AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aishwarya Rai Bachchan: ನಟಿ ಐಶ್ವರ್ಯಾ ರೈ ಬಚ್ಚನ್​ ಮತ್ತೆ ಪ್ರೆಗ್ನೆಂಟ್​? ವಿಡಿಯೋ ಕಂಡು ಅನುಮಾನ ವ್ಯಕ್ತಪಡಿಸಿದ ಫ್ಯಾನ್ಸ್​

Aishwarya Rai Pregnant: ಹೊಸ ವಿಡಿಯೋ ವೈರಲ್​ ಆಗುತ್ತಿದ್ದಂತೆಯೇ ನೆಟ್ಟಿಗರು ಹಲವಾರು ಬಗೆಯಲ್ಲಿ ಕಮೆಂಟ್​ ಮಾಡಲು ಆರಂಭಿಸಿದ್ದಾರೆ. ಐಶ್ವರ್ಯಾ ರೈ ಬಚ್ಚನ್​ ಪ್ರೆಗ್ನೆಂಟ್​ ಎಂದು ಅನೇಕರು ಊಹಿಸಿದ್ದಾರೆ.

Aishwarya Rai Bachchan: ನಟಿ ಐಶ್ವರ್ಯಾ ರೈ ಬಚ್ಚನ್​ ಮತ್ತೆ ಪ್ರೆಗ್ನೆಂಟ್​? ವಿಡಿಯೋ ಕಂಡು ಅನುಮಾನ ವ್ಯಕ್ತಪಡಿಸಿದ ಫ್ಯಾನ್ಸ್​
ಐಶ್ವರ್ಯಾ ರೈ ಬಚ್ಚನ್
TV9 Web
| Edited By: |

Updated on:Jul 20, 2022 | 7:20 AM

Share

ಖ್ಯಾತ ನಟಿ ಐಶ್ವರ್ಯಾ ರೈ ಬಚ್ಚನ್​ (Aishwarya Rai Bachchan) ಅವರ ಬಗ್ಗೆ ಹೊಸ ಅನುಮಾನ ಮೂಡಿದೆ. ಅವರು ಮತ್ತೆ ತಾಯಿ ಆಗುತ್ತಿದ್ದಾರೆ ಎಂಬ ಬಗ್ಗೆ ಗಾಸಿಪ್​ ಹಬ್ಬಿದೆ. ಇಷ್ಟಕ್ಕೆಲ್ಲ ಕಾರಣ ಆಗಿರುವುದು ಒಂದೇ ಒಂದು ವಿಡಿಯೋ. ಹೌದು, ಐಶ್ವರ್ಯಾ ರೈ ಬಚ್ಚನ್​ ಅವರು ಇತ್ತೀಚೆಗೆ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು. ಅವರ ಜೊತೆ ಪುತ್ರಿ ಆರಾಧ್ಯಾ ಕೂಡ ಇದ್ದಳು. ಈ ವೇಳೆ ಐಶ್ವರ್ಯಾ ಧರಿಸಿದ್ದ ಬಟ್ಟೆ ಮತ್ತು ಅವರು ನಡೆದು ಬಂದ ರೀತಿ ನೋಡಿ ಅಭಿಮಾನಿಗಳ ಮನದಲ್ಲಿ ಪ್ರಶ್ನೆ ಮೂಡಿದೆ. ಅಮಿತಾಭ್​ ಬಚ್ಚನ್​ (Amitabh Bachchan) ಸೊಸೆ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರಾ ಎಂಬ ಅನುಮಾನವನ್ನು ನೆಟ್ಟಿಗರು ವ್ಯಕ್ತಪಡಿಸಿದ್ದಾರೆ. ಪ್ರೆಗ್ನೆಂಟ್​ (Aishwarya Rai Pregnant) ಹೌದೋ ಅಲ್ಲವೋ ಎಂಬ ಬಗ್ಗೆ ಕುಟುಂಬದ ಕಡೆಯಿಂದ ಸ್ಪಷ್ಟನೆ ಸಿಗಬೇಕಷ್ಟೇ.

ನಟಿಯರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಾಗ ಗ್ಲಾಮರಸ್​ ಆಗಿ ಡ್ರೆಸ್​ ಮಾಡಿಕೊಳ್ಳಲು ಇಷ್ಟಪಡುತ್ತಾರೆ. ಇತ್ತೀಚೆಗೆ ಐಶ್ವರ್ಯಾ ರೈ ಬಚ್ಚನ್​ ಅವರು ಫ್ಯಾಮಿಲಿ ಜೊತೆ ನ್ಯೂಯಾರ್ಕ್​ಗೆ ತೆರಳಿದ್ದರು. ವಾಪಸ್​ ಬರುವಾಗ ಮುಂಬೈ ವಿಮಾನ ನಿಲ್ದಾಣದಲ್ಲಿ ಅವರ ಫೋಟೋ ಮತ್ತು ವಿಡಿಯೋ ಸೆರೆ ಹಿಡಿಯಲು ಪಾಪರಾಜಿಗಳು ಮುಗಿಬಿದ್ದಿದ್ದಾರೆ. ಈ ಸಮಯದಲ್ಲಿ ಐಶ್ವಯಾ ಧರಿಸಿದ್ದ ಡ್ರೆಸ್​ ಹೈಲೈಟ್​ ಆಗಿದೆ.

ಇದನ್ನೂ ಓದಿ
Image
Devdas: ‘ದೇವದಾಸ್​’ ಚಿತ್ರಕ್ಕೆ 20 ವರ್ಷ; ಸಂಭ್ರಮಿಸಿದ ಐಶ್ವರ್ಯಾ ರೈ ಬಚ್ಚನ್​, ಸಂಜಯ್​ ಲೀಲಾ ಬನ್ಸಾಲಿ
Image
‘ಪೊನ್ನಿಯಿನ್​ ಸೆಲ್ವನ್​’ ಚಿತ್ರದ ಟೀಸರ್ ರಿಲೀಸ್ ಮಾಡಿದ ರಕ್ಷಿತ್ ಶೆಟ್ಟಿ; ಗಮನ ಸೆಳೆದ ಐಶ್ವರ್ಯಾ, ವಿಕ್ರಮ್
Image
ನಟಿ ಐಶ್ವರ್ಯಾ ರೈ ಜತೆ ಡ್ಯಾನ್ಸ್ ಮಾಡಿದ ಆರಾಧ್ಯಾ; ಇಲ್ಲಿದೆ ಕ್ಯೂಟ್ ವಿಡಿಯೋ
Image
ನಟಿ ಐಶ್ವರ್ಯಾ ರೈ ಅವರ ಒಟ್ಟೂ ಆಸ್ತಿ ಎಷ್ಟು? ನಟನೆಯಿಂದ ದೂರ ಉಳಿದರೂ ಬರುತ್ತಿದೆ ಕೋಟಿ ಕೋಟಿ ದುಡ್ಡು

ಐಶ್ವರ್ಯಾ ರೈ ಅವರು ಉದ್ದನೆಯ ಗೌನ್​ ರೀತಿಯ ಕಾಸ್ಟ್ಯೂಮ್​ ಧರಿಸಿದ್ದಾರೆ. ಅದರ ಮೇಲೆ ಕಪ್ಪು ಬಣ್ಣದ ಕೋಟ್​ ತೊಟ್ಟಿದ್ದಾರೆ. ಅದೂ ಸಾಲದೆಂಬಂತೆ, ಹೊಟ್ಟೆ ಭಾಗ ಕಾಣದ ರೀತಿಯಲ್ಲಿ ಕೈ ಅಡ್ಡ ಇಟ್ಟುಕೊಂಡೇ ನಡೆದುಬಂದಿದ್ದಾರೆ. ಈ ವಿಡಿಯೋ ವೈರಲ್​ ಆಗುತ್ತಿದ್ದಂತೆಯೇ ನೆಟ್ಟಿಗರು ಹಲವಾರು ಬಗೆಯಲ್ಲಿ ಕಮೆಂಟ್​ ಮಾಡಲು ಆರಂಭಿಸಿದ್ದಾರೆ. ಐಶ್ವರ್ಯಾ ಪ್ರೆಗ್ನೆಂಟ್​ ಆಗಿರುವುದರಿಂದಲೇ, ಬೇಬಿ ಬಂಪ್​ ಕಾಣಬಾರದು ಎಂದು ಈ ರೀತಿ ನಡೆದುಕೊಂಡಿದ್ದಾರೆ ಎಂಬುದು ಹಲವರ ವಾದ.

ಸಿನಿಮಾ ವಿಚಾರಕ್ಕೆ ಬರುವುದಾದರೆ ಒಂದೊಳ್ಳೆಯ ಕಮ್​ಬ್ಯಾಕ್​ ಪ್ರಾಜೆಕ್ಟ್​ಗಾಗಿ ಐಶ್ವರ್ಯಾ ರೈ ಕಾಯುತ್ತಿದ್ದಾರೆ. ಈಗ ಅವರು ಮಣಿರತ್ನಂ ನಿರ್ದೇಶನದ ‘ಪೊನ್ನಿಯಿನ್​ ಸೆಲ್ವನ್’​ ಸಿನಿಮಾದಲ್ಲಿ ನಟಿಸಿದ್ದಾರೆ. ಅದು ಸೆಪ್ಟೆಂಬರ್​ 30ರಂದು ರಿಲೀಸ್​ ಆಗಲಿದೆ. ಆ ಚಿತ್ರದಲ್ಲಿ ಅವರು ನಂದಿನಿ ಎಂಬ ರಾಣಿ ಪಾತ್ರ ಮಾಡಿದ್ದಾರೆ. ‘ಪೊನ್ನಿಯಿನ್​ ಸೆಲ್ವನ್’​ ಮೂಲಕ ಐಶ್ವರ್ಯಾ ಭರ್ಜರಿ ಗೆಲುವು ಪಡೆಯುತ್ತಾರೆ ಎಂದು ನಿರೀಕ್ಷಿಸಲಾಗಿದೆ.

Published On - 7:19 am, Wed, 20 July 22

Follow Us
TV9 Web
TV9 Web

TV9 Kannada

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ