AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ತನ ಕ್ಯಾನ್ಸರ್​: ಅಭಿಮಾನಿಗಳ ಎದುರಲ್ಲೇ ತಲೆ ಬೋಳಿಸಿಕೊಂಡ ಖ್ಯಾತ ನಟಿ

ಕಿರುತೆರೆಯ ಹಲವು ಸೀರಿಯಲ್​ಗಳಲ್ಲಿ ನಟಿಸಿದ ಹಿನಾ ಖಾನ್​ ಅವರು ‘ಬಿಗ್​ ಬಾಸ್​ 11’ ರನ್ನರ್​ ಅಪ್​ ಆಗಿಯೂ ಜನಪ್ರಿಯತೆ ಪಡೆದರು. ಭಾರಿ ಬೇಡಿಕೆ ಹೊಂದಿರುವ ಅವರು ಕ್ಯಾನ್ಸರ್​ನಿಂದ ಬಳಲುತ್ತಿದ್ದಾರೆ. ಕ್ಯಾನ್ಸರ್​ಗೆ ಚಿಕಿತ್ಸೆ ಪಡೆಯುತ್ತಿರುವ ನಟಿಗೆ ಕೂದಲು ಉದುರುತ್ತಿದೆ. ಹಾಗಾಗಿ ಪೂರ್ತಿ ತಲೆ ಬೋಳಿಸಿಕೊಂಡಿದ್ದಾರೆ. ಆ ವಿಡಿಯೋವನ್ನು ಅವರು ಹಂಚಿಕೊಂಡಿದ್ದಾರೆ.

ಸ್ತನ ಕ್ಯಾನ್ಸರ್​: ಅಭಿಮಾನಿಗಳ ಎದುರಲ್ಲೇ ತಲೆ ಬೋಳಿಸಿಕೊಂಡ ಖ್ಯಾತ ನಟಿ
ಹಿನಾ ಖಾನ್​
ಮದನ್​ ಕುಮಾರ್​
|

Updated on: Aug 02, 2024 | 3:33 PM

Share

ಕ್ಯಾನ್ಸರ್​ ಬಂದ ಬಳಿಕ ಬದುಕು ಬದಲಾಗುತ್ತದೆ. ಅನೇಕ ಸೆಲೆಬ್ರಿಟಿಗಳು ಕ್ಯಾನ್ಸರ್​ನಿಂದ ಬಳಲಿದ್ದಾರೆ. ಕೆಲವರು ಈ ಕಾಯಿಲೆ ವಿರುದ್ಧ ಹೋರಾಡಿ ಗೆದ್ದಿದ್ದಾರೆ. ಖ್ಯಾತ ನಟಿ ಹಿನಾ ಖಾನ್​ ಕೂಡ ಅದೇ ಪ್ರಕ್ರಿಯೆಯಲ್ಲಿದ್ದಾರೆ. ಇತ್ತೀಚೆಗೆ ಅವರು ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್​ ನೀಡಿದರು. ತಮಗೆ ಮೂರನೇ ಹಂತದ ಸ್ತನ ಕ್ಯಾನ್ಸರ್​ ಆಗಿದೆ ಎಂಬ ವಿಷಯವನ್ನು ಅವರು ತಿಳಿಸಿದರು. ಈಗ ಚಿಕಿತ್ಸೆ ಪಡೆಯುತ್ತಿರುವ ಅವರಿಗೆ ಕೂದಲು ಉದುರುತ್ತಿದೆ. ಆ ಕಾರಣದಿಂದ ಸಂಪೂರ್ಣ ತಲೆ ಬೋಳಿಸಿಕೊಳ್ಳಲು ಹಿನಾ ಖಾನ್​ ನಿರ್ಧರಿಸಿದ್ದಾರೆ.

ತಮಗೆ ಕ್ಯಾನ್ಸರ್​ ಇದೆ ಎಂಬುದು ತಿಳಿದಾಗಿನಿಂದ ಹಿನಾ ಖಾನ್​ ಅವರು ಅಭಿಮಾನಿಗಳ ಜೊತೆ ಎಲ್ಲ ವಿಷಯವನ್ನು ಹಂಚಿಕೊಳ್ಳುತ್ತಿದ್ದಾರೆ. ಈ ಕಾಯಿಲೆಗೆ ಅವರು ಹೆದರಿಲ್ಲ. ಬದಲಿಗೆ, ತುಂಬ ಧೈರ್ಯದಿಂದ ಇದನ್ನು ಎದುರಿಸಲು ಸಜ್ಜಾಗಿದ್ದಾರೆ. ಅದರ ಮೊದಲ ಹಂತ ಎಂಬಂತೆ ಅವರು ತಲೆ ಬೋಳಿಸಿಕೊಂಡಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಈ ಬಗ್ಗೆ ಅವರು ವಿಡಿಯೋ ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ: ನಮ್ಮ ಮೆಟ್ರೋಗೆ ಧ್ವನಿ ಆಗಿದ್ದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ; ಕ್ಯಾನ್ಸರ್​ನಿಂದ ನಿಧನ

ಕ್ಯಾನ್ಸರ್​ಗೆ ಚಿಕಿತ್ಸೆ ಪಡೆಯುವಾಗ ಪ್ರತಿ ದಿನ ಕೂದಲು ಉದುರಲು ಆರಂಭ ಆಗುತ್ತದೆ. ಪ್ರತಿ ಬಾರಿ ತಲೆಗೆ ಕೈ ಹಾಕಿದಾದ ಕೂದಲು ಉದುರುತ್ತದೆ. ಅದನ್ನು ನೋಡಿದಾಗಲೆಲ್ಲ ಕಿರಿಕಿರಿ ಆಗುವುದು ಸಹಜ. ಅದರಲ್ಲೂ ಮಹಿಳೆಯರಿಗೆ ಈ ಪರಿ ಕೂದಲು ಉದುರಿದರೆ ಹೆಚ್ಚು ಬೇಸರ ಆಗುತ್ತದೆ. ಇದರಿಂದ ಒಮ್ಮೆಲೆ ಮುಕ್ತಿ ಪಡೆಯಲು ಹಿನಾ ಖಾನ್​ ಅವರು ಪೂರ್ತಿ ತಲೆ ಬೋಳಿಸಿಕೊಂಡಿದ್ದಾರೆ. ಅಗತ್ಯ ಇರುವಾಗ ತಾವು ವಿಗ್​ ಧರಿಸುವುದಾಗಿ ಅವರು ತಿಳಿಸಿದ್ದಾರೆ.

ಹಿನಾ ಖಾನ್​ ಹಂಚಿಕೊಂಡ ವಿಡಿಯೋ:

ತಾವು ತಲೆ ಬೋಳಿಸಿಕೊಂಡ ವಿಡಿಯೋವನ್ನು ಹಿನಾ ಖಾನ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ದೈಹಿಕ ಅನಾರೋಗ್ಯವನ್ನು ಎದುರಿಸಬೇಕು ಎಂದರೆ ಮಾನಸಿಕವಾಗಿ ಗಟ್ಟಿಯಾಗಿ ಇರಬೇಕು ಎಂದು ಅವರು ಹೇಳಿದ್ದಾರೆ. ಅಲ್ಲದೇ, ತಮ್ಮ ಅಭಿಮಾನಿಗಳಿಗೂ ಧೈರ್ಯ ತುಂಬುವ ಕೆಲಸವನ್ನು ಮಾಡಿದ್ದಾರೆ. ಈ ವಿಡಿಯೋ ನೋಡಿದ ಅಭಿಮಾನಿಗಳು ‘ನೀವು ಬೇಗ ಗುಣಮುಖರಾಗಬೇಕು’ ಎಂದು ಹಾರೈಸಿದ್ದಾರೆ. ಅನೇಕ ಸೆಲೆಬ್ರಿಟಿಗಳು ಕೂಡ ಕಮೆಂಟ್​ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್‌ಗೆ 15 ಸಾವಿರ ರೂ.ದಂಡ
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್‌ಗೆ 15 ಸಾವಿರ ರೂ.ದಂಡ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಗಗನ್ ಬಳಿ ಕ್ಷಮೆ ಕೇಳಿದ ಗಾನವಿ, ಇಬ್ಬರ ನಡುವೆ ಭಾವುಕ ಚರ್ಚೆ: ವಿಡಿಯೋ
ಗಗನ್ ಬಳಿ ಕ್ಷಮೆ ಕೇಳಿದ ಗಾನವಿ, ಇಬ್ಬರ ನಡುವೆ ಭಾವುಕ ಚರ್ಚೆ: ವಿಡಿಯೋ
ಸುದೀಪ್ ಅನ್ನೇ ಎಳೆದಾಡಲು ಅಭಿಮಾನಿಗಳು: ವಿಡಿಯೋ ನೋಡಿ
ಸುದೀಪ್ ಅನ್ನೇ ಎಳೆದಾಡಲು ಅಭಿಮಾನಿಗಳು: ವಿಡಿಯೋ ನೋಡಿ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ