‘ನಮ್ಮ ಸಂಸಾರ ಹಾಳಾಗಲು ಪ್ರೀತಿ ಜಿಂಟಾ ಕಾರಣ’; ನೇರವಾಗಿ ಆರೋಪ ಮಾಡಿದ ನಟಿ

ಸುಚಿತ್ರಾ ಮದುವೆಯ ನಂತರ ಸಿನಿಮಾ ಆಯ್ಕೆಯಲ್ಲಿ ಚ್ಯೂಸಿ ಆದರು. ವಿಚ್ಛೇದನ ಆಗಿ ಎರಡು ದಶಕ ಕಳೆಯುತ್ತಾ ಬಂದರೂ ಆ ಘಟನೆಯನ್ನು ಸುಚಿತ್ರಾ ಮರೆತಿಲ್ಲ.

‘ನಮ್ಮ ಸಂಸಾರ ಹಾಳಾಗಲು ಪ್ರೀತಿ ಜಿಂಟಾ ಕಾರಣ’; ನೇರವಾಗಿ ಆರೋಪ ಮಾಡಿದ ನಟಿ
ಪ್ರೀತಿ ಜಿಂಟಾ-ಸುಚಿತ್ರಾ-ಶೇಖರ್
Follow us
ರಾಜೇಶ್ ದುಗ್ಗುಮನೆ
|

Updated on:Jul 12, 2023 | 12:48 PM

ಗಾಯಕಿ, ನಟಿ ಸುಚಿತ್ರಾ ಕೃಷ್ಣಮೂರ್ತಿ ಹಾಗೂ ಬಾಲಿವುಡ್ ನಿರ್ದೇಶಕ ಶೇಖರ್ ಕಪೂರ್ (Shekhar Kapur) ಮದುವೆ ಆಗಿದ್ದರು. ಕೆಲವೇ ವರ್ಷ ಇದ್ದ ಇವರ ಸಂಬಂಧ ಆ ಬಳಿಕ ಮುರಿದು ಬಿತ್ತು. ಇದಕ್ಕೆ ನಟಿ ಪ್ರೀತಿ ಜಿಂಟಾ ಕಾರಣ ಅನ್ನೋದು ಸುಚಿತ್ರಾ  (Suchitra Krishnamoorthi) ಅವರ ಆರೋಪ. ಈ ಕಾರಣಕ್ಕೆ ಪ್ರೀತಿಯನ್ನು ಅವರು ಎಂದಿಗೂ ಕ್ಷಮಿಸುವುದಿಲ್ಲ ಎಂದು ನೇರವಾಗಿ ಹೇಳಿದ್ದಾರೆ. ಸಂದರ್ಶನ ಒಂದರಲ್ಲಿ ಈ ಮಾತನ್ನು ಸುಚಿತ್ರಾ ಹೇಳಿಕೊಂಡಿದ್ದಾರೆ. ಈ ಮೊದಲು ಕೂಡ ಸುಚಿತ್ರಾ ಇದೇ ರೀತಿಯ ಹೇಳಿಕೆ ನೀಡಿದ್ದರು.

ಸುಚಿತ್ರಾ ವಯಸ್ಸಿನಲ್ಲಿ ತಮಗಿಂತ 30 ವರ್ಷ ದೊಡ್ಡವರಾದ ಶೇಖರ್ ಕಪೂರ್ ಅವರನ್ನು ಪ್ರೀತಿಸುತ್ತಿದ್ದರು. 1997ರಲ್ಲಿ ಇವರ ಮದುವೆ ಜರುಗಿತು. ಈ ದಂಪತಿಗೆ ಹೆಣ್ಣು ಮಗು ಜನಿಸಿತು. ಇಬ್ಬರೂ 2006ರಲ್ಲಿ ವಿಚ್ಛೇದನ ಪಡೆದರು. ಮದುವೆಗೂ ಮುನ್ನ ಸಾಕಷ್ಟು ಬೇಡಿಕೆ ಹೊಂದಿದ್ದ ಸುಚಿತ್ರಾ ಮದುವೆಯ ನಂತರ ಸಿನಿಮಾ ಆಯ್ಕೆಯಲ್ಲಿ ಚ್ಯೂಸಿ ಆದರು. ವಿಚ್ಛೇದನ ಆಗಿ ಎರಡು ದಶಕ ಕಳೆಯುತ್ತಾ ಬಂದರೂ ಆ ಘಟನೆಯನ್ನು ಸುಚಿತ್ರಾ ಮರೆತಿಲ್ಲ.

ಇತ್ತೀಚಿನ ಸಂದರ್ಶನವೊಂದರಲ್ಲಿ ಸುಚಿತ್ರಾ ಮಾತನಾಡಿದ್ದಾರೆ. ‘ಶೇಖರ್ ಕಪೂರ್ ಪ್ರೀತಿಯಲ್ಲಿ ಪ್ರಾಮಾಣಿಕತೆ ಇರಲಿಲ್ಲ. ನಟಿ ಪ್ರೀತಿ ಜಿಂಟಾ ಅವರೊಂದಿಗೆ ಶೇಖರ್ ಕ್ಲೋಸ್ ಆಗಿದ್ದರು. ನಾನು ಪ್ರೀತಿಯನ್ನು ಎಂದಿಗೂ ಕ್ಷಮಿಸುವುದಿಲ್ಲ’ ಎಂದಿದ್ದಾರೆ. ಈ ಮೂಲಕ ಪ್ರೀತಿ ಜಿಂಟಾ ಅವರೇ ವಿಚ್ಛೇದನಕ್ಕೆ ಕಾರಣ ಎಂದು ಅವರು ಹೇಳಿದ್ದಾರೆ.

ಈ ಮೊದಲು ಕೂಡ ಸುಚಿತ್ರಾ ಇದೇ ರೀತಿಯ ಆರೋಪ ಮಾಡಿದ್ದರು. ಆದರೆ, ಪ್ರೀತಿ ಜಿಂಟಾ ಈ ಆರೋಪಗಳನ್ನು ನಿರಾಕರಿಸಿದ್ದರು. ‘ಸುಚಿತ್ರಾ ಅವರೇ ನನ್ನ ಜೊತೆ ಹಾಗೆ ಮಾತಾಡಬೇಡಿ. ನಿಮ್ಮ ಮನಸ್ಥಿತಿ ಸರಿಯಿಲ್ಲ. ನೀವು ಮನೋವೈದ್ಯರನ್ನು ಭೇಟಿ ಮಾಡುವುದು ಉತ್ತಮ’ ಎಂದು ಪ್ರೀತಿ ಪ್ರತಿಕ್ರಿಯೆ ನೀಡಿದ್ದರು. ಈ ಬಗ್ಗೆಯೂ ಸುಚಿತ್ರಾಗೆ ಕೇಳಲಾಯಿತು.

ಇದನ್ನೂ ಓದಿ: ಒಂದೇ ವಾರದಲ್ಲಿ ನಡೆದ ಎರಡು ಶಾಕಿಂಗ್ ಘಟನೆ ಹಂಚಿಕೊಂಡ ನಟಿ ಪ್ರೀತಿ ಜಿಂಟಾ

‘ನನಗೆ ಅವರ ಪ್ರತಿಕ್ರಿಯೆ ಬೇಕಿಲ್ಲ. ಇದು ಮುಕ್ತ ಜಗತ್ತು. ಅವರಿಗೆ ಏನು ಅನ್ನಿಸಿತೋ ಅದನ್ನು ಅವರು ಹೇಳಬಹುದು. ನಾನು ಗೃಹಿಣಿ ಆಗಿರುವುದಕ್ಕೆ ಖುಷಿ ಇದೆ. ಕಳೆದ 20 ವರ್ಷದಿಂದ ತಾಯಿ ಆಗಿದ್ದೇನೆ. ಆ ಬಗ್ಗೆ ನನಗೆ ಹೆಮ್ಮೆ ಇದೆ’ ಎಂದು ಸುಚಿತ್ರಾ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:33 pm, Wed, 12 July 23

ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ