AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಮಂತ್ರಿಸಿದರೆ ಹೋಗಿ ಆಶೀರ್ವದಿಸುತ್ತೇವೆ’; ಝಹೀರ್-ಸೋನಾಕ್ಷಿ ಮದುವೆ ಬಗ್ಗೆ ಶತ್ರುಘ್ನ ಸಿನ್ಹಾ ಮಾತು

‘ಎಲ್ಲರೂ ನನಗೆ ಕರೆ ಮಾಡಿ ಮದುವೆ ಬಗ್ಗೆ ಕೇಳಿದರು. ಮಾಧ್ಯಮದವರಿಗೆ ಈ ಬಗ್ಗೆ ಗೊತ್ತು, ಆದರೆ ನನಗೆ ಈ ಬಗ್ಗೆ ಗೊತ್ತಿಲ್ಲ. ನಮಗೆ ಅವಳು ಮಾಹಿತಿ ನೀಡಲಿ ಎಂದು ಕಾಯುತ್ತಿದ್ದೇನೆ’ ಎಂದಿದ್ದಾರೆ ಶತ್ರುಘ್ನ. ಈ ಮೂಲಕ ಈ ವಿಚಾರದಲ್ಲಿ ಅಡ್ಡಗೋಡೇ ಮೇಲೆ ದೀಪ ಇಟ್ಟಿದ್ದಾರೆ.

‘ಆಮಂತ್ರಿಸಿದರೆ ಹೋಗಿ ಆಶೀರ್ವದಿಸುತ್ತೇವೆ’; ಝಹೀರ್-ಸೋನಾಕ್ಷಿ ಮದುವೆ ಬಗ್ಗೆ ಶತ್ರುಘ್ನ ಸಿನ್ಹಾ ಮಾತು
ಝಹೀರ್-ಸೋನಾಕ್ಷಿ ಮದುವೆ ಬಗ್ಗೆ ಶತ್ರುಘ್ನ ಸಿನ್ಹಾ ಮಾತು
ರಾಜೇಶ್ ದುಗ್ಗುಮನೆ
|

Updated on: Jun 11, 2024 | 8:53 AM

Share

ಝಹೀರ್ ಇಖ್ಬಾಲ್ ಹಾಗೂ ಸೋನಾಕ್ಷಿ ಸಿನ್ಹಾ (Sonakshi Sinha) ಮದುವೆ ಆಗುತ್ತಾರೆ ಎನ್ನುವ ಸುದ್ದಿ ಇತ್ತೀಚೆಗೆ ಹರಿದಾಡಿದೆ. ಜೂನ್ 23ರಂದು ಮುಂಬೈನಲ್ಲಿ ಇವರ ವಿವಾಹ ಏರ್ಪಡುತ್ತಿದೆ ಎಂದು ವರದಿ ಆಗಿದೆ. ಈ ಮದುವೆ ಕುರಿತು ನಟ, ರಾಜಕಾರಣಿ ಹಾಗೂ ಸೋನಾಕ್ಷಿ ತಂದೆ ಶತ್ರುಘ್ನ ಸಿನ್ಹಾ ಬಳಿ ಕೇಳಲಾಗಿದೆ. ಮದುವೆ ಬಗ್ಗೆ ಅಸಮಾಧಾನ ಇರುವಂತೆ ಉತ್ತರ ನೀಡಿದ್ದಾರೆ. ‘ಸೋನಾಕ್ಷಿ ನನ್ನ ಬಳಿ ಈ ಬಗ್ಗೆ ಏನನ್ನೂ ಹೇಳಿಲ್ಲ. ಇಂದಿನ ಕಾಲದ ಮಕ್ಕಳು ಮದುವೆಗೆ ಒಪ್ಪಿಗೆ ಕೇಳುವುದಿಲ್ಲ. ಬದಲಿಗೆ ತಮ್ಮ ನಿರ್ಧಾರದ ಬಗ್ಗೆ ಕುಟುಂಬದವರಿಗೆ ಮಾಹಿತಿ ನೀಡುತ್ತಾರೆ’ ಎಂದಿದ್ದಾರೆ ಶತ್ರುಘ್ನ ಸಿನ್ಹಾ.

‘ನಾನೀಗ ದೆಹಲಿಯಲ್ಲಿದ್ದೇನೆ. ಚುನಾವಣಾ ಫಲಿತಾಂಶದ ನಂತರ ನಾನು ಇಲ್ಲಿಗೆ ಬಂದೆ. ನನ್ನ ಮಗಳ ಬಗ್ಗೆ, ಅವಳ ಯೋಜನೆಗಳ ಬಗ್ಗೆ ನಾನು ಯಾರೊಂದಿಗೂ ಮಾತನಾಡಿಲ್ಲ. ಅವಳು ಮದುವೆ ಬಗ್ಗೆ ನನಗೆ ಏನನ್ನೂ ಹೇಳಿಲ್ಲ. ಮಾಧ್ಯಮದಲ್ಲಿ ಏನು ವರದಿ ಆಗಿದೆಯೋ ನನಗೂ ಅಷ್ಟೇ ತಿಳಿದಿದೆ. ಅವಳು ನಮಗೆ ಆಮಂತ್ರಣ ನೀಡಿದರೆ ನಾನು ಮತ್ತು ನನ್ನ ಹೆಂಡತಿ ಹೋಗಿ ಆಶೀರ್ವಾದ ಮಾಡುತ್ತೇವೆ. ಅವಳ ಸಂತೋಷವನ್ನು ನಾವು ಬಯಸುತ್ತೇವೆ’ ಎಂದು ಶತ್ರುಘ್ನ ಸಿನ್ಹಾ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

‘ನಮ್ಮ ಮಗಳ ನಿರ್ಧಾರದ ಬಗ್ಗೆ ನಮಗೆ ನಂಬಿಕೆ ಇದೆ. ಅವಳು ಎಂದಿಗೂ ಸಂವಿಧಾನೇತರ ಅಥವಾ ಕಾನೂನುಬಾಹಿರ ನಿರ್ಧಾರವನ್ನು ತೆಗೆದುಕೊಳ್ಳುವುದಿಲ್ಲ. ಅವಳು ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳುವ ಹಕ್ಕನ್ನು ಹೊಂದಿದ್ದಾಳೆ. ನನ್ನ ಮಗಳ ಮದುವೆಯಲ್ಲಿ ಡ್ಯಾನ್ಸ್ ಮಾಡೋಕೆ ನಾನು ಇಷ್ಟಪಡುತ್ತೇನೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ಝಹೀರ್ ಇಖ್ಬಾಲ್ ಜೊತೆ ಜೂನ್ 23ಕ್ಕೆ ಸೋನಾಕ್ಷಿ ಮದುವೆ; ಸಲ್ಲು ಗೆಳೆಯನ ಜೊತೆ ವಿವಾಹ

‘ಎಲ್ಲರೂ ನನಗೆ ಕರೆ ಮಾಡಿ ಮದುವೆ ಬಗ್ಗೆ ಕೇಳಿದರು. ಮಾಧ್ಯಮದವರಿಗೆ ಈ ಬಗ್ಗೆ ಗೊತ್ತು, ಆದರೆ ನನಗೆ ಈ ಬಗ್ಗೆ ಗೊತ್ತಿಲ್ಲ. ನಮಗೆ ಅವಳು ಮಾಹಿತಿ ನೀಡಲಿ ಎಂದು ಕಾಯುತ್ತಿದ್ದೇನೆ’ ಎಂದಿದ್ದಾರೆ ಶತ್ರುಘ್ನ. ಈ ಮೂಲಕ ಈ ವಿಚಾರದಲ್ಲಿ ಅಡ್ಡಗೋಡೇ ಮೇಲೆ ದೀಪ ಇಟ್ಟಿದ್ದಾರೆ. ಅವರಿಗೆ ನಿಜಕ್ಕೂ ಈ ಬಗ್ಗೆ ತಿಳಿದಿಲ್ಲವೇ ಅಥವಾ ಮದುವೆಗೆ ಸಮ್ಮತಿ ಇಲ್ಲವೇ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ