3ನೇ ಮಗುವಿನ ನಿರೀಕ್ಷೆಯಲ್ಲಿದ್ದಾರಾ ಕರೀನಾ, ಸೈಫ್ ಅಲಿ ಖಾನ್? ವಿಡಿಯೋ ವೈರಲ್

ಕರೀನಾ ಕಪೂರ್ ಖಾನ್ ಮತ್ತು ಸೈಫ್ ಅಲಿ ಖಾನ್ ದಂಪತಿಗೆ ಈಗಾಗಲೇ ಇಬ್ಬರು ಗಂಡು ಮಕ್ಕಳಿದ್ದಾರೆ. ಈಗ ಅವರು ಮೂರನೇ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರಾ ಎಂಬ ಅನುಮಾನ ಮೂಡಿದೆ. ಅದಕ್ಕೆ ಕಾರಣ ಆಗಿರುವುದು ಒಂದು ವಿಡಿಯೋ. ಕಮೆಂಟ್ ಮೂಲಕ ಫ್ಯಾನ್ಸ್ ಈ ಬಗ್ಗೆ ಪ್ರಶ್ನೆ ಮಾಡುತ್ತಿದ್ದಾರೆ.

3ನೇ ಮಗುವಿನ ನಿರೀಕ್ಷೆಯಲ್ಲಿದ್ದಾರಾ ಕರೀನಾ, ಸೈಫ್ ಅಲಿ ಖಾನ್? ವಿಡಿಯೋ ವೈರಲ್
Kareena Kapoor Khan

Updated on: Aug 21, 2026 | 6:39 PM

ಬಾಲಿವುಡ್‌ನ ಖ್ಯಾತ ನಟಿ ಕರೀನಾ ಕಪೂರ್ ಖಾನ್ ಹಾಗೂ ಸೈಫ್ ಅಲಿ ಖಾನ್ (Saif Ali Khan) ದಂಪತಿ ಮೂರನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆಯೇ ಎಂಬ ಕುತೂಹಲಕಾರಿ ಚರ್ಚೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿ ಸದ್ದು ಮಾಡುತ್ತಿದೆ. ಪಪಾರಾಜಿಗಳು ಹಂಚಿಕೊಂಡಿರುವ ವಿಡಿಯೋ ಒಂದರಲ್ಲಿ ಕರೀನಾ (Kareena Kapoor Khan) ‘ಬೇಬಿ ಬಂಪ್’ ರೀತಿಯ ಹೊಟ್ಟೆಯೊಂದಿಗೆ ಕಾಣಿಸಿಕೊಂಡಿದ್ದು, ಅಭಿಮಾನಿಗಳಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ ಕರೀನಾ ಕಪೂರ್ ಜಿಮ್ ಉಡುಪಿನಲ್ಲಿ ತಮ್ಮ ಕಾರಿನತ್ತ ಸಾಗುತ್ತಿರುವುದನ್ನು ಕಾಣಬಹುದು. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣ ಆಗಿದೆ. ‘ಕರೀನಾ ಮತ್ತೆ ಗರ್ಭಿಣಿಯಾಗಿದ್ದಾರಾ?’ ಎಂದು ಅಭಿಮಾನಿಗಳು ಕಾಮೆಂಟ್ ಬಾಕ್ಸ್‌ನಲ್ಲಿ ಸತತವಾಗಿ ಪ್ರಶ್ನಿಸುತ್ತಿದ್ದಾರೆ. ಆದರೆ, ಈ ವಿಡಿಯೋ ಇತ್ತೀಚಿನದ್ದೋ ಅಥವಾ ಹಳೆಯದೋ ಎಂಬ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

ಕರೀನಾ ಕಪೂರ್ ಹಾಗೂ ಸೈಫ್ ಅಲಿ ಖಾನ್ ದಂಪತಿಗೆ ಈಗಾಗಲೇ ತೈಮೂರ್ ಮತ್ತು ಜೆಹ್ ಎಂಬ ಇಬ್ಬರು ಗಂಡು ಮಕ್ಕಳಿದ್ದಾರೆ. 2022ರಲ್ಲೂ ಸಹ ಕರೀನಾ ಮೂರನೇ ಬಾರಿಗೆ ಗರ್ಭಿಣಿಯಾಗಿದ್ದಾರೆ ಎಂಬ ವದಂತಿಗಳು ಹರಡಿದ್ದವು. ಆಗ ಈ ವದಂತಿಗಳಿಗೆ ಇನ್‌ಸ್ಟಾಗ್ರಾಮ್ ಮೂಲಕ ತಮಾಷೆಯಾಗಿ ಸ್ಪಷ್ಟನೆ ನೀಡಿದ್ದ ಕರೀನಾ, ‘ಅದು ನಾನು ತಿಂದ ಪಾಸ್ತಾ ಮತ್ತು ವೈನ್‌ನಿಂದ ಬಂದ ಹೊಟ್ಟೆ ಅಷ್ಟೇ, ಶಾಂತರಾಗಿ! ನಾನು ಗರ್ಭಿಣಿಯಲ್ಲ. ನಮ್ಮ ದೇಶದ ಜನಸಂಖ್ಯೆಗೆ ಈಗಾಗಲೇ ಸಾಕಷ್ಟು ಕೊಡುಗೆ ನೀಡಿದ್ದೇನೆ ಎಂದು ಸೈಫ್ ಹೇಳುತ್ತಿದ್ದಾರೆ’ ಎಂದು ಸ್ಪಷ್ಟಪಡಿಸಿದ್ದರು.

ಕರೀನಾ ಕಪೂರ್ ಖಾನ್ ವೈರಲ್ ವಿಡಿಯೋ:

ನಂತರ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನವೊಂದರಲ್ಲಿ ಈ ಕುರಿತು ಮಾತನಾಡಿದ್ದ ಕರೀನಾ ಕಪೂರ್ ಅವರು, ‘ಸುದೀರ್ಘ ರಜೆಯಲ್ಲಿದ್ದಾಗ ಸಾಕಷ್ಟು ಪಿಜ್ಜಾ ತಿಂದಿದ್ದೆ. ಮಹಿಳೆಯರು ಸ್ವಲ್ಪ ತೂಕ ಹೆಚ್ಚಿಸಿಕೊಂಡ ತಕ್ಷಣವೇ ಅವರು ಗರ್ಭಿಣಿ ಎಂದು ಭಾವಿಸುವುದು ಎಷ್ಟು ಸರಿ? ನಾನೇನು ಮಷಿನ್ ಅಲ್ಲ, ಆ ನಿರ್ಧಾರವನ್ನು ನನಗೇ ಬಿಟ್ಟುಬಿಡಿ’ ಎಂದು ಗರಂ ಆಗಿದ್ದರು.

ಇದನ್ನೂ ಓದಿ: ಸೈಫ್-ಕರೀನಾ ಹೇಳಿಕೆಯಲ್ಲೇ ಭಿನ್ನತೆ; ಮತ್ತೆ ಮುನ್ನೆಲೆಗೆ ಬಂದ ತೈಮೂರ್ ಹೆಸರಿನ ವಿವಾದ

ಇದೀಗ ಮತ್ತೆ ಅಂಥದ್ದೇ ಒಂದು ವಿಡಿಯೋ ವೈರಲ್ ಆಗಿದ್ದು, ಇದು ಕೇವಲ ಗಾಳಿ ಸುದ್ದಿಯೋ ಅಥವಾ ನಿಜವೋ ಎಂಬುದನ್ನು ಕರೀನಾ ಅವರೇ ಸ್ಪಷ್ಟಪಡಿಸಬೇಕಿದೆ. ಸದ್ಯಕ್ಕಂತೂ ಕರೀನಾ ಕಪೂರ್ ಅವರಾಗಲಿ ಅಥವಾ ಸೈಫ್ ಅಲಿ ಖಾನ್ ಅವರಾಗಲಿ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us