AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕತ್ರಿನಾ ಕೈಫ್‌ ತೂಕ ಹೆಚ್ಚಳ: ಬೆಂಬಲಕ್ಕೆ ನಿಂತ ಹೃತಿಕ್ ರೋಷನ್

ಹೆರಿಗೆಯ ನಂತರದ ತೂಕ ಹೆಚ್ಚಳದ ಕಾರಣಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಆಗುತ್ತಿರುವ ಬಾಲಿವುಡ್ ನಟಿ ಕತ್ರಿನಾ ಕೈಫ್ ಬೆಂಬಲಕ್ಕೆ ನಟ ಹೃತಿಕಾ ರೋಶನ್ ನಿಂತಿದ್ದಾರೆ. ನಟಿಯನ್ನು ಸಮರ್ಥಿಸಿಕೊಂಡು ಇನ್‌ಸ್ಟಾಗ್ರಾಮ್‌ನಲ್ಲಿ ಹಾಕಿದ್ದ ಪೋಸ್ಟ್‌ಗೆ ಲೈಕ್ ಮಾಡುವ ಮೂಲಕ ಹೃತಿಕಾ ಟ್ರೋಲರ್‌ಗಳಿಗೆ ಪರೋಕ್ಷವಾಗಿ ತಕ್ಕ ತಿರುಗೇಟು ನೀಡಿದ್ದು, ಪ್ರಸ್ತುತ ಈ ವಿಷಯ ಸಖತ್ ವೈರಲ್ ಆಗಿದೆ.

ಕತ್ರಿನಾ ಕೈಫ್‌ ತೂಕ ಹೆಚ್ಚಳ: ಬೆಂಬಲಕ್ಕೆ ನಿಂತ ಹೃತಿಕ್ ರೋಷನ್
ಕತ್ರಿನಾ-ಹೃತಿಕ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 19, 2026 | 8:09 AM

Share

ಮುಖ್ಯಾಂಶಗಳು

  • ಕತ್ರಿನಾ ಕೈಫ್ ತೂಕ ಹೆಚ್ಚಳ
  • ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್
  • 'ಬ್ಯಾಂಗ್ ಬ್ಯಾಂಗ್' ನಟಿಯ ಬೆಂಬಲಕ್ಕೆ ಬಂದ ಹೃತಿಕ್ ರೋಶನ್

ಬಾಲಿವುಡ್‌ನ ಖ್ಯಾತ ನಟಿ ಕತ್ರಿನಾ ಕೈಫ್ ಇತ್ತೀಚೆಗೆ ತಮ್ಮ ಉಡುಪು ಹಾಗೂ ನೋಟದ ಕಾರಣಕ್ಕೆ ಸುದ್ದಿಯಲ್ಲಿದ್ದಾರೆ. ಪತಿ ವಿಕ್ಕಿ ಕೌಶಲ್ ಜೊತೆ ಅಂಬಾನಿ ಮನೆಯ ಗಣಪತಿ ಪೂಜೆಯಲ್ಲಿ ಅವರು ಭಾಗವಹಿಸಿದ್ದರು. ಈ ವೇಳೆ ಅವರ ದೇಹದ ತೂಕ ಕೊಂಚ ಹೆಚ್ಚಾಗಿದ್ದು ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಹೆರಿಗೆಯ ನಂತರದ ತೂಕದ ಬಗ್ಗೆ ಕೆಲವರು ನೀಚವಾಗಿ ಟ್ರೋಲ್ ಮಾಡಲು ಪ್ರಾರಂಭಿಸಿದ್ದಾರೆ.

ಕೆಲವು ಕಿಡಿಗೇಡಿಗಳು ನಟಿಯ ದೇಹದ ಸೌಂದರ್ಯವನ್ನು ಟೀಕಿಸಲು ಶುರು ಮಾಡಿದರು. ಆದರೆ ಕತ್ರಿನಾ ಅಭಿಮಾನಿಗಳು ಈ ಸಣ್ಣತನದ ನಡೆಯನ್ನು ತಕ್ಷಣವೇ ಖಂಡಿಸಿದ್ದಾರೆ. ಇದೇ ಸಮಯದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ನಟಿಯನ್ನು ಬೆಂಬಲಿಸಿ ಹಾಕಿದ್ದ ಪೋಸ್ಟ್‌ ಒಂದಕ್ಕೆ ಬಾಲಿವುಡ್ ಸ್ಟಾರ್ ಹೃತಿಕ್ ರೋಷನ್ ಲೈಕ್ ಮಾಡಿದ್ದಾರೆ. ಈ ಮೂಲಕ ತಮ್ಮ ‘ಬ್ಯಾಂಗ್ ಬ್ಯಾಂಗ್’ ಸಿನಿಮಾ ಸಹನಟಿಯ ಬೆಂಬಲಕ್ಕೆ ನಿಂತಿದ್ದಾರೆ.

ಹರ್ಷವೀರ್ ಜೈನ್ ಎಂಬುವವರು ಇನ್‌ಸ್ಟಾಗ್ರಾಮ್‌ನಲ್ಲಿ ಕತ್ರಿನಾ ಬೆಂಬಲಿಸಿ ಸುದೀರ್ಘ ಪೋಸ್ಟ್ ಬರೆದಿದ್ದಾರೆ. ಚಿಕ್ಕ ವಯಸ್ಸಿನಿಂದಲೂ ನಾನು ಕತ್ರಿನಾ ಅವರ ದೊಡ್ಡ ಅಭಿಮಾನಿಯಾಗಿದ್ದೆ. ಈಗ ಹೆರಿಗೆಯ ನಂತರ ತೂಕ ಹೆಚ್ಚಾಗಿದೆ ಎಂದು ಟ್ರೋಲ್ ಮಾಡುವವರ ಬಗ್ಗೆ ನನಗೆ ಕನಿಕರ ಎನಿಸುತ್ತದೆ. ಇಂತಹ ಕಾಮೆಂಟ್‌ಗಳು ನಟಿಯ ಯಶಸ್ವಿ ಜೀವನಕ್ಕೆ ಯಾವುದೇ ಧಕ್ಕೆ ತರುವುದಿಲ್ಲ ಎಂದು ಹರ್ಷವೀರ್ ಬರೆದುಕೊಂಡಿದ್ದಾರೆ.

ಹೃತಿಕ್ ರೋಷನ್ ಈ ಪೋಸ್ಟ್‌ಗೆ ನೇರವಾಗಿ ಯಾವುದೇ ಹೇಳಿಕೆ ನೀಡಿಲ್ಲ. ಆದರೆ ಅವರು ಆ ಪೋಸ್ಟ್‌ಗೆ ಲೈಕ್ ಒತ್ತುವ ಮೂಲಕ ಕತ್ರಿನಾ ಪರವಾಗಿ ತಾವು ನಿಂತಿರುವುದನ್ನು ಸಾಬೀತುಪಡಿಸಿದ್ದಾರೆ. ಹೆರಿಗೆಯ ನಂತರ ಪ್ರತಿಯೊಬ್ಬ ಮಹಿಳೆಯ ದೇಹದಲ್ಲಿ ಬದಲಾವಣೆಗಳು ಸಹಜ. ಇದನ್ನು ಅರ್ಥಮಾಡಿಕೊಳ್ಳದೆ ಟ್ರೋಲ್ ಮಾಡುವುದು ಸರಿಯಲ್ಲ ಎಂಬ ಸಂದೇಶವನ್ನು ಈ ಪೋಸ್ಟ್ ನೀಡಿದೆ.

ಇದನ್ನೂ ಓದಿ: ಬಾಡಿ ಶೇಮಿಂಗ್​​ಗೆ ಒಳಗಾದ ನಟಿ ಕತ್ರಿನಾ ಕೈಫ್​​ ಬೆಂಬಲಕ್ಕೆ ನಿಂತ ನಟಿ ರಮ್ಯಾ

ಇತ್ತೀಚಿನ ಸಂದರ್ಶನವೊಂದರಲ್ಲಿ ಕತ್ರಿನಾ ತಮ್ಮ ಹೆರಿಗೆಯ ನಂತರದ ಬದಲಾವಣೆಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ದರು. ಹೆರಿಗೆಯ ಬಳಿಕ ನನ್ನ ಚರ್ಮ ತುಂಬಾ ಸೂಕ್ಷ್ಮವಾಯಿತು. ಅದಕ್ಕೆ ತಕ್ಕಂತೆ ಕಾಳಜಿ ವಹಿಸುವುದು ನನಗೊಂದು ಸವಾಲಾಗಿತ್ತು. ಶರೀರಕ್ಕೆ ವಿಶ್ರಾಂತಿ ಮತ್ತು ಶಾಂತಿ ನೀಡುವ ಉತ್ಪನ್ನಗಳನ್ನು ಆಯ್ಕೆ ಮಾಡಿಕೊಂಡೆ ಎಂದು ಅವರು ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ