Emergency: ‘ಇಂದಿರಾ ಗಾಂಧಿ ಈ ವಿಡಿಯೋದಲ್ಲಿ ಕಂಗನಾ ರೀತಿ ಮಾಡ್ತಿದ್ದಾರೆ’: ರಾಮ್​ ಗೋಪಾಲ್​ ವರ್ಮಾ

Kangana Ranaut | Emergency: ರಾಮ್​ ಗೋಪಾಲ್​ ವರ್ಮಾ ಮಾಡಿದ ಈ ಪೋಸ್ಟ್​​ ನೋಡಿ ಕಂಗನಾ ರಣಾವತ್​ ಸಖತ್​ ಖುಷಿ ಆಗಿದ್ದಾರೆ. ಈ ಮಾತನ್ನು ಮೆಚ್ಚುಗೆಯ ರೀತಿ ಅವರು ಸ್ವೀಕರಿಸಿದ್ದಾರೆ.

Emergency: ‘ಇಂದಿರಾ ಗಾಂಧಿ ಈ ವಿಡಿಯೋದಲ್ಲಿ ಕಂಗನಾ ರೀತಿ ಮಾಡ್ತಿದ್ದಾರೆ’: ರಾಮ್​ ಗೋಪಾಲ್​ ವರ್ಮಾ
ಇಂದಿರಾ ಗಾಂಧಿ, ಕಂಗನಾ ರಣಾವತ್
Follow us
TV9 Web
| Updated By: ಮದನ್​ ಕುಮಾರ್​

Updated on:Jul 24, 2022 | 11:05 AM

ನಟಿ ಕಂಗನಾ ರಣಾವತ್ (Kangana Ranaut)​ ಅವರು ಇತ್ತೀಚಿನ ವರ್ಷಗಳಲ್ಲಿ ಗೆಲವು ಕಂಡಿಲ್ಲ. ಅವರು ನಟಿಸಿದ ಎಲ್ಲ ಸಿನಿಮಾಗಳು ಸೋತಿವೆ. ಹಾಗಂತ ಅವರಿಗೆ ಬರುವ ಆಫರ್​ ಕಡಿಮೆ ಆಗಿಲ್ಲ. ಒಂದಕ್ಕಿಂತ ಒಂದು ಡಿಫರೆಂಟ್​ ಪಾತ್ರ ಅವರಿಗೆ ಸಿಗುತ್ತಲೇ ಇದೆ. ವಿವಾದದ ಮೂಲಕವೂ ಅವರು ಸದ್ದು ಮಾಡುತ್ತಿರುತ್ತಾರೆ. ಈಗ ಕಂಗನಾ ರಣಾವತ್​ ಅವರು ‘ಎಮರ್ಜೆನ್ಸಿ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದ ಫಸ್ಟ್​ ಲುಕ್​ ಟೀಸರ್​ ಈಗಾಗಲೇ ಧೂಳೆಬ್ಬಿಸಿದೆ. ನೈಜ ಘಟನೆ ಆಧರಿತ ಈ ಚಿತ್ರದಲ್ಲಿ ಇಂದಿರಾ ಗಾಂಧಿ (Indira Gandhi) ಪಾತ್ರವನ್ನು ಕಂಗನಾ ಮಾಡುತ್ತಿದ್ದಾರೆ. ಆ ಕಾರಣದಿಂದ ‘ಎಮರ್ಜೆನ್ಸಿ’ ಮೇಲೆ ಸಿನಿಪ್ರಿಯರು ಹೆಚ್ಚು ನಿರೀಕ್ಷೆ ಇಟ್ಟುಕೊಳ್ಳುವಂತಾಗಿದೆ. ಈಗ ಖ್ಯಾತ ನಿರ್ದೇಶಕ ರಾಮ್​ ಗೋಪಾಲ್​ ವರ್ಮಾ (Ram Gopal Varma) ಅವರು ಇಂದಿರಾ ಗಾಂಧಿ ಮತ್ತು ಕಂಗನಾ ರಣಾವತ್​ ನಡುವೆ ಸಾಮ್ಯತೆ ಇದೆ ಎಂಬುದಕ್ಕೆ ಸಾಕ್ಷಿಯಾಗಿ ಒಂದು ವಿಡಿಯೋ ಹಂಚಿಕೊಂಡಿದ್ದಾರೆ.

1984ರಲ್ಲಿ ಇಂದಿರಾ ಗಾಂಧಿ ನೀಡಿದ ವಿಶೇಷ ವಿಡಿಯೋ ಸಂದರ್ಶನದ ತುಣುಕನ್ನು ರಾಮ್​ ಗೋಪಾಲ್​ ವರ್ಮಾ ಅವರು ಟ್ವಿಟರ್​​ನಲ್ಲಿ ಹಂಚಿಕೊಂಡಿದ್ದಾರೆ. ಆ ಕಾಲದಲ್ಲಿ ಪಂಜಾಬ್​ನಲ್ಲಿ ಇದ್ದ ಪರಿಸ್ಥಿತಿಯ ಬಗ್ಗೆ ಇಂದಿರಾ ಗಾಂಧಿ ಮಾತನಾಡಿದ್ದರು. ಈ ಸಂದರ್ಶನವನ್ನು ಕಂಡು ಆರ್​ಜಿವಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ‘ನಂಬಿದ್ರೆ ನಂಬಿ, ಬಿಟ್ಟರೆ ಬಿಡಿ. ಈ ವಿಡಿಯೋದಲ್ಲಿ ಇಂದಿರಾ ಗಾಂಧಿ ಅವರು ಕಂಗನಾ ರೀತಿ ಮಾಡ್ತಿದ್ದಾರೆ’ ಎಂದು ರಾಮ್​ ಗೋಪಾಲ್​ ವರ್ಮಾ ಕ್ಯಾಪ್ಷನ್​ ನೀಡಿದ್ದಾರೆ.

ಇದನ್ನೂ ಓದಿ
Image
‘ಹುಡುಗಿ’ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದ ರಾಮ್​ ಗೋಪಾಲ್​ ವರ್ಮಾ; ಜುಲೈ 15ಕ್ಕೆ ಸಿನಿಮಾ ರಿಲೀಸ್​
Image
‘ಡೇಂಜರಸ್​’ ಹುಡುಗಿಯರನ್ನು ಬೆಂಗಳೂರಿಗೆ ಕರೆತಂದು ಪರಿಚಯ ಮಾಡಿಸಿದ ರಾಮ್​ ಗೋಪಾಲ್ ವರ್ಮಾ
Image
‘ಕೆಜಿಎಫ್​ 2’, ಉಪೇಂದ್ರ ಮತ್ತು ಸ್ಯಾಂಡಲ್​ವುಡ್​ ಬಗ್ಗೆ ರಾಮ್​ ಗೋಪಾಲ್​ ವರ್ಮಾ ಹೇಳೋದು ಏನು?
Image
‘ಪುನೀತ್​ ಸಾವಿನಿಂದ ಕಟು ಸತ್ಯ ಬಯಲಾಗಿದೆ’: ಆತಂಕದಲ್ಲೇ ಅನಿಸಿಕೆ ಹಂಚಿಕೊಂಡ ರಾಮ್​ ಗೋಪಾಲ್​ ವರ್ಮಾ

ಈ ಟ್ವೀಟ್​ ನೋಡಿ ಕಂಗನಾ ರಣಾವತ್​ ಸಖತ್​ ಖುಷಿ ಆಗಿದ್ದಾರೆ. ರಾಮ್​ ಗೋಪಾಲ್​ ವರ್ಮಾ ಅವರ ಈ ಮಾತನ್ನು ಮೆಚ್ಚುಗೆಯ ರೀತಿ ಅವರು ಸ್ವೀಕರಿಸಿದ್ದಾರೆ. ಇಂದಿರಾ ಗಾಂಧಿ ಪಾತ್ರಕ್ಕೆ ತಮ್ಮ ಆಯ್ಕೆ ಸೂಕ್ತವಾಗಿದೆ ಎಂಬುದನ್ನು ಕಂಗನಾ ಖಚಿತಪಡಿಸಿಕೊಂಡಿದ್ದಾರೆ. ಕೆಲ ದಿನಗಳ ಹಿಂದೆ ಬಿಡುಗಡೆ ಆದ ಫಸ್ಟ್​ ಲುಕ್​ ನೋಡಿರುವ ಎಲ್ಲರೂ ಅಚ್ಚರಿ ವ್ಯಕ್ತಪಡಿಸಿದ್ದರು.

ಕಂಗನಾ ರಣಾವತ್​ ಅವರ ವೃತ್ತಿಜೀವನದಲ್ಲಿ ‘ಎಮರ್ಜೆನ್ಸಿ’ ಸಿನಿಮಾ ಬಹುಮುಖ್ಯ ಆಗಲಿದೆ. ಅದಕ್ಕಾಗಿ ಅವರು ಸಖತ್​ ತಯಾರಿ ಮಾಡಿಕೊಂಡು ಶೂಟಿಂಗ್​ ಆರಂಭಿಸಿದ್ದಾರೆ. ಈಗಾಗಲೇ ಕೆಲವು ಸಿನಿಮಾಗಳಲ್ಲಿ ಇಂದಿರಾ ಗಾಂಧಿ ಅವರ ಪಾತ್ರವನ್ನು ಬೇರೆ ನಟಿಯರು ಮಾಡಿದ್ದಾರೆ. ಆದರೆ ಅವರೆಲ್ಲರಿಗಿಂತಲೂ ಕಂಗನಾ ರಣಾವತ್​ ಅವರ ಲುಕ್​ ಹೆಚ್ಚು ಗಮನ ಸೆಳೆಯುತ್ತಿದೆ. ಈ ಸಿನಿಮಾದಲ್ಲಿ ಕಂಗನಾ ನಟಿಸುವುದು ಮಾತ್ರವಲ್ಲದೇ ನಿರ್ದೇಶನವನ್ನೂ ಮಾಡುತ್ತಿದ್ದಾರೆ. ‘ಎಮರ್ಜೆನ್ಸಿ’ ಸಿನಿಮಾದಲ್ಲಿ ಜಯಪ್ರಕಾಶ್​ ನಾರಾಯಣ್​ ಪಾತ್ರವನ್ನು ಅನುಪಮ್ ಖೇರ್​ ಮಾಡುತ್ತಿದ್ದಾರೆ.

Published On - 11:05 am, Sun, 24 July 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ