ಅಕ್ಷಯ್ ಕುಮಾರ್ (Akshay Kumar) ನಟನೆಯ ‘ಪೃಥ್ವಿರಾಜ್’ (Prithviraj Movie) ಈಗಾಗಲೇ ನಿರೀಕ್ಷೆ ಮೂಡಿಸಿದೆ. ಸ್ಟಾರ್ ನಟರ ಹಿಟ್ ಚಿತ್ರಗಳಿಲ್ಲದೇ ಕಂಗಾಲಾಗಿರುವ ಹಿಂದಿ ಚಿತ್ರರಂಗಕ್ಕೆ ಅಕ್ಷಯ್ ನಟನೆಯ ಚಿತ್ರ ಬೂಸ್ಟ್ ಕೊಡಬಹುದು ಎಂಬ ಲೆಕ್ಕಾಚಾರ ಹಾಕಲಾಗುತ್ತಿದೆ. ಜೂನ್ 3ರಂದು ಚಿತ್ರವು ಹಿಂದಿ, ತಮಿಳು ಹಾಗೂ ತೆಲುಗು ಭಾಷೆಗಳಲ್ಲಿ ತಯಾರಾಗುತ್ತಿದೆ. ಈ ನಡುವೆ ಚಿತ್ರದ ವಿಶೇಷ ಪ್ರದರ್ಶನದ ಬಗ್ಗೆ ಮಾಹಿತಿ ಹೊರಬಿದ್ದಿದೆ. ಈ ಬಗ್ಗೆ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಷಾ (Amit Shah) ಚಿತ್ರವನ್ನು ವೀಕ್ಷಿಸಲಿದ್ದಾರೆ. ಜೂನ್ 1ರಂದು ದೆಹಲಿಯಲ್ಲಿ ನಡೆಯುವ ವಿಶೇಷ ಪ್ರದರ್ಶನವನ್ನು ಅವರು ವೀಕ್ಷಿಸಲಿದ್ದಾರೆ ಎಂದು ತಿಳಿಸಿದೆ. ಯಶ್ ರಾಜ್ ಫಿಲ್ಮ್ಸ್ ನಿರ್ಮಾಣ ಮಾಡಿರುವ ಈ ಚಿತ್ರವನ್ನು ಕೇಂದ್ರದ ಕೆಲವು ಮಂತ್ರಿಗಳು, ಹಿರಿಯ ರಾಜಕಾರಣಿಗಳು ಮತ್ತು ಉನ್ನತ ಮಟ್ಟದ ಅಧಿಕಾರಿಗಳು ವೀಕ್ಷಿಸುವ ಸಾಧ್ಯತೆ ಇದೆ.
‘‘ವಿಶೇಷವಾಗಿ ಅಮಿತ್ ಷಾ ಅವರಿಗೆ ಪೃಥ್ವಿರಾಜ್ ಚೌಹಾಣ್ ಅವರ ಕತೆಯ ಬಗ್ಗೆ ಬಹಳ ಆಸಕ್ತಿ ಇದೆ. ಪೃಥ್ವಿರಾಜ್ ಚೌಹಾಣ್ರಂತಹ ವೀರರ ಐತಿಹಾಸಿಕ ಮೌಲ್ಯ ಮತ್ತು ಶೌರ್ಯದ ಬಗ್ಗೆ ಭಾರತೀಯರು ತಿಳಿದುಕೊಳ್ಳಬೇಕೆಂದು ಅವರು ಅಭಿಪ್ರಾಯಪಡುತ್ತಾರೆ’’ ಎಂದು ಹೆಸರು ಹೇಳಲು ಇಚ್ಛಿಸದ ಮೂಲವೊಂದನ್ನು ಉಲ್ಲೇಖಿಸಿ ಹೆಚ್ಟಿ ವರದಿಯಲ್ಲಿ ತಿಳಿಸಿದೆ.
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಚಂದ್ರಪ್ರಕಾಶ್ ದ್ವಿವೇದಿ ನಿರ್ದೇಶನದ ಈ ಚಿತ್ರವು ಜೂನ್ 3 ರಂದು ತೆರೆಕಾಣುತ್ತಿದೆ. ಪೃಥ್ವಿರಾಜ್ ಚೌಹಾಣ್ ಪಾತ್ರದಲ್ಲಿ ಅಕ್ಷಯ್ ಕುಮಾರ್ ಬಣ್ಣಹಚ್ಚಿದ್ದಾರೆ. ಪೃಥ್ವಿರಾಜ್ ಹೋರಾಟದ ಕತೆಯನ್ನು ಚಿತ್ರವು ಒಳಗೊಂಡಿರಲಿದೆ.
ಇದನ್ನೂ ಓದಿ: Prithviraj Teaser: ‘ಪೃಥ್ವಿರಾಜ್’ ಕ್ರೇಜ್ ಹೆಚ್ಚಿಸಿದ ಟೀಸರ್; ರಣರಂಗದಲ್ಲಿ ಅಕ್ಷಯ್ ಕುಮಾರ್ ಕಾದಾಟ ಹೇಗಿದೆ ನೋಡಿ..
ದೊಡ್ಡ ಬಜೆಟ್ನಲ್ಲಿ ತಯಾರಾಗಿರುವ ಈ ಚಿತ್ರವು 18 ವರ್ಷಗಳ ಕಾಲ ಸಂಶೋಧನೆ ನಡೆಸಿ ಸಿದ್ಧಪಡಿಸಿದ ಕತೆಯನ್ನು ಆಧರಿಸಿದೆ. ಕೇಂದ್ರ ಗೃಹಮಂತ್ರಿಗಳು ಇದನ್ನು ವೀಕ್ಷಿಸಿದರೆ ಅದು ಚಿತ್ರತಂಡದ ಪ್ರಯತ್ನವನ್ನು ಉತ್ತೇಜಿಸಿದಂತಾಗುತ್ತದೆ ಎಂದು ಮೂಲಗಳು ಹೇಳಿವೆ.
ವಿಶ್ವ ಸುಂದರಿ ಮಾನುಷಿ ಚಿಲ್ಲರ್ ಈ ಚಿತ್ರದ ಮೂಲಕ ಬಾಲಿವುಡ್ಗೆ ಪದಾರ್ಪಣೆ ಮಾಡುತ್ತಿದ್ದಾರೆ. ಸಂಜಯ್ ದತ್, ಸೋನು ಸೂದ್ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಅದ್ದೂರಿ ಬಜೆಟ್ನಲ್ಲಿ ‘ಪೃಥ್ವಿರಾಜ್’ ಚಿತ್ರ ಮೂಡಿಬಂದಿದೆ. ಯುದ್ಧದ ಸನ್ನಿವೇಶಗಳಿಗಾಗಿ ಅತ್ಯಾಧುನಿಕ ಗ್ರಾಫಿಕ್ಸ್ ತಂತ್ರಜ್ಞಾನ ಬಳಕೆ ಮಾಡಿಕೊಳ್ಳಲಾಗಿದೆ. ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು, ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ.
ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:54 am, Wed, 25 May 22