Fighter Song: ಮಿತಿ ಇಲ್ಲದ ದೀಪಿಕಾ ಪಡುಕೋಣೆ ಗ್ಲಾಮರ್​; ಹೃತಿಕ್​ ಡ್ಯಾನ್ಸ್ ಖದರ್​

Ishq Jaisa Kuch: ಸುಂದರ ಲೊಕೇಷನ್​ಗಳಲ್ಲಿ ‘ಇಷ್ಕ್​ ಜೈಸಾ ಕುಚ್​..’ ಹಾಡನ್ನು ಚಿತ್ರೀಕರಿಸಲಾಗಿದೆ. ಇದರಲ್ಲಿ ಹೃತಿಕ್​ ರೋಷನ್​ ಮತ್ತು ದೀಪಿಕಾ ಪಡುಕೋಣೆ ತುಂಬ ಇಂಟಿಮೇಟ್​ ಆಗಿ ಕಾಣಿಸಿಕೊಂಡಿದ್ದಾರೆ. ಬಿಕಿನಿ ಧರಿಸಿ ದೀಪಿಕಾ ಡ್ಯಾನ್ಸ್​ ಮಾಡಿದ್ದಾರೆ. ಅಭಿಮಾನಿಗಳನ್ನು ಚಿತ್ರಮಂದಿರದತ್ತ ಸೆಳೆಯುವಲ್ಲಿ ಈ ಹಾಡು ಮುಖ್ಯ ಪಾತ್ರ ವಹಿಸಲಿದೆ ಎಂಬುದು ಖಚಿತ.

Fighter Song: ಮಿತಿ ಇಲ್ಲದ ದೀಪಿಕಾ ಪಡುಕೋಣೆ ಗ್ಲಾಮರ್​; ಹೃತಿಕ್​ ಡ್ಯಾನ್ಸ್ ಖದರ್​
ಹೃತಿಕ್​ ರೋಷನ್​, ದೀಪಿಕಾ ಪಡುಕೋಣೆ

Updated on: Dec 22, 2023 | 5:22 PM

ನಟಿ ದೀಪಿಕಾ ಪಡುಕೋಣೆ ಅವರು ಗ್ಲಾಮರಸ್​ ಆಗಿ ಕಾಣಿಸಿಕೊಳ್ಳಲು ಎಂದಿಗೂ ಹಿಂದೇಟು ಹಾಕುವುದಿಲ್ಲ. ಈಗ ಅವರು ‘ಫೈಟರ್​’ (Fighter Movie) ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಅವರು ಹಾಟ್​ ಅವತಾರ ತಾಳಿದ್ದಾರೆ. ಅದರ ಝಲಕ್​ ತೋರಿಸುವಂತಹ ಹೊಸ ಹಾಡು ಬಿಡುಗಡೆ ಆಗಿದೆ. ಈ ಹಾಡಿನಲ್ಲಿ ದೀಪಿಕಾ ಪಡುಕೋಣೆ (Deepika Padukone) ಮತ್ತು ಹೃತಿಕ್​ ರೋಷನ್​ ಅವರು ಬಿಂದಾಸ್​ ಆಗಿ ಡ್ಯಾನ್ಸ್​ ಮಾಡಿದ್ದಾರೆ. ಇಂದು (ಡಿಸೆಂಬರ್​ 22) ರಿಲೀಸ್​ ಆಗಿರುವ ‘ಇಷ್ಕ್​ ಜೈಸಾ ಕುಚ್​…’  (Ishq Jaisa Kuch) ಎಂಬ ಹಾಡು ಜನಮೆಚ್ಚುಗೆ ಗಳಿಸುತ್ತಿದೆ. ಮಿಲಿಯನ್​ಗಟ್ಟಲೆ ವೀಕ್ಷಣೆ ಕಾಣುತ್ತಿದೆ.

‘ಫೈಟರ್’ ಸಿನಿಮಾಗೆ ಸಿದ್ದಾರ್ಥ್​ ಆನಂದ್​ ಅವರು ನಿರ್ದೇಶನ ಮಾಡಿದ್ದಾರೆ. ಯುದ್ಧ ವಿಮಾನಗಳ ಭರ್ಜರಿ ಆ್ಯಕ್ಷನ್​ ದೃಶ್ಯಗಳೇ ಈ ಸಿನಿಮಾದಲ್ಲಿ ಹೈಲೈಟ್​ ಆಗಿರಲಿದೆ. ಕೆಲವೇ ದಿನಗಳ ಹಿಂದೆ ಟೀಸರ್​ ಬಿಡುಗಡೆ ಆಗಿದ್ದು, ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದೆ. ಈಗ ಹೊಸ ಹಾಡು ಕೂಡ ಬಿಡುಗಡೆ ಆಗಿದ್ದು, ‘ಫೈಟರ್​’ ಮೇಲಿನ ಕುತೂಹಲ ಇನ್ನಷ್ಟು ಜಾಸ್ತಿ ಆಗಿದೆ.

FIGHTER: Ishq Jaisa Kuch (Song) Hrithik Roshan, Deepika Padukone | Vishal-Sheykhar,Shilpa,Kumaar

ಹಲವು ಸುಂದರ ಲೊಕೇಷನ್​ಗಳಲ್ಲಿ ಈ ಹಾಡನ್ನು ಚಿತ್ರೀಕರಿಸಲಾಗಿದೆ. ಹೃತಿಕ್​ ರೋಷನ್​ ಮತ್ತು ದೀಪಿಕಾ ಪಡುಕೋಣೆ ಅವರು ತುಂಬ ಇಂಟಿಮೇಟ್​ ಆಗಿ ಕಾಣಿಸಿಕೊಂಡಿದ್ದಾರೆ. ಬಿಕಿನಿ ಧರಿಸಿ ದೀಪಿಕಾ ಡ್ಯಾನ್ಸ್​ ಮಾಡಿದ್ದಾರೆ. ಅಭಿಮಾನಿಗಳನ್ನು ಚಿತ್ರಮಂದಿರದತ್ತ ಸೆಳೆಯುವಲ್ಲಿ ‘ಇಷ್ಕ್​ ಜೈಸಾ ಕುಚ್​…’ ಹಾಡು ಪ್ರಮುಖ ಪಾತ್ರ ವಹಿಸಲಿದೆ ಎಂಬುದು ಖಚಿತ. ಟೀ-ಸಿರೀಸ್​ ಮೂಲಕ ಈ ಸಾಂಗ್​ ಬಿಡುಗಡೆ ಆಗಿದೆ.

ಇದನ್ನೂ ಓದಿ: ‘ಫೈಟರ್’ ಮಾತ್ರವಲ್ಲ ಈ ಸಿನಿಮಾಗಳಲ್ಲಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ ದೀಪಿಕಾ ಪಡುಕೋಣೆ..

‘ಫೈಟರ್​’ ಚಿತ್ರದಲ್ಲಿ ಹೃತಿಕ್​ ರೋಷನ್​, ದೀಪಿಕಾ ಪಡುಕೋಣೆ ಜೊತೆ ಅನಿಲ್​ ಕಪೂರ್​ ಕೂಡ ನಟಿಸಿದ್ದಾರೆ. 2024ರ ಜನವರಿ 25ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. 3ಡಿ ವರ್ಷನ್​ನಲ್ಲಿ ಈ ಸಿನಿಮಾ ತೆರೆಕಾಣಲಿದೆ ಎಂಬುದು ಮತ್ತೊಂದು ವಿಶೇಷ. ಹೃತಿಕ್​ ರೋಷನ್​ ಅಭಿಮಾನಿಗಳು ಈ ಚಿತ್ರಕ್ಕಾಗಿ ಕಾದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us