AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಕ್ಷಿಣ ಹಾಗೂ ಬಾಲಿವುಡ್ ಒಂದಾದರೆ ಪ್ರತಿ ಸಿನಿಮಾ 4000 ಕೋಟಿ ಬಿಸ್ನೆಸ್​ ಮಾಡುತ್ತೆ’- ಸಲ್ಮಾನ್ ಖಾನ್

ಸಲ್ಮಾನ್ ಖಾನ್ ಅವರು ತೆಲುಗಿನ ‘ಗಾಡ್​ಫಾದರ್​’ ಚಿತ್ರದಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ. ಈ ಸಿನಿಮಾದಲ್ಲಿ ಮೆಗಾಸ್ಟಾರ್ ಚಿರಂಜೀವಿ ಅವರು ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ.

‘ದಕ್ಷಿಣ ಹಾಗೂ ಬಾಲಿವುಡ್ ಒಂದಾದರೆ ಪ್ರತಿ ಸಿನಿಮಾ 4000 ಕೋಟಿ ಬಿಸ್ನೆಸ್​ ಮಾಡುತ್ತೆ’- ಸಲ್ಮಾನ್ ಖಾನ್
ಸಲ್ಮಾನ್​-ಚಿರಂಜೀವಿ
TV9 Web
| Edited By: |

Updated on: Oct 04, 2022 | 4:14 PM

Share

ದಕ್ಷಿಣ ಭಾರತ ಚಿತ್ರರಂಗ ಹಾಗೂ ಬಾಲಿವುಡ್ (Bollywood) ಎಂಬ ಚರ್ಚೆ ಈ ಮೊದಲಿನಿಂದಲೂ ಇದೆ. ಬಹುತೇಕ ಸ್ಟಾರ್ಸ್​ಗಳು ಈ ಬಗ್ಗೆ ತಮ್ಮತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಿದೆ. ಬಾಲಿವುಡ್​ನ ಅನೇಕರು ಈ ಚರ್ಚೆ ಬಂದಾಗ ನಾವೆಲ್ಲರೂ ಒಂದಾಗಬೇಕು ಎಂದು ಕರೆ ನೀಡಿದ್ದಿದೆ. ಈಗ ಸಲ್ಮಾನ್ ಖಾನ್ (Salman Khan) ಅವರು ಈ ವಿಚಾರವಾಗಿ ಮಾತನಾಡಿದ್ದಾರೆ. ದಕ್ಷಿಣ ಭಾರತದ ಹೀರೋಗಳು ಹಾಗೂ ಬಾಲಿವುಡ್​ ಮಂದಿ ಒಟ್ಟಾಗಿ ಕೆಲಸ ಮಾಡಬೇಕು ಎನ್ನುವ ಅಭಿಪ್ರಾಯವನ್ನು ಅವರು ಹಂಚಿಕೊಂಡಿದ್ದಾರೆ. ಹೀಗೆ ಮಾಡಿದರೆ ಸಿನಿಮಾ ಸಾವಿರಾರು ಕೋಟಿ ಕಲೆಕ್ಷನ್ ಮಾಡಲಿದೆ ಅನ್ನೋದು ಅವರ ಅಭಿಪ್ರಾಯ.

ಸಲ್ಮಾನ್ ಖಾನ್ ಅವರು ತೆಲುಗಿನ ‘ಗಾಡ್​ಫಾದರ್​’ ಚಿತ್ರದಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ. ಈ ಸಿನಿಮಾದಲ್ಲಿ ಮೆಗಾಸ್ಟಾರ್ ಚಿರಂಜೀವಿ ಅವರು ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಈ ಚಿತ್ರದ ಹಿಂದಿ ಟೀಸರ್ ರಿಲೀಸ್ ಕಾರ್ಯಕ್ರಮ ಇತ್ತೀಚೆಗೆ ನಡೆದಿದೆ. ಈ ವೇಳೆ ಅವರಿಗೆ ದಕ್ಷಿಣ ಭಾರತದಲ್ಲಿ ಕೆಲಸ ಮಾಡಿದ ಅನುಭವ ಹೇಗಿತ್ತು ಎಂದು ಪ್ರಶ್ನೆ ಮಾಡಲಾಯಿತು. ಇದಕ್ಕೆ ಸಲ್ಮಾನ್ ಖಾನ್ ಉತ್ತರ ನೀಡಿದ್ದಾರೆ.

ಅನೇಕ ಸ್ಟಾರ್​​ಗಳು ಹಾಲಿವುಡ್​ಗೆ ಹೋಗುವ ಇಚ್ಛೆ ವ್ಯಕ್ತಪಡಿಸಿದ್ದಿದೆ. ಆದರೆ, ಸಲ್ಮಾನ್ ಖಾನ್​ಗೆ ದಕ್ಷಿಣ ಭಾರತದ ಸಿನಿಮಾಗಳಲ್ಲಿ ಕೆಲಸ ಮಾಡಬೇಕು, ಇಲ್ಲಿ ಕೆಲಸ ಮಾಡಬೇಕು ಎನ್ನುವ ಇಂಗಿತ ವ್ಯಕ್ತಪಡಿಸಿದ್ದಾರೆ. ‘ಎಲ್ಲರಿಗೂ ಹಾಲಿವುಡ್​​ಗೆ ಹೋಗಬೇಕೆಂದಿರುತ್ತದೆ. ಆದರೆ ನನಗೆ ದಕ್ಷಿಣ ಭಾರತದಲ್ಲಿ ಕೆಲಸ ಮಾಡಬೇಕು ಎಂದಿದೆ. ಎಲ್ಲರೂ ಒಟ್ಟಾಗಿ ಕೆಲಸ ಮಾಡಿದರೆ ಸಿನಿಮಾ ಮಾಡುವ ಬಿಸ್ನೆಸ್​ ಎಷ್ಟಿರಬಹುದು ಅಂದಾಜಿಸಿ. ಸಿನಿಮಾಗಳು ಸಾಮಾನ್ಯವಾಗಿ 300-400 ಕೋಟಿ ರೂಪಾಯಿ ಕಲೆಕ್ಷನ್ ಮಾಡುತ್ತವೆ. ಆದರೆ, ಬಾಲಿವುಡ್ ಹಾಗೂ ದಕ್ಷಿಣ ಭಾರತದ ಸ್ಟಾರ್​ಗಳು ಒಂದಾದರೆ 3000-4000 ಕೋಟಿ ರೂಪಾಯಿ ಕಲೆಕ್ಷನ್ ಆಗಬಹುದು. ಜನರು ಹಿಂದಿಯಲ್ಲೂ ಸಿನಿಮಾ ವೀಕ್ಷಿಸುತ್ತಾರೆ, ದಕ್ಷಿಣದಲ್ಲೂ ಸಿನಿಮಾ ನೋಡುತ್ತಾರೆ’ ಎಂದು ಸಲ್ಮಾನ್ ಖಾನ್ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ
Image
‘ವಿಕ್ರಾಂತ್​ ರೋಣ’ ಪ್ರೀ-ರಿಲೀಸ್​ ಇವೆಂಟ್​ನಲ್ಲಿ ಕತ್ರಿನಾ ಜಪ ಮಾಡಿದ ಸಲ್ಮಾನ್​ ಖಾನ್​; ಕಾರಣ ಏನು?
Image
Salman Khan: ‘ವಿಕ್ರಾಂತ್​ ರೋಣ’ ವೇದಿಕೆಯಲ್ಲಿ ಸುದೀಪ್​-ಸಲ್ಮಾನ್​​; ಕಿಚ್ಚನ ಜತೆಗಿನ ಬಾಂಧವ್ಯದ ಬಗ್ಗೆ ಸಲ್ಲು ಮಾತು
Image
Kichcha Sudeep: ಮುಂಬೈ, ಚೆನ್ನೈನಿಂದಲೂ ಸುದೀಪ್​ ಕಟೌಟ್​ಗೆ ಬಂತು ಬೇಡಿಕೆ; ಹೇಗಿದೆ ನೋಡಿ ‘ವಿಕ್ರಾಂತ್​ ರೋಣ’ ಕ್ರೇಜ್​
Image
Kichcha Sudeep: ಕೆಲವೇ ಗಂಟೆಗಳಲ್ಲಿ ಕೋಟ್ಯಂತರ ಬಾರಿ ವೀಕ್ಷಣೆ ಕಂಡ ‘ವಿಕ್ರಾಂತ್​ ರೋಣ’ ಟ್ರೇಲರ್​

‘ಅವರ (ಚಿರಂಜೀವಿ) ಅಭಿಮಾನಿಗಳು ನನ್ನನ್ನೂ ನೋಡುತ್ತಾರೆ. ನನ್ನ ಅಭಿಮಾನಿಗಳು ಅವರನ್ನು ನೋಡುತ್ತಾರೆ. ಅವರ ಅಭಿಮಾನಿಗಳು ನನ್ನ ಅಭಿಮಾನಿಗಳಾಗುತ್ತಾರೆ, ನನ್ನ ಫ್ಯಾನ್ಸ್​ ಅವರ ಅಭಿಮಾನಿಗಳಾಗುತ್ತಾರೆ. ಎಲ್ಲರೂ ಬೆಳೆಯುತ್ತಾರೆ. ಗುಂಪು ದೊಡ್ಡದಾಗುತ್ತದೆ’ ಎಂದಿದ್ದಾರೆ ಸಲ್ಮಾನ್ ಖಾನ್. ಇದರಿಂದ ಸಿನಿಮಾ ಬಿಸ್ನೆಸ್​ ಹೆಚ್ಚುತ್ತದೆ ಎಂಬುದು ಅವರ ಅಭಿಪ್ರಾಯ.

ಮಲಯಾಳಂನ ‘ಲೂಸಿಫರ್​’ ಚಿತ್ರದ ರಿಮೇಕ್​ ‘ಗಾಡ್​ಫಾದರ್​’. ಚಿರಂಜೀವಿ, ಸಲ್ಮಾನ್ ಖಾನ್ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಅಕ್ಟೋಬರ್ 5ಕ್ಕೆ ಸಿನಿಮಾ ರಿಲೀಸ್ ಆಗಲಿದೆ.

ಬುದ್ಧಿ ಕಲಿಯುತ್ತಿಲ್ಲ ಗಿಲ್ಲಿ, ಕಾವ್ಯಾಗಾಗಿ ಸ್ಪಂದನಾಗೆ ಅನ್ಯಾಯ
ಬುದ್ಧಿ ಕಲಿಯುತ್ತಿಲ್ಲ ಗಿಲ್ಲಿ, ಕಾವ್ಯಾಗಾಗಿ ಸ್ಪಂದನಾಗೆ ಅನ್ಯಾಯ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ