AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶ ತೊರೆಯುವಂತೆ ನೋಟಿಸ್: ಬಾಂಬೆ ಹೈಕೋರ್ಟ್ ಮೆಟ್ಟಿಲೇರಲು ಇಮ್ರಾನ್ ಖಾನ್‌ ನಿರ್ಧಾರ

ಮುಂಬೈನಲ್ಲಿ ನಡೆದ ಪ್ರತಿಭಟನೆಯಲ್ಲಿ ಅಮೆರಿಕದ ಪಾಸ್‌ಪೋರ್ಟ್ ಹೊಂದಿರುವ ಇಮ್ರಾನ್ ಖಾನ್ ಪಾಲ್ಗೊಂಡಿದ್ದರು. ಹಾಗಾಗಿ ಅವರಿಗೆ ನೋಟಿಸ್ ನೀಡಲಾಗಿದೆ. ದೇಶ ತೊರೆಯುವಂತೆ ಸೂಚಿಸಲಾಗಿದೆ. ಈ ಬೆಳವಣಿಗೆಯಿಂದ ಬಾಲಿವುಡ್ ವಲಯದಲ್ಲಿಯೂ ಚರ್ಚೆಗಳು ಗರಿಗೆದರಿದ್ದು, ಒಸಿಐ ಕಾರ್ಡ್‌ದಾರರ ರಾಜಕೀಯ ಚಟುವಟಿಕೆಗಳ ಮೇಲಿನ ಮಿತಿಗಳ ಕುರಿತು ಕಾನೂನು ಸಮರಕ್ಕೆ ವೇದಿಕೆ ಸಿದ್ಧವಾಗಿದೆ.

ದೇಶ ತೊರೆಯುವಂತೆ ನೋಟಿಸ್: ಬಾಂಬೆ ಹೈಕೋರ್ಟ್ ಮೆಟ್ಟಿಲೇರಲು ಇಮ್ರಾನ್ ಖಾನ್‌ ನಿರ್ಧಾರ
Imran KhanImage Credit source: PTI
ಮದನ್​ ಕುಮಾರ್​
|

Updated on: Oct 15, 2026 | 4:09 PM

Share

ಪ್ರತಿಭಟನೆಯಲ್ಲಿ ಭಾಗವಹಿಸಿದ ಕಾರಣಕ್ಕೆ ದೇಶ ತೊರೆಯುವಂತೆ ಬಾಲಿವುಡ್ ನಟ ಇಮ್ರಾನ್ ಖಾನ್‌ಗೆ ನೀಡಿರುವ ನೋಟಿಸ್ ಅನ್ನು ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಮೊರೆ ಹೋಗುವುದಾಗಿ ಅವರ ವಕೀಲರು ತಿಳಿಸಿದ್ದಾರೆ. ಒಸಿಐ (ವೀಸಾ ರಹಿತ ಭಾರತೀಯ ಮೂಲದ ವಿದೇಶಿ ಪ್ರಜೆ) ಕಾರ್ಡ್ ಹೊಂದಿರುವವರು ಯಾವುದೇ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದನ್ನು ನಿಯಮಗಳು ನಿಷೇಧಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕಳೆದ ವಾರ ಮುಂಬೈನ ಆಗಸ್ಟ್ ಕ್ರಾಂತಿ ಮೈದಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಯುಎಸ್ ಪಾಸ್‌ಪೋರ್ಟ್ ಹೊಂದಿರುವ ನಟ ಇಮ್ರಾನ್ ಖಾನ್ ಪಾಲ್ಗೊಂಡಿದ್ದರು. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮುಂಬೈ ಪೊಲೀಸರು ಇಮ್ರಾನ್ ಖಾನ್ ಅವರನ್ನು ವಶಕ್ಕೆ ಪಡೆದಿದ್ದರು.

ಭಾರತೀಯ ನಾಗರಿಕರಲ್ಲದಿದ್ದರೂ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ ಎಂಬ ಆರೋಪದ ಮೇರೆಗೆ, ಇಮಿಗ್ರೇಷನ್ ಕಾಯಿದೆಯ ಸೆಕ್ಷನ್ 29 ಮತ್ತು 7ರ ಅಡಿಯಲ್ಲಿ ಇಮ್ರಾನ್ ಖಾನ್ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ. ಒಸಿಐ ಕಾರ್ಡ್‌ದಾರರ ಮೇಲಿನ ನಿಯಮಗಳ ಅನ್ವಯ, ಅಕ್ಟೋಬರ್ 28ರೊಳಗೆ ದೇಶ ಬಿಟ್ಟು ತೆರಳುವಂತೆ ವಿದೇಶಿಯರ ನೋಂದಣಿ ಕಚೇರಿಯು ನೋಟಿಸ್ ಜಾರಿ ಮಾಡಿದೆ.

ಪೊಲೀಸ್ ವಶಕ್ಕೆ ಪಡೆದ ಸಂದರ್ಭದಲ್ಲಿ ಇಮ್ರಾನ್ ಖಾನ್ ಅವರು ಪೊಲೀಸ್ ವ್ಯಾನ್ ಒಳಗೆ ಕುಳಿತಿರುವ ತಮ್ಮ ಫೋಟೋವನ್ನು ಹಂಚಿಕೊಂಡು, ‘ನಾನು ಡ್ರೈವ್‌ಗೆ ಹೋಗುತ್ತಿದ್ದೇನೆ’ ಎಂದು ವ್ಯಂಗ್ಯವಾಗಿ ಕ್ಯಾಪ್ಷನ್ ಬರೆದುಕೊಂಡಿದ್ದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಾವು ಮುಂಬೈನ ಸಾಮಾನ್ಯ ಪ್ರಜೆಯಾಗಿ ಸ್ಥಳಕ್ಕೆ ಬಂದಿದ್ದೆ ಹೊರತು ಯಾವುದೇ ನಿರ್ದಿಷ್ಟ ಬೇಡಿಕೆಗಳೊಂದಿಗೆ ಬಂದಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಜನರ ಚಲನವಲನದ ಸ್ವಾತಂತ್ರ್ಯದ ಮೇಲಿನ ನಿರ್ಬಂಧಗಳು ಮತ್ತು ಜನರ ಧ್ವನಿ ಅಡಗಿಸುವ ಪ್ರಯತ್ನಗಳನ್ನು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಇಮ್ರಾನ್ ಖಾನ್​ಗೆ ದೇಶ ಬಿಡುವಂತೆ ಸೂಚನೆ; ಅವರು ಭಾರತದ ಪ್ರಜೆಯೇ ಅಲ್ಲವಾ?

ಇಮ್ರಾನ್ ಖಾನ್ ಪರವಾಗಿ ಧ್ವನಿ ಎತ್ತಿರುವ ‘ಕಾಕ್ರೋಚ್ ಜನತಾ ಪಾರ್ಟಿ’ ಕಾರ್ಯಕರ್ತ ಅಭಿಜಿತ್ ದೀಪ್ಕೆ ಅವರು ಎಕ್ಸ್ (X) ಖಾತೆಯಲ್ಲಿ ಪ್ರತಿಕ್ರಿಯಿಸಿದ್ದು, ‘ಅಮೆರಿಕದ ಪ್ರಜೆಯಾದ ಮೇರಿ ಮಿಲ್‌ಬೆನ್ ಅವರು ಭಾರತದಲ್ಲಿ ಬಿಜೆಪಿ ಪರವಾಗಿ ಮಾತನಾಡಬಹುದು, ಆದರೆ ಒಸಿಐ ಕಾರ್ಡ್ ಹೊಂದಿರುವ ಇಮ್ರಾನ್ ಖಾನ್‌ಗೆ ಮಾತ್ರ ಬಿಜೆಪಿಗೆ ವಿರುದ್ಧವಾಗಿ ಮಾತನಾಡುವ ಹಕ್ಕಿಲ್ಲವೇ?’ ಎಂದು ಪ್ರಶ್ನಿಸಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More