AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಮಿಲಿಟರಿ ಆಪರೇಷನ್ ಬಗ್ಗೆ ಬಂದಿರುವ ಸಿನಿಮಾಗಳಿವು

Indian military: ಭಾರತೀಯ ಸೇನೆಯು ಪಾಕ್ ಆಕ್ರಮಿತ ಕಾಶ್ಮೀರದಲ್ಲಿದ್ದ ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿದ್ದು, ಹಲವಾರು ಉಗ್ರರನ್ನು ಕೊಂದಿದೆ. ಈ ಹಿಂದೆಯೂ ಇದೇ ರೀತಿ ಅನೇಕ ಆಪರೇಷನ್​ಗಳನ್ನು ಭಾರತೀಯ ಸೇನೆ ಯಶಸ್ವಿಯಾಗಿ ಮಾಡಿದೆ. ಈ ಬಗ್ಗೆ ಹಲವು ಸಿನಿಮಾಗಳನ್ನು ಸಹ ನಿರ್ಮಾಣ ಮಾಡಲಾಗಿದೆ. ಅಂಥಹಾ ಕೆಲ ಸಿನಿಮಾಗಳ ಪಟ್ಟಿ ಇಲ್ಲಿದೆ...

ಭಾರತೀಯ ಮಿಲಿಟರಿ ಆಪರೇಷನ್ ಬಗ್ಗೆ ಬಂದಿರುವ ಸಿನಿಮಾಗಳಿವು
Military Operation
ಮಂಜುನಾಥ ಸಿ.
|

Updated on: May 07, 2025 | 11:59 AM

Share

ಭಾರತೀಯ ಸೇನೆ, ಪಾಕ್ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದ್ದು ಹಲವು ಭಯೋತ್ಪಾದಕರನ್ನು ಹೊಡೆದುರಿಳಿಸಿದ್ದಾರೆ. ಆಪರೇಷನ್ ಸಿಂಧೂರ ಹೆಸರಿನಲ್ಲಿ ಈ ದಾಳಿಗಳನ್ನು ಮಾಡಲಾಗಿದ್ದು, ಉಗ್ರರಿಗೆ ತಕ್ಕ ಪಾಠವನ್ನು ಭಾರತೀಯ ಸೇನೆ ಕಲಿಸಿದೆ. ಭಾರತೀಯ ಸೇನೆಯ ಈ ಶೌರ್ಯಮಯ ಆಪರೇಷನ್​ಗೆ ಭಾರತೀಯರಿಂದ ಮೆಚ್ಚುಗೆ ವ್ಯಕ್ತವಾಗಿದೆ. ರಾಜಕಾರಣಿಗಳು, ಸಿನಿಮಾ ಸೆಲೆಬ್ರಿಟಿಗಳು ಸಹ ಸೇನೆಯ ಸಾಹಸವನ್ನು ಕೊಂಡಾಡುತ್ತಿದ್ದಾರೆ. ಭಾರತೀಯ ಸೇನೆಗೆ ಈ ರೀತಿಯ ದಾಳಿಗಳು ಹೊಸದೇನು ಅಲ್ಲ. ಈ ಹಿಂದೆಯೂ ಅನೇಕ ದಾಳಿಗಳನ್ನು ಮಾಡಿವೆ, ಅದರ ಬಗ್ಗೆ ಬಾಲಿವುಡ್ ಈಗಾಗಲೇ ಅನೇಕ ಸಿನಿಮಾಗಳು ಸಹ ಬಂದಿವೆ. ಅವಲ್ಲಿ ಮುಖ್ಯವಾದ ಕೆಲವು ಸಿನಿಮಾಗಳ ಮಾಹಿತಿ ಇಲ್ಲಿದೆ…

1971

‘1971’ ನಿಜ ಘಟನೆ ಆಧರಿತ ಸಿನಿಮಾ. ಭಾರತದ ಆರು ಮಂದಿ ಸೈನಿಕರು, ಪಾಕಿಸ್ತಾನಿ ಸೈನಿಕರಿಂದ ತಪ್ಪಿಸಿಕೊಂಡು ಭಾರತಕ್ಕೆ ಮರಳುವ ಪಯಣದ ಕತೆ. 1971 ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ಪಾಕಿಸ್ತಾನಿ ಸೈನಿಕರಿಗೆ ಸೆರೆ ಸಿಕ್ಕ ಆರು ಮಂದಿ ಸೈನಿಕರು ಆ ಬಳಿಕ ಸೈನಿಕರ ಕಪಿಮುಷ್ಠಿಯಿಂದ ತಪ್ಪಿಸಿಕೊಂಡು ಬಂದ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. 2017ರಲ್ಲಿ ಈ ಸಿನಿಮಾ ಬಿಡುಗಡೆ ಆಗಿತ್ತು.

ಶೇರ್ಷಾ

ಸಿದ್ಧಾರ್ಥ್ ಮಲ್ಹೋತ್ರಾ ನಟಿಸಿರುವ ‘ಶೇರ್ಷಾ’ 1999 ರ ಕಾರ್ಗಿಲ್ ಯುದ್ಧದ ಘಟನೆ ಆಧರಿಸಿದೆ. ಕ್ಯಾಪ್ಟನ್ ವಿಕ್ರಂ ಭಾತ್ರಾ ತೋರಿಸಿದ ಕೆಚ್ಚೆದೆಯ ಹೋರಾಟದ ಕತೆಯನ್ನು ‘ಶೇರ್ಷಾ’ ಸಿನಿಮಾ ಒಳಗೊಂಡಿದೆ. ಈ ಸಿನಿಮಾ ಅಮೆಜಾನ್ ಪ್ರೈಂನಲ್ಲಿ ವೀಕ್ಷಣೆಗೆ ಲಭ್ಯವಿದೆ.

ಎಲ್​ಓಸಿ

ಸಂಜಯ್ ದತ್, ಅಜಯ್ ದೇವಗನ್, ಸೈಫ್ ಅಲಿ ಖಾನ್ ಇನ್ನೂ ಕೆಲವು ಪ್ರಮುಖ ನಟರು ನಟಿಸಿರುವ ‘ಎಲ್​ಓಸಿ: ಲೈನ್ ಆಫ್ ಕಂಟ್ರೋಲ್’ ಸಿನಿಮಾ 2003 ರಲ್ಲಿ ಬಿಡುಗಡೆ ಆಗಿತ್ತು. ಈ ಸಿನಿಮಾ 1999ರ ಆಪರೇಷನ್ ವಿಜಯ್ ಮೇಲೆ ಆಧಾರಿತವಾಗಿದೆ. ಸಿನಿಮಾ ದೊಡ್ಡ ಯಶಸ್ಸು ಗಳಿಸಿತ್ತು.

ದಿ ಗಾಜಿ ಅಟ್ಯಾಕ್

ರಾಣಾ ದಗ್ಗುಬಾಟಿ ಸೇರಿದಂತೆ ಹಲವು ಪ್ರಮುಖ ನಟರು ನಟಿಸಿದ್ದ ‘ಗಾಜಿ’ ಸಿನಿಮಾ ಸಹ ನಿಜ ಘಟನೆ ಆಧರಿತ ಸಿನಿಮಾ. 1971 ರಲ್ಲಿ ಭಾರತದ ಐಎನ್​ಎಸ್ ವಿಕ್ರಾಂತ್ ಅನ್ನು ನಾಶ ಮಾಡುವ ಉದ್ದೇಶದಿಂದ ಭಾರತ ಸಮುದ್ರ ಭಾಗಕ್ಕೆ ಬಂದಿದ್ದ ಪಾಕಿಸ್ತಾನದ ಸಬ್​ ಮರೀನ್ ಗಾಜಿಯನ್ನು ನಾಶ ಮಾಡಿದ ಕತೆಯನ್ನು ಇದು ಒಳಗೊಂಡಿದೆ.

ಹಿಂದೂಸ್ತಾನ್​ ಕಿ ಕಸಮ್

1971 ರ ಇಂಡೊ-ಪಾಕಿಸ್ತಾನ ಯುದ್ಧದ ಸಮಯದಲ್ಲಿ ನಡೆಸಿದ ‘ಆಪರೇಷನ್ ಕ್ಯಾಕ್ಟಸ್ ಲಿಲ್ಲಿ’ ಆಪರೇಷನ್​ನ ಆಧರಿಸಿ ನಿರ್ಮಾಣವಾದ ಸಿನಿಮಾ ಇದು. ಅತ್ಯಂತ ಕ್ಲಿಷ್ಟಕರವಾದ ಮೆಘನಾ ನದಿಯನ್ನು ದಾಟಿ ಹೋಗಿ ಪಾಕ್ ಸೈನ್ಯದ ಮೇಲೆ ದಾಳಿ ಮಾಡಿದ್ದರು. ಮೂರು ದಿನದಲ್ಲಿ ಈ ಆಪರೇಷನ್ ನಡೆದಿತ್ತು. ಇದರ ಕತೆಯನ್ನು ಸಿನಿಮಾ ಒಳಗೊಂಡಿದೆ.

ಪಲ್ಟನ್

1967ರ ಇಂಡೊ-ಚೈನೀಸ್ ಯುದ್ಧದ ಕತೆಯನ್ನು ಒಳಗೊಂಡ ‘ಪಲ್ಟನ್’ ಸಿನಿಮಾ 2018 ರಲ್ಲಿ ಬಿಡುಗಡೆ ಆಗಿತ್ತು. ನಾತು ಲಾ, ಚೋ ಲಾ ಗಲಭೆಗಳ ಕತೆಯನ್ನು ಈ ಸಿನಿಮಾ ಒಳಗೊಂಡಿದೆ.

ಉರಿ

ಉರಿ ದಾಳಿಗೆ ಪ್ರತಿಕಾರವಾಗಿ ಭಾರತ ಮಾಡಿದ ಸರ್ಜಿಕಲ್ ಸ್ಟ್ರೈಕ್​ನ ಕತೆಯನ್ನು ‘ಉರಿ’ ಸಿನಿಮಾ ಒಳಗೊಂಡಿದೆ. ಸಿನಿಮಾದಲ್ಲಿ ವಿಕ್ಕಿ ಕೌಶಲ್ ನಾಯಕನ ಪಾತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಭಾರಿ ದೊಡ್ಡ ಹಿಟ್ ಆಗಿತ್ತು. ಸಿನಿಮಾದ ‘ಹೌ ಈಸ್​ ದ ಜೋಶ್’ ಡೈಲಾಗ್ ಸಹ ದೊಡ್ಡ ಹಿಟ್ ಆಗಿತ್ತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು