AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pathaan Besharam Rang: ‘ಜಿಹಾದಿ ಶಾರುಖ್​ನ ಜೀವಂತ ಸುಡುತ್ತೇನೆ’; ಓಪನ್ ಆಗಿ ಹೇಳಿಕೆ ನೀಡಿದ ಅಯೋಧ್ಯೆ ಸ್ವಾಮೀಜಿ

ಅಯೋಧ್ಯೆಯ ಪರಮಹಂಸ ಆಚಾರ್ಯ ಅವರು ಈ ಹಾಡಿನ ವಿವಾದದ ಕುರಿತು ಮಾತನಾಡಿದ್ದಾರೆ. ಅವರು ಶಾರುಖ್ ಖಾನ್ ವಿರುದ್ಧ ಕಿಡಿಕಾರಿದ್ದಾರೆ.

Pathaan Besharam Rang: ‘ಜಿಹಾದಿ ಶಾರುಖ್​ನ ಜೀವಂತ ಸುಡುತ್ತೇನೆ’; ಓಪನ್ ಆಗಿ ಹೇಳಿಕೆ ನೀಡಿದ ಅಯೋಧ್ಯೆ ಸ್ವಾಮೀಜಿ
ಶಾರುಖ್​-ಪರಮಹಂಸ ಆಚಾರ್ಯ
TV9 Web
| Edited By: |

Updated on:Dec 21, 2022 | 11:22 AM

Share

ಶಾರುಖ್ ಖಾನ್ (Shah Rukh Khan) ನಟನೆಯ ‘ಪಠಾಣ್​’ ಸಿನಿಮಾದ ‘ಬೇಷರಂ ರಂಗ್​..’ ಹಾಡು ಸೃಷ್ಟಿ ಮಾಡಿರುವ ವಿವಾದ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ದೀಪಿಕಾ ಪಡುಕೋಣೆ ಕೇಸರಿ ಬಣ್ಣದ ಬಿಕಿನಿ ಧರಿಸಿ ‘ಬೇಷರಂ ರಂಗ್​..’ (ನಾಚಿಕೆ ಇಲ್ಲದ ಬಣ್ಣ) ಎಂದು ಹೇಳಿದ್ದೇ ಈ ವಿವಾದ ಹುಟ್ಟಿಕೊಳ್ಳಲು ಕಾರಣ. ಅನೇಕರು ಈ ಸಿನಿಮಾ ಬ್ಯಾನ್ ಮಾಡಬೇಕು ಎಂದು ಆಗ್ರಹಿಸುತ್ತಿದ್ದಾರೆ. ಹೀಗಿರುವಾಗಲೇ ಅಯೋಧ್ಯೆಯ ಸ್ವಾಮೀಜಿ (Ayodhya Seer) ಒಬ್ಬರು ನೀಡಿದ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಶಾರುಖ್ ಖಾನ್ ಅವರನ್ನು ಜೀವಂತವಾಗಿ ಸುಡುತ್ತೇನೆ ಎಂಬುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

ಕೇಸರಿ ಬಣ್ಣ ಹಿಂದೂಗಳ ಪಾಲಿಗೆ ವಿಶೇಷ. ಆದರೆ, ‘ಬೇಷರಂ ರಂಗ್​..’ ಹಾಡಿನಲ್ಲಿ ಈ ಬಣ್ಣಕ್ಕೆ ಅವಮಾನ ಮಾಡಲಾಗಿದೆ ಎಂದು ಅನೇಕರು ಬೊಬ್ಬೆ ಹೊಡೆದುಕೊಳ್ಳುತ್ತಿದ್ದಾರೆ. ಕೆಲವರು ಸಿನಿಮಾ ಬ್ಯಾನ್ ಮಾಡುವಂತೆ ಆಗ್ರಹಿಸುತ್ತಿದ್ದಾರೆ. ಈಗ ಅಯೋಧ್ಯೆಯ ಪರಮಹಂಸ ಆಚಾರ್ಯ ಅವರು ಈ ಹಾಡಿನ ವಿವಾದದ ಕುರಿತು ಮಾತನಾಡಿದ್ದಾರೆ. ಅವರು ಶಾರುಖ್ ಖಾನ್ ವಿರುದ್ಧ ಕಿಡಿಕಾರಿದ್ದಾರೆ.

‘ನಮ್ಮ ಸನಾತನ ಧರ್ಮದ ಜನರು ಈ ವಿಚಾರದ ಬಗ್ಗೆ ನಿರಂತರವಾಗಿ ಪ್ರತಿಭಟಿಸುತ್ತಿದ್ದಾರೆ. ಇಂದು ನಾವು ಶಾರುಖ್ ಖಾನ್ ಅವರ ಪೋಸ್ಟರ್ ಅನ್ನು ಸುಟ್ಟು ಹಾಕಿದ್ದೇವೆ. ಜಿಹಾದಿ ಶಾರುಖ್ ಖಾನ್ ಅವರನ್ನು ಭೇಟಿ ಮಾಡುವ ಅವಕಾಶ ಸಿಕ್ಕರೆ ನಾನು ಅವರನ್ನು ಜೀವಂತವಾಗಿ ಸುಡುತ್ತೇನೆ’ ಎಂದು ಪರಮಹಂಸ ಆಚಾರ್ಯ ಎಚ್ಚರಿಸಿದ್ದಾರೆ ಎಂಬುದಾಗಿ ಎಐಎನ್​ಎಸ್​ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಇದನ್ನೂ ಓದಿ
Image
ಹಲವು ತಿಂಗಳ ಬಳಿಕ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್​ಗೆ ಫುಲ್ ರಿಲೀಫ್
Image
ಆರ್ಯನ್​ ಖಾನ್​ ಕೇಸ್​ ಮರೆತು ಸಾರ್ವಜನಿಕವಾಗಿ ಕಾಣಿಸಿಕೊಂಡ ಶಾರುಖ್ ಪತ್ನಿ ಗೌರಿ ಖಾನ್​, ಪುತ್ರಿ ಸುಹಾನಾ
Image
ಬೆಂಗಳೂರಿನಲ್ಲಿ ಕಾಣಿಸಿಕೊಂಡ ಆರ್ಯನ್​ ಖಾನ್​; ಮಗನ ಹೆಗಲಿಗೆ ದೊಡ್ಡ ಜವಾಬ್ದಾರಿ ಹೊರಿಸಿದ ಶಾರುಖ್​?
Image
ಆರ್ಯನ್​ ಖಾನ್​​ಗೆ ಬಾಡಿಗಾರ್ಡ್​ ಫೈನಲ್​? ವರ್ಷದ ಸಂಬಳ 2.7 ಕೋಟಿ ರೂಪಾಯಿ

ಇದನ್ನೂ ಓದಿ: Pathaan 2nd Song: ‘ಪಠಾಣ್​’ ಚಿತ್ರದ 2ನೇ ಹಾಡು ಬಿಡುಗಡೆ ಮಾಡಲು ಸಜ್ಜಾದ ಶಾರುಖ್​ ಖಾನ್​, ದೀಪಿಕಾ ಪಡುಕೋಣೆ

‘ಪಠಾಣ್ ಚಿತ್ರ ಥಿಯೇಟರ್​ನಲ್ಲಿ ರಿಲೀಸ್ ಆದರೆ ನಾನು ಆ ಸಿನಿಮಾ ಮಂದಿರಕ್ಕೆ ಬೆಂಕಿ ಇಡುತ್ತೇನೆ’ ಎಂದು ಕೂಡ ಪರಮಹಂಸ ಆಚಾರ್ಯ ಹೇಳಿದ್ದಾರೆ. ಅವರ ಹೇಳಿಕೆಗೆ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ. ಸ್ವಾಮೀಜಿ ಆಗಿ ಈ ಮಾತನ್ನು ಅವರು ಹೇಳಬಾರದಿತ್ತು ಎನ್ನುವ ಅಭಿಪ್ರಾಯ ಕೆಲವರಿಂದ ವ್ಯಕ್ತವಾಗಿದೆ.

ಪರೋಕ್ಷವಾಗಿ ಮಾತನಾಡಿದ್ದ ಶಾರುಖ್​​?

ಶಾರುಖ್ ಖಾನ್ ಅವರು ಈ ವಿವಾದದ ಕುರಿತು ಪರೋಕ್ಷವಾಗಿ ಮಾತನಾಡಿದ್ದರು. ‘ಸಂಕುಚಿತ ದೃಷ್ಟಿಕೋನದಿಂದ ಈ ರೀತಿ ಆಗುತ್ತಿದೆ. ಈ ಸಂದರ್ಭದಲ್ಲಿ ಸಿನಿಮಾಗೆ ಮಹತ್ವದ ಪಾತ್ರವಿದೆ. ಜಗತ್ತು ಸಹಜ ಸ್ಥಿತಿಗೆ ಬಂದಿದೆ. ನಾವೆಲ್ಲರೂ ಖುಷಿಯಾಗಿದ್ದೇವೆ. ನಾನು ಹೆಚ್ಚು ಖುಷಿಯಾಗಿದ್ದೇನೆ. ಜಗತ್ತು ಏನು ಬೇಕಾದರೂ ಮಾಡಿಕೊಳ್ಳಲಿ. ನಾನು, ನೀವು ಮತ್ತು ಪಾಸಿಟಿವ್​ ಮನಸ್ಥಿತಿ ಇರುವ ಎಲ್ಲ ಜನರು ಜೀವಂತವಾಗಿದ್ದೇವೆ ಅಂತ ಹೇಳಲು ನನಗೆ ಯಾವುದೇ ಅಡೆತಡೆ ಇಲ್ಲ’ ಎಂದು ಶಾರುಖ್​ ಖಾನ್​ ಹೇಳಿದ್ದರು. ‘ಪಠಾಣ್​’ ಚಿತ್ರವನ್ನು ಬಾಯ್ಕಾಟ್​ ಮಾಡಬೇಕು ಎಂದು ಬೊಬ್ಬೆ ಹೊಡೆಯುತ್ತಿರುವವರನ್ನು ಉದ್ದೇಶಿಸಿಯೇ ಶಾರುಖ್​ ಈ ರೀತಿ ಹೇಳಿದ್ದಾರೆ ಎಂದು ನೆಟ್ಟಿಗರು ಅಭಿಪ್ರಾಯ ಪಟ್ಟಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:22 am, Wed, 21 December 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?