‘ಅವರು ಬಟ್ಟೆ ತೆಗೆಯಲಿ ಎಂದು ಯಾವಾಗಲೂ ಬಯಸಿಲ್ಲ’; ಮಾಸ್ಕ್ ಧರಿಸಿ ಹೇಳಿದ ಶಿಲ್ಪಾ ಪತಿ

 ಕಪ್ಪು ಬಣ್ಣದ ಜಂಪ್​ಸ್ಯೂಟ್ ಹಾಕಿ ಶೋಗೆ ಬಂದಿದ್ದಾರೆ ರಾಜ್​ ಕುಂದ್ರಾ. ಅವರು ಮುಖಕ್ಕೆ ಮಾಸ್ಕ್​ ಧರಿಸಿದ್ದರು. ಅವರ ಜೊತೆ ಸಾಕಷ್ಟು ಬಾಡಿಗಾರ್ಡ್ಸ್ ಇದ್ದರು. ಮುಖಕ್ಕೆ ಮಾಸ್ಕ್ ಹಾಕಿದ್ದರಿಂದ ತಮ್ಮನ್ನು ತಾವು ಅವರು ಪರಿಚಯಿಸಿಕೊಂಡರು.

‘ಅವರು ಬಟ್ಟೆ ತೆಗೆಯಲಿ ಎಂದು ಯಾವಾಗಲೂ ಬಯಸಿಲ್ಲ’; ಮಾಸ್ಕ್ ಧರಿಸಿ ಹೇಳಿದ ಶಿಲ್ಪಾ ಪತಿ
ಶಿಲ್ಪಾ-ರಾಜ್ ಕುಂದ್ರಾ
Follow us
ರಾಜೇಶ್ ದುಗ್ಗುಮನೆ
|

Updated on:Oct 05, 2023 | 10:53 AM

ನಟಿ ಶಿಲ್ಪಾ ಶೆಟ್ಟಿ (Shilpa Shetty)  ಪತಿ, ಉದ್ಯಮಿ ರಾಜ್ ಕುಂದ್ರಾ ಇತ್ತೀಚೆಗೆ ಸಾರ್ವಜನಿಕವಾಗಿ ಎಲ್ಲೇ ಕಾಣಿಸಿಕೊಂಡರೂ ಮುಖ ಕಾಣದಂತೆ ಮಾಸ್ಕ್ ಧರಿಸಿರುತ್ತಾರೆ. ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ಅರೆಸ್ಟ್ ಆದ ಬಳಿಕ ಅವರು ಈ ರೀತಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರು ಈಗ ಸ್ಟಾಂಡಪ್​ ಕಾಮಿಡಿ ಶುರು ಮಾಡಿಕೊಂಡಿದ್ದಾರೆ. ಈ ವಿಡಿಯೋದ ತುಣುಕನ್ನು ಅವರು ಹಂಚಿಕೊಂಡಿದ್ದಾರೆ. ಈ ವೇಳೆ ಅವರು ಮಾಸ್ಕ್ ಧರಿಸಿದ್ದರು ಅನ್ನೋದು ವಿಶೇಷ.

ಕಪ್ಪು ಬಣ್ಣದ ಜಂಪ್​ಸ್ಯೂಟ್ ಹಾಕಿ ಶೋಗೆ ಬಂದಿದ್ದಾರೆ ರಾಜ್​ ಕುಂದ್ರಾ. ಅವರು ಮುಖಕ್ಕೆ ಮಾಸ್ಕ್​ ಧರಿಸಿದ್ದರು. ಅವರ ಜೊತೆ ಸಾಕಷ್ಟು ಬಾಡಿಗಾರ್ಡ್ಸ್ ಇದ್ದರು. ಮುಖಕ್ಕೆ ಮಾಸ್ಕ್ ಹಾಕಿದ್ದರಿಂದ ತಮ್ಮನ್ನು ತಾವು ಅವರು ಪರಿಚಯಿಸಿಕೊಂಡರು. ‘ನಾನು ರಾಜ್​ ಕುಂದ್ರಾ. ಮಾಸ್ಕ್​ ಮ್ಯಾನ್ ಎಂದೇ ಫೇಮಸ್. ಶಿಲ್ಪಾ ಶೆಟ್ಟಿ ಪತಿ ಅಂತಲೂ ಜನಪ್ರಿಯತೆ ಪಡೆದಿದ್ದೇನೆ’ ಎಂದಿದ್ದಾರೆ ರಾಜ್​ ಕುಂದ್ರಾ.

ವೇದಿಕೆ ಏರಿದ ತಕ್ಷಣ ಅವರು ವಿಷಯಕ್ಕೆ ಬಂದಿದ್ದಾರೆ. ‘ನಾನು ಸೆಕ್ಸ್ ಜೋಕ್ ಹೇಳುತ್ತೇನೆ. ಯಾರಿಗಾದರೂ ಸರಿ ಎನಿಸಿಲ್ಲ ಎಂದರೆ 10 ನಿಮಿಷ ಹೊರಗೆ ಇರಬಹುದು’ ಎಂದರು. ಆದರೆ ಯಾರೊಬ್ಬರೂ ಹೊರಗೆ ಹೋಗಲೇ ಇಲ್ಲ. ಇದಕ್ಕೆ ರಾಜ್ ಕುಂದ್ರಾ ‘ನೀವೆಲ್ಲ ವಿಕೃತರು’ ಎಂದು ನಕ್ಕರು. ಆ ಬಳಿಕ ಅವರು ಅಶ್ಲೀಲ ಸಿನಿಮಾ ನಿರ್ಮಾಣದ ವಿಚಾರವಾಗಿ ಪರೋಕ್ಷವಾಗಿ ಮಾತನಾಡಿದರು.

‘18ನೇ ವಯಸ್ಸಿಗೆ ಲಂಡನ್​ನಲ್ಲಿ ಟ್ಯಾಕ್ಸಿ ಓಡಿಸಲು ಆರಂಭಿಸಿದೆ. 21ನೇ ವಯಸ್ಸಿಗೆ ಸಾಮ್ರಾಜ್ಯ ಸ್ಥಾಪಿಸಿದೆ. ನಾನು ಯಾವಾಗಲೂ ಜನರು ಬಟ್ಟೆ ಧರಿಸಲಿ ಎಂದು ಬಯಸುತ್ತಿದ್ದೆ, ಅದನ್ನು ತೆಗೆಯಲು ಅಲ್ಲ’ ಎಂದು ರಾಜ್​ ಕುಂದ್ರಾ ಹೇಳಿದ್ದಾರೆ. ಈ ಹೇಳಿಕೆಯನ್ನು ಬೇರೆ ಬೇರೆ ರೀತಿಯಲ್ಲಿ ಅರ್ಥೈಸಲಾಗುತ್ತಿದೆ. ಇದು ಅಶ್ಲೀಲ ಸಿನಿಮಾ ನಿರ್ಮಾಣದ ಪ್ರಕರಣದ ಕುರಿತು ಹೇಳಿದ ಮಾತು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

View this post on Instagram

A post shared by Raj Kundra (@onlyrajkundra)

ಇದನ್ನೂ ಓದಿ: ಅಶ್ಲೀಲ ವೀಡಿಯೋ ಹಂಚಿಕೆ ಪ್ರಕರಣ, ರಾಜ್ ಕುಂದ್ರಾಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ ಸುಪ್ರೀಂ

ರಾಜ್ ಕುಂದ್ರಾ ಮಾಸ್ಕ್ ಧರಿಸುವ ವಿಚಾರವನ್ನು ಅನೇಕರು ಟೀಕೆ ಮಾಡುತ್ತಿದ್ದಾರೆ. ‘ಧೈರ್ಯವಿದ್ದರೆ ಮಾಸ್ಕ್ ತೆಗೆದು ಬನ್ನಿ’ ಎಂದು ಅವರಿಗೆ ಸವಾಲು ಹಾಕಿದ್ದಾರೆ. ಇದಕ್ಕೆ ಅವರು ಹೆಚ್ಚು ತಲೆಕೆಡಿಸಿಕೊಂಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:51 am, Thu, 5 October 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ