AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hrithik Roshan: ಜಪಾನ್​ನಲ್ಲಿ ಆರಂಭ ಆಗಲಿದೆ ‘ವಾರ್​ 2’ ಸಿನಿಮಾದ ಶೂಟಿಂಗ್​

2019ರಲ್ಲಿ ಬಿಡುಗಡೆ ಆದ ‘ವಾರ್​’ ಸಿನಿಮಾ ಸೂಪರ್​ ಹಿಟ್​ ಆಗಿತ್ತು. ಆ ಸಿನಿಮಾಗೆ ಸೀಕ್ವೆಲ್​ ಸಿದ್ಧವಾಗುತ್ತಿದೆ. ‘ವಾರ್​ 2’ ಚಿತ್ರದಲ್ಲಿ ಹೃತಿಕ್​ ರೋಷನ್​ ಮತ್ತು ಜೂನಿಯರ್​ ಎನ್​ಟಿಆರ್​ ಅವರು ನಟಿಸಲಿದ್ದಾರೆ. ಮಾರ್ಚ್​ 7ರಂದು ಜಪಾನ್​ನಲ್ಲಿ ಈ ಸಿನಿಮಾಗೆ ಶೂಟಿಂಗ್​ ಆರಂಭ ಆಗಲಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಹೃತಿಕ್​ ರೋಷನ್​ ಅವರು ಸಕಲ ತಯಾರಿ ಮಾಡಿಕೊಂಡಿದ್ದಾರೆ.

Hrithik Roshan: ಜಪಾನ್​ನಲ್ಲಿ ಆರಂಭ ಆಗಲಿದೆ ‘ವಾರ್​ 2’ ಸಿನಿಮಾದ ಶೂಟಿಂಗ್​
ಹೃತಿಕ್​ ರೋಷನ್​
Follow us
ಮದನ್​ ಕುಮಾರ್​
|

Updated on: Mar 05, 2024 | 10:06 PM

ಆದಷ್ಟು ಬೇಗ ‘ವಾರ್​ 2’ (War 2) ಸಿನಿಮಾದ ಶೂಟಿಂಗ್​ ಆರಂಭ ಆಗಲಿ ಎಂದು ಫ್ಯಾನ್ಸ್​ ಕಾದಿದ್ದಾರೆ. ಹೃತಿಕ್​ ರೋಷನ್​ ಮತ್ತು ಜೂನಿಯರ್​ ಎನ್​ಟಿಆರ್​ (Jr NTR) ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ನಿಭಾಯಿಸಲಿದ್ದಾರೆ. ನಾಯಕಿಯಾಗಿ ಕಿಯಾರಾ ಅಡ್ವಾಣಿ ನಟಿಸಲಿದ್ದಾರೆ. ಅಯಾನ್​ ಮುಖರ್ಜಿ ಅವರ ನಿರ್ದೇಶನದಲ್ಲಿ ಮೂಡಿಬರಲಿರುವ ಈ ಚಿತ್ರದ ಬಗ್ಗೆ ಒಂದು ಅಪ್​ಡೇಟ್​ ಸಿಕ್ಕಿದೆ. ಶೀಘ್ರದಲ್ಲೇ ‘ವಾರ್​ 2’ ಚಿತ್ರಕ್ಕೆ ಶೂಟಿಂಗ್​ ಆರಂಭ ಆಗಲಿದೆ. ಅದು ಕೂಡ ಜಪಾನ್​ನಲ್ಲಿ ಎಂಬುದು ವಿಶೇಷ. ಹೃತಿಕ್​ ರೋಷನ್​ (Hrithik Roshan) ಅವರ ಇಂಟ್ರಡಕ್ಷನ್​ ದೃಶ್ಯದಿಂದಲೇ ಈ ಸಿನಿಮಾದ ಚಿತ್ರೀಕರಣ ಶುರುವಾಗಲಿದೆ.

ಪ್ಯಾನ್​ ಇಂಡಿಯಾ ಮಟ್ಟದಲ್ಲಿ ‘ವಾರ್​ 2’ ಸಿನಿಮಾ ಬಿಡುಗಡೆ ಆಗಲಿದೆ. ಆ ಉದ್ದೇಶದಿಂದಲೇ ಈ ಬಾರಿ ಪಾತ್ರವರ್ಗಕ್ಕೆ ದಕ್ಷಿಣ ಭಾರತದ ಹೀರೋ ಜೂನಿಯರ್​ ಎನ್​ಟಿಆರ್​ ಅವರನ್ನು ಸೇರಿಸಿಕೊಳ್ಳಲಾಗಿದೆ. ಅವರು ಈ ಚಿತ್ರದಲ್ಲಿ ನೆಗೆಟಿವ್​ ಶೇಡ್​ ಇರುವ ಪಾತ್ರ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಮಾರ್ಚ್​ 7ರಂದು ‘ವಾರ್​ 2’ ಸಿನಿಮಾದ ಶೂಟಿಂಗ್​ ಶುರುವಾಗಲಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ಹೃತಿಕ್​ ಕಟ್ಟುಮಸ್ತಾದ ಬಾಡಿ ಹಿಂದಿರುವ ಟ್ರೇನರ್​ ಇವರೇ; ಹುಟ್ಟುಹಬ್ಬಕ್ಕೂ ಬಿಡಲಿಲ್ಲ ವರ್ಕೌಟ್​

‘ವಾರ್​ 2’ ಸಿನಿಮಾದ ಚಿತ್ರೀಕರಣ ಹಲವು ರಾಷ್ಟ್ರಗಳಲ್ಲಿ ನಡೆಯಲಿದೆ. ಜೂನಿಯರ್​ ಎನ್​ಟಿಆರ್​ ಅವರಿಗೋಸ್ಕರ ದೊಡ್ಡ ಪ್ಲ್ಯಾನ್​ ಮಾಡಲಾಗಿದೆ. ಆದಿತ್ಯ ಚೋಪ್ರಾ ಅವರು ಈ ಬಾರಿ ತುಂಬ ದೊಡ್ಡ ಬಜೆಟ್​ನಲ್ಲಿ ಸಿನಿಮಾ ಮಾಡುತ್ತಿದ್ದಾರೆ. ‘ಯಶ್​ ರಾಜ್​ ಫಿಲ್ಮ್ಸ್​ ಸ್ಪೈ ಯೂನಿವರ್ಸ್​’ನಲ್ಲಿ ಜೂನಿಯರ್​ ಎನ್​ಟಿಆರ್​ ಅವರ ಪಾತ್ರ ತುಂಬ ಮಹತ್ವದ್ದಾಗಿರಲಿದೆ. ಮುಂಬರುವ ಸಿನಿಮಾಗಳಲ್ಲಿ ಕೂಡ ಈ ಪಾತ್ರ ಇರಲಿದೆ. ಆ ಪಾತ್ರವನ್ನು ಇಟ್ಟುಕೊಂಡು ಸ್ಪಿನ್​ಆಫ್ ಮಾಡುವ ಪ್ಲ್ಯಾನ್​ ಕೂಡ ಇದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಕಂಡು ಕೇಳರಿಯದ ಆ್ಯಕ್ಷನ್​ಗೆ ಹೃತಿಕ್​ ರೋಷನ್​ ಸಜ್ಜು

ಹೃತಿಕ್​ ರೋಷನ್​ ಅವರು ಮಾರ್ಚ್​ 7ರಂದು ಜಪಾನ್​ಗೆ ತೆರಳಿದ್ದಾರೆ. ಅದೇ ದಿನ ಅವರು ‘ವಾರ್​ 2’ ಸಿನಿಮಾದ ಶೂಟಿಂಗ್​ನಲ್ಲಿ ಭಾಗಿ ಆಗಲಿದ್ದಾರೆ. 2025ರಲ್ಲಿ ಈ ಸಿನಿಮಾವನ್ನು ಬಿಡುಗಡೆ ಮಾಡಬೇಕು ಎಂಬ ಗುರಿ ಇಟ್ಟುಕೊಳ್ಳಲಾಗಿದೆ. ಯಶ್​ ರಾಜ್​ ಫಿಲ್ಮ್ಸ್​ ಸ್ಪೈ ಯೂನಿವರ್ಸ್​ನಲ್ಲಿ ಹಲವು ಸಿನಿಮಾಗಳು ಸಿದ್ಧವಾಗುತ್ತಿವೆ. ಆಲಿಯಾ ಭಟ್​ ಅವರ ಮುಖ್ಯ ಭೂಮಿಕೆಯಲ್ಲಿ ಒಂದು ಸ್ಪೈ ಸಿನಿಮಾ ಮಾಡಲಾಗುತ್ತಿದೆ. ಅದರ ಜೊತೆಗೆ ‘ಪಠಾಣ್​ 2’, ‘ಟೈಗರ್​ ವರ್ಸಸ್​ ಪಠಾಣ್​’ ಮುಂತಾದ ಸಿನಿಮಾಗಳು ಪ್ಲ್ಯಾನ್​ನಲ್ಲಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ