AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tiger 3: ‘ಟೈಗರ್​ 3’ ಸಿನಿಮಾದಲ್ಲಿ ಸಲ್ಮಾನ್​, ಶಾರುಖ್​ ಜೊತೆ ಹೃತಿಕ್​ ರೋಷನ್​? ಅಭಿಮಾನಿಗಳಿಗೆ ಹಬ್ಬ

Hrithik Roshan: ಪ್ರತಿಷ್ಠಿತ ‘ಯಶ್​ ರಾಜ್​ ಫಿಲ್ಮ್ಸ್​’ ಸಂಸ್ಥೆ ಮೂಲಕ ‘ವಾರ್​’, ‘ಏಕ್​ ಥ ಟೈಗರ್​’, ‘ಟೈಗರ್​ ಜಿಂದಾ ಹೈ’, ‘ಪಠಾಣ್​’, ‘ಟೈಗರ್​ 3’ ಸಿನಿಮಾಗಳು ಮೂಡಿಬಂದಿವೆ. ಈ ಎಲ್ಲ ಚಿತ್ರಗಳ ಕಥೆಗೆ ಒಂದಕ್ಕೊಂದು ಲಿಂಕ್​ ಇಡಲಾಗಿದೆ. ಆ ಮೂಲಕ ‘ವೈಆರ್​ಎಫ್​ ಸ್ಪೈ ಯೂನಿವರ್ಸ್​’ ಸೃಷ್ಟಿಸಲಾಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

Tiger 3: ‘ಟೈಗರ್​ 3’ ಸಿನಿಮಾದಲ್ಲಿ ಸಲ್ಮಾನ್​, ಶಾರುಖ್​ ಜೊತೆ ಹೃತಿಕ್​ ರೋಷನ್​? ಅಭಿಮಾನಿಗಳಿಗೆ ಹಬ್ಬ
ಸಲ್ಮಾನ್​ ಖಾನ್​, ಹೃತಿಕ್​ ರೋಷನ್​
ಮದನ್​ ಕುಮಾರ್​
|

Updated on: Nov 05, 2023 | 11:29 AM

Share

ಸಲ್ಮಾನ್​ ಖಾನ್ (Salman Khan)​ ಅವರ ಸಿನಿಮಾ ರಿಲೀಸ್​ ಆಗುವಾಗ ಅಭಿಮಾನಿಗಳ ಪಾಲಿಗೆ ಹಬ್ಬದ ವಾತಾವರಣ ನಿರ್ಮಾಣ ಆಗುತ್ತದೆ. ಈ ವರ್ಷ ದೀಪಾವಳಿ ಪ್ರಯುಕ್ತ ನವೆಂಬರ್​ 12ರಂದು ಟೈಗರ್​ 3’ (Tiger 3) ಚಿತ್ರ ಬಿಡುಗಡೆ ಆಗಲಿದೆ. ಈಗಾಗಲೇ ಈ ಸಿನಿಮಾ ಮೇಲೆ ಸಿಕ್ಕಾಪಟ್ಟೆ ಹೈಪ್ ಸೃಷ್ಟಿ ಆಗಿದೆ. ‘ಯಶ್​ ರಾಜ್​ ಫಿಲ್ಮ್ಸ್​’ ಸಂಸ್ಥೆ ಈ ಚಿತ್ರಕ್ಕೆ ಬಂಡವಾಳ ಹೂಡಿದೆ. ಈ ಸಿನಿಮಾದಲ್ಲಿ ಶಾರುಖ್​ ಖಾನ್ ಕೂಡ ಅತಿಥಿ ಪಾತ್ರ ಮಾಡಿದ್ದಾರೆ ಎಂಬುದು ಈಗಾಗಲೇ ಗೊತ್ತಿರುವ ವಿಚಾರ. ಅಚ್ಚರಿಯ ಸಂಗತಿ ಏನೆಂದರೆ, ನಟ ಹೃತಿಕ್​ ರೋಷನ್​ (Hrithik Roshan) ಸಹ ‘ಟೈಗರ್​ 3’ ಸಿನಿಮಾದಲ್ಲಿ ನಟಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಒಂದು ವೇಳೆ ಇದು ನಿಜವೇ ಹೌದಾದರೆ ಅಭಿಮಾನಿಗಳ ಪಾಲಿಗೆ ಭರ್ಜರಿ ಮನರಂಜನೆ ಸಿಗಲಿದೆ.

‘ಟೈಗರ್​ 3’ ಸಿನಿಮಾದಲ್ಲಿ ಸಲ್ಮಾನ್​ ಖಾನ್​ ಮತ್ತು ಕತ್ರಿನಾ ಕೈಫ್​ ಅವರು ಜೋಡಿಯಾಗಿ ನಟಿಸಿದ್ದಾರೆ. ಸಲ್ಮಾನ್​ ಮಾತ್ರವಲ್ಲದೇ ಕತ್ರಿನಾ ಕೈಫ್​ ಕೂಡ ಆ್ಯಕ್ಷನ್​ ದೃಶ್ಯಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದರ ಝಲಕ್​ ತೋರಿಸುವಂತಹ ಪೋಸ್ಟರ್​ಗಳು ಈಗಾಗಲೇ ವೈರಲ್​ ಆಗಿವೆ. ಪಠಾಣ್​ ಪಾತ್ರದಲ್ಲಿ ಶಾರುಖ್​ ಖಾನ್​ ಅವರು ಗೆಸ್ಟ್​ ಅಪಿಯರೆನ್ಸ್​ ನೀಡಲಿದ್ದಾರೆ. ಇದರ ಜೊತೆ ಹೃತಿಕ್​ ರೋಷನ್​ ಕೂಡ ಇರಲಿದ್ದಾರೆ ಎಂದು ‘ಪಿಂಕ್​ ವಿಲ್ಲಾ’ ವರದಿ ಮಾಡಿದೆ. ಇದರ ಬಗ್ಗೆ ಚಿತ್ರತಂಡದವರು ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ. ಆದರೂ ಗಾಸಿಪ್​ ಬಲವಾಗಿದೆ.

ಇದನ್ನೂ ಓದಿ: Tiger 3: ಸಲ್ಮಾನ್​ ಖಾನ್​ ನಟನೆಯ ‘ಟೈಗರ್​ 3’ ಚಿತ್ರಕ್ಕೆ ‘ಯು/ಎ’ ಪ್ರಮಾಣಪತ್ರ; ಸಿನಿಮಾ ಅವಧಿ ಬಗ್ಗೆ ಇಲ್ಲಿದೆ ಮಾಹಿತಿ

‘ಯಶ್​ ರಾಜ್​ ಫಿಲ್ಮ್ಸ್​’ ಸಂಸ್ಥೆ ಮೂಲಕ ‘ವಾರ್​’, ‘ಏಕ್​ ಥ ಟೈಗರ್​’, ‘ಟೈಗರ್​ ಜಿಂದಾ ಹೈ’, ‘ಪಠಾಣ್​’, ‘ಟೈಗರ್​ 3’ ಸಿನಿಮಾಗಳು ಮೂಡಿಬಂದಿವೆ. ಈ ಎಲ್ಲ ಸಿನಿಮಾಗಳ ಕಥೆಗೆ ಒಂದಕ್ಕೊಂದು ಲಿಂಕ್​ ಇಡಲಾಗಿದೆ. ಆ ಮೂಲಕ ‘ವೈಆರ್​ಎಸ್​ ಸ್ಪೈ ಯೂನಿವರ್ಸ್​’ ಸೃಷ್ಟಿಸಲಾಗಿದೆ. ‘ವಾರ್​’ ಸಿನಿಮಾದಲ್ಲಿ ಹೃತಿಕ್​ ರೋಷನ್​ ಮಾಡಿದ್ದ ಕಬೀರ್​ ಎಂಬ ಪಾತ್ರವು ‘ಟೈಗರ್​ 3’ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದೆ ಎಂದು ಹೇಳಲಾಗುತ್ತಿದೆ. ಈ ಎಲ್ಲ ಕಾರಣಗಳಿಂದಾಗಿ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಾಗಿದೆ.

ಇದನ್ನೂ ಓದಿ: ಕಲರ್​ಫುಲ್​ ಬಟ್ಟೆ ಧರಿಸಿ ‘ಟೈಗರ್​ 3’ ಸಿನಿಮಾದ ರಂಗು ಹೆಚ್ಚಿಸಿದ ಕತ್ರಿನಾ ಕೈಫ್​

ಮನೀಶ್​ ಶರ್ಮಾ ಅವರು ‘ಟೈಗರ್​ 3’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಅದ್ದೂರಿ ಬಜೆಟ್​ನಲ್ಲಿ ಈ ಚಿತ್ರ ನಿರ್ಮಾಣ ಆಗಿದೆ. ಟ್ರೇಲರ್​ ನೋಡಿದ ಎಲ್ಲರೂ ವಾವ್​ ಎಂದಿದ್ದಾರೆ. ಈ ಸಿನಿಮಾದಲ್ಲಿ ಇಮ್ರಾನ್​ ಹಷ್ಮಿ ಅವರು ವಿಲನ್​ ಆಗಿ ನಟಿಸಿರುವುದು ಕೂಡ ವಿಶೇಷ. ಶುಕ್ರವಾರದ ಬದಲು ಈ ಸಿನಿಮಾ ಭಾನುವಾರ (ನ.12) ಬಿಡುಗಡೆ ಆಗಲಿದೆ. ಹಿಂದಿ ಮಾತ್ರವಲ್ಲದೇ ತೆಲುಗು ಮತ್ತು ತಮಿಳಿನಲ್ಲೂ ಈ ಚಿತ್ರ ಬಿಡುಗಡೆ ಆಗಲಿದೆ. ಈಗಾಗಲೇ ಅಡ್ವಾನ್ಸ್​ ಬುಕಿಂಗ್​ ಶುರುವಾಗಿದ್ದು, ಭರ್ಜರಿ ಓಪನಿಂಗ್​ ಪಡೆಯುವ ಸೂಚನೆ ಸಿಕ್ಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು