‘ನಾನು ವಿವಾದಾತ್ಮಕ ಫೋಟೋ ಅಪ್​ಲೋಡ್ ಮಾಡಿಲ್ಲ’; ಪೊಲೀಸರ ಎದುರು ರಣವೀರ್ ಸಿಂಗ್ ಹೇಳಿಕೆ

ಮುಂಜಾನೆ 7 ಗಂಟೆಗೆ ರಣವೀರ್ ಪೊಲೀಸ್ ಠಾಣೆಗೆ ತೆರಳಿದ್ದಾರೆ. 2 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದಾರೆ. ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸೂಚಿಸಿದ್ದಾರೆ ಎಂದು ವರದಿ ಆಗಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಸಿಗಬೇಕಿದೆ.

‘ನಾನು ವಿವಾದಾತ್ಮಕ ಫೋಟೋ ಅಪ್​ಲೋಡ್ ಮಾಡಿಲ್ಲ’; ಪೊಲೀಸರ ಎದುರು ರಣವೀರ್ ಸಿಂಗ್ ಹೇಳಿಕೆ
ರಣವೀರ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Aug 30, 2022 | 2:33 PM

ರಣವೀರ್ ಸಿಂಗ್ (Ranveer Singh) ಅವರ ಸಿನಿಮಾಗಳು ಇತ್ತೀಚೆಗೆ ಹೇಳಿಕೊಳ್ಳುವಂತಹ ಯಶಸ್ಸು ಪಡೆದಿಲ್ಲ. ಆದರೆ, ಅವರು ವೈಯಕ್ತಿಕ ವಿಚಾರಗಳಿಂದ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಅವರು ಅಪ್​ಲೋಡ್ ಮಾಡಿದ್ದ ಬೆತ್ತಲೆ ಫೋಟೋ ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ರಣವೀರ್ ಸಿಂಗ್ ಅವರು ಮುಂಬೈ ಪೊಲೀಸರ (Mumbai Police) ಎದುರು ಹೇಳಿಕೆ ನೀಡಿದ್ದಾರೆ. ಆ ಫೋಟೋಗಳಿಂದ ಅಷ್ಟೊಂದು ಸಮಸ್ಯೆ ಉಂಟಾಗುತ್ತದೆ ಎಂಬುದು ಗೊತ್ತಿರಲಿಲ್ಲ ಎಂಬ ಮಾತನ್ನು ರಣವೀರ್ ಸಿಂಗ್ ಹೇಳಿದ್ದಾರೆ.

ಕೆಲ ದಿನಗಳ ಹಿಂದೆ ಪ್ರತಿಷ್ಠಿತ ಪೇಪರ್ ಮ್ಯಾಗಜಿನ್​ಗಾಗಿ ರಣವೀರ್ ಸಿಂಗ್ ಬೆತ್ತಲೆ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿದ್ದರು. ಇದು ಸಾಕಷ್ಟು ಸೆನ್ಸೇಷನ್ ಕ್ರಿಯೇಟ್ ಮಾಡಿತ್ತು. ಒಂದು ವರ್ಗದ ಜನರು ರಣವೀರ್ ಸಿಂಗ್ ಅವರನ್ನು ಹೊಗಳಿದರೆ ಮತ್ತೊಂದು ವರ್ಗದವರು ರಣವೀರ್ ಸಿಂಗ್ ಅವರನ್ನು ತೆಗಳಿದ್ದರು. ಈ ಸಂಬಂಧ ಕೇಸ್ ಕೂಡ ದಾಖಲಾಗಿತ್ತು. ಆ ಬಳಿಕ ರಣವೀರ್ ಸಿಂಗ್ ಅವರಿಗೆ ನೋಟಿಸ್ ಜಾರಿ ಮಾಡಲಾಯಿತು.

ಆಗಸ್ಟ್​ 22ರಂದು ರಣವೀರ್ ಸಿಂಗ್ ಅವರು ವಿಚಾರಣೆಗೆ ಹಾಜರಿ ಹಾಕಬೇಕಿತ್ತು. ಆದರೆ, ಬೇರೆಬೇರೆ ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಇರುವುದರಿಂದ 10 ದಿನಗಳ ಹೆಚ್ಚಿನ ಕಾಲಾವಕಾಶ ಕೇಳಿದ್ದರು. ಸೋಮವಾರ (ಆಗಸ್ಟ್ 29) ರಣವೀರ್ ಸಿಂಗ್ ಅವರು ವಿಚಾರಣೆ ಎದುರಿಸಿದ್ದಾರೆ.

ಇದನ್ನೂ ಓದಿ
Image
Ranveer Singh: ಮತ್ತೆ ಬೆತ್ತಲಾಗುವಂತೆ ರಣವೀರ್​ ಸಿಂಗ್​ಗೆ ಬೇಡಿಕೆ; ಈ ಬಾರಿ ಆಹ್ವಾನ ಬಂದಿರೋದು ಪ್ರಾಣಿಗಳಿಗೋಸ್ಕರ
Image
Ranveer Singh: ಬೆತ್ತಲೆ ಫೋಟೋ ಹಂಚಿಕೊಂಡ ರಣವೀರ್​ ಸಿಂಗ್​ ವಿರುದ್ಧ ಕೇಸ್​ ದಾಖಲಿಸಿದ ಮುಂಬೈ ಪೊಲೀಸರು
Image
Alia Bhatt: ‘ರಣವೀರ್​ ಸಿಂಗ್​ ಜತೆ ಏನು ಬೇಕಾದ್ರೂ ಮಾತಾಡ್ತೀನಿ’; ಮದುವೆ ಬಳಿಕ ಆಲಿಯಾ ಭಟ್​ ಅಚ್ಚರಿಯ ಹೇಳಿಕೆ
Image
Ranveer Singh: ರಣವೀರ್​ ಸಿಂಗ್​ ಒಟ್ಟು ಆಸ್ತಿ ಎಷ್ಟು? 2 ಸಿನಿಮಾ ಸೋತ ಮಾತ್ರಕ್ಕೆ ಕರಗಿಲ್ಲ ಸ್ಟಾರ್​ ನಟನ ನೂರಾರು ಕೋಟಿ ಸಂಪತ್ತು

ಮುಂಜಾನೆ 7 ಗಂಟೆಗೆ ರಣವೀರ್ ಪೊಲೀಸ್ ಠಾಣೆಗೆ ತೆರಳಿದ್ದಾರೆ. 2 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದಾರೆ. ‘ನಾನು ವಿವಾದಾತ್ಮಕ ಫೋಟೋಗಳನ್ನು ಅಪ್​ಲೋಡ್ ಮಾಡಿಲ್ಲ. ಆ ಫೋಟೋಗಳು ಆ ರೀತಿಯ ಸಮಸ್ಯೆ ತರುತ್ತದೆ ಎಂದು ನಾನು ಯೋಚಿಸಿರಲಿಲ್ಲ’ ಎಂದು ರಣವೀರ್ ಸಿಂಗ್ ಅವರು ಪೊಲೀಸರ ಎದುರು ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ರಣವೀರ್​ಗೆ  ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸೂಚಿಸಿದ್ದಾರೆ ಎಂದು ವರದಿ ಆಗಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಸಿಗಬೇಕಿದೆ.

ಇದನ್ನೂ ಓದಿ: ನಗ್ನ ಫೋಟೋ ಕೇಸ್; ಪೊಲೀಸರ ಮುಂದೆ ವಿಚಾರಣೆಗೆ ಬರಲಾಗದೆ ಹೊಸ ವರಸೆ ತೋರಿದ ರಣವೀರ್​ ಸಿಂಗ್​

ರಣವೀರ್ ಸಿಂಗ್ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ರಣವೀರ್ ಸಿಂಗ್ ‘ಸರ್ಕಸ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಪೂಜಾ ಹೆಗ್ಡೆ ಮತ್ತು ಜಾಕ್ವೆಲಿನ್ ಫರ್ನಾಂಡಿಸ್ ಈ ಚಿತ್ರಕ್ಕೆ ನಾಯಕಿಯರು. ಕರಣ್ ಜೋಹರ್ ನಿರ್ದೇಶನದ ‘ರಾಕಿ ಔರ್​ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾದಲ್ಲೂ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ಆಲಿಯಾ ಭಟ್ ನಾಯಕಿ.

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್