ರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿಲ್ಲ ಈ ಸ್ಟಾರ್ಗಳು; ಇಲ್ಲಿದೆ ಕಾರಣ
‘ಆದಿಪುರುಷ್’ ಚಿತ್ರದಲ್ಲಿ ರಾಮನ ಪಾತ್ರದಲ್ಲಿ ನಟಿಸಿದ್ದ ಪ್ರಭಾಸ್ ಅವರು ಕಾರ್ಯಕ್ರಮಕ್ಕೆ ಆಗಮಿಸಿರಲಿಲ್ಲ. ಅವರು ‘ಕಲ್ಕಿ 2898 ಎಡಿ’ ಸಿನಿಮಾದ ಕೆಲಸದಲ್ಲಿ ಬ್ಯುಸಿ ಇದ್ದಾರೆ ಎನ್ನಲಾಗಿದೆ. ಪ್ರಭಾಸ್ ‘ದೇವರ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
ಅಯೋಧ್ಯೆಯ ರಾಮ ಮಂದಿರದಲ್ಲಿ ಜನವರಿ 22ರಂದು ರಾಮಲಲ್ಲನ ಪ್ರಾಣಪ್ರತಿಷ್ಠೆ ಕಾರ್ಯಕ್ರಮ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇದನ್ನು ನಡೆಸಿಕೊಟ್ಟಿದ್ದರು. ಲಕ್ಷಾಂತರ ಭಕ್ತರು, ರಾಜಕಾರಣಿಗಳು, ನಟರು ಮತ್ತು ಉದ್ಯಮಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಆದರೆ ಪ್ರಾಣ ಪ್ರತಿಷ್ಠಾದಲ್ಲಿ ಕೆಲವರು ಕಾಣಿಸಿಕೊಳ್ಳಲಿಲ್ಲ. ಈ ಪಟ್ಟಿಯಲ್ಲಿ ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ (Salman Khan) ಮತ್ತು ಶಾರುಖ್ ಖಾನ್ ಅವರ ಹೆಸರುಗಳೂ ಸೇರಿವೆ. ಯಾರು ಆಗಮಿಸಿದ್ದರು, ಯಾರು ಆಗಮಿಸಿರಲಿಲ್ಲ ಎನ್ನುವ ಬಗ್ಗೆ ಇಲ್ಲಿದೆ ವಿವರ.
ಹಿರಿಯ ನಿರ್ದೇಶಕ ರಾಜ್‌ಕುಮಾರ್ ಹಿರಾನಿ, ರಣಬೀರ್ ಕಪೂರ್, ಆಲಿಯಾ ಭಟ್, ವಿಕ್ಕಿ ಕೌಶಲ್, ಕತ್ರಿನಾ ಕೈಫ್, ಅಮಿತಾಭ್ ಬಚ್ಚನ್, ಕೈಲಾಶ್ ಖೇರ್, ಅಭಿಷೇಕ್ ಬಚ್ಚನ್, ಕಂಗನಾ ರಣಾವತ್, ಅನುಪಮ್ ಖೇರ್, ಚಿರಂಜೀವಿ, ರಾಮ್ ಚರಣ್, ರಜನಿಕಾಂತ್, ಅರುಣ್ ಗೋವಿಲ್ ಮೊದಲಾದವರು ಕಾರ್ಯಕ್ರಮಕ್ಕೆ ಹಾಜರಿ ಹಾಕಿದ್ದರು. ರಜನಿಕಾಂತ್ ಅವರು ಪ್ರತಿವರ್ಷ ಅಯೋಧ್ಯೆಗೆ ಭೇಟಿ ನೀಡುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.
‘ಆದಿಪುರುಷ್’ ಚಿತ್ರದಲ್ಲಿ ರಾಮನ ಪಾತ್ರದಲ್ಲಿ ನಟಿಸಿದ್ದ ಪ್ರಭಾಸ್, ಶಾರುಖ್ ಖಾನ್, ಸಲ್ಮಾನ್ ಖಾನ್, ರಣವೀರ್ ಸಿಂಗ್, ದೀಪಿಕಾ ಪಡುಕೋಣೆ, ಜೂನಿಯರ್ ಎನ್‌ಟಿಆರ್ ಪ್ರಾಣ ಪ್ರತಿಷ್ಠಾಪನೆಯಲ್ಲಿ ಕಾಣಿಸಿಕೊಂಡಿಲ್ಲ. ಇದು ಏಕೆ ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿದೆ.
ಪ್ರಭಾಸ್ ಮತ್ತು ಜೂನಿಯರ್ ಎನ್‌ಟಿಆರ್ ಅವರಿಗೆ ಈ ಕಾರ್ಯಕ್ರಮಕ್ಕೆ ಆಹ್ವಾನ ಇತ್ತು. ಇವರಿಬ್ಬರು ತಮ್ಮ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದು ಪ್ರಾಣಪ್ರತಿಷ್ಠೆಯಲ್ಲಿ ಭಾಗವಹಿಸಿರಲಿಲ್ಲವಂತೆ. ಪ್ರಭಾಸ್ ಪ್ರಸ್ತುತ ನಾಗ್ ಅಶ್ವಿನ್ ನಿರ್ದೇಶನದ ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಮೇ 9ರಂದು ಈ ಸಿನಿಮಾ ರಿಲೀಸ್ ಆಗಲಿದೆ. ಈ ಚಿತ್ರದ ಶೂಟಿಂಗ್ ಆದಷ್ಟು ಬೇಗ ಪೂರ್ಣಗೊಳ್ಳಬೇಕಿದೆ. ಹೀಗಾಗಿ ಅವರು ನಿರಂತರವಾಗಿ ಶೂಟಿಂಗ್‌ನಲ್ಲಿ ಭಾಗಿ ಆಗುತ್ತಿದ್ದಾರೆ.
ಇದನ್ನೂ ಓದಿ: ಜೂನಿಯರ್ ಎನ್‌ಟಿಆರ್ ಅಭಿಮಾನಿಗಳು ಮತ್ತು ಟಿಡಿಪಿ ಕಾರ್ಯಕರ್ತರ ನಡುವೆ ಘರ್ಷಣೆ
ಜೂನಿಯರ್ ಎನ್‌ಟಿಆರ್ ‘ದೇವರ’ ಚಿತ್ರದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾ ಏಪ್ರಿಲ್ನಲ್ಲಿ ರಿಲೀಸ್ ಆಗಲಿದೆ. ಈ ಚಿತ್ರಕ್ಕೆ ಜಾನ್ವಿ ಕಪೂರ್ ನಾಯಕಿ. ಅವರಿಗೆ ಜೊತೆಯಾಗಿ ಜಾನ್ವಿ ಕಪೂರ್ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಇದರ ಶೂಟಿಂಗ್ ಪೂರ್ಣಗೊಳಿಸಿಕೊಳ್ಳುವ ಅನಿವಾರ್ಯತೆ ಅವರಿಗೆ ಇದೆ. ಹಾಗಾಗಿಯೇ ಈ ಇಬ್ಬರು ಸ್ಟಾರ್ ಹೀರೋಗಳು ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಹಾಜರಾಗಿಲ್ಲವಂತೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:25 am, Tue, 23 January 24