AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರೀಕ್ಷೆ ಹುಸಿ, ಸಾಧಾರಣ ಓಪನಿಂಗ್ ಕಂಡ ‘ಫೈಟರ್’ ಮೊದಲ ದಿನ ಗಳಿಸಿದ್ದೆಷ್ಟು?

Fighter First day collection: ಹೃತಿಕ್ ರೋಷನ್-ದೀಪಿಕಾ ಪಡುಕೋಣೆ ನಟನೆಯ ಬಹುನಿರೀಕ್ಷಿತ ಸಿನಿಮಾ ‘ಫೈಟರ್’ ಮೊದಲ ದಿನ ಬಾಕ್ಸ್ ಆಫೀಸ್​ನಲ್ಲಿ ಗಳಿಸಿದ್ದೆಷ್ಟು?

ನಿರೀಕ್ಷೆ ಹುಸಿ, ಸಾಧಾರಣ ಓಪನಿಂಗ್ ಕಂಡ ‘ಫೈಟರ್’ ಮೊದಲ ದಿನ ಗಳಿಸಿದ್ದೆಷ್ಟು?
ಫೈಟರ್ ಸಿನಿಮಾ
ಮಂಜುನಾಥ ಸಿ.
|

Updated on:Jan 26, 2024 | 2:38 PM

Share

ಹೃತಿಕ್ ರೋಷನ್ (Hritik Roshan) ಹಾಗೂ ದೀಪಿಕಾ ಪಡುಕೋನೆ ನಟನೆಯ ‘ಫೈಟರ್’ ಸಿನಿಮಾ ನಿನ್ನೆಯಷ್ಟೆ (ಜನವರಿ 25) ಬಿಡುಗಡೆ ಆಗಿದೆ. ಭಾರತದ ಮೊದಲ ಏರಿಯಲ್ ಆಕ್ಷನ್ ಸಿನಿಮಾ ಇದಾಗಿದ್ದು, ಭಾರತೀಯ ವಾಯುಸೇನೆಯ ಗರಿಮೆ, ಸಾಹಸದ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾ ಬಿಡುಗಡೆ ಆಗುವ ಮುನ್ನ ದೊಡ್ಡ ಮಟ್ಟದ ನಿರೀಕ್ಷೆಯನ್ನು ಈ ಸಿನಿಮಾ ಹುಟ್ಟುಹಾಕಿತ್ತು, ಮೊದಲ ದಿನದ ಗಳಿಕೆಯಲ್ಲಿ ಹೊಸ ದಾಖಲೆಯನ್ನು ಈ ಸಿನಿಮಾ ಸೃಷ್ಟಿಸಲಿದೆ ಎನ್ನಲಾಗುತ್ತು. ಸಿನಿಮಾ ಮೊದಲ ದಿನ ಉತ್ತಮ ಕಲೆಕ್ಷನ್ ಮಾಡಿದೆಯಾದರೂ ನಿರೀಕ್ಷೆಗೆ ತಕ್ಕಷ್ಟು ಅಲ್ಲ.

‘ಫೈಟರ್’ ಸಿನಿಮಾ ಮೊದಲ ದಿನ ಬಾಕ್ಸ್ ಆಫೀಸ್​ನಲ್ಲಿ 20 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇದು ಕಡಿಮೆ ಮೊತ್ತವಲ್ಲದಿದ್ದರೂ ನಿರೀಕ್ಷೆಗೆ ತಕ್ಕಷ್ಟು ಗಳಿಕೆಯನ್ನು ಸಿನಿಮಾ ಮಾಡಿಲ್ಲವೆಂಬ ಅಭಿಪ್ರಾಯವೇ ವ್ಯಕ್ತವಾಗುತ್ತಿದೆ. ಆದರೆ ಜನವರಿ 26ರಿಂದ ಸತತವಾಗಿ ಮೂರು ದಿನ ರಜೆ ಇರುವ ಕಾರಣ ಸಿನಿಮಾದ ಕಲೆಕ್ಷನ್ ಹೆಚ್ಚಬಹುದು ಎಂಬ ನಿರೀಕ್ಷೆ ಚಿತ್ರತಂಡದ್ದು. ಇದೇ ಕಾರಣಕ್ಕೆ ಸಿನಿಮಾವನ್ನು ಜನವರಿ 25ಕ್ಕೆ ಬಿಡುಗಡೆ ಮಾಡಲಾಗಿದೆ. ದೇಶದ ಪ್ರಮುಖ ಮಲ್ಟಿಪ್ಲೆಕ್ಸ್​ಗಳಾದ ಪಿವಿಆರ್-ಐನಾಕ್ಸ್ ಹಾಗೂ ಸಿನಿಪೋಲಿಸ್​ಗಳಿಗೆ 12 ಕೋಟಿ ಹಣವನ್ನು ಈ ಸಿನಿಮಾ ಗಳಿಸಿದೆ. ಬಾಕಿ ಕಲೆಕ್ಷನ್ ಇತರೆ ಮಲ್ಟಿಪ್ಲೆಕ್ಸ್ ಹಾಗೂ ಸಿಂಗಲ್ ಸ್ಕ್ರೀನ್ ಚಿತ್ರಗಳಿಂದ ಆಗಿದೆ.

ಇದನ್ನೂ ಓದಿ:ಹೃತಿಕ್-ದೀಪಿಕಾ ನಟನೆಯ ‘ಫೈಟರ್’ ಹೇಗಿದೆ? ನೆಟ್ಟಿಗರು ಹೇಳಿದ್ದು ಹೀಗೆ…

ಮೊದಲ ದಿನ ನಿರೀಕ್ಷಿತ ಮಟ್ಟದ ಗಳಿಕೆ ಮಾಡಿಲ್ಲವಾದರೂ ಎರಡನೇ ದಿನದ ಗಳಿಕೆ ಹೆಚ್ಚಾಗುವ ನಿರೀಕ್ಷೆ ಇದ್ದು, ಎರಡನೇ ದಿನ ಅಂದರೆ ಇಂದು (ಜನವರಿ 26) ಸುಮಾರು 35 ರಿಂದ 40 ಕೋಟಿ ಹಣ ಕಲೆಕ್ಷನ್ ಮಾಡುವ ಅಂದಾಜನ್ನು ಕೆಲ ಟ್ರೇಡ್ ಅನಲಿಸ್ಟ್​ಗಳು ಮಾಡಿದ್ದಾರೆ. ಒಟ್ಟಾರೆ ಈ ಸಿನಿಮಾ 200 ಕೋಟಿ ಕಲೆಕ್ಷನ್ ಗಡಿಯನ್ನು ದಾಟುವ ವಿಶ್ವಾಸವನ್ನು ಸಹ ವ್ಯಕ್ತಪಡಿಸಲಾಗಿದೆ.

‘ಫೈಟರ್’ ಪ್ಯಾನ್ ಇಂಡಿಯಾ ಸಿನಿಮಾ ಅಲ್ಲ. ‘ಜವಾನ್’, ‘ಪಠಾಣ್’ ರೀತಿಯಲ್ಲಿ ದಕ್ಷಿಣ ಭಾರತದಲ್ಲಿ ದೊಡ್ಡ ಮಟ್ಟದಲ್ಲಿ ಈ ಸಿನಿಮಾವನ್ನು ಬಿಡುಗಡೆ ಮಾಡಲಾಗಿಲ್ಲ. ಇದೇ ಕಾರಣಕ್ಕೆ ‘ಫೈಟರ್’ ಸಿನಿಮಾದ ಕಲೆಕ್ಷನ್ ತುಸು ತಗ್ಗಿದಂತೆ ಕಾಣುತ್ತಿದೆ. ಆದರೆ ಹಿಂದಿ ಭಾಗಗಳಲ್ಲಿ ಸಿನಿಮಾಕ್ಕೆ ಬಹಳ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮುಂದಿನ ಸಿನಿಮಾಗಳಲ್ಲಿ ಈ ಭಾಗಗಳಲ್ಲಿ ಗಳಿಕೆ ಹೆಚ್ಚುವ ನಿರೀಕ್ಷೆ ಇದೆ. ಮೊದಲ ದಿನದ ಕಲೆಕ್ಷನ್​ಗಿಂತಲೂ ಹೆಚ್ಚಿನ ಕಲೆಕ್ಷನ್ ವೀಕೆಂಡ್​ನಲ್ಲಿ ಆಗಲಿದೆ ಎಂಬ ಅಂದಾಜಿದೆ.

‘ಫೈಟರ್’ ಸಿನಿಮಾವನ್ನು ಗಲ್ಫ್ ದೇಶಗಳಲ್ಲಿ (ಯುಎಇ ಹೊರತುಪಡಿಸಿ) ನಿಷೇಧ ಮಾಡಲಾಗಿದ್ದು, ಅಲ್ಲಿ ಈ ಸಿನಿಮಾ ಬಿಡುಗಡೆ ಮಾಡಲಾಗಿಲ್ಲ. ಇದು ಸಹ ಸಿನಿಮಾದ ಕಲೆಕ್ಷನ್ ಮೇಲೆ ಪರಿಣಾಮ ಬೀರಲಿದೆ. ‘ಜವಾನ್’ ಸಿನಿಮಾ ಗಲ್ಫ್ ದೇಶಗಳಲ್ಲಿಯೇ ಸುಮಾರು 100 ಕೋಟಿ ಗಳಿಕೆ ಮಾಡಿತ್ತು. ಒಂದೊಮ್ಮೆ ಬಿಡುಗಡೆ ಆಗಿದ್ದರೆ ‘ಫೈಟರ್’ ಸಿನಿಮಾ ಸುಮಾರು 30-40 ಕೋಟಿ ಹಣವನ್ನಾದರೂ ಗಲ್ಫ್ ದೇಶಗಳಿಂದ ಗಳಿಸುತ್ತಿತ್ತು, ಆದರೆ ಗಲ್ಫ್ ದೇಶಗಳಲ್ಲಿ ಸಿನಿಮಾಕ್ಕೆ ನಿಷೇಧ ಹೇರಲಾಗಿದೆ. ನೆರೆ ರಾಷ್ಟ್ರದ ವಿರುದ್ಧ ದ್ವೇಷ ಹರಡಿಸುವ ಸಂಭಾಷಣೆ ಈ ಸಿನಿಮಾದಲ್ಲಿ ಇರುವ ಕಾರಣದಿಂದ ಸಿನಿಮಾವನ್ನು ಗಲ್ಫ್ ದೇಶಗಳಲ್ಲಿ ನಿಷೇಧ ಮಾಡಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:38 pm, Fri, 26 January 24

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್