ಫಿಫಾ ವಿಶ್ವಕಪ್ 2026: ಉದ್ಘಾಟನಾ ಸಮಾರಂಭದಲ್ಲಿ ಮಿಂಚಲಿರುವ ನೋರಾ ಫತೇಹಿ

ಖ್ಯಾತ ಬಾಲಿವುಡ್ ನಟಿ ಮತ್ತು ಡ್ಯಾನ್ಸರ್ ನೋರಾ ಫತೇಹಿ ಅವರ ಜಾಗತಿಕ ಮಟ್ಟದ ಜನಪ್ರಿಯತೆಗೆ ಹೊಸ ಸಾಕ್ಷಿ ಇಲ್ಲಿದೆ. 2026ರ ಫಿಫಾ ವಿಶ್ವಕಪ್‌ನ ಉದ್ಘಾಟನಾ ಸಮಾರಂಭದಲ್ಲಿ ಪ್ರದರ್ಶನ ನೀಡಲು ಅವರು ಸಜ್ಜಾಗುತ್ತಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಹೆಮ್ಮೆ ತಂದಿದೆ. ಈ ಕುರಿತ ಮಾಹಿತಿ ಇಲ್ಲಿದೆ..

ಫಿಫಾ ವಿಶ್ವಕಪ್ 2026: ಉದ್ಘಾಟನಾ ಸಮಾರಂಭದಲ್ಲಿ ಮಿಂಚಲಿರುವ ನೋರಾ ಫತೇಹಿ
Nora Fatehi

Updated on: May 10, 2026 | 8:11 AM

ಭಾರತೀಯ ಚಿತ್ರರಂಗದ ಖ್ಯಾತ ನಟಿ, ಅದ್ಭುತ ನೃತ್ಯಗಾರ್ತಿ ನೋರಾ ಫತೇಹಿ (Nora Fatehi) ಅವರು ಮತ್ತೊಮ್ಮೆ ಜಾಗತಿಕ ವೇದಿಕೆಯಲ್ಲಿ ಭಾರತದ ಹೆಸರನ್ನು ರಾರಾಜಿಸುವಂತೆ ಮಾಡುತ್ತಿದ್ದಾರೆ. 2026ರ ಫಿಫಾ ವಿಶ್ವಕಪ್‌ನ (FIFA World Cup 2026) ಕೆನಡಾ ಆವೃತ್ತಿಯ ಅದ್ಧೂರಿ ಉದ್ಘಾಟನಾ ಸಮಾರಂಭದಲ್ಲಿ ನೋರಾ ಫತೇಹಿ ನೃತ್ಯ ಪ್ರದರ್ಶನದ ಜೊತೆಗೆ ಹಾಡನ್ನೂ ಹಾಡಲಿದ್ದಾರೆ. ಈ ಉದ್ಘಾಟನಾ ಸಮಾರಂಭವು ಜೂನ್ 12ರಂದು ಕೆನಡಾದ ಟೊರೊಂಟೊದಲ್ಲಿರುವ ಬಿಎಂಒ ಫೀಲ್ಡ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ನೋರಾ ಫತೇಹಿ ಅವರು ಈ ಬಾರಿ ಕೇವಲ ನೃತ್ಯಕ್ಕೆ ಸೀಮಿತವಾಗದೆ, ಗಾಯಕಿಯಾಗಿಯೂ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಹೊಂದಿರುವ ಗಾಯಕರ ಜೊತೆಗೆ ನೋರಾ ವೇದಿಕೆ ಹಂಚಿಕೊಳ್ಳಲಿದ್ದಾರೆ. 2022ರ ಫಿಫಾ ವಿಶ್ವಕಪ್ ಫೈನಲ್‌ನಲ್ಲೂ ನೋರಾ ಅದ್ಭುತ ಪ್ರದರ್ಶನ ನೀಡಿ ಎಲ್ಲರ ಗಮನ ಸೆಳೆದಿದ್ದರು. ಈಗ ಎರಡನೇ ಬಾರಿಗೆ ವಿಶ್ವದ ಅತಿದೊಡ್ಡ ಕ್ರೀಡಾಕೂಟದಲ್ಲಿ ಅವಕಾಶ ಪಡೆದಿದ್ದಾರೆ.

ಭಾರತದಲ್ಲಿ ಹೆಸರು ಗಳಿಸಿರುವ ನೋರಾ ಫತೇಹಿ ಅವರ ಪ್ರತಿಭೆಗೆ ಈಗ ಜಾಗತಿಕ ಮಟ್ಟದಲ್ಲಿ ಭಾರಿ ಬೇಡಿಕೆ ವ್ಯಕ್ತವಾಗುತ್ತಿದೆ. ಈ ಹಿಂದೆ ಟಿ20 ವಿಶ್ವಕಪ್ ಸಂಬಂಧಿತ ಕಾರ್ಯಕ್ರಮಗಳಲ್ಲೂ ಅವರು ಕಾಣಿಸಿಕೊಂಡಿದ್ದರು. ಈಗ ಫಿಫಾ ಉದ್ಘಾಟನಾ ಸಮಾರಂಭದಲ್ಲಿ ಕಾಣಿಸಿಕೊಳ್ಳುತ್ತಿರುವುದು ಅವರ ವೃತ್ತಿಜೀವನದ ಮೈಲಿಗಲ್ಲು ಎನ್ನಲಾಗಿದೆ.

‘ಟೊರೊಂಟೊದಲ್ಲಿ ನಡೆಯಲಿರುವ ಉದ್ಘಾಟನಾ ಸಮಾರಂಭವು ಕೆನಡಾದ ಅಸ್ಮಿತೆ ಮತ್ತು ಫಿಫಾ ವಿಶ್ವಕಪ್‌ನ ಶಕ್ತಿಯನ್ನು ಪ್ರತಿಬಿಂಬಿಸಲಿದೆ’ ಎಂದು ಫಿಫಾ ಅಧ್ಯಕ್ಷ ಜಿಯಾನಿ ಇನ್ಫಾಂಟಿನೊ ತಿಳಿಸಿದ್ದಾರೆ. ನೋರಾ ಫತೇಹಿ ಅವರು ಫುಟ್ಬಾಲ್ ಪ್ರೇಮಿಗಳನ್ನು ತಮ್ಮ ಹಾಡು ಮತ್ತು ನೃತ್ಯದ ಮೂಲಕ ರಂಜಿಸಲು ಸಿದ್ಧರಾಗಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಹೆಮ್ಮೆ ತಂದಿದೆ.

ಇದನ್ನೂ ಓದಿ: ಧುರಂಧರ್ ಗೆಲುವಿನ ಎಫೆಕ್ಟ್: ನೋರಾ ಫತೇಹಿ ಜೊತೆ ಡ್ಯಾನ್ಸ್ ಮಾಡಿದ ರಾಕೇಶ್ ಬೇಡಿ

ಒಂದೆಡೆ ಫಿಫಾ ಸುದ್ದಿ ಸದ್ದು ಮಾಡುತ್ತಿದ್ದರೆ, ಮತ್ತೊಂದೆಡೆ ನೋರಾ ಫತೇಹಿ ಅವರ ಹೊಸ ಐ-ಪಾಪ್ ಹಾಡು ‘ಬಾಡಿ ರೋಲ್’ ಬಿಡುಗಡೆಯಾಗುತ್ತಿದೆ. ಖ್ಯಾತ ರ‍್ಯಾಪರ್ ಹನಿ ಸಿಂಗ್ ಅವರೊಂದಿಗೆ ನೋರಾ ಈ ಹಾಡಿನಲ್ಲಿ ಹೆಜ್ಜೆ ಹಾಕಿದ್ದಾರೆ. ಇದು ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us