AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಿ ಮಾಡಿದ್ರೆ ‘ಹೇರಾ ಫೇರಿ 3’ಗೆ ಬರ್ತಾರಾ ಪರೇಶ್ ರಾವಲ್? ನಟನ ಉತ್ತರ ಏನು?

ಪರೇಶ್ ರಾವಲ್ ಅವರ ‘ಹೇರಾ ಫೇರಿ 3’ ಚಿತ್ರದಿಂದ ಹೊರ ಹೋಗಿದ್ದು ದೊಡ್ಡ ಸಂಚಲನವನ್ನು ಸೃಷ್ಟಿಸಿದೆ. ಅಕ್ಷಯ್ ಕುಮಾರ್ ಅವರ ನಿರ್ಮಾಣ ಸಂಸ್ಥೆಯಿಂದ ನೋಟಿಸ್ ನೀಡಲಾಗಿದೆ. ಪರೇಶ್ ರಾವಲ್ ಚಿತ್ರಕ್ಕೆ ಮರಳುವ ಸಾಧ್ಯತೆ ಕಡಿಮೆ ಎಂದು ಹೇಳಿದ್ದಾರೆ. ಈ ವಿವಾದದ ಹಿಂದಿನ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.

ರಾಜಿ ಮಾಡಿದ್ರೆ ‘ಹೇರಾ ಫೇರಿ 3’ಗೆ ಬರ್ತಾರಾ ಪರೇಶ್ ರಾವಲ್? ನಟನ ಉತ್ತರ ಏನು?
ಹೇರಾ ಫೇರಿ
ರಾಜೇಶ್ ದುಗ್ಗುಮನೆ
|

Updated on: Jun 09, 2025 | 2:20 PM

Share

‘ಹೇರಾ ಫೇರಿ 3’ ಸಿನಿಮಾದಿಂದ ಪರೇಶ್ ರಾವಲ್ (Paresh Rawal)  ಹೊರ ನಡೆದಿದ್ದು ಸಾಕಷ್ಟು ಸಂಚಲನ ಸೃಷ್ಟಿ ಮಾಡಿತ್ತು. ಈ ವಿಚಾರದಲ್ಲಿ ತಪ್ಪು ಯಾರದ್ದು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಹೀಗಿರುವಾಗಲೇ ಅಕ್ಷಯ್ ಕುಮಾರ್ ಒಡೆತನದ ನಿರ್ಮಾಣ ಸಂಸ್ಥೆ ಪರೇಶ್​ಗೆ ನೋಟಿಸ್ ನೀಡಿದೆ. ಈ ನೋಟಿಸ್​ನಿಂದ ಪರೇಶ್​ಗೆ ಮತ್ತಷ್ಟು ಬೇಸರ ಮೂಡಿಸಿದೆ. ಹಾಗಾದರೆ ಮುಂದಿನ ದಿನಗಳಲ್ಲಿ ಪರೇಶ್ ಅವರು ಈ ಸರಣಿಗೆ ಮರಳುತ್ತಾರಾ? ಸಾಧ್ಯವೇ ಇಲ್ಲ ಎಂಬುದು ಅವರ ಸ್ಪಷ್ಟ ಮಾತು.

ಈ ಮೊದಲು ದೊಡ್ಡ ದೊಡ್ಡ ಸಿನಿಮಾಗಳಿಂದ ಸ್ಟಾರ್ ಹೀರೋಗಳು, ಪೋಷಕ ಕಲಾವಿದರು ಹೊರ ನಡೆದ ಸಾಕಷ್ಟು ಉದಾಹರಣೆ ಇದೆ. ಆದರೆ, ಕೆಲವೊಮ್ಮೆ ಮಾತುಕತೆಯಿಂದ ಸಮಸ್ಯೆ ಬಗೆಹರಿದು ಕಲಾವಿದರು ಮರಳಿದ ಸಾಕಷ್ಟು ಉದಾಹರಣೆ ಇದೆ. ‘ಹೇರಾ ಫೇರಿ 3’ ಚಿತ್ರದಲ್ಲೂ ಆ ಸಾಧ್ಯತೆ ಇದೆಯೇ ಎನ್ನುವ ಬಗ್ಗೆ ಚರ್ಚೆ ನಡೆದಿದೆ. ಈ ವಿಚಾರವನ್ನು ಅಭಿಮಾನಿಯೋರ್ವ ಕೇಳಿದ್ದಾನೆ.

ಇದನ್ನೂ ಓದಿ
Image
‘ಸರಿಗಮಪ’ ವಿನ್ನರ್ ಶಿವಾನಿಗೆ ಸಿಕ್ಕ ಹಣ ಎಷ್ಟು? ಬಾಳು ಬೆಳಗುಂದಿಗೂ ಬಂಪರ್
Image
ದೀಪಿಕಾಳಿಂದ ದೂರವಾದ ಬಗ್ಗೆ ನನಗೆ ಬೇಸರ ಇಲ್ಲ; ಮಾಜಿ ಬಾಯ್​ಫ್ರೆಂಡ್ ಹೇಳಿಕೆ
Image
ಅಣ್ಣಾವ್ರ ಚಿತ್ರವನ್ನು ರಿಮೇಕ್ ಮಾಡಿದ್ದ ಅಮಿತಾಭ್
Image
ಭಾನುವಾರವೇ ಅತೀ ಕಡಿಮೆ ಗಳಿಕೆ ಮಾಡಿದ ‘ಥಗ್ ಲೈಫ್’; ಕನ್ನಡಿಗರ ತಂಟೆಗೆ ಬಂದವರ

ಎಕ್ಸ್ (ಟ್ವಿಟರ್) ಮೂಲಕ ಅಭಿಮಾನಿಯೋರ್ವ ಪರೇಶ್ ಅವರನ್ನು ಟ್ಯಾಗ್ ಮಾಡಿ ಈ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ‘ಸರ್ ದಯವಿಟ್ಟು ಸಿನಿಮಾ ತಂಡ ಸೇರುವ ಬಗ್ಗೆ ಯೋಚಿಸಿ’ ಎಂದು ಬರೆದಿದ್ದರು. ಇದಕ್ಕೆ ಉತ್ತರಿಸಿರೋ ಪರೇಶ್ ರಾವಲ್, ‘ಇಲ್ಲ, ಹೇರಾ ಫೇರಿಯಲ್ಲಿ ಮೂರು ಹೀರೋಗಳು ಇದ್ದಾರೆ’ ಎಂದು ಹೇಳಿದ್ದಾರೆ. ಅಂದರೆ, ಇಲ್ಲಿ ಏನೋ ದೊಡ್ಡದಾಗಿಯೇ ಸಮಸ್ಯೆ ಉಂಟಾಗಿದೆ ಎಂಬುದನ್ನು ಪರೋಕ್ಷವಾಗಿ ಹೇಳಿದ್ದಾರೆ. ಆ ಮೂರು ಹೀರೋಗಳು ಯಾರು ಎನ್ನುವ ಪ್ರಶ್ನೆ ಸದ್ಯದ್ದು.

ಇದನ್ನೂ ಓದಿ: ‘ಅವರನ್ನು​​ ಮೂರ್ಖ ಎನ್ನಬೇಡಿ, ಒಳ್ಳೆಯ ಸ್ನೇಹಿತ’; ಪರೇಶ್ ಪರ ಅಕ್ಷಯ್ ಕುಮಾರ್ ಬ್ಯಾಟಿಂಗ್

ಪರೇಶ್ ರಾವಲ್ ಅವರು ಈ ಸಿನಿಮಾದಿಂದ ಹೊರ ನಡೆಯಲು ಇಗೋ ಕ್ಲ್ಯಾಶ್ ಕಾರಣ ಎಂದು ಹೇಳಲಾಗಿತ್ತು. ಆದರೆ, ಈ ಬಗ್ಗೆ ಸ್ಪಷ್ಟವಾಗಿ ಮಾಹಿತಿ ಇಲ್ಲ. ಇನ್ನು ಅಕ್ಷಯ್ ಒಡೆತನ ನಿರ್ಮಾಣ ಸಂಸ್ಥೆ ಮೂಲಕ ಪರೇಶ್​ಗೆ ನೋಟಿಸ್ ಹೋಗಿದೆ. ಈ ನೋಟಿಸ್​ಗೆ ಅವರು ಸ್ಪಷ್ಟನೆ ನೀಡಿದ್ದಾರೆ. ಸದ್ಯ ಪ್ರಕರಣ ಕೋರ್ಟ್​ನಲ್ಲಿ ಇರುವುದರಿಂದ ಈ ಬಗ್ಗೆ ಮಾತನಾಡಲು ಸಾಧ್ಯವಿಲ್ಲ ಎಂದು ಅಕ್ಷಯ್ ಕುಮಾರ್ ಈ ಮೊದಲು ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ