ಜೂನಿಯರ್​ ಎನ್​ಟಿಆರ್ ಜೊತೆ ಕೆಲಸ ಮಾಡೋಕೆ ಉತ್ಸುಕರಾಗಿದ್ದಾರೆ ಹೃತಿಕ್ ರೋಷನ್

‘ವಾರ್’ ಚಿತ್ರದಲ್ಲಿ ಹೃತಿಕ್ ಅಭಿನಯಿಸಿದ್ದರು. ಇದಕ್ಕೆ ಸೀಕ್ವೆಲ್ ರೆಡಿ ಆಗುತ್ತಿದ್ದು ಸಹಜವಾಗಿಯೇ ಕುತೂಹಲ ಸೃಷ್ಟಿ ಆಗಿದೆ. ಅವರು ಸಿನಿಮಾ ಹೇಗಿರಲಿದೆ ಎಂಬುದನ್ನು ವಿವರಿಸಿದ್ದಾರೆ. ಜೊತೆಗೆ ಜೂನಿಯರ್ ಎನ್​ಟಿಆರ್ ಜೊತೆ ಕೆಲಸ ಮಾಡೋಕೆ ಉತ್ಸುಕರಾಗಿದ್ದಾರೆ. ‘ವಾರ್ ಸೀಕ್ವೆಲ್​ನಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ. ಒಳ್ಳೆಯ ಸ್ಕ್ರಿಪ್ಟ್ ಕೂಡ ಇದೆ’ ಎಂದಿದ್ದಾರೆ ಹೃತಿಕ್.

ಜೂನಿಯರ್​ ಎನ್​ಟಿಆರ್ ಜೊತೆ ಕೆಲಸ ಮಾಡೋಕೆ ಉತ್ಸುಕರಾಗಿದ್ದಾರೆ ಹೃತಿಕ್ ರೋಷನ್
ಜೂನಿಯರ್​ ಎನ್​ಟಿಆರ್-ಹೃತಿಕ್
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on:Feb 02, 2024 | 10:24 AM

ದಕ್ಷಿಣ ಭಾರತದ ಕಲಾವಿದರಿಗೆ ಸಿಕ್ಕಾಪಟ್ಟೆ ಬೇಡಿಕೆ ಸೃಷ್ಟಿ ಆಗುತ್ತಿದೆ. ನಟ ಯಶ್ (Yash) ಅವರಿಗೆ ‘ರಾಮಾಯಣ’ ಸಿನಿಮಾದಲ್ಲಿ ನಟಿಸೋ ಆಫರ್ ಬಂದಿದೆ. ಪ್ರಭಾಸ್ ಅವರು ಹಿಂದಿ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಜೂನಿಯರ್ ಎನ್​ಟಿಆರ್​ ಅವರು ‘ವಾರ್ 2’ ಸಿನಿಮಾ ಮೂಲಕ ಬಾಲಿವುಡ್​​ನಲ್ಲಿ ಮಿಂಚಲು ರೆಡಿ ಆಗಿದ್ದಾರೆ. ಬಾಲಿವುಡ್ (Bollywood) ಮಂದಿ ಕೂಡ ದಕ್ಷಿಣದವರನ್ನು ಪ್ರೀತಿಯಿಂದಲೇ ಸ್ವಾಗತಿಸುತ್ತಿದ್ದಾರೆ. ಜೂನಿಯರ್ ಎನ್​ಟಿಆರ್ ಅವರ ಜೊತೆ ಕೆಲಸ ಮಾಡೋಕೆ ಹೃತಿಕ್ ರೋಷನ್ ಸಾಕಷ್ಟು ಉತ್ಸುಕರಾಗಿದ್ದಾರೆ. ಸಂದರ್ಶನ ಒಂದರಲ್ಲಿ ಅವರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಹೃತಿಕ್ ರೋಷನ್ ನಟನೆಯ ‘ಫೈಟರ್’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈ ಸಿನಿಮಾ ಗೆಲುವು ಕಂಡ ಬಳಿಕ ಅವರು ಸಂದರ್ಶನಗಳಲ್ಲಿ ಮಾತನಾಡಿದ್ದಾರೆ. ಈ ವೇಳೆ ಅವರಿಗೆ ‘ವಾರ್ 2’ ಸಿನಿಮಾ ಬಗ್ಗೆ ಪ್ರಶ್ನೆ ಎದುರಾಗಿದೆ. ‘ವಾರ್’ ಸಿನಿಮಾದಲ್ಲಿ ಹೃತಿಕ್ ನಟಿಸಿದ್ದರು. ಇದಕ್ಕೆ ಸೀಕ್ವೆಲ್ ಸಿದ್ಧವಾಗುತ್ತಿದ್ದು ಸಹಜವಾಗಿಯೇ ಕುತೂಹಲ ಸೃಷ್ಟಿ ಆಗಿದೆ. ಅವರು ಸಿನಿಮಾ ಹೇಗಿರಲಿದೆ ಎಂಬುದನ್ನು ವಿವರಿಸಿದ್ದಾರೆ. ಜೊತೆಗೆ ಜೂನಿಯರ್ ಎನ್​ಟಿಆರ್ ಜೊತೆ ಕೆಲಸ ಮಾಡೋಕೆ ಉತ್ಸುಕರಾಗಿದ್ದಾರೆ.

‘ವಾರ್ ಸೀಕ್ವೆಲ್​ನಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ. ಒಳ್ಳೆಯ ಸ್ಕ್ರಿಪ್ಟ್ ಕೂಡ ಇದೆ. ಈ ಸಿನಿಮಾ ದೊಡ್ಡದಾಗಿರುತ್ತದೆ. ಸಾಕಷ್ಟು ಮನರಂಜನೆ ಇರಲಿದೆ. ಜೂನಿಯರ್​ ಎನ್​ಟಿಆರ್ ಜೊತೆ ಕೆಲಸ ಮಾಡಲು ಉತ್ಸುಕನಾಗಿದ್ದೇನೆ’ ಎಂದು ಹೃತಿಕ್ ಹೇಳಿದ್ದಾರೆ. ಇವರ ಕಾಂಬಿನೇಷನ್ ನೋಡಲು ಫ್ಯಾನ್ಸ್ ಕಾದಿದ್ದಾರೆ.

‘ವಾರ್’ ಚಿತ್ರವನ್ನು ಸಿದ್ದಾರ್ಥ್ ಆನಂದ್ ನಿರ್ದೇಶನ ಮಾಡಿದ್ದರು. ಈ ಚಿತ್ರದಲ್ಲಿ ಹೃತಿಕ್ ರೋಷನ್, ಟೈಗರ್ ಶ್ರಾಫ್ ಮೊದಲಾದವರು ನಟಿಸಿದ್ದರು. ಈ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇತ್ತು. ಈ ಸಿನಿಮಾದ ಸೀಕ್ವೆಲ್​ನಲ್ಲಿ ಕೆಲವು ಪ್ರಮುಖ ಹೀರೋಗಳು ಅತಿಥಿ ಪಾತ್ರ ಮಾಡುತ್ತಾರೆ ಎನ್ನಲಾಗಿದೆ. ಈ ಸಿನಿಮಾ ಯಶ್ ರಾಜ್ ಫಿಲ್ಮ್ಸ್ ಯೂನಿವರ್ಸ್ ಅಡಿಯಲ್ಲಿ ಸಿದ್ಧವಾಗುತ್ತಿದೆ.

‘ವಾರ್ 2’ ಚಿತ್ರವನ್ನು ಅಯಾನ್ ಮುಖರ್ಜಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ‘ಬ್ರಹ್ಮಾಸ್ತ್ರ’ದಂಥ ಸಿನಿಮಾಗಳನ್ನು ನಿರ್ದೇಶನ ಮಾಡಿದ ಅನುಭವ ಅವರಿಗೆ ಇದೆ. ಈ ಸಿನಿಮಾದ ಶೂಟಿಂಗ್ ಈ ತಿಂಗಳಿಂದ ಆರಂಭ ಆಗುವ ನಿರೀಕ್ಷೆ ಇದೆ. ಯಶ್ ರಾಜ್ ಫಿಲ್ಮ್ಸ್ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ.

ಇದನ್ನೂ ಓದಿ: ಹೃತಿಕ್ ರೋಷನ್ ಆಸ್ತಿ ಎಷ್ಟು ಸಾವಿರ ಕೋಟಿ ರೂಪಾಯಿ? ಪ್ರತಿ ಚಿತ್ರಕ್ಕೆ ಪಡೆಯೋ ಸಂಭಾವನೆ ಎಷ್ಟು?

ಹೃತಿಕ್ ರೋಷನ್ ಅವರು ‘ಫೈಟರ್’ ಸಿನಿಮಾದಿಂದ ಗೆಲುವು ಕಂಡಿದ್ದಾರೆ. ಈ ಚಿತ್ರ 246 ಕೋಟಿ ರೂಪಾಯಿ ಬಾಚಿಕೊಂಡಿದೆ. ಜೂನಿಯರ್ ಎನ್​ಟಿಆರ್ ಅವರು ‘ದೇವರ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಸಿನಿಮಾ ಏಪ್ರಿಲ್​ನಲ್ಲಿ ರಿಲೀಸ್ ಆಗೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ‘ವಾರ್ 2’ ಬಳಿಕ ಪ್ರಶಾಂತ್ ನೀಲ್ ಸಿನಿಮಾದಲ್ಲಿ ಅವರು ತೊಡಗಿಕೊಳ್ಳಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:03 am, Fri, 2 February 24

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್