Prithviraj Movie: ಅಕ್ಷಯ್ ಕುಮಾರ್ ಅಭಿನಯದ ‘ಪೃಥ್ವಿರಾಜ್’ ಚಿತ್ರವನ್ನು ವೀಕ್ಷಿಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ

Akshay Kumar | Amit Shah: ಅಕ್ಷಯ್ ಕುಮಾರ್ ಸೇರಿದಂತೆ ಖ್ಯಾತ ಕಲಾವಿದರು ಬಣ್ಣಹಚ್ಚಿರುವ ‘ಪೃಥ್ವಿರಾಜ್’ ಚಿತ್ರ ಜೂನ್ 3ರಂದು ತೆರೆಕಾಣುತ್ತಿದೆ. ಅದಕ್ಕೂ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಷಾ ಚಿತ್ರವನ್ನು ವೀಕ್ಷಿಸಲಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

Prithviraj Movie: ಅಕ್ಷಯ್ ಕುಮಾರ್ ಅಭಿನಯದ ‘ಪೃಥ್ವಿರಾಜ್’ ಚಿತ್ರವನ್ನು ವೀಕ್ಷಿಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ
ಅಮಿತ್ ಷಾ (ಎಡ ಚಿತ್ರ), ‘ಪೃಥ್ವಿರಾಜ್’ ಚಿತ್ರದಲ್ಲಿ ಅಕ್ಷಯ್ ಕುಮಾರ್
Follow us
TV9 Web
| Updated By: shivaprasad.hs

Updated on:May 25, 2022 | 10:01 AM

ಅಕ್ಷಯ್ ಕುಮಾರ್ (Akshay Kumar) ನಟನೆಯ ‘ಪೃಥ್ವಿರಾಜ್’ (Prithviraj Movie) ಈಗಾಗಲೇ ನಿರೀಕ್ಷೆ ಮೂಡಿಸಿದೆ. ಸ್ಟಾರ್ ನಟರ ಹಿಟ್ ಚಿತ್ರಗಳಿಲ್ಲದೇ ಕಂಗಾಲಾಗಿರುವ ಹಿಂದಿ ಚಿತ್ರರಂಗಕ್ಕೆ ಅಕ್ಷಯ್ ನಟನೆಯ ಚಿತ್ರ ಬೂಸ್ಟ್​ ಕೊಡಬಹುದು ಎಂಬ ಲೆಕ್ಕಾಚಾರ ಹಾಕಲಾಗುತ್ತಿದೆ. ಜೂನ್​ 3ರಂದು ಚಿತ್ರವು ಹಿಂದಿ, ತಮಿಳು ಹಾಗೂ ತೆಲುಗು ಭಾಷೆಗಳಲ್ಲಿ ತಯಾರಾಗುತ್ತಿದೆ. ಈ ನಡುವೆ ಚಿತ್ರದ ವಿಶೇಷ ಪ್ರದರ್ಶನದ ಬಗ್ಗೆ ಮಾಹಿತಿ ಹೊರಬಿದ್ದಿದೆ. ಈ ಬಗ್ಗೆ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಷಾ (Amit Shah) ಚಿತ್ರವನ್ನು ವೀಕ್ಷಿಸಲಿದ್ದಾರೆ. ಜೂನ್ 1ರಂದು ದೆಹಲಿಯಲ್ಲಿ ನಡೆಯುವ ವಿಶೇಷ ಪ್ರದರ್ಶನವನ್ನು ಅವರು ವೀಕ್ಷಿಸಲಿದ್ದಾರೆ ಎಂದು ತಿಳಿಸಿದೆ. ಯಶ್ ರಾಜ್ ಫಿಲ್ಮ್ಸ್​ ನಿರ್ಮಾಣ ಮಾಡಿರುವ ಈ ಚಿತ್ರವನ್ನು ಕೇಂದ್ರದ ಕೆಲವು ಮಂತ್ರಿಗಳು, ಹಿರಿಯ ರಾಜಕಾರಣಿಗಳು ಮತ್ತು ಉನ್ನತ ಮಟ್ಟದ ಅಧಿಕಾರಿಗಳು ವೀಕ್ಷಿಸುವ ಸಾಧ್ಯತೆ ಇದೆ.

‘‘ವಿಶೇಷವಾಗಿ ಅಮಿತ್ ಷಾ ಅವರಿಗೆ ಪೃಥ್ವಿರಾಜ್ ಚೌಹಾಣ್​ ಅವರ ಕತೆಯ ಬಗ್ಗೆ ಬಹಳ ಆಸಕ್ತಿ ಇದೆ. ಪೃಥ್ವಿರಾಜ್​ ಚೌಹಾಣ್​ರಂತಹ ವೀರರ ಐತಿಹಾಸಿಕ ಮೌಲ್ಯ ಮತ್ತು ಶೌರ್ಯದ ಬಗ್ಗೆ ಭಾರತೀಯರು ತಿಳಿದುಕೊಳ್ಳಬೇಕೆಂದು ಅವರು ಅಭಿಪ್ರಾಯಪಡುತ್ತಾರೆ’’ ಎಂದು ಹೆಸರು ಹೇಳಲು ಇಚ್ಛಿಸದ ಮೂಲವೊಂದನ್ನು ಉಲ್ಲೇಖಿಸಿ ಹೆಚ್​​ಟಿ ವರದಿಯಲ್ಲಿ ತಿಳಿಸಿದೆ.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಚಂದ್ರಪ್ರಕಾಶ್ ದ್ವಿವೇದಿ ನಿರ್ದೇಶನದ ಈ ಚಿತ್ರವು ಜೂನ್ 3 ರಂದು ತೆರೆಕಾಣುತ್ತಿದೆ. ಪೃಥ್ವಿರಾಜ್ ಚೌಹಾಣ್ ಪಾತ್ರದಲ್ಲಿ ಅಕ್ಷಯ್ ಕುಮಾರ್ ಬಣ್ಣಹಚ್ಚಿದ್ದಾರೆ. ಪೃಥ್ವಿರಾಜ್​ ಹೋರಾಟದ ಕತೆಯನ್ನು ಚಿತ್ರವು ಒಳಗೊಂಡಿರಲಿದೆ.

ಇದನ್ನೂ ಓದಿ
Image
Love Birds Movie: ‘ಲವ್ ಬರ್ಡ್ಸ್​’ನಲ್ಲಿ ತೆರೆ ಹಂಚಿಕೊಳ್ಳಲಿರುವ ಡಾರ್ಲಿಂಗ್ ಕೃಷ್ಣ- ಮಿಲನಾ ನಾಗರಾಜ್
Image
Karan Johar: 50ನೇ ವಸಂತಕ್ಕೆ ಕಾಲಿಟ್ಟ ಕರಣ್ ಜೋಹರ್; ಸ್ಟಾರ್ ನಿರ್ಮಾಪಕನ ಪಾರ್ಟಿಯಲ್ಲಿ ಯಶ್?
Image
ಒಂದು ಆ್ಯಕ್ಷನ್ ದೃಶ್ಯಕ್ಕೆ 35 ಲಕ್ಷ ರೂ. ವೆಚ್ಛ ಮಾಡಿದ ‘ಗೌಳಿ’ ತಂಡ; ಶ್ರೀನಗರ ಕಿಟ್ಟಿ ಸಿನಿಮಾ ಬಗ್ಗೆ ಹೊಸ ಅಪ್​ಡೇಟ್​
Image
ಮೇ ತಿಂಗಳನ್ನು ಕಳೆದಿದ್ದು ಹೇಗೆ ಎಂಬುದನ್ನು ಫೋಟೋ ಮೂಲಕ ವಿವರಿಸಿದ ಜಾನ್ವಿ ಕಪೂರ್

ಇದನ್ನೂ ಓದಿ: Prithviraj Teaser: ‘ಪೃಥ್ವಿರಾಜ್​’ ಕ್ರೇಜ್​ ಹೆಚ್ಚಿಸಿದ ಟೀಸರ್; ರಣರಂಗದಲ್ಲಿ ಅಕ್ಷಯ್​ ಕುಮಾರ್​ ಕಾದಾಟ ಹೇಗಿದೆ ನೋಡಿ..

ದೊಡ್ಡ ಬಜೆಟ್​ನಲ್ಲಿ ತಯಾರಾಗಿರುವ ಈ ಚಿತ್ರವು 18 ವರ್ಷಗಳ ಕಾಲ ಸಂಶೋಧನೆ ನಡೆಸಿ ಸಿದ್ಧಪಡಿಸಿದ ಕತೆಯನ್ನು ಆಧರಿಸಿದೆ. ಕೇಂದ್ರ ಗೃಹಮಂತ್ರಿಗಳು ಇದನ್ನು ವೀಕ್ಷಿಸಿದರೆ ಅದು ಚಿತ್ರತಂಡದ ಪ್ರಯತ್ನವನ್ನು ಉತ್ತೇಜಿಸಿದಂತಾಗುತ್ತದೆ ಎಂದು ಮೂಲಗಳು ಹೇಳಿವೆ.

ವಿಶ್ವ ಸುಂದರಿ ಮಾನುಷಿ ಚಿಲ್ಲರ್ ಈ ಚಿತ್ರದ ಮೂಲಕ ಬಾಲಿವುಡ್​ಗೆ ಪದಾರ್ಪಣೆ ಮಾಡುತ್ತಿದ್ದಾರೆ. ಸಂಜಯ್ ದತ್, ಸೋನು ಸೂದ್ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಅದ್ದೂರಿ ಬಜೆಟ್​ನಲ್ಲಿ ‘ಪೃಥ್ವಿರಾಜ್​’ ಚಿತ್ರ ಮೂಡಿಬಂದಿದೆ. ಯುದ್ಧದ ಸನ್ನಿವೇಶಗಳಿಗಾಗಿ ಅತ್ಯಾಧುನಿಕ ಗ್ರಾಫಿಕ್ಸ್​ ತಂತ್ರಜ್ಞಾನ ಬಳಕೆ ಮಾಡಿಕೊಳ್ಳಲಾಗಿದೆ. ಚಿತ್ರದ ಟ್ರೇಲರ್​ ರಿಲೀಸ್ ಆಗಿದ್ದು, ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:54 am, Wed, 25 May 22

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ