AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Honey Singh: ‘ದೇಶದ ಹೆಣ್ಮಕ್ಕಳು ಉರ್ಫಿ ಜಾವೇದ್​ ರೀತಿ ಇರಬೇಕು’: ಅಚ್ಚರಿಯ ಹೇಳಿಕೆ ನೀಡಿದ ಹನಿ ಸಿಂಗ್​

Yo Yo Honey Singh | Urfi Javed: ‘ನಮ್ಮ ದೇಶದ ಎಲ್ಲ ಹುಡುಗಿಯರು ಉರ್ಫಿಯನ್ನು ನೋಡಿ ಕಲಿಯಬೇಕು’ ಎಂದು ಗಾಯಕ ಹನಿ ಸಿಂಗ್​ ಹೇಳಿದ್ದಾರೆ. ಅವರ ಈ ಹೇಳಿಕೆ ಅಚ್ಚರಿ ಮೂಡಿಸಿದೆ.

Honey Singh: ‘ದೇಶದ ಹೆಣ್ಮಕ್ಕಳು ಉರ್ಫಿ ಜಾವೇದ್​ ರೀತಿ ಇರಬೇಕು’: ಅಚ್ಚರಿಯ ಹೇಳಿಕೆ ನೀಡಿದ ಹನಿ ಸಿಂಗ್​
ಉರ್ಫಿ ಜಾವೇದ್, ಹನಿ ಸಿಂಗ್
TV9 Web
| Updated By: ಮದನ್​ ಕುಮಾರ್​|

Updated on: Jan 08, 2023 | 5:00 PM

Share

ನಟಿ ಉರ್ಫಿ ಜಾವೇದ್ (Urfi Javed) ಅವರು ಒಂದಿಲ್ಲೊಂದು ಕಾರಣಕ್ಕೆ ಸುದ್ದಿ ಆಗುತ್ತಲೇ ಇರುತ್ತಾರೆ. ಅವರ ಚಿತ್ರ ವಿಚಿತ್ರ ಬಟ್ಟೆಗಳು ಸೋಶಿಯಲ್ ಮೀಡಿಯಾದಲ್ಲಿ ಯಾವಾಗಲೂ ಚರ್ಚೆಯ ವಿಷಯ ಆಗುತ್ತವೆ. ಅವರನ್ನು ಬೆಂಬಲಿಸಿದವರಿಗಿಂತಲೂ ಟೀಕಿಸಿದವರೇ ಹೆಚ್ಚು. ಪ್ರತಿ ದಿನ ಹಲವು ಬಗೆಯಲ್ಲಿ ಉರ್ಫಿ ಜಾವೇದ್ ಟ್ರೋಲ್‌ಗೆ ಒಳಗಾಗುತ್ತಾರೆ. ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ನಿದರ್ಶನ ಕೂಡ ಇದೆ‌. ಆದರೆ ಅಚ್ಚರಿ ಏನೆಂದರೆ ದೇಶದ ಹೆಣ್ಣುಮಕ್ಕಳು ಉರ್ಫಿ ಜಾವೇದ್ ರೀತಿ ಇರಬೇಕು ಎಂದು ಯೋ ಯೋ ಹನಿ ಸಿಂಗ್ (Yo Yo Honey Singh) ಹೇಳಿದ್ದಾರೆ. ಅವರ ಈ ಹೇಳಿಕೆ ಬಗ್ಗೆ ಅಭಿಮಾನಿಗಳ ವಲಯದಲ್ಲಿ ಪರ-ವಿರೋಧದ ಚರ್ಚೆ ನಡೆಯುತ್ತಿದೆ. ಅಷ್ಟಕ್ಕೂ ಯೋ ಯೋ ಹನಿ ಸಿಂಗ್ ಅವರು ಈ ರೀತಿ ಹೇಳಿಕೆ ನೀಡಿದ್ದು ಯಾಕೆ? ಇಲ್ಲಿದೆ ವಿವರ..

ಹಲವಾರು ವಿವಾದದಲ್ಲಿ ಸಿಲುಕಿಕೊಂಡಿದ್ದ ಯೋ ಯೋ ಹನಿ ಸಿಂಗ್ ಅವರು ಮತ್ತೆ ಈಗ ಮ್ಯೂಸಿಕ್ ಇಂಡಸ್ಟ್ರಿಯಲ್ಲಿ ಸಕ್ರಿಯರಾಗಿದ್ದಾರೆ. ಅವರ ಹೊಸ ಆಲ್ಬಂ ‘ಹನಿ ಸಿಂಗ್ 3.0′ ಪ್ರಚಾರದ ವೇಳೆ ವಿವಿಧ ಮಾಧ್ಯಮಗಳಿಗೆ ಅವರು ಸಂದರ್ಶನ ನೀಡಿದ್ದಾರೆ. ಈ ವೇಳೆ ಅವರು ಉರ್ಫಿ ಜಾವೇದ್​ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: Urfi Javed: ಬಟ್ಟೆ ಹಾಕಿಕೊಂಡಿದ್ದಕ್ಕೆ ಮೈತುಂಬ ಅಲರ್ಜಿ; ವಿಡಿಯೋ ಹಂಚಿಕೊಂಡ ಉರ್ಫಿ ಜಾವೇದ್​​

ಇದನ್ನೂ ಓದಿ
Image
ಅಶ್ಲೀಲ​ ವೆಬ್​ಸೈಟ್​ನಲ್ಲಿ ಉರ್ಫಿ ಜಾವೇದ್​ ಫೋಟೋ; ಪ್ರತಿ ದಿನ ರೇಪ್​ ಬೆದರಿಕೆ: ಶಾಕಿಂಗ್​ ವಿಚಾರ ತೆರೆದಿಟ್ಟ ನಟಿ
Image
ಪ್ಯಾಂಟ್​ ಮೇಲೆ ಪ್ಯಾಂಟ್​ ಅಂಟಿಸಿಕೊಂಡು ಬಂದ ಉರ್ಫಿ ಜಾವೇದ್​; ಇಲ್ಲಿದೆ ವಿಚಿತ್ರ ಅವತಾರದ ವಿಡಿಯೋ
Image
‘ನಂಗೆ ಮರ್ಯಾದೆ ಕೊಡಲ್ಲ, ಸೆಲೆಬ್ರಿಟಿಗಳೇ ಕೆಟ್ಟ ಕಮೆಂಟ್​​ ಮಾಡ್ತಾರೆ’: ಎಲ್ಲವನ್ನೂ ಹೇಳಿಕೊಂಡ ಉರ್ಫಿ ಜಾವೇದ್​
Image
‘ಮುಸ್ಲಿಂ ಹುಡುಗನನ್ನು ಮದುವೆ ಆಗಲ್ಲ’: ಬಲವಾದ ಕಾರಣ ನೀಡಿದ ಮುಸ್ಲಿಂ ನಟಿ ಉರ್ಫಿ ಜಾವೇದ್​

‘ಉರ್ಫಿ ಜಾವೇದ್​ ನನಗೆ ತುಂಬ ಇಷ್ಟ. ಆಕೆ ಬಹಳ ಧೈರ್ಯವಂತೆ. ತನ್ನದೇ ರೀತಿಯಲ್ಲಿ ಆಕೆ ಬದುಕಲು ಬಯಸುತ್ತಾಳೆ. ನಮ್ಮ ದೇಶದ ಎಲ್ಲ ಹುಡುಗಿಯರು ಉರ್ಫಿಯನ್ನು ನೋಡಿ ಕಲಿಯಬೇಕು. ಯಾರ ಭಯವೂ ಇಲ್ಲದೇ, ಯಾವ ಹಿಂಜರಿಕೆಯೂ ಇಲ್ಲದೇ ನಿಮಗೆ ಅನಿಸಿದ್ದನ್ನು ಮಾಡಬೇಕು’ ಎಂದು ಹನಿ ಸಿಂಗ್​ ಹೇಳಿದ್ದಾರೆ.

ಇದನ್ನೂ ಓದಿ: Urfi Javed: ಟಾಪ್​ಲೆಸ್​ ಆಗಿ ಉಪಹಾರ ಸವಿದ ಉರ್ಫಿ ಜಾವೇದ್​; ತಿಂಡಿ ಪ್ಲೇಟ್​, ಜ್ಯೂಸ್​ ಲೋಟ ಇಲ್ಲದಿದ್ರೆ ದೇವರೇ ಗತಿ

ಹಿಂದಿ ಕಿರುತೆರೆಯಲ್ಲಿ ನಟಿಯಾಗಿ ಮಿಂಚಬೇಕು ಎಂಬುದು ಉರ್ಫಿ ಜಾವೇದ್​ ಅವರ ಕನಸಾಗಿತ್ತು. ಆದರೆ ಅಲ್ಲಿ ಅವರಿಗೆ ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಸಿಗಲಿಲ್ಲ. ಬಳಿಕ ಬಿಗ್​ ಬಾಸ್​ ಒಟಿಟಿ ಮೊದಲ ಸೀಸನ್​ನಲ್ಲಿ ಸ್ಪರ್ಧಿಸಿ ಒಂದಷ್ಟು ಖ್ಯಾತಿ ಪಡೆದರು. ಈಗ ಅವರು ಸೋಶಿಯಲ್​ ಮೀಡಿಯಾದಲ್ಲಿ ಫೇಮಸ್​ ಆಗಿದ್ದಾರೆ.

ಉರ್ಫಿ ಜಾವೇದ್​ ಅವರು ಅಸಭ್ಯವಾಗಿ ಬಟ್ಟೆ ಧರಿಸುತ್ತಾರೆ ಎಂದು ಅನೇಕರು ದೂರಿದ್ದುಂಟು. ಅಷ್ಟೇ ಅಲ್ಲದೇ ಅವರಿಗೆ ಪ್ರತಿ ದಿನ ಹಲವರು ಬೆದರಿಕೆ ಹಾಕುತ್ತಾರೆ. ಆದರೂ ಕೂಡ ಅವರು ತಲೆ ಕೆಡಿಸಿಕೊಂಡಿಲ್ಲ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ