AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

ಯಾವುದೇ ಪಾತ್ರ ಕೊಟ್ಟರೂ ನಟ ರಣವೀರ್ ಸಿಂಗ್ ಅವರು ಯಶಸ್ವಿಯಾಗಿ ನಿಭಾಯಿಸುತ್ತಾರೆ. ಲಲಿತ್ ಮೋದಿ ಬಯೋಪಿಕ್​ನಲ್ಲಿ ನಟಿಸಲು ರಣವೀರ್ ಸಿಂಗ್ ಆಸಕ್ತಿ ತೋರಿಸಿದ್ದರು ಎಂಬ ವಿಷಯ ತಿಳಿದುಬಂದಿದೆ. ಈ ವಿಚಾರವನ್ನು ಸ್ವತಃ ಲಲಿತ್ ಮೋದಿ ಅವರೇ ಬಹಿರಂಗಪಡಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?
Lalit Modi, Ranveer SinghImage Credit source: PTI
ಮದನ್​ ಕುಮಾರ್​
|

Updated on: Jun 04, 2026 | 9:46 PM

Share

ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಿಸಿ ಕ್ರಿಕೆಟ್ ಲೋಕದ ಚಿತ್ರಣವನ್ನೇ ಬದಲಿಸಿದ ಲಲಿತ್ ಮೋದಿ (Lalit Modi) ಅವರ ಜೀವನ ಚರಿತ್ರೆ ಈಗ ಬೆಳ್ಳಿಪರದೆಗೆ ಬರಲು ಸಿದ್ಧವಾಗುತ್ತಿದೆ. ತಮ್ಮ ಜೀವನ ಆಧಾರಿತ ಬಯೋಪಿಕ್ (Lalit Modi Biopic) ಕೆಲಸಗಳು ಈಗ ಸ್ಕ್ರಿಪ್ಟಿಂಗ್ ಹಂತದಲ್ಲಿವೆ ಎಂದು ಲಲಿತ್ ಮೋದಿ ಅವರೇ ಅಧಿಕೃತವಾಗಿ ಬಹಿರಂಗಪಡಿಸಿದ್ದಾರೆ. ಅಷ್ಟೇ ಅಲ್ಲದೆ, ಈ ಚಿತ್ರದಲ್ಲಿ ತಮ್ಮ ಪಾತ್ರವನ್ನು ಮಾಡಲು ಬಾಲಿವುಡ್‌ನ ಸ್ಟಾರ್ ನಟ ರಣವೀರ್ ಸಿಂಗ್ (Ranveer Singh) ತೀವ್ರ ಆಸಕ್ತಿ ತೋರಿಸಿದ್ದರು ಎಂಬ ಆಸಕ್ತಿದಾಯಕ ವಿಷಯವನ್ನು ಅವರು ಹಂಚಿಕೊಂಡಿದ್ದಾರೆ.

ಸುದ್ದಿಸಂಸ್ಥೆ ‘ಎಎನ್‌ಐ’ ಜೊತೆ ಮಾತನಾಡಿದ ಲಲಿತ್ ಮೋದಿ, ‘ನನ್ನ ಬಯೋಪಿಕ್ ಕೆಲಸಗಳು ನಡೆಯುತ್ತಿರುವುದು ನಿಜ. ಸದ್ಯ ಅದಕ್ಕೆ ಕಥೆ ಮತ್ತು ಚಿತ್ರಕಥೆ ಸಿದ್ಧಪಡಿಸಲಾಗುತ್ತಿದೆ. ಇದಕ್ಕಾಗಿ ಈಗಾಗಲೇ ನೂರಾರು ಸಂದರ್ಶನಗಳನ್ನು ಮಾಡಲಾಗಿದೆ. ಸೋನಿ ಸಂಸ್ಥೆಯನ್ನು ಮುನ್ನಡೆಸುತ್ತಿದ್ದ ಸ್ನೇಹಾ ರಜನಿ ಅವರ ನೇತೃತ್ವದ ಇಡೀ ತಂಡ ಈ ಸ್ಕ್ರಿಪ್ಟಿಂಗ್ ಜವಾಬ್ದಾರಿಯನ್ನು ಹೊತ್ತುಕೊಂಡಿದೆ’ ಎಂದು ತಿಳಿಸಿದ್ದಾರೆ.

ಬಯೋಪಿಕ್‌ನಲ್ಲಿ ನಿಮ್ಮ ಪಾತ್ರವನ್ನು ಯಾರು ನಿರ್ವಹಿಸಬೇಕೆಂದು ಬಯಸುತ್ತೀರಿ ಎಂದು ಕೇಳಿದಾಗ, ಲಲಿತ್ ಮೋದಿ ಅವರು ರಣವೀರ್ ಸಿಂಗ್ ಅವರೊಂದಿಗಿನ ಭೇಟಿಯನ್ನು ನೆನಪಿಸಿಕೊಂಡರು. ‘ರಣವೀರ್ ಸಿಂಗ್ ನನ್ನ ಪಾತ್ರವನ್ನು ಮಾಡಲು ಬಯಸಿದ್ದಾರೆ. ಎರಡು ವರ್ಷಗಳ ಹಿಂದೆ ಅವರೇ ಸ್ವತಃ ನನಗೆ ಕರೆ ಮಾಡಿ, ನನ್ನನ್ನು ಭೇಟಿಯಾಗಲು ಲಂಡನ್‌ಗೆ ಬಂದಿದ್ದರು. ಅದಕ್ಕೂ ಮುನ್ನ ನನಗೆ ರಣವೀರ್ ಪರಿಚಯ ಇರಲಿಲ್ಲ, ಆದರೆ ದೀಪಿಕಾ ಪಡುಕೋಣೆ ಚೆನ್ನಾಗಿ ಗೊತ್ತಿದ್ದರು. ರಣವೀರ್ ನನ್ನನ್ನು ಭೇಟಿಯಾದ ಆ ದಿನ ನನಗೆ ಇಂದಿಗೂ ನೆನಪಿದೆ’ ಎಂದಿದ್ದಾರೆ.

ಲಲಿತ್ ಮೋದಿ ಅವರ ಪ್ರಕಾರ, ರಣವೀರ್ ಸಿಂಗ್ ಅವರ ಸಿನಿ ಜರ್ನಿಯನ್ನು ಅರ್ಥಮಾಡಿಕೊಳ್ಳಲು ತುಂಬಾ ಆಸಕ್ತಿ ತೋರಿಸಿದ್ದರಂತೆ. ‘ತಮ್ಮ ಸಿನಿಮೀಯ ಜೀವನದಲ್ಲಿ ಯಾವುದಾದರೂ ಒಂದು ಐತಿಹಾಸಿಕ ಪಾತ್ರವನ್ನು ಮಾಡಬೇಕು ಎಂದರೆ, ಅದು ಐಪಿಎಲ್ ಕಮಿಷನರ್ ಆಗಿದ್ದ ಲಲಿತ್ ಮೋದಿ ಅವರ ಪಾತ್ರ ಮಾತ್ರ ಎಂದು ರಣವೀರ್ ನನ್ನ ಬಳಿ ಹೇಳಿದ್ದರು. ನಾನಾಗಿಯೇ ಅವರಿಗೆ ಈ ಆಫರ್ ಕೊಟ್ಟಿರಲಿಲ್ಲ, ಅವರೇ ಆಸಕ್ತಿ ವಹಿಸಿದ್ದರು. ರಣವೀರ್ ಒಬ್ಬ ಅದ್ಭುತ ನಟ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ’ ಎಂದು ಮೋದಿ ಹೊಗಳಿದ್ದಾರೆ.

ಇದನ್ನೂ ಓದಿ: ರಣವೀರ್ ಸಿಂಗ್ ಬ್ಯಾನ್ ಮಾಡಿದ್ದಕ್ಕೆ ಗರಂ ಆದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ

ಆದರೆ, ರಣವೀರ್ ಸಿಂಗ್ ಈಗ ತುಂಬಾ ಬಿಜಿಯಾಗಿದ್ದು, ಅವರ ಸಿನಿಮಾ ಗ್ರಾಫ್ ಮತ್ತಷ್ಟು ಎತ್ತರಕ್ಕೆ ಬೆಳೆದಿದೆ. ಹೀಗಾಗಿ ಅವರು ಇಂದಿಗೂ ಈ ಪ್ರಾಜೆಕ್ಟ್‌ನಲ್ಲಿ ನಟಿಸಲು ಆಸಕ್ತಿ ಹೊಂದಿದ್ದಾರಾ ಅಥವಾ ಇಲ್ಲವೇ ಎಂಬುದು ಸದ್ಯಕ್ಕೆ ತಮಗೂ ತಿಳಿದಿಲ್ಲ ಎಂದು ಲಲಿತ್ ಮೋದಿ ಸ್ಪಷ್ಟಪಡಿಸಿದ್ದಾರೆ. ವಿಶ್ವದ ಅತಿ ದೊಡ್ಡ ಕ್ರಿಕೆಟ್ ಹಬ್ಬವಾದ ಐಪಿಎಲ್ ಅನ್ನು ಕಟ್ಟಿಬೆಳೆಸಿದ ಲಲಿತ್ ಮೋದಿ ಅವರ ಬಯೋಪಿಕ್ ಅನ್ನು ಯಾರು ನಿರ್ದೇಶನ ಮಾಡಲಿದ್ದಾರೆ ಮತ್ತು ಯಾರೆಲ್ಲಾ ನಟಿಸಲಿದ್ದಾರೆ ಎಂಬ ಅಧಿಕೃತ ಪ್ರಕಟಣೆಗಾಗಿ ಸದ್ಯ ಸಿನಿಪ್ರೇಕ್ಷಕರು ಕುತೂಹಲದಿಂದ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಟಿ20 ಸರಣಿಗಾಗಿ ಐರ್ಲೆಂಡ್ ತಲುಪಿದ ಟೀಂ ಇಂಡಿಯಾ
ಟಿ20 ಸರಣಿಗಾಗಿ ಐರ್ಲೆಂಡ್ ತಲುಪಿದ ಟೀಂ ಇಂಡಿಯಾ
ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಕೃಷ್ಣಭೈರೇಗೌಡ ಕ್ಲಾಸ್
ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಕೃಷ್ಣಭೈರೇಗೌಡ ಕ್ಲಾಸ್
ಕನ್ನೇರಿ ಸ್ವಾಮೀಜಿ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ
ಕನ್ನೇರಿ ಸ್ವಾಮೀಜಿ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ
ಫುಟ್ ಪಾತ್ ತೆರವಿಗೆ ಕೃಷ್ಣಬೈರೇಗೌಡ ದಿಟ್ಟ ಹೆಜ್ಜೆ
ಫುಟ್ ಪಾತ್ ತೆರವಿಗೆ ಕೃಷ್ಣಬೈರೇಗೌಡ ದಿಟ್ಟ ಹೆಜ್ಜೆ
ಹೈಕಮಾಂಡ್​​​​ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ
ಹೈಕಮಾಂಡ್​​​​ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ
15ವರ್ಷಗಳ ಪಯಣ ಎಂದಿದ್ದ ಗೋಯೆಂಕಾಗೆ ಎರಡೇ ವರ್ಷಕ್ಕೆ ಬೇಡವಾದ ಪಂತ್
15ವರ್ಷಗಳ ಪಯಣ ಎಂದಿದ್ದ ಗೋಯೆಂಕಾಗೆ ಎರಡೇ ವರ್ಷಕ್ಕೆ ಬೇಡವಾದ ಪಂತ್
TV9 ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್
TV9 ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್
ಮುಂಬೈ ಮೇಯರ್ ಕಣ್ಣೆದುರೇ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದ ಪೌರಕಾರ್ಮಿಕ
ಮುಂಬೈ ಮೇಯರ್ ಕಣ್ಣೆದುರೇ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದ ಪೌರಕಾರ್ಮಿಕ
ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು
ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು
ಸಿಇಟಿ ರ‍್ಯಾಂಕ್ ಬಂದಿಲ್ಲವೆಂದ ವಿದ್ಯಾರ್ಥಿಗಳ ದೂರಿಗೆ ಸ್ಪಷ್ಟನೆ ನೀಡಿದ KEA
ಸಿಇಟಿ ರ‍್ಯಾಂಕ್ ಬಂದಿಲ್ಲವೆಂದ ವಿದ್ಯಾರ್ಥಿಗಳ ದೂರಿಗೆ ಸ್ಪಷ್ಟನೆ ನೀಡಿದ KEA