Honey Singh: ಕೌಟುಂಬಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾದ ಯೋ ಯೋ ಹನಿ ಸಿಂಗ್

ಪತ್ನಿ ಶಾಲಿನಿ ತಲ್ವಾರ್ ನೀಡಿದ ಕೌಟುಂಬಿಕ ದೌರ್ಜನ್ಯದ ದೂರಿಗೆ ಸಂಬಂಧಪಟ್ಟಂತೆ, ಗಾಯಕ ಯೋ ಯೋ ಹನಿ ಸಿಂಗ್ ಇಂದು (ಸೆಪ್ಟೆಂಬರ್ 3) ದೆಹಲಿಯ ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ.

Honey Singh: ಕೌಟುಂಬಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾದ ಯೋ ಯೋ ಹನಿ ಸಿಂಗ್
ಯೋ ಯೋ ಹನಿ ಸಿಂಗ್​
Follow us
TV9 Web
| Updated By: shivaprasad.hs

Updated on:Sep 03, 2021 | 5:52 PM

ಖ್ಯಾತ ಹಿಂದಿ ಗಾಯಕ ಯೋ ಯೋ ಹನಿ ಸಿಂಗ್ (ಹಿರ್ದೇಶ್ ಸಿಂಗ್) ಇಂದು (ಸೆಪ್ಟೆಂಬರ್ 3) ನ್ಯಾಯಾಲಯದ ಮುಂದೆ ಹಾಜರಾಗಿ ಹೇಳಿಕೆಯನ್ನು ದಾಖಲಿಸಿದ್ದಾರೆ. ಅವರ ವಿರುದ್ಧ ಪತ್ನಿ ಶಾಲಿನಿ ತಲ್ವಾರ್ ಕೌಟುಂಬಿಕ ದೌರ್ಜನ್ಯದ ಆರೋಪ ಸೇರಿದಂತೆ ಹಲವು ಆರೋಪಗಳನ್ನು ಮಾಡಿದ್ದರು. ದೆಹಲಿಯ ತಿಸ್ ಹಜಾರಿ ಜಿಲ್ಲಾ ನ್ಯಾಯಾಲಯದ ಮುಂದೆ ಹಾಜರಾದ ಅವರು, ನ್ಯಾಯಾಧೀಶರು ದಂಪತಿಗಳಿಗೆ ನಡೆಸಿದ ವಿಚಾರಣೆಯಲ್ಲಿ ಭಾಗಿಯಾಗಿದ್ದಾರೆ. ಹನಿ ಸಿಂಗ್ ವಕೀಲರು ಆದಾಯದ ವರದಿಯನ್ನು ಮೊಹರು ಮಾಡಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಶನಿವಾರ (ಆಗಸ್ಟ್ 28), ಹನಿ ಸಿಂಗ್ ಕಳಪೆ ಆರೋಗ್ಯದ ಕಾರಣದಿಂದ ಹಾಜರಾಗಲು ವಿಫಲವಾದ ನಂತರ ಸೆಪ್ಟೆಂಬರ್ 3 ರಂದು ತನ್ನ ಮುಂದೆ ಹಾಜರಾಗುವಂತೆ ನ್ಯಾಯಾಲಯ ಸೂಚಿಸಿತ್ತು. ಅದರಂತೆ ಹನಿ ಸಿಂಗ್ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಹನಿ ಸಿಂಗ್ ಪತ್ನಿ ಶಾಲಿನಿ ತಲ್ವಾರ್, ಪತಿಯ ವಿರುದ್ಧ ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ದೌರ್ಜನ್ಯ ಆರೋಪಿಸಿ ದೂರು ನೀಡಿದ್ದರು. ಇಂದು ನ್ಯಾಯಾಧೀಶರ  ಕೊಠಡಿಯಲ್ಲಿ ವಿಚಾರಣೆ ನಡೆದಿದ್ದು, ನ್ಯಾಯಾಧೀಶರು ದಂಪತಿಗಳೊಂದಿಗೆ ಸಮಾಲೋಚನೆ ನಡೆಸಿ ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಹಿಂದಿನ ವಿಚಾರಣೆಯಲ್ಲಿ ಏನಾಗಿತ್ತು?

ಆಗಸ್ಟ್​ 28ರಂದು ಮೆಟ್ರೊಪಾಲಿಟನ್ ನ್ಯಾಯಾಲಯದಲ್ಲಿ ವಿಚಾರಣೆ ನಡೆದಾಗ ಹನಿ ಸಿಂಗ್ ಪತ್ನಿ ಶಾಲಿನಿ ತಲ್ವಾರ್ ಕೋರ್ಟ್​ನಲ್ಲಿಯೇ ಕಣ್ಣೀರು ಹಾಕಿದ್ದರು. ‘ಜೀವನದ ಯಾವ ಘಟ್ಟದಲ್ಲಿ ಮದುವೆ ಆಗಿತ್ತು? ಪ್ರೀತಿ ಮುರಿದು ಬಿದ್ದಿದ್ದು ಯಾವಾಗ’ ಎಂಬಿತ್ಯಾದಿ ಪ್ರಶ್ನೆಗಳನ್ನು ನ್ಯಾಯಾಧೀಶೆ ತನಿಯಾ ಸಿಂಗ್ ಅವರು ಶಾಲಿನಿಗೆ ಕೇಳಿದ್ದರು. ಈ ಪ್ರಶ್ನೆಗೆ ಉತ್ತರ ಹೇಳುವಾಗ ಶಾಲಿನಿ ಕಣ್ಣೀರು ಹಾಕಿದ್ದರು. ಅನಾರೋಗ್ಯದ ಕಾರಣ ನೀಡಿ ಹನಿ ಸಿಂಗ್​ ಕೋರ್ಟ್​ಗೆ ಹಾಜರಾಗಿರಲಿಲ್ಲ. ಈ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಧೀಶೆ ತನಿಯಾ ಸಿಂಗ್​ ಅಸಮಾಧಾನ ಹೊರ ಹಾಕಿ, ‘ಯಾರೊಬ್ಬರೂ ಕಾನೂನಿಗಿಂತ ದೊಡ್ಡವರಲ್ಲ. ಈ ಪ್ರಕರಣವನ್ನು ಹನಿ ಸಿಂಗ್ ಹಗುರವಾಗಿ ತೆಗೆದುಕೊಂಡಿದ್ದು ನಿಜಕ್ಕೂ ಅಚ್ಚರಿ ಮೂಡಿಸಿದೆ’ ಎಂದಿದ್ದರು.

ಇದನ್ನೂ ಓದಿ:

ಮುಂಬೈನಲ್ಲಿ ನೆರವೇರಿತು ಸಿದ್ದಾರ್ಥ್​ ಶುಕ್ಲಾ ಅಂತ್ಯಸಂಸ್ಕಾರ; ಕಣ್ಣೀರಿಟ್ಟ ಕುಟುಂಬದ ಸದಸ್ಯರು

Samantha: ಶೂಟಿಂಗ್​ನಿಂದ ಬ್ರೇಕ್ ತೆಗೆದುಕೊಂಡ ಸಮಂತಾ ಈಗೇನು ಮಾಡುತ್ತಿದ್ದಾರೆ?; ಉತ್ತರ ನೀಡುತ್ತಿದೆ ಈ ಫೊಟೊ

(Honey Singh appeared in front of Delhi s Tis Hazari Court in domestic violence case accused by his wife Shalini Talwar)

Published On - 5:50 pm, Fri, 3 September 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ