ್ಲಾ ಒಂದು ವಿವಾದಗಳಿಂದಲೇ ಸುದ್ದಿಯಾಗುತ್ತಿದೆ. ಚಿತ್ರದ ಹಕ್ಕುಗಳ ವಿಚಾರವಾಗಿ ಕಾನೂನು ಹೋರಾಟ ನಡೆಯುತ್ತಿರುವ ಬೆನ್ನಲ್ಲೇ, ಚಿತ್ರದ ಮುಖ್ಯ ಪಾತ್ರಧಾರಿ, ‘ಬಾಬುರಾವ್’ ಖ್ಯಾತಿಯ ಪರೇಶ್ ರಾವಲ್ ಈ ಚಿತ್ರದಿಂದ ಹೊರನಡೆದಿದ್ದಾರೆ ಎಂಬ ಬಲವಾದ ವದಂತಿ ಹಬ್ಬಿದೆ. ಅಷ್ಟೇ ಅಲ್ಲದೆ, ಅವರು ಪಡೆದಿದ್ದ 11 ಲಕ್ಷ ರೂ. ಸೈನಿಂಗ್ ಅಮೌಂಟ್ ಅನ್ನು ಶೇ. 15 ರಷ್ಟು ಬಡ್ಡಿಯೊಂದಿಗೆ ವಾಪಸ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಈ ಕುರಿತು ಚಿತ್ರದ ನಿರ್ದೇಶಕ ಪ್ರಿಯದರ್ಶನ್ ಪ್ರತಿಕ್ರಿಯೆ ನೀಡಿದ್ದಾರೆ.

ಪರೇಶ್ ರಾವಲ್ ಚಿತ್ರದಿಂದ ಹೊರಹೋಗಿರುವ ಬಗ್ಗೆ ಮಾಧ್ಯಮದವರ ಜೊತೆ ಮಾತನಾಡಿದ ಚಿತ್ರದ ನಿರ್ದೇಶಕ ಪ್ರಿಯದರ್ಶನ್ , ‘ಈ ವಿಷಯದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ’ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಬೆಂಕಿ ಇಲ್ಲದೆ ಹೊಗೆ ಆಡೋದಿಲ್ಲ ಎಂಬುದು ನೆಟ್ಟಿಗರ ವಾದ.

ಇದನ್ನೂ ಓದಿ: ‘ಹೇರಾ ಪೇರಿ 3’: ಮುನಿಸು ಮರೆತು ಅಕ್ಷಯ್ ಜೊತೆ ಕೈಜೋಡಿಸಿದ ಪರೇಶ್ ರಾವಲ್

ಪರೇಶ್ ರಾವಲ್ ಚಿತ್ರದಿಂದ ಹೊರನಡೆಯುತ್ತಿರುವುದು ಇದೇ ಮೊದಲೇನಲ್ಲ. 2025ರಲ್ಲೂ ಅವರು ಚಿತ್ರದಿಂದ ದಿಢೀರ್ ಹೊರನಡೆದಾಗ, ಮುಖ್ಯ ಭೂಮಿಕೆಯಲ್ಲಿದ್ದ ಅಕ್ಷಯ್ ಕುಮಾರ್ ಅವರು ಪರೇಶ್ ವಿರುದ್ಧ 25 ಕೋಟಿ ರೂ.ಗಳ ಮೊಕದ್ದಮೆ ಹೂಡಿದ್ದರು. ಆದರೆ ನಂತರ ಆ ಸಮಸ್ಯೆ ಬಗೆಹರಿದು ಪರೇಶ್ ರಾವಲ್ ಚಿತ್ರಕ್ಕೆ ಮರಳಿದ್ದರು.

ಇತ್ತೀಚೆಗೆ ಯೂಟ್ಯೂಬ್ ಸಂದರ್ಶನವೊಂದರಲ್ಲಿ ಮಾತನಾಡಿದ್ದ ನಟ ಅಕ್ಷಯ್ ಕುಮಾರ್, ‘ಹೇರಾ ಫೇರಿ 3 ಸದ್ಯಕ್ಕೆ ಸೆಟ್ಟೇರುತ್ತಿಲ್ಲ’ ಎಂದಿದ್ದರು. ಈ ಸಿನಿಮಾ 2027ರಲ್ಲಿ ಆರಂಭ ಆಗುವ ನಿರೀಕ್ಷೆ ಇದೆ.

ಪರೇಶ್ ಹಿಂದೇಟಿಗೆ ಕಾರಣ ಏನು?

ವರದಿಗಳ ಪ್ರಕಾರ, ಸಿನಿಮಾದ ಚಿತ್ರೀಕರಣ 2027ರಲ್ಲಿ ಆರಂಭವಾಗುವ ನಿರೀಕ್ಷೆಯಿದೆ. ಅಂದರೆ, ‘ಹೇರಾ ಫೇರಿ 3’ ತೆರೆಗೆ ಬರಲು 2027ರ ಅಂತ್ಯ ಅಥವಾ 2028ರ ತನಕ ಕಾಯಬೇಕಾಗುತ್ತದೆ. ಇನ್ನು ಸಂಭಾವನೆಯ ಒಪ್ಪಂದದ ಅನ್ವಯ, ಪರೇಶ್ ರಾವಲ್ ಅವರು ತಮ್ಮ ಪೂರ್ಣ ಪೇಮೆಂಟ್ ಪಡೆಯಲು ಕನಿಷ್ಠ ಎರಡು ವರ್ಷ ಕಾಯಬೇಕಾದ ಪರಿಸ್ಥಿತಿ ಇತ್ತು. ಇಷ್ಟು ಸುದೀರ್ಘ ಸಮಯ ಕಾಯಲು ಸಿದ್ಧರಿಲ್ಲದ ಕಾರಣವೇ ಅವರು ಚಿತ್ರದಿಂದ ಹೊರಹೋಗುವ ತೀರ್ಮಾನ ತಗೆದುಕೊಂಡಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಮಂಡ್ಯ ಎಳನೀರು ವ್ಯಾಪಾರಿಗಳಿಗೆ ಮಹಾ ದೋಖಾ: 25 ಲಕ್ಷಕ್ಕೂ ಹೆಚ್ಚು ಹಣ ವಂಚನೆ
ಮಂಡ್ಯ ಎಳನೀರು ವ್ಯಾಪಾರಿಗಳಿಗೆ ಮಹಾ ದೋಖಾ: 25 ಲಕ್ಷಕ್ಕೂ ಹೆಚ್ಚು ಹಣ ವಂಚನೆ
ಸಂಧಾನ ಸಭೆ ಯಶಸ್ವಿ: ಮುನಿಸು ಮರೆತು ಪರಸ್ಪರ ಕೈಲುಕಿದ ಹಾಸನ ಡಿಸಿ-ಎಸ್ಪಿ
ಸಂಧಾನ ಸಭೆ ಯಶಸ್ವಿ: ಮುನಿಸು ಮರೆತು ಪರಸ್ಪರ ಕೈಲುಕಿದ ಹಾಸನ ಡಿಸಿ-ಎಸ್ಪಿ
ನಮ್ಮ ಮೆಟ್ರೋದಲ್ಲಿ ಮತ್ತೊಂದು ಜೀವಂತ ಹೃದಯ ಸಾಗಣೆ: ವಿಡಿಯೋ ನೋಡಿ
ನಮ್ಮ ಮೆಟ್ರೋದಲ್ಲಿ ಮತ್ತೊಂದು ಜೀವಂತ ಹೃದಯ ಸಾಗಣೆ: ವಿಡಿಯೋ ನೋಡಿ
ಯಲಹಂಕ ಬಳಿ ನಿಂತಿದ್ದ ರೈಲು ಬೋಗಿಗಳು ಬೆಂಕಿಗೆ ಆಹುತಿ
ಯಲಹಂಕ ಬಳಿ ನಿಂತಿದ್ದ ರೈಲು ಬೋಗಿಗಳು ಬೆಂಕಿಗೆ ಆಹುತಿ
ಈ ಬಾರಿ ಬಿಗ್​​ಬಾಸ್ ಫಿನಾಲೆಗೆ ಬರುವವರು ಯಾರು? ಮಂಜನ ಉತ್ತರ ಹೀಗಿತ್ತು
ಈ ಬಾರಿ ಬಿಗ್​​ಬಾಸ್ ಫಿನಾಲೆಗೆ ಬರುವವರು ಯಾರು? ಮಂಜನ ಉತ್ತರ ಹೀಗಿತ್ತು
ಅಂಬಾರಿ ಹೊರುವ ಆನೆಯ ಆಯ್ಕೆ ಹೇಗೆ ನಡೆಯುತ್ತದೆ?
ಅಂಬಾರಿ ಹೊರುವ ಆನೆಯ ಆಯ್ಕೆ ಹೇಗೆ ನಡೆಯುತ್ತದೆ?
ರಮೇಶ್​​ ಜಾರಕಿಹೊಳಿ ಭೇಟಿ ರಹಸ್ಯ ಬಿಚ್ಚಿಟ್ಟ ಸಿದ್ದರಾಮಯ್ಯ
ರಮೇಶ್​​ ಜಾರಕಿಹೊಳಿ ಭೇಟಿ ರಹಸ್ಯ ಬಿಚ್ಚಿಟ್ಟ ಸಿದ್ದರಾಮಯ್ಯ
ಪರಿಣಾಮ ನೆಟ್ಟಗೆ ಇರಲ್ಲ: ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಉಗ್ರಪ್ಪ ಎಚ್ಚರಿಕೆ
ಪರಿಣಾಮ ನೆಟ್ಟಗೆ ಇರಲ್ಲ: ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಉಗ್ರಪ್ಪ ಎಚ್ಚರಿಕೆ
ಕುಟುಂಬದ ಹಿನ್ನೆಲೆ ಬಗ್ಗೆ ಮಾತನಾಡಿದ ‘ಬಿಗ್ ಬಾಸ್ ಕನ್ನಡ 13’ ಸ್ಪರ್ಧಿ ಮಂಜ
ಕುಟುಂಬದ ಹಿನ್ನೆಲೆ ಬಗ್ಗೆ ಮಾತನಾಡಿದ ‘ಬಿಗ್ ಬಾಸ್ ಕನ್ನಡ 13’ ಸ್ಪರ್ಧಿ ಮಂಜ
ಇಸ್ರೋ ರೋಬೋಟಿಕ್ಸ್ ಚಾಲೆಂಜ್‌ನಲ್ಲಿ ಐಐಐಟಿ ಧಾರವಾಡ ವಿದ್ಯಾರ್ಥಿಗಳ ಸಾಧನೆ
ಇಸ್ರೋ ರೋಬೋಟಿಕ್ಸ್ ಚಾಲೆಂಜ್‌ನಲ್ಲಿ ಐಐಐಟಿ ಧಾರವಾಡ ವಿದ್ಯಾರ್ಥಿಗಳ ಸಾಧನೆ