Shah Rukh Khan: ಒಳ್ಳೆಯ ಕಂಬ್ಯಾಕ್ ಎಂದವರಿಗೆ ಶಾರುಖ್ ಖಾನ್ ಕೊಟ್ರು ಸಲಹೆ

ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾ ವಿಶ್ವ ಮಟ್ಟದಲ್ಲಿ ಎರಡೇ ದಿನಕ್ಕೆ 200+ ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಇದು ಹಿಂದಿ ಚಿತ್ರರಂಗದ ಪಾಲಿಗೆ ನಿಜಕ್ಕೂ ವಿಶೇಷ.

Shah Rukh Khan: ಒಳ್ಳೆಯ ಕಂಬ್ಯಾಕ್ ಎಂದವರಿಗೆ ಶಾರುಖ್ ಖಾನ್ ಕೊಟ್ರು ಸಲಹೆ
ಪಠಾಣ್ ಚಿತ್ರದಲ್ಲಿ ಶಾರುಖ್ ಖಾನ್
Follow us
ರಾಜೇಶ್ ದುಗ್ಗುಮನೆ
|

Updated on: Jan 28, 2023 | 7:06 AM

ಶಾರುಖ್ ಖಾನ್ (Shah Rukh Khan) ಅವರು ಒಂದೊಳ್ಳೆಯ ಕಂಬ್ಯಾಕ್ ಮಾಡಿದ್ದಾರೆ. ನಾಲ್ಕು ವರ್ಷಗಳ ಕಾಲ ಸೈಲೆಂಟ್ ಆಗಿದ್ದ ಅವರು ಈಗ ಬಾಕ್ಸ್ ಆಫೀಸ್​ನಲ್ಲಿ ‘ಪಠಾಣ್​’ ಚಿತ್ರದ ಮೂಲಕ ಅಬ್ಬರಿಸಿದ್ದಾರೆ. ಚಿತ್ರದ ಅಬ್ಬರ ನೋಡಿ ಎಲ್ಲರೂ ಅಚ್ಚರಿಗೊಂಡಿದ್ದಾರೆ. ಮೊದಲ ದಿನ ಭಾರತದ ಬಾಕ್ಸ್ ಆಫೀಸ್​ನಲ್ಲಿ 55 ಕೋಟಿ ರೂಪಾಯಿ ಗಳಿಕೆ ಮಾಡಿದ್ದ ಈ ಚಿತ್ರ ಎರಡನೇ ದಿನ 68 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಭಾರತದ ಚಿತ್ರವೊಂದು ಹಿಂದಿ ಭಾಷೆಯಲ್ಲಿ ಮೊದಲ ದಿನ ಇಷ್ಟು ದೊಡ್ಡ ಮೊತ್ತದ ಗಳಿಕೆ ಮಾಡಿದ್ದು ಇದೇ ಮೊದಲು. ಈ ಮೂಲಕ ‘ಪಠಾಣ್​’ ಸಿನಿಮಾ (Pathan Movie) ದಾಖಲೆಗಳನ್ನು ನಾಶ ಮಾಡುತ್ತಿದೆ. ಶಾರುಖ್ ಖಾನ್ ಅವರು ಕಂಬ್ಯಾಕ್​ಗೆ ಒಂದೊಳ್ಳೆಯ ಪ್ರಾಜೆಕ್ಟ್​​ನ ಆಯ್ಕೆ ಮಾಡಿಕೊಂಡಿದ್ದಾರೆ ಎಂಬ ಅಭಿಪ್ರಾಯ ಎಲ್ಲ ಕಡೆಗಳಿಂದ ವ್ಯಕ್ತವಾಗಿದೆ. ಈ ವಿಚಾರವಾಗಿ ಶಾರುಖ್ ಖಾನ್ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ.

1997ರಲ್ಲಿ ಬಂದ ಸೈನ್ಸ್​ ಫಿಕ್ಷನ್ ಸಿನಿಮಾ ‘ಗಟ್ಟಾಕ’ ಹೆಸರಿನ ಚಿತ್ರವನ್ನು ಅವರು ಉಲ್ಲೇಖ ಮಾಡಿದ್ದಾರೆ. ‘ಹಿಂದಕ್ಕೆ ಹೋಗೋಕೆ ಯಾವ ಆಸಕ್ತಿಯೂ ಉಳಿದಿಲ್ಲ’ ಎಂದು ಶಾರುಖ್ ಖಾನ್ ಖಾನ್ ಹೇಳಿದ್ದಾರೆ.

‘ಪಠಾಣ್​’ ಸಿನಿಮಾ ಯಶಸ್ಸಿನ ಬಗ್ಗೆ ಬರೆದುಕೊಂಡಿರುವ ಶಾರುಖ್ ಖಾನ್, ‘ಹಿಂದಕ್ಕೆ ಹೋಗಲು ಯಾವ ಆಸಕ್ತಿಯೂ ಉಳಿದಿಲ್ಲ. ನನ್ನ ಪ್ರಕಾರ ಜೀವನ ಯಾವಾಗಲೂ ಹಾಗೆಯೇ. ಜೀವನದಲ್ಲಿ ನೀವು ಹಿಂದೆ ಹೋಗುವ ಬಗ್ಗೆ ಆಲೋಚಿಸಲು ನೀವು ಉದ್ದೇಶಿಸುವುದಿಲ್ಲ. ನೀವು ಮುಂದೆ ಸಾಗಬೇಕು. ನೀವು ಏನನ್ನು ಆರಂಭಿಸಿದ್ದೀರೋ ಅದನ್ನು ಪೂರ್ಣಗೊಳಿಸಬೇಕು. ಕೇವಲ 57 ವರ್ಷದವರ ಸಲಹೆಗಳು’ ಎಂದು ಶಾರುಖ್ ಖಾನ್ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Shah Rukh Khan: ಎರಡು ದಿನಕ್ಕೆ ವಿಶ್ವಾದ್ಯಂತ 219 ಕೋಟಿ ರೂ. ಗಳಿಸಿದ ‘ಪಠಾಣ್​’; ಶಾರುಖ್​ ಚಿತ್ರಕ್ಕೆ ಜಯಭೇರಿ

ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾ ವಿಶ್ವ ಮಟ್ಟದಲ್ಲಿ ಎರಡೇ ದಿನಕ್ಕೆ 200+ ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಇದು ಹಿಂದಿ ಚಿತ್ರರಂಗದ ಪಾಲಿಗೆ ನಿಜಕ್ಕೂ ವಿಶೇಷ. ಕಲೆಕ್ಷನ್ ಇಲ್ಲದೆ ಸೊರಗಿದ್ದ ಬಾಲಿವುಡ್​ಗೆ ಹೊಸ ಬೂಸ್ಟ್ ಸಿಕ್ಕಂತೆ ಆಗಿದೆ. ಮುಂದಿನ ಮೂರು ದಿನಗಳಲ್ಲಿ ಸಿನಿಮಾ ಎಷ್ಟು ಕೋಟಿ ಕಲೆಕ್ಷನ್ ಮಾಡಲಿದೆ ಎನ್ನುವ ಕುತೂಹಲ ಮೂಡಿದೆ. ಈ ಚಿತ್ರದ ಅಬ್ಬರ ಹೀಗೆಯೇ ಮುಂದುವರಿದರೆ ಅನಾಯಸವಾಗಿ ಚಿತ್ರದ ಕಲೆಕ್ಷನ್ 300 ಕೋಟಿ ರೂಪಾಯಿ ದಾಟಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ