Jacqueline Fernandez: ವಿವಾದಗಳನ್ನು ಮರೆತು ಮುಂಬೈನಲ್ಲಿ ಐಷಾರಾಮಿ ಮನೆ ಖರೀದಿಸಿದ ಜಾಕ್ವೆಲಿನ್ ಫರ್ನಾಂಡಿಸ್

ಬಾಂದ್ರಾದಲ್ಲಿ ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ವಾಸವಾಗಿದ್ದಾರೆ. ಇಲ್ಲಿ ಮನೆ ಹೊಂದಬೇಕು ಅನ್ನೋದು ಅನೇಕ ಸೆಲೆಬ್ರಿಟಿಗಳ ಆಸೆ. ಈ ಕಾರಣಕ್ಕೆ ಜಾಕ್ವೆಲಿನ್ ಬಾಂದ್ರಾದಲ್ಲಿ ಮನೆ ಖರೀದಿ ಮಾಡಿದ್ದಾರೆ.

Jacqueline Fernandez: ವಿವಾದಗಳನ್ನು ಮರೆತು ಮುಂಬೈನಲ್ಲಿ ಐಷಾರಾಮಿ ಮನೆ ಖರೀದಿಸಿದ ಜಾಕ್ವೆಲಿನ್ ಫರ್ನಾಂಡಿಸ್
ಜಾಕ್ವೆಲಿನ್
Follow us
ರಾಜೇಶ್ ದುಗ್ಗುಮನೆ
|

Updated on: Jul 03, 2023 | 7:10 AM

ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಅವರು ಸಾಲು ಸಾಲು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಸುಕೇಶ್ ಚಂದ್ರಶೇಖರ್ (Sukesh Chandrashekhar) ಎಸಗಿದ್ದ 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್ ಅವರ ಹೆಸರು ಕೇಳಿ ಬಂದಿದೆ. ಈಗಾಗಲೇ ಸಾಕಷ್ಟು ಬಾರಿ ಅವರು ವಿಚಾರಣೆ ಎದುರಿಸಿ ಬಂದಿದ್ದಾರೆ. ಇವೆಲ್ಲವೂ ಅವರ ವೃತ್ತಿಜೀವನದ ಮೇಲೆ ಪ್ರಭಾವ ಬೀರಲಿದೆ ಎಂದು ಹೇಳಲಾಗಿತ್ತು. ಆದರೆ, ಆ ರೀತಿ ಆಗಲಿಲ್ಲ. ಅವರಿಗೆ ಬರುತ್ತಿರುವ ಆಫರ್ ಕಡಿಮೆ ಆಗಿಲ್ಲ. ಈ ಮಧ್ಯೆ ಅವರು ಹೊಸ ಸುದ್ದಿ ನೀಡಿದ್ದಾರೆ. ಜಾಕ್ವೆಲಿನ್ ಫರ್ನಾಂಡಿಸ್ ಅವರು ಮುಂಬೈನ ಬಾಂದ್ರಾದಲ್ಲಿ ಐಷಾರಾಮಿ ಮನೆ ಖರೀದಿ ಮಾಡಿದ್ದಾರೆ. ಇದರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ನಟಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ.

ಬಾಂದ್ರಾದಲ್ಲಿ ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ವಾಸವಾಗಿದ್ದಾರೆ. ಇಲ್ಲಿ ಮನೆ ಹೊಂದಬೇಕು ಅನ್ನೋದು ಅನೇಕ ಸೆಲೆಬ್ರಿಟಿಗಳ ಆಸೆ. ಈ ಕಾರಣಕ್ಕೆ ಜಾಕ್ವೆಲಿನ್ ಬಾಂದ್ರಾದಲ್ಲಿ ಮನೆ ಖರೀದಿ ಮಾಡಿದ್ದಾರೆ. ಈ ಮೊದಲು ಜಾಕ್ವೆಲಿನ್ ಅವರು ಜುಹುದಲ್ಲಿ ವಾಸವಾಗಿದ್ದರು. ಈಗ ಹೊಸ ಮನೆಗೆ ಶಿಫ್ಟ್ ಆಗಿದ್ದಾರೆ. ಅವರ ಮನೆಯ ಫೋಟೋಗಳು ವೈರಲ್ ಆಗಿವೆ.

ಬಾಂದ್ರಾದಲ್ಲಿ ಸೈಫ್ ಅಲಿ ಖಾನ್, ಕರೀನಾ ಕಪೂರ್, ರಣಬೀರ್ ಕಪೂರ್, ಆಲಿಯಾ ಭಟ್ ಸೇರಿ ಅನೇಕ ಸೆಲೆಬ್ರಿಟಿಗಳು ವಾಸವಾಗಿದ್ದಾರೆ. ಈ ಸಾಲಿಗೆ ಈಗ ಜಾಕ್ವೆಲಿನ್ ಕೂಡ ಸೇರ್ಪಡೆ ಆಗಿದ್ದಾರೆ. ಐಷಾರಾಮಿ ಅಪಾರ್ಟ್​​ಮೆಂಟ್​ನಲ್ಲಿ ಅವರು ಫ್ಲ್ಯಾಟ್ ಖರೀದಿಸಿದ್ದಾರೆ.

ಪಾಪರಾಜಿಗಳು ಸೋಶಿಯಲ್ ಮೀಡಿಯಾದಲ್ಲಿ ಅಪಾರ್ಟ್​ಮೆಂಟ್​ನ ವಿಡಿಯೋ ಹಂಚಿಕೊಂಡಿದ್ದಾರೆ. ಜಿಮ್, ಬಾಲ್ಕನಿ ಮತ್ತಿತರ ಸೌಲಭ್ಯಗಳನ್ನು ಇದು ಹೊಂದಿದೆ. ಈ ಅಪಾರ್ಟ್​ಮೆಂಟ್​ನಲ್ಲಿ 12 ಕೋಟಿ ರೂಪಾಯಿಯಿಂದ ಫ್ಲ್ಯಾಟ್​ಗಳ ಬೆಲೆ ಆರಂಭ ಆಗುತ್ತದೆ. ಜಾಕ್ವೆಲಿನ್ ಅವರು ಈಗಾಗಲೇ ಹೊಸ ಮನೆಗೆ ತೆರಳಿದ್ದಾರೋ ಅಥವಾ ಇಲ್ಲವೋ ಎಂಬುದು ಇನ್ನೂ ಖಚಿತವಾಗಿಲ್ಲ.

ಇದನ್ನೂ ಓದಿ: Jacqueline Fernandez: 200 ಕೋಟಿ ರೂ. ವಂಚನೆ ಕೇಸ್​ನ ಚಿಂತೆ ಬಿಟ್ಟು ವಿದೇಶಕ್ಕೆ ಹಾರಲಿರುವ ಜಾಕ್ವೆಲಿನ್​ ಫರ್ನಾಂಡಿಸ್​

ಜಾಕ್ವೆಲಿನ್ ಫರ್ನಾಂಡಿಸ್ ಅವರು ಸುಕೇಶ್ ಚಂದ್ರಶೇಖರ್ ಜೊತೆ ಫ್ರೆಂಡ್​ಶಿಪ್ ಬೆಳೆಸಿಕೊಂಡಿದ್ದರು. ಇಬ್ಬರೂ ಡೇಟ್ ಮಾಡಿದ್ದಾರೆ ಎನ್ನಲಾಗಿದೆ. ಇವರು ಆಪ್ತವಾಗಿರುವ ಫೋಟೋಗಳನ್ನು ಸುಕೇಶ್ ಹಂಚಿಕೊಂಡಿದ್ದರು. ಇದರಿಂದ ಅವರಿಗೆ ತೊಂದರೆ ಹೆಚ್ಚಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ