‘ಫೈಟರ್’ ಪೋಸ್ಟರ್​ ಮೂಲಕ ಗಮನ ಸೆಳೆದ ದೀಪಿಕಾ ಪಡುಕೋಣೆ; ಸಾಂಗ್ ಬಗ್ಗೆ ಹುಟ್ಟಿದೆ ಕಲ್ಪನೆ

ಇತ್ತೀಚೆಗೆ ರಿಲೀಸ್ ಆದ ‘ಫೈಟರ್’ ಸಿನಿಮಾದ ಟೀಸರ್ ಗಮನ ಸೆಳೆದಿತ್ತು. ಈ ಚಿತ್ರದಲ್ಲಿ ಹೃತಿಕ್ ಹಾಗೂ ದೀಪಿಕಾ ಪಡುಕೋಣೆ ನಟಿಸಿದ್ದಾರೆ. ಈ ಸಿನಿಮಾದ ಹೊಸ ಪೋಸ್ಟರ್​ ರಿಲೀಸ್ ಆಗಿ ಸದ್ದು ಮಾಡುತ್ತಿದೆ.  

‘ಫೈಟರ್’ ಪೋಸ್ಟರ್​ ಮೂಲಕ ಗಮನ ಸೆಳೆದ ದೀಪಿಕಾ ಪಡುಕೋಣೆ; ಸಾಂಗ್ ಬಗ್ಗೆ ಹುಟ್ಟಿದೆ ಕಲ್ಪನೆ
ಹೃತಿಕ್-ದೀಪಿಕಾ
Follow us
ರಾಜೇಶ್ ದುಗ್ಗುಮನೆ
|

Updated on: Dec 20, 2023 | 11:46 AM

ಯಾವುದಾದರೂ ದೊಡ್ಡ ಸಿನಿಮಾಗಳು ರಿಲೀಸ್​ಗೆ ರೆಡಿ ಇದ್ದರೆ ಅಂಥ ಸಂದರ್ಭದಲ್ಲಿ ಇತರ ಸಿನಿಮಾ ತಂಡದವರು ಅಪ್​​ಡೇಟ್ ನೀಡಲು ಹಿಂಜರಿಕೆ ತೋರುತ್ತಾರೆ. ರಿಲೀಸ್ ಆಗುತ್ತಿರುವ ಸಿನಿಮಾ ಹೈಪ್ ಮಧ್ಯೆ ತಮ್ಮ ಸಿನಿಮಾದ ಸುದ್ದಿ ಕಳೆದು ಹೋಗಬಹುದು ಎನ್ನುವ ಭಯ ಅವರನ್ನು ಕಾಡುತ್ತದೆ. ಸದ್ಯ ‘ಸಲಾರ್’ (Salaar Movie) ಹಾಗೂ ‘ಡಂಕಿ’ ಸಿನಿಮಾಗಳು ರಿಲೀಸ್​ಗೆ ರೆಡಿ ಇವೆ. ಇವುಗಳ ಮಧ್ಯೆಯೂ ಒಂದು ಸಿನಿಮಾ ಸಖತ್ ಸದ್ದು ಮಾಡುತ್ತಿದೆ. ಹೃತಿಕ್ ರೋಷನ್ ಹಾಗೂ ದೀಪಿಕಾ ಪಡುಕೋಣೆ ನಟನೆಯ ‘ಫೈಟರ್’ ಸಿನಿಮಾದ ಪೋಸ್ಟರ್ ರಿಲೀಸ್ ಆಗಿದ್ದು ಗಮನ ಸೆಳೆಯುತ್ತಿದೆ. ಈ ಚಿತ್ರದಲ್ಲಿ ದೀಪಿಕಾ ಅವರು ಮಾದಕವಾಗಿ ಕಾಣಿಸಿಕೊಂಡಿದ್ದು ಈ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿದೆ.

ಹೃತಿಕ್ ರೋಷನ್ ಅವರನ್ನು ಸಖತ್ ಮಾಸ್ ಆಗಿ ನೋಡಲು ಫ್ಯಾನ್ಸ್ ಬಯಸುತ್ತಾರೆ. ಅಂಥದ್ದೇ ಕಥೆಯೊಂದಿಗೆ ನಿರ್ದೇಶಕ ಸಿದ್ದಾರ್ಥ್ ಆನಂದ್ ಅವರು ‘ಫೈಟರ್’ ಸಿನಿಮಾ ಮಾಡುತ್ತಿದ್ದಾರೆ. ಇತ್ತೀಚೆಗೆ ರಿಲೀಸ್ ಆದ ಸಿನಿಮಾದ ಟೀಸರ್ ಗಮನ ಸೆಳೆದಿತ್ತು. ಈ ಚಿತ್ರದಲ್ಲಿ ಹೃತಿಕ್ ಹಾಗೂ ದೀಪಿಕಾ ಪಡುಕೋಣೆ ನಟಿಸಿದ್ದಾರೆ. ಈ ಸಿನಿಮಾದ ಹೊಸ ಪೋಸ್ಟರ್​ ರಿಲೀಸ್ ಆಗಿ ಸದ್ದು ಮಾಡುತ್ತಿದೆ.

‘ಫೈಟರ್’ ಸಿನಿಮಾದ ಹೊಸ ಹಾಡು ‘ಇಷ್ಕ್ ಜೈಸಾ ಕುಚ್..’ ಡಿಸೆಂಬರ್ 22ರಂದು ರಿಲೀಸ್ ಆಗಲಿದೆ. ಈ ಹಾಡಿನ ರಿಲೀಸ್ ಬಗ್ಗೆ ಮಾಹಿತಿ ನೀಡಲು ಹೊಸ ಪೋಸ್ಟರ್ ಹಂಚಿಕೊಳ್ಳಲಾಗಿದೆ. ಬೀಚ್ ಪಕ್ಕದಲ್ಲಿ ಹೃತಿಕ್ ಶರ್ಟ್​ಲೆಸ್ ಆಗಿ ನಿಂತಿದ್ದಾರೆ. ದೀಪಿಕಾ ಕೂಡ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಹಾಡು ಕೂಡ ಬೋಲ್ಡ್ ಆಗಿರಬಹುದು ಎಂದು ಪ್ರೇಕ್ಷಕರು ಕಲ್ಪಿಸಿಕೊಂಡಿದ್ದಾರೆ.

ಇದನ್ನೂ ಓದಿ: ‘ಫೈಟರ್’ ಮಾತ್ರವಲ್ಲ ಈ ಸಿನಿಮಾಗಳಲ್ಲಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ ದೀಪಿಕಾ ಪಡುಕೋಣೆ..

ಇತ್ತೀಚೆಗೆ ದೀಪಿಕಾ ಪಡುಕೋಣೆ ಅವರ ಪಾತ್ರದ ಆಯ್ಕೆಗಳು ಬದಲಾಗಿವೆ. ಅವರು ಆ್ಯಕ್ಷನ್ ಹಾಗೂ ಬೋಲ್ಡ್ ಪಾತ್ರಗಳನ್ನು ಒಪ್ಪಿಕೊಳ್ಳಲು ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ‘ಫೈಟರ್’ ಚಿತ್ರದಲ್ಲಿ ಆ್ಯಕ್ಷನ್ ಜೊತೆ ಅವರು ಹಾಟ್ ಆಗಿಯೂ ಮಿಂಚಲಿದ್ದಾರೆ. ಮುಂದಿನ ವರ್ಷ ಜನವರಿ 25ರಂದು ‘ಫೈಟರ್’ ರಿಲೀಸ್ ಆಗಲಿದೆ. ಈ ಸಿನಿಮಾ ನೋಡಲು ಫ್ಯಾನ್ಸ್ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್