AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕುಲ್ ಪ್ರೀತ್ ಸಿಂಗ್ ಹಾಗೂ ವಾಸು ಭಗ್ನಾನಿ ನಿವಾಸಗಳ ಮೇಲೆ ಐಟಿ ದಾಳಿ: ದೃಶ್ಯಂ 3 ನಿರ್ಮಾಪಕರಿಗೂ ಸಂಕಷ್ಟ

ಬಾಲಿವುಡ್ ನಟಿ ರಕುಲ್ ಪ್ರೀತ್ ಸಿಂಗ್ ಹಾಗೂ ನಿರ್ಮಾಪಕ ವಾಸು ಭಗ್ನಾನಿ ಅವರ ನಿವಾಸಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. ಸಿನಿಮಾ ಹಣಕಾಸು ವ್ಯವಹಾರದಲ್ಲಿ ಅಕ್ರಮ ವಹಿವಾಟು ನಡೆದಿದೆ ಎಂಬ ಅನುಮಾನದ ಮೇಲೆ ಮುಂಬೈನ 12 ಕಡೆಗಳಲ್ಲಿ ಐಟಿ ಅಧಿಕಾರಿಗಳು ಸತತ ಶೋಧ ನಡೆಸುತ್ತಿದ್ದಾರೆ.

ರಕುಲ್ ಪ್ರೀತ್ ಸಿಂಗ್ ಹಾಗೂ ವಾಸು ಭಗ್ನಾನಿ ನಿವಾಸಗಳ ಮೇಲೆ ಐಟಿ ದಾಳಿ: ದೃಶ್ಯಂ 3 ನಿರ್ಮಾಪಕರಿಗೂ ಸಂಕಷ್ಟ
ರಕುಲ್- ವಾಸು ಭಗ್ನಾನಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 29, 2026 | 8:09 AM

Share

ಬಾಲಿವುಡ್‌ನ ಪ್ರಖ್ಯಾತ ನಟಿ ರಕುಲ್ ಪ್ರೀತ್ ಸಿಂಗ್ ಹಾಗೂ ಅವರ ಮಾವ ವಾಸು ಭಗ್ನಾನಿ ಅವರಿಗೆ ಆದಾಯ ತೆರಿಗೆ ಇಲಾಖೆ ಬಿಗ್ ಶಾಕ್ ನೀಡಿದೆ. ಮುಂಬೈನ ವಿವಿಧ ಭಾಗಗಳಲ್ಲಿರುವ ಇವರ ಆಸ್ತಿಪಾಸ್ತಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಶೋಧ ಕಾರ್ಯ ಕೈಗೊಂಡಿದ್ದಾರೆ. ಪ್ರಸಿದ್ಧ ‘ಪನೋರಮಾ ಸ್ಟುಡಿಯೋಸ್’ ಮೇಲೆಯೂ ದಾಳಿಗಳು ನಡೆದಿವೆ. ಚಿತ್ರ ನಿರ್ಮಾಣದ ಹಣಕಾಸು ವ್ಯವಹಾರಗಳಲ್ಲಿ ಅಕ್ರಮ ನಡೆದಿದೆ ಎನ್ನುವ ಅನುಮಾನದ ಮೇರೆಗೆ ಈ ದಾಳಿ ಮಾಡಲಾಗಿದೆ.

ವರದಿಗಳ ಪ್ರಕಾರ ಮುಂಬೈ ಆದಾಯ ತೆರಿಗೆ ಇಲಾಖೆಯು ಒಟ್ಟು 12 ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸುತ್ತಿದೆ. ಪ್ರಮುಖವಾಗಿ ವಿದೇಶಗಳಿಗೆ ಅಕ್ರಮವಾಗಿ ಹಣ ರವಾನಿಸಿರುವ ಆರೋಪದ ಮೇಲೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಚಿತ್ರ ನಿರ್ಮಾಣದ ನೆಪದಲ್ಲಿ ವಿದೇಶಗಳಿಗೆ ತಲುಪಿರುವ ಹಣದ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.

ಮುಂಬೈನ ಹಲವು ತಂಡಗಳು ಈ ದಾಳಿಯಲ್ಲಿ ಭಾಗವಹಿಸಿವೆ. ಪ್ರಮುಖ ಹಣಕಾಸು ದಾಖಲೆಗಳು ಹಾಗೂ ವಹಿವಾಟಿನ ವಿವರಗಳನ್ನು ತನಿಖಾಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಕುಮಾರ್ ಮಂಗತ್ ಪಾಠಕ್ ಒಡೆತನದ ‘ಪನೋರಮಾ ಸ್ಟುಡಿಯೋಸ್’ ಮೇಲೆಯೂ ಅಧಿಕಾರಿಗಳು ಕಣ್ಣಿಟ್ಟಿದ್ದಾರೆ. ಈ ಸಂಸ್ಥೆಯು ಅಜಯ್ ದೇವಗನ್ ಅಭಿನಯದ ‘ದೃಶ್ಯಂ 3’ ಚಿತ್ರವನ್ನು ನಿರ್ಮಿಸಿದೆದೆ. ಈ ಸಿನಿಮಾ ಅಕ್ಟೋಬರ್ 2ರಂದು ತೆರೆಗೆ ಬರುತ್ತಿದೆ.

ರಕುಲ್ ಪ್ರೀತ್ ಸಿಂಗ್ ಕುಟುಂಬಕ್ಕೆ ಈ ರೀತಿಯ ತನಿಖೆ ಹೊಸದೇನಲ್ಲ. ಕಳೆದ ವರ್ಷ ರಕುಲ್ ಸಹೋದರ ಅಮನ್ ಪ್ರೀತ್ ಸಿಂಗ್ ಡ್ರಗ್ಸ್ ಪ್ರಕರಣದಲ್ಲಿ ಸುದ್ದಿಯಾಗಿದ್ದರು. ಡ್ರಗ್ಸ್ ಜಾಲದ ಜೊತೆಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಮುಂಬೈ ಪೊಲೀಸರು ಅವರ ಹುಡುಕಾಟ ನಡೆಸಿದ್ದರು.

ಇದನ್ನೂ ಓದಿ: ಬಾಲಿವುಡ್‌ನ ಮುಖವಾಡ ಬಿಚ್ಚಿಟ್ಟ ರಕುಲ್ ಪ್ರೀತ್ ಸಿಂಗ್: ಬಿಟೌನ್ ಮಂದಿಗೆ ಬರೀ ಅಸೂಯೆ

ಇನ್ನು ಸಿನಿಮಾಗಳ ವಿಷಯಕ್ಕೆ ಬಂದರೆ ರಕುಲ್ ಪ್ರೀತ್ ಸಿಂಗ್ ನಿತೀಶ್ ತಿವಾರಿ ನಿರ್ದೇಶನದ ‘ರಾಮಾಯಣ’ ಚಿತ್ರದಲ್ಲಿ ಶೂರ್ಪಣಖಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ವಾಸು ಭಗ್ನಾನಿ ಅವರ ‘ಪೂಜಾ ಫಿಲ್ಮ್ಸ್’ ಸಂಸ್ಥೆಯನ್ನು ಈಗ ಅವರ ಮಗ ಜಾಕಿ ಭಗ್ನಾನಿ ಮುನ್ನಡೆಸುತ್ತಿದ್ದಾರೆ. ಈ ಆದಾಯ ತೆರಿಗೆ ದಾಳಿಯು ಬಾಲಿವುಡ್ ಚಿತ್ರರಂಗದಲ್ಲಿ ತೀವ್ರ ಸಂಚಲನ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!