ಅಕ್ರಮ ಹಣ ವರ್ಗಾವಣೆ ಕೇಸ್​: ನಟಿ ಜಾಕ್ವೆಲಿನ್ ಫರ್ನಾಂಡಿಸ್​ ಮಧ್ಯಂತರ ಜಾಮೀನು ವಿಸ್ತರಣೆ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ನೀಡಲಾಗಿದ್ದ ಮಧ್ಯಂತರ ಜಾಮೀನನ್ನು ನವೆಂಬರ್ 15 ರವರೆಗೆ ದೆಹಲಿ ನ್ಯಾಯಾಲಯವು ವಿಸ್ತರಿಸಿದೆ.

ಅಕ್ರಮ ಹಣ ವರ್ಗಾವಣೆ ಕೇಸ್​: ನಟಿ ಜಾಕ್ವೆಲಿನ್ ಫರ್ನಾಂಡಿಸ್​ ಮಧ್ಯಂತರ ಜಾಮೀನು ವಿಸ್ತರಣೆ
ಜಾಕ್ವೆಲಿನ್​ ಫರ್ನಾಂಡಿಸ್​
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 13, 2022 | 11:58 AM

ಸುಕೇಶ್ ಚಂದ್ರಶೇಖರ್ ಅವರ ಸಹವಾಸ ಜಾಕ್ವೆಲಿನ್ ಫರ್ನಾಂಡಿಸ್(Jacqueline Fernandez) ಅವರನ್ನ 200 ಕೋಟಿ ರೂಪಾಯಿಗಳ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ಆರೋಪಿಯನ್ನಾಗಿಸಿದೆ, ಸುಕೇಶ್ ಚಂದ್ರಶೇಖರ್ ಉದ್ಯಮಿಗಳಿಗೆ 200 ಕೋಟಿ ರೂಪಾಯಿ ವರ್ಗಾವಣೆ ಮಾಡಿದ ಆರೋಪವನ್ನು ಎದುರಿಸುತ್ತಿದ್ದು, ಅವರ ಜೊತೆ ಸಂಪರ್ಕ ಹೊಂದಿದ ಕಾರಣಕ್ಕೆ ಜಾಕ್ವೆಲಿನ್​ ಅವರಿಗೆ ಸಂಕಷ್ಟ ಎದುರಾಗಿದೆ. ಇತ್ತೀಚಿನ ಬೆಳವಣಿಗೆಯ ಪ್ರಕಾರ, ದೆಹಲಿ ನ್ಯಾಯಾಲಯವು ನಟಿಗೆ ನೀಡಿದ್ದ ತಾತ್ಕಾಲಿಕ ಜಾಮೀನನ್ನು ಶುಕ್ರವಾರ(ನವೆಂಬರ್​ 11) ವಿಸ್ತರಿಸಿದೆ.

ANI ವರದಿಯ ಪ್ರಕಾರ, ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ‘ಜಾಕ್ವೆಲಿನ್ ಫರ್ನಾಂಡಿಸ್‘ ಅವರ ಮಧ್ಯಂತರ ಜಾಮೀನನ್ನು ನವೆಂಬರ್ 15 ರವರೆಗೆ ವಿಸ್ತರಿಸಿದೆ. ಜಾಕ್ವೆಲಿನ್​ ಫರ್ನಾಂಡಿಸ್​ಗೆ ಜಾರಿ ನಿರ್ದೇಶನಾಲಯದ ವಕೀಲರು ವಿಚಾರಣೆಗೆ ಒಳಪಡಿಸಲಾಗಿದ್ದು, ಮರ್ಡರ್ 2 ನಟಿ ಜಾಮೀನು ಕೋರಿದ್ದಾರೆ, ‘ತನಿಖೆ ಮುಗಿದು ಚಾರ್ಜ್ ಶೀಟ್ ಸಲ್ಲಿಕೆಯಾಗಿರುವುದರಿಂದ ತನ್ನನ್ನು ಕಸ್ಟಡಿಯಲ್ಲಿ ಇಡುವ ಅಗತ್ಯವಿಲ್ಲ’ ಎಂದು ಹೇಳಿದ್ದಾರೆ.

ಆಗಸ್ಟ್ 31 ರಂದು ನ್ಯಾಯಾಲಯದ ವಿಚಾರಣೆಗೆ ಒಳಪಡಿಸಿದ ಜಾರಿ ನಿರ್ದೇಶನಾಲಯವು ಸಲ್ಲಿಸಿದ ಪೂರಕ ಚಾರ್ಜ್ ಶೀಟ್‌ನಲ್ಲಿ ಜಾಕ್ವೆಲಿನ್​ ಅವರನ್ನು ಆರೋಪಿ ಎಂದು ಉಲ್ಲೇಖಿಸಲಾಗಿದೆ. ಇಡಿಗೆ ನೀಡಿದ ಹೇಳಿಕೆಯಲ್ಲಿ ಜಾಕ್ವೆಲಿನ್ “ಫೆಬ್ರವರಿ 2017 ರಿಂದ ನಾನು ಸುಕೇಶ್ ಅವರೊಂದಿಗೆ ಮಾತನಾಡುತ್ತಿದ್ದೇನೆ, ಆಗಸ್ಟ್ 2021 ರಲ್ಲಿ ಅವರನ್ನು ಬಂಧಿಸಲಾಯಿತು, ನಂತರ ನಾನು ಅವರನ್ನು ಭೇಟಿಯಾಗಲಿಲ್ಲ. ಅವರು ಸನ್ ಟಿವಿಯ ಮಾಲೀಕರು ಮತ್ತು ಜಯಲಲಿತಾ ಅವರ ರಾಜಕೀಯ ಕುಟುಂಬದವರು ಎಂದು ಅವರು ನನಗೆ ಹೇಳಿದ್ದರು ಎಂದು ಹೇಳಿದ್ದಾರೆ.

ಇದನ್ನೂ ಓದಿ:ಅಕ್ರಮ ಹಣ ವರ್ಗಾವಣೆ ಪ್ರಕರಣದ ಕಿಂಗ್​ ಪಿನ್​ ಜತೆ ‘ವಿಕ್ರಾಂತ್​ ರೋಣ’ ನಟಿ ಜಾಕ್ವೆಲಿನ್​ ಫರ್ನಾಂಡಿಸ್ ಡೇಟಿಂಗ್?

ಜಾಕ್ವೆಲಿನ್​ ಅವರಿಗೆ ಸುಕೇಶ್​ ಚಂದ್ರಶೇಖರ್​ ಅನೇಕ ದುಬಾರಿ ಗಿಪ್ಟ್​ಗಳನ್ನು ನೀಡಿದ್ದರು, ತುಂಬಾ ಕ್ಲೋಸ್​ ಆಗಿರುವ ಫೋಟೋಗಳು ವೈರಲ್​ ಆಗಿದ್ದವು, ಜಾಕ್ವೆಲಿನ್​ ಸುಖೇಶ್​ ಅವರನ್ನೇ ಮದುವೆಯಾಗುವುದಾಗಿ ನಿರ್ಧರಿಸಿದ್ದರು, ಎಂದು ಈ ಹಿಂದೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹೇಳಿರುವುದಾಗಿ ವರದಿ ಆಗಿತ್ತು, ಸುಖೇಶ್​ ಚಂದ್ರಶೇಖರ್​ ನಡೆಸುತ್ತಿದ್ದ ಅಕ್ರಮಗಳ ಬಗ್ಗೆ ಜಾಕ್ವೆಲಿನ್​ಗೆ ತಿಳಿದಿತ್ತು, ಅದಾಗ್ಯೂ ಜಾಕ್ವೆಲಿನ್​ ಅವರು ಸುಕೇಶ್​ನಿಂದ ಆರ್ಥಿಕ ಸಹಾಯವನ್ನು ಪಡೆಯುತ್ತಿದ್ದರು ಎಂದು ಇಡಿ ಚಾರ್ಜ್ ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು ಮನರಂಜನಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ