AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧುರಂಧರ್ 2’ ಸಿನಿಮಾದಲ್ಲಿ ಸಲ್ಮಾನ್ ಖಾನ್? ವೈರಲ್ ಆಗಿದೆ ಫೋಟೋ

‘ಧುರಂಧರ್’ ಕಥೆಯಲ್ಲಿ ಪ್ರತಿ ಪಾತ್ರಕ್ಕೂ ಮಹತ್ವ ಇದೆ. ಬಾಲಿವುಡ್​​ನ ಘಟಾನುಘಟಿ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಮಾರ್ಚ್ 19ರಂದು ರಿಲೀಸ್ ಆಗಲಿರುವ ‘ಧುರಂಧರ್ 2’ ಸಿನಿಮಾದಲ್ಲಿ ಸಲ್ಮಾನ್ ಖಾನ್ ಅತಿಥಿ ಪಾತ್ರ ಮಾಡಿದ್ದಾರೆ ಎಂಬ ಗಾಸಿಪ್ ಹಬ್ಬಿದೆ. ಇಂಟರ್​​ನೆಟ್​ನಲ್ಲಿ ಒಂದು ಫೋಟೋ ವೈರಲ್ ಆಗಿದ್ದು, ಅದರ ಬಗ್ಗೆ ಸಲ್ಮಾನ್ ಖಾನ್ ಫ್ಯಾನ್ಸ್ ಮಾತನಾಡುತ್ತಿದ್ದಾರೆ.

‘ಧುರಂಧರ್ 2’ ಸಿನಿಮಾದಲ್ಲಿ ಸಲ್ಮಾನ್ ಖಾನ್? ವೈರಲ್ ಆಗಿದೆ ಫೋಟೋ
Viral Photo, Ranveer Singh
ಮದನ್​ ಕುಮಾರ್​
|

Updated on:Feb 04, 2026 | 3:35 PM

Share

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ‘ಧುರಂಧರ್ 2’ (Dhurandhar 2) ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಈ ಸಿನಿಮಾದಲ್ಲಿ ರಣವೀರ್ ಸಿಂಗ್, ಸಂಜಯ್ ದತ್, ಸಾರಾ ಅರ್ಜುನ್, ಅಕ್ಷಯ್ ಖನ್ನಾ, ಅರ್ಜುನ್ ರಾಮ್​​ಪಾಲ್ ಮುಂತಾದವರು ನಟಿಸಿದ್ದಾರೆ. ಮಾರ್ಚ್ 19ರಂದು ಈ ಚಿತ್ರ ರಿಲೀಸ್ ಆಗಲಿದೆ. ಸಿನಿಮಾದ ಪಾತ್ರವರ್ಗದ ಬಗ್ಗೆ ಹಲವು ಗಾಸಿಪ್ ಕೇಳಿಬರುತ್ತಿದೆ. ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ (Salman Khan) ಕೂಡ ‘ಧುರಂಧರ್ 2’ ಸಿನಿಮಾದಲ್ಲಿ ನಟಿಸಿದ್ದಾರೆ ಎಂಬ ಹೇಳಲಾಗುತ್ತಿದೆ. ಆದರೆ ಈ ಸುದ್ದಿಯನ್ನು ಚಿತ್ರತಂಡ ಖಚಿತಪಡಿಸಿಲ್ಲ.

‘ಧುರಂಧರ್ 2’ ಸಿನಿಮಾಗೆ ಆದಿತ್ಯ ಧಾರ್ ಅವರು ನಿರ್ದೇಶನ ಮಾಡಿದ್ದಾರೆ. ಅವರು ಈ ಹಿಂದೆ ‘ಉರಿ: ದಿ ಸರ್ಜಿಕಲ್ ಸ್ಟ್ರೈಕ್’ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿದ್ದರು. ‘ಉರಿ’ ಸಿನಿಮಾದಲ್ಲಿ ನಟಿಸಿದ್ದ ಯಾಮಿ ಗೌತಮ್ ಮತ್ತು ವಿಕ್ಕಿ ಕೌಶಲ್ ಅವರು ‘ಧುರಂಧರ್ 2’ ಚಿತ್ರದಲ್ಲಿ ಇರಲಿದ್ದಾರೆ ಎಂಬ ಗಾಸಿಪ್ ಈಗಾಗಲೇ ಹಬ್ಬಿದೆ. ಅದರ ಜೊತೆಗೆ ಸಲ್ಮಾನ್ ಖಾನ್ ಹೆಸರು ಕೂಡ ಕೇಳಿಬರುತ್ತಿದೆ.

ಕಳೆದ ವರ್ಷ ಬಿಡುಗಡೆ ಆಗಿ ಬ್ಲಾಕ್​ ಬಸ್ಟರ್ ಹಿಟ್ ಆದ ‘ಧುರಂಧರ್’ ಸಿನಿಮಾದಲ್ಲಿ ಬಡೇ ಸಾಬ್ ಎಂಬ ಪಾತ್ರದ ಬಗ್ಗೆ ಉಲ್ಲೇಖ ಮಾಡಲಾಗಿದೆ. ಆ ಪಾತ್ರವು ‘ಧುರಂಧರ್ 2’ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದೆ. ಅಭಿಮಾನಿಗಳಿಗೆ ಬಡೇ ಸಾಬ್ ಬಗ್ಗೆ ಬಾರಿ ಕೌತುಕ ಇದೆ. ಸಲ್ಮಾನ್ ಖಾನ್ ಅವರು ಬಡೇ ಸಾಬ್ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬುದು ಗಾಸಿಪ್ ಮಂದಿಯ ವಾದ.

ಸಲ್ಮಾನ್ ಖಾನ್ ಅವರ ಒಂದು ಫೋಟೋ ವೈರಲ್ ಆಗುತ್ತಿದೆ. ಇದು ‘ಧುರಂಧರ್ 2’ ಸಿನಿಮಾದ ಶೂಟಿಂಗ್ ಸಂದರ್ಭದಲ್ಲಿ ತೆಗೆದ ಫೋಟೋ ಎಂದು ಹೇಳಲಾಗುತ್ತಿದೆ. ಆದರೆ ಇದನ್ನು ಹಲವರು ನಂಬಿಲ್ಲ. ಇದು ಎಐ ಫೋಟೋ ಎಂದು ಅನೇಕರು ಕಮೆಂಟ್ ಮಾಡುತ್ತಿದ್ದಾರೆ. ‘ಸಲ್ಮಾನ್ ಖಾನ್ ಅವರ ಅಭಿಮಾನಿಗಳು ಏನು ಬೇಕಾದರೂ ಮಾಡುತ್ತಾರೆ’ ಎಂಬ ಕಮೆಂಟ್ ಕೂಡ ಬಂದಿದೆ.

ಇದನ್ನೂ ಓದಿ: ಒಟಿಟಿಯಲ್ಲಿ ‘ಧುರಂಧರ್’ ನೋಡಿ ಮೆಚ್ಚಿಕೊಂಡ ಪಾಕಿಸ್ತಾನಿ ಪ್ರೇಕ್ಷಕರು

ಒಂದು ವೇಳೆ ಸಲ್ಮಾನ್ ಖಾನ್ ಅವರು ‘ಧುರಂಧರ್ 2’ ಸಿನಿಮಾದಲ್ಲಿ ನಟಿಸಿದ್ದೇ ಹೌದಾದರೆ ಬಾಕ್ಸ್ ಆಫೀಸ್​​ನಲ್ಲಿ ದೊಡ್ಡ ದಾಖಲೆ ಸೃಷ್ಟಿ ಆಗಲಿದೆ ಎಂದು ಫ್ಯಾನ್ಸ್ ಹೇಳುತ್ತಿದ್ದಾರೆ. ಪಾತ್ರವರ್ಗದಲ್ಲಿ ಸಲ್ಮಾನ್ ಖಾನ್ ಇದ್ದಾರೋ ಅಥವಾ ಇಲ್ಲವೋ ಎಂಬುದನ್ನು ಚಿತ್ರತಂಡದವರೇ ಸ್ಪಷ್ಟಪಡಿಸಬೇಕಿದೆ. ಇತ್ತೀಚೆಗೆ ‘ಧುರಂಧರ್ 2’ ಸಿನಿಮಾದ ಟೀಸರ್ ಮತ್ತು ಫಸ್ಟ್ ಲುಕ್ ಬಿಡುಗಡೆ ಆಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 3:34 pm, Wed, 4 February 26

ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು
SSLC ವಿದ್ಯಾರ್ಥಿಗಳ ಪರೀಕ್ಷೆ ಮುಗಿಯುವವರೆಗೂ ಟಿವಿ–ಮೊಬೈಲ್ ಆಫ್!
SSLC ವಿದ್ಯಾರ್ಥಿಗಳ ಪರೀಕ್ಷೆ ಮುಗಿಯುವವರೆಗೂ ಟಿವಿ–ಮೊಬೈಲ್ ಆಫ್!
ಮೊಬೈಲ್ ಕದ್ದು ಬಸ್ಸಿನ ಕಿಟಕಿಯಿಂದ ಜಾರಿಕೊಳ್ಳುವ ಕಳ್ಳನ ಪ್ಲ್ಯಾನ್ ಫ್ಲಾಪ್
ಮೊಬೈಲ್ ಕದ್ದು ಬಸ್ಸಿನ ಕಿಟಕಿಯಿಂದ ಜಾರಿಕೊಳ್ಳುವ ಕಳ್ಳನ ಪ್ಲ್ಯಾನ್ ಫ್ಲಾಪ್
ಗಟ ಗಟನೆ ಚರಂಡಿ ನೀರು ಕುಡಿದ ಹಣ್ಣಿನ ವ್ಯಾಪಾರಿ
ಗಟ ಗಟನೆ ಚರಂಡಿ ನೀರು ಕುಡಿದ ಹಣ್ಣಿನ ವ್ಯಾಪಾರಿ