Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಬಿ ಬಂಪ್​ಗೆ ಹೊಸ ಹೆಸರು ಕೊಟ್ಟ ನಟಿ ಇಲಿಯಾನಾ; ಮಗುವಿನ ತಂದೆಯ ಹೆಸರು ಇನ್ನೂ ನಿಗೂಢ

Ileana D'Cruz: ಇಲಿಯಾನಾ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಇದರಲ್ಲಿ ಅವರ ಬೇಬಿ ಬಂಪ್ ಕಾಣಿಸಿದೆ. ಇದಕ್ಕೆ ಅವರು ಚೆಂದದ ಕ್ಯಾಪ್ಶನ್ ನೀಡಿದ್ದಾರೆ.

ಬೇಬಿ ಬಂಪ್​ಗೆ ಹೊಸ ಹೆಸರು ಕೊಟ್ಟ ನಟಿ ಇಲಿಯಾನಾ; ಮಗುವಿನ ತಂದೆಯ ಹೆಸರು ಇನ್ನೂ ನಿಗೂಢ
ಇಲಿಯಾನಾ
Follow us
ರಾಜೇಶ್ ದುಗ್ಗುಮನೆ
|

Updated on:Jul 27, 2023 | 7:48 AM

ನಟಿ ಇಲಿಯಾ ಡಿಕ್ರೂಜ್ (Ileana D’Cruz) ಅವರು ತಾಯಿ ಆಗುತ್ತಿರುವ ಖುಷಿಯಲ್ಲಿದ್ದಾರೆ. ಶೀಘ್ರವೇ ಅವರ ಮನೆಗೆ ಹೊಸ ಸದಸ್ಯನ ಆಗಮನ ಆಗಲಿದೆ. ಪ್ರೆಗ್ನೆಂಟ್ ಆದಾಗಿನಿಂದಲೂ ಅವರು ವಾರಕ್ಕೆ ಕನಿಷ್ಠ ಒಂದು ಫೋಟೋ ಆದರೂ ಹಂಚಿಕೊಳ್ಳುತ್ತಿದ್ದಾರೆ. ಈಗ ಇಲಿಯಾನಾ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಇದರಲ್ಲಿ ಅವರ ಬೇಬಿ ಬಂಪ್ ಕಾಣಿಸಿದೆ. ಇದಕ್ಕೆ ಅವರು ಚೆಂದದ ಕ್ಯಾಪ್ಶನ್ ನೀಡಿದ್ದಾರೆ. ‘ಕ್ಯಾಪ್ಶನ್ ಆ ಬಳಿಕವೂ ಕೊಡಬಹುದು, ಮೊದಲು ಮಗುವಿನ ತಂದೆಯ ಹೆಸರನ್ನು ಹೇಳಿ’ ಎಂದು ಕೆಲವರು ಈ ಪೋಸ್ಟ್​ಗೆ ಕಮೆಂಟ್ ಮಾಡಿದ್ದಾರೆ.

ಮರೂನ್ ಬಣ್ಣದ ಬಟ್ಟೆ ಧರಿಸಿ ಇಲಿಯಾನಾ ಅವರು ಮಿರರ್ ಸೆಲ್ಫಿ ತೆಗೆದುಕೊಂಡಿದ್ದಾರೆ. ಈ ಫೋಟೋದಲ್ಲಿ ಅವರ ಹೊಟ್ಟೆ ಹೈಲೈಟ್ ಆಗಿದೆ. ಈ ಫೋಟೋಗೆ ಅವರು ‘ಮೈ ಲಿಟಲ್ ವಾಟರ್​ಮೆಲನ್’ ಎನ್ನುವ ಕ್ಯಾಪ್ಶನ್ ನೀಡಿದ್ದಾರೆ. ಬೇಬಿಬಂಪ್​ಗೆ ಇಲಿಯಾ ಕೊಟ್ಟ ಹೆಸರು ಇದು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇಲಿಯಾನಾ ಅವರು ಟಾಲಿವುಡ್ ಹಾಗೂ ಬಾಲಿವುಡ್​​​ನಲ್ಲಿ ಗುರುತಿಸಿಕೊಂಡವರು. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಅನೇಕರ ಜೊತೆ ಸುತ್ತಾಟ ನಡೆಸಿಯೂ ಸುದ್ದಿ ಆಗಿದ್ದರು. ಮದುವೆ ಆಗದೆ ಪ್ರೆಗ್ನೆಂಟ್ ಆದ ವಿಚಾರವನ್ನು ಅವರು ರಿವೀಲ್ ಮಾಡಿದ್ದು ಅನೇಕರಿಗೆ ಅಚ್ಚರಿ ಆಗಿತ್ತು. ಏನೇ ಆದರೂ ಅವರು ಮಗುವಿಗೆ ತಂದೆ ಯಾರು ಎನ್ನುವ ವಿಚಾರ ರಿವೀಲ್ ಮಾಡಿರಲಿಲ್ಲ. ಇದನ್ನು ಆದಷ್ಟು ಬೇಗ ತಿಳಿಸಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಇಲಿಯಾನಾ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಇದರಲ್ಲಿ ಅವರ ಬೇಬಿ ಬಂಪ್ ಕಾಣಿಸಿದೆ. ಇದಕ್ಕೆ ಅವರು ಚೆಂದದ ಕ್ಯಾಪ್ಶನ್ ನೀಡಿದ್ದಾರೆ.

ಇದನ್ನೂ ಓದಿ: ಕೊನೆಗೂ ಮಗುವಿನ ತಂದೆ ಯಾರೆಂದು ತೋರಿಸಿದ ಇಲಿಯಾನಾ; ಆದರೂ ಒಂದು ಗುಟ್ಟು ಹೊರಬರಲೇ ಇಲ್ಲ

ಇತ್ತೀಚೆಗೆ ಇಲಿಯಾನಾ ಅವರು ಬಾಯ್​ಫ್ರೆಂಡ್ ಫೋಟೋ ಹಂಚಿಕೊಂಡಿದ್ದರು. ಈ ಫೋಟೋಗೆ ಅವರು ‘ಡೇಟ್​ ನೈಟ್’ ಎನ್ನುವ ಕ್ಯಾಪ್ಶನ್ ನೀಡಿದ್ದರು. ಆದರೆ, ಎಲ್ಲಿಯೂ ಅವರು ಬಾಯ್​ಫ್ರೆಂಡ್ ಹೆಸರನ್ನು ರಿವೀಲ್ ಮಾಡಿರಲಿಲ್ಲ. ಇದೇಕೇ ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿದೆ. ಆದರೆ, ಇದಕ್ಕೆಲ್ಲ ಅವರು ಉತ್ತರ ಕೊಡುವ ಗೋಜಿಗೆ ಹೋಗಿಲ್ಲ. ತಮಗೇನು ಸರಿ ಎನಿಸುತ್ತದೆಯೋ ಅದನ್ನೇ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:46 am, Thu, 27 July 23

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು