ಸಲ್ಮಾನ್ ಖಾನ್ ಒಂದಲ್ಲ ಎಂಟು ನೈಟ್​ ಸ್ಟ್ಯಾಂಡ್ ಮಾಡಿದ್ದರು ಎಂದ ಮಾಜಿ ಗೆಳತಿ

ಸಲ್ಮಾನ್ ಖಾನ್ ದೈಹಿಕವಾಗಿ ತೊಂದರೆ ಮಾಡಿದ್ದರೇ ಎಂದು ಕೇಳಲಾಯಿತು. ಇದಕ್ಕೆ ಅವರು ಉತ್ತರ ನೀಡಿದ್ದಾರೆ. ಹೌದು ಎನ್ನುವ ಉತ್ತರ ಅವರ ಕಡೆಯಿಂದ ಬಂದಿದೆ. ಸದ್ಯ ಅವರ ಹೇಳಿಕೆ ಸಂಚಲನ ಸೃಷ್ಟಿ ಮಾಡಿದೆ.

ಸಲ್ಮಾನ್ ಖಾನ್ ಒಂದಲ್ಲ ಎಂಟು ನೈಟ್​ ಸ್ಟ್ಯಾಂಡ್ ಮಾಡಿದ್ದರು ಎಂದ ಮಾಜಿ ಗೆಳತಿ
ಸೋಮಿ-ಸಲ್ಲು
Follow us
ರಾಜೇಶ್ ದುಗ್ಗುಮನೆ
|

Updated on: Nov 05, 2024 | 2:44 PM

ನಟ ಸಲ್ಮಾನ್ ಖಾನ್ ಅವರು ವೈಯಕ್ತಿಕ ಜೀವನದ ವಿಚಾರದಿಂದ ಯಾವಾಗಲೂ ಸುದ್ದಿ ಆಗುತ್ತಾ ಇರುತ್ತಾರೆ. ಇವರು ಅನೇಕರ ಜೊತೆ ಸಂಬಂಧ ಹೊಂದಿದ್ದರು. ಆದರೆ, ಅವರು ಎಂದಿಗೂ ಮದುವೆ ಆಗಿಲ್ಲ. ಅವರು ಈಗ ಮಾಜಿ ಗೆಳತಿ ಸೋಮಿ ಅಲಿ ಅವರು ದೈಹಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಸಲ್ಮಾನ್ ಮತ್ತು ಸೋಮಿ ಅಲಿ 1990ರಲ್ಲಿ ಪರಸ್ಪರ ಡೇಟಿಂಗ್ ಮಾಡುತ್ತಿದ್ದರು. ಈಗ ಸೋಮಿ ಸಲ್ಮಾನ್ ವಿರುದ್ಧ ಸಾಕಷ್ಟು ಆರೋಪ ಮಾಡಿದ್ದಾರೆ. ತಮಗೆ ಕಿರುಕುಳ ಆಗಿತ್ತು ಎಂದು ಅವರು ಹೇಳಿದ್ದರು.

ಯಾವ ಕಾರಣಕ್ಕೆ ಸಲ್ಮಾನ್ ಖಾನ್ ಅವರಿಂದ ದೂರವಾದಿರಿ ಎಂದು ಸೋಮಿ ಅಲಿಗೆ ಕೇಳಲಾಗಿದೆ. ಇದಕ್ಕೆ ಅವರು ಉತ್ತರ ನೀಡಿದ್ದಾರೆ. ಇದರ ಹಿಂದೆ ಒಂದು ಮಹತ್ವದ ಕಾರಣ ಇದೆ ಎಂದಿದ್ದಾರೆ. ‘ಸಲ್ಮಾನ್‌ ಖಾನ್ ಅವರ ಒಂದಲ್ಲ ಎಂಟು ನೈಟ್ ಸ್ಟ್ಯಾಂಡ್‌ಗಳಿಂದ ಅಸಹ್ಯಗೊಂಡಿದ್ದೇನೆ. ಅದರೊಂದಿಗೆ ಅವರು ಪ್ರತಿದಿನ ನನ್ನನ್ನು ನಿಂದಿಸುತ್ತಿದ್ದರು ಮತ್ತು ಹೊಡೆಯುತ್ತಿದ್ದರು’ ಎಂದು ಹೇಳಿದ್ದಾರೆ.

ಸಲ್ಮಾನ್ ಖಾನ್ ದೈಹಿಕವಾಗಿ ತೊಂದರೆ ಮಾಡಿದ್ದರೇ ಎಂದು ಕೇಳಲಾಯಿತು. ಇದಕ್ಕೆ ಅವರು ಉತ್ತರ ನೀಡಿದ್ದಾರೆ. ಹೌದು ಎನ್ನುವ ಉತ್ತರ ಅವರ ಕಡೆಯಿಂದ ಬಂದಿದೆ. ಸದ್ಯ ಅವರ ಹೇಳಿಕೆ ಸಂಚಲನ ಸೃಷ್ಟಿ ಮಾಡಿದೆ.

ಸಲ್ಮಾನ್ ಖಾನ್ ಅವರು ಐಶ್ವರ್ಯಾ ಜೊತೆ ಡೇಟಿಂಗ್ ಮಾಡಿದ್ದರು. ಐಶ್ವರ್ಯಾ ಬಗ್ಗೆ ಸೋಮಿ ಅಲಿಗೆ ಕೇಳಲಾಗಿದೆ. ‘ಐಶ್ವರ್ಯಾ ತುಂಬಾ ಒಳ್ಳೆಯವರು. ಸಲ್ಮಾನ್ ಜೊತೆ ರಿಲೇಶನ್​ಶಿಪ್​ನಲ್ಲಿದ್ದಾಗ ಅವರಿಗೆ ಏನಾಯಿತು ಎಂಬ ಬಗ್ಗೆ ನನಗೆ ತುಂಬಾ ವಿಷಾದವಿದೆ’ ಎಂದಿದ್ದಾರೆ ಸೋಮಿ.

ಇದನ್ನೂ ಓದಿ:  ‘ಡ್ರಗ್ಸ್​, ವೇಶ್ಯಾವಾಟಿಕೆ ಎಂದಿಗೂ ನಾಶ ಆಗಲ್ಲ’; ಆರ್ಯನ್​ ಪರ ಮಾತಾಡಿದ ಸಲ್ಮಾನ್​ ಮಾಜಿ ಪ್ರೇಯಸಿ ಸೋಮಿ ಅಲಿ

ಸೋಮಿ ಅಲಿ ಸುಮಾರು ಎಂಟು ವರ್ಷಗಳಿಂದ ಸಲ್ಮಾನ್ ಖಾನ್ ಜೊತೆ ಡೇಟಿಂಗ್ ನಡೆಸುತ್ತಿದ್ದರು. ಸಲ್ಮಾನ್ ಮತ್ತು ಸೋಮಿ ಅವರ ಸಂಬಂಧವೂ ವಿವಿಧ ಕಾರಣಗಳಿಗಾಗಿ ಸುದ್ದಿಯಲ್ಲಿದ್ದರು. ಬ್ರೇಕಪ್ ನಂತರ ಸೋಮಿ ಸಲ್ಮಾನ್ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಿದ್ದರು. ಅಲ್ಲದೇ ನನಗೆ ಚಿತ್ರಹಿಂಸೆ ನೀಡಿದ್ದಾರೆ ಎಂದು ಸೋಮಿ ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ