AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

12 ಗಂಟೆ ವಿಚಾರಣೆಗೆ ಒಳಗಾದ ವಿಜಯ್ ದೇವರಕೊಂಡ; ‘ಇದು ಸೈಡ್​ ಎಫೆಕ್ಟ್​’ ಎಂದ ನಟ

‘ಲೈಗರ್’ ಸಿನಿಮಾಗೆ ಹೂಡಿಕೆ ಮಾಡಿದ ಹಣದ ವಿಚಾರದಲ್ಲಿ ಇಡಿ ಅಧಿಕಾರಿಗಳಿಗೆ ಅನುಮಾನ ಬಂದಿದೆ. ಕೆಲ ನಿಯಮಗಳನ್ನು ನಿರ್ಮಾಪಕರು ಉಲ್ಲಂಘನೆ ಮಾಡಿದ್ದಾರೆ. ಈ ಸಿನಿಮಾದಲ್ಲಿ ವಿಜಯ್ ದೇವರಕೊಂಡ ಅವರ ಪಾಲು ಕೂಡ ಇದೆ ಎನ್ನಲಾಗುತ್ತಿದೆ.

12 ಗಂಟೆ ವಿಚಾರಣೆಗೆ ಒಳಗಾದ ವಿಜಯ್ ದೇವರಕೊಂಡ; ‘ಇದು ಸೈಡ್​ ಎಫೆಕ್ಟ್​’ ಎಂದ ನಟ
ವಿಜಯ್ ದೇವರಕೊಂಡ
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Dec 01, 2022 | 12:28 PM

Share

‘ಲೈಗರ್​’ ಸಿನಿಮಾ (Liger Movie) ಆಗಸ್ಟ್ ತಿಂಗಳಲ್ಲಿ ತೆರೆಗೆ ಬಂತು. ಈ ಚಿತ್ರ ಸೂಪರ್ ಹಿಟ್ ಆಗಲಿದೆ ಎಂದು ವಿಜಯ್ ದೇವರಕೊಂಡ ಭಾವಿಸಿದ್ದರು. ಆದರೆ, ಅದು ಉಲ್ಟಾ ಆಯಿತು. ಈ ಚಿತ್ರ ಫ್ಲಾಪ್ ಆಯಿತು. ಅಷ್ಟೇ ಅಲ್ಲ, ಈ ಸಿನಿಮಾ ವಿವಾದಗಳನ್ನು ಕೂಡ ಹುಟ್ಟುಹಾಕಿತು. ಈಗ ಸಿನಿಮಾ ಹೂಡಿಕೆಗೆ ಸಂಬಂಧಿಸಿ ನಿರ್ದೇಶಕ ಪುರಿ ಜಗನ್ನಾಥ್ (Puri Jagannadh) ಹಾಗೂ ನಟ ವಿಜಯ್ ದೇವರಕೊಂಡ ಸಮಸ್ಯೆ ಎದುರಿಸಿದ್ದಾರೆ. ವಿಜಯ್ ದೇವರಕೊಂಡ ಅವರು ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಎದುರು ಹಾಜರಾಗಿದ್ದು, ವಿಚಾರಣೆಗೆ ಒಳಪಟ್ಟಿದ್ದಾರೆ. ಬರೋಬ್ಬರಿ 12 ಗಂಟೆಗಳ ಕಾಲ ಅವರು ವಿಚಾರಣೆ ಎದುರಿಸಿದ್ದಾರೆ.

‘ಲೈಗರ್’ ಸಿನಿಮಾಗೆ ಹೂಡಿಕೆ ಮಾಡಿದ ಹಣದ ವಿಚಾರದಲ್ಲಿ ಇಡಿ ಅಧಿಕಾರಿಗಳಿಗೆ ಅನುಮಾನ ಬಂದಿದೆ. ಕೆಲ ನಿಯಮಗಳನ್ನು ನಿರ್ಮಾಪಕರು ಉಲ್ಲಂಘನೆ ಮಾಡಿದ್ದಾರೆ. ಈ ಸಿನಿಮಾದಲ್ಲಿ ವಿಜಯ್ ದೇವರಕೊಂಡ ಅವರ ಪಾಲು ಕೂಡ ಇದೆ ಎನ್ನಲಾಗುತ್ತಿದೆ. ಈ ಎಲ್ಲಾ ವಿಚಾರಗಳಲ್ಲಿ ವಿಜಯ್ ದೇವರಕೊಂಡ ಅವರು ವಿಚಾರಣೆ ಎದುರಿಸಿದ್ದಾರೆ. ನವೆಂಬರ್ 30ರ ರಾತ್ರಿ ಇಡಿ ವಿಚಾರಣೆಗೆ ತೆರಳಿದ್ದ ಅವರು ಇಂದು (ಡಿಸೆಂಬರ್ 1) ಬೆಳಗ್ಗೆ 8.30ರ ಸುಮಾರಿಗೆ ಕಚೇರಿಯಿಂದ ಹೊರ ನಡೆದಿದ್ದಾರೆ. ಸಿನಿಮಾ ಹೂಡಿಕೆಗೆ ಸಂಬಂಧಿಸಿ ಅವರನ್ನು ಪ್ರಶ್ನೆ ಮಾಡಲಾಗಿದೆ ಎನ್ನಲಾಗಿದೆ.

‘ಜನಪ್ರಿಯತೆಯಿಂದ ಕೆಲವು ತೊಂದರೆಗಳು ಮತ್ತು ಸೈಡ್​ ಎಫೆಕ್ಟ್​​ಗಳು ಉಂಟಾಗುತ್ತವೆ. ಇದೊಂದು ಅನುಭವ. ಇದೇ ಜೀವನ. ಅಧಿಕಾರಿಗಳು ಕರೆದಾಗ ನನ್ನ ಡ್ಯೂಟಿ ಮಾಡಿದ್ದೇನೆ. ಪ್ರಶ್ನೆಗಳಿಗೆ ಉತ್ತರಿಸಿದೆ. ಅವರು ಮತ್ತೆ ನನ್ನನ್ನು ಕರೆಯುವುದಿಲ್ಲ’ ಎಂದು ವಿಜಯ್ ದೇವರಕೊಂಡ ಹೇಳಿರುವುದಾಗಿ ಎನ್​ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ
Image
Rashmika Mandanna: ಎದೆ ಮೇಲೆ ಆಟೋಗ್ರಾಫ್​ ಹಾಕಿ ಅಂತ ಹಠ ಹಿಡಿದ ರಶ್ಮಿಕಾ ಮಂದಣ್ಣ ಅಭಿಮಾನಿ; ಮುಂದೇನಾಯ್ತು?
Image
Rashmika Mandanna: ‘ಇಂದು ನಾನೇ ಗೋಲ್ಡನ್​ ಗರ್ಲ್​’ ಅಂತ ಪೋಸ್​ ನೀಡಿದ ರಶ್ಮಿಕಾ ಮಂದಣ್ಣ; ಆದ್ರೆ ಜನ ಹೇಳಿದ್ದೇನು?
Image
Rashmika Mandanna: ಬಾಲಿವುಡ್​ ಸೇರಿದ ರಶ್ಮಿಕಾ ಮಂದಣ್ಣ ಹೊಸ ಅವತಾರ ಹೇಗಿದೆ ನೋಡಿ; ಫೋಟೋ ವೈರಲ್​
Image
Rashmika Mandanna: ಸೆಲ್ಫಿ ಕೇಳಿದ ಅಭಿಮಾನಿಗಳ ಜತೆ ರಶ್ಮಿಕಾ ಮಂದಣ್ಣ ನಡೆದುಕೊಂಡಿದ್ದು ಹೇಗೆ? ವಿಡಿಯೋ ವೈರಲ್​

‘ಲೈಗರ್’ ಚಿತ್ರಕ್ಕೆ ಚಾರ್ಮಿ ಕೌರ್ ಕೂಡ ಬಂಡವಾಳ ಹೂಡಿದ್ದಾರೆ. ಅವರಿಗೆ ಈಗಾಗಲೇ ಇಡಿ ಅಧಿಕಾರಿಗಳಿಂದ ನೋಟಿಸ್ ಕಳುಹಿಸಲಾಗಿತ್ತು. ಅವರು ಇತ್ತೀಚೆಗೆ ವಿಚಾರಣೆಗೆ ಹಾಜರಾಗಿದ್ದರು. ಇಡಿ ಅಧಿಕಾರಿಗಳು ಕೇಳಿದ ಪ್ರಶ್ನೆಗೆ ಅವರು ಉತ್ತರ ನೀಡಿದ್ದರು.

ವಿಜಯ್ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ನಟನೆಯ ‘ಲೈಗರ್​’ ಚಿತ್ರಕ್ಕೆ 120 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಈ ಸಿನಿಮಾ ಮಾಡಿದ ಗಳಿಕೆ ತುಂಬಾನೇ ಕಡಿಮೆ. ಇದರಿಂದ ನಿರ್ಮಾಪಕರು ನಷ್ಟ ಅನುಭವಿಸಿದ್ದಾರೆ. ಜತೆಗೆ ಇಡಿ ವಿಚಾರಣೆಯ ಬಿಸಿಯೂ ತಟ್ಟಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:13 pm, Thu, 1 December 22

ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು