Jacqueline Fernandez: 200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್​ಗೆ ಜಾಮೀನು; ಮುತ್ತಿಗೆ ಹಾಕಿಕೊಂಡ ಕ್ಯಾಮೆರಾಗಳು

Jacqueline Fernandez Case | Sukesh Chandrasekhar: ನ್ಯಾಯಾಲಯದಿಂದ ಹೊರಬರುವಾಗ ಜಾಕ್ವಲಿನ್​ ಫರ್ನಾಂಡಿಸ್​ ಅವರನ್ನು ಮಾಧ್ಯಮದ ಕ್ಯಾಮೆರಾಗಳು ಮುತ್ತಿಕೊಂಡವು. ಈ ಬಗ್ಗೆ ಜನಾಕ್ರೋಶ ವ್ಯಕ್ತವಾಗುತ್ತಿದೆ.

Jacqueline Fernandez: 200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್​ಗೆ ಜಾಮೀನು; ಮುತ್ತಿಗೆ ಹಾಕಿಕೊಂಡ ಕ್ಯಾಮೆರಾಗಳು
ಜಾಕ್ವೆಲಿನ್ ಫರ್ನಾಂಡಿಸ್
Follow us
TV9 Web
| Updated By: ಮದನ್​ ಕುಮಾರ್​

Updated on: Nov 16, 2022 | 1:26 PM

ಖ್ಯಾತಿ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ (Jacqueline Fernandez) ಅವರಿಗೆ ಸಣ್ಣ ರಿಲೀಫ್​ ಸಿಕ್ಕಿದೆ. 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಅವರು ಜಾಮೀನು ಪಡೆದುಕೊಂಡಿದ್ದಾರೆ. ದೆಹಲಿಯ ಪಟಿಯಾಲಾ ಕೋರ್ಟ್​ನಲ್ಲಿ ಅವರಿಗೆ ಬೇಲ್​ (Jacqueline Fernandez Bail) ಸಿಕ್ಕಿದೆ. ವಿಚಾರಣೆ ಮುಗಿಸಿ ಹೊರಬಂದ ಅವರನ್ನು ಅನೇಕರು ಮುತ್ತಿಕೊಂಡಿದ್ದಾರೆ. ಜಾಕ್ವೆಲಿನ್​ ಫರ್ನಾಂಡಿಸ್​ ಅವರಿಂದ ಪ್ರತಿಕ್ರಿಯೆ ಪಡೆಯಲು ಮತ್ತು ಅವರ ಫೋಟೋ, ವಿಡಿಯೋಗಳನ್ನು ಚಿತ್ರಿಸಲು ಮಾಧ್ಯಮದ ಕ್ಯಾಮೆರಾಗಳು ಮುಗಿಬಿದ್ದಿವೆ. ಈ ಸಂದರ್ಭದ ವಿಡಿಯೋ ವೈರಲ್​ ಆಗಿದೆ. ಸೋಶಿಯಲ್​ ಮೀಡಿಯಾದಲ್ಲಿ ಇದನ್ನು (Jacqueline Fernandez Viral Video) ನೋಡಿದ ನೆಟ್ಟಿಗರು ಖಾರವಾಗಿ ಪ್ರತಿಕ್ರಿಯಿಸುತ್ತಿದ್ದಾರೆ. ಇದು ಸರಿಯಾದ ನಡೆ ಅಲ್ಲ ಎಂದು ಛಾಟಿ ಬೀಸುತ್ತಿದ್ದಾರೆ.

ಬಾಲಿವುಡ್​ನಲ್ಲಿ ಹಾಯಾಗಿ ಸಿನಿಮಾ ಮಾಡಿಕೊಂಡಿದ್ದ ಜಾಕ್ವೆಲಿನ್​ ಫರ್ನಾಂಡಿಸ್​ ಅವರಿಗೆ ಸುಕೇಶ್ ಚಂದ್ರಶೇಖರ್​ ಸಹವಾಸದಿಂದ ಕಾನೂನಿನ ಸಂಕಷ್ಟ ಎದುರಾಗುವಂತಾಯಿತು. ಉದ್ಯಮಿಗಳಿಗೆ ಬರೋಬ್ಬರಿ 200 ಕೋಟಿ ರೂಪಾಯಿ ವಂಚಿಸಿದ ಆರೋಪ ಸುಕೇಶ್​ ಚಂದ್ರಶೇಖರ್​ ಮೇಲಿದೆ. ಅವರ ಜೊತೆ ಆಪ್ತವಾಗಿದ್ದರು ಮತ್ತು ಅನೇಕ ಗಿಫ್ಟ್​ಗಳನ್ನು ಪಡೆದಿದ್ದರು ಎಂಬ ಕಾರಣಕ್ಕೆ ಜಾಕ್ವೆಲಿನ್​ ಫರ್ನಾಂಡಿಸ್​ ಹೆಸರು ಕೂಡ ಈ ಪ್ರಕರಣದಲ್ಲಿ ತಳುಕು ಹಾಕಿಕೊಂಡಿದೆ. ತನಿಖಾಧಿಕಾರಿಗಳು ಹಲವು ಬಾರಿ ಜಾಕ್ವೆಲಿನ್​ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ನವೆಂಬರ್​ 15ರಂದು ಅವರಿಗೆ ಜಾಮೀನು ಸಿಕ್ಕಿದೆ.

ಇದನ್ನೂ ಓದಿ
Image
ಸುಕೇಶ್ ಚಂದ್ರಶೇಖರ್ ಬಹು ಕೋಟಿ​ ವಂಚನೆ ಪ್ರಕರಣ: ಜಾಕ್ವೆಲಿನ್ ಬಳಿಕ ನೋರಾಗೆ ಹೆಚ್ಚಿತು ಸಂಕಷ್ಟ
Image
ಸುಕೇಶ್ ಕಳ್ಳಾಟ ಜಾಕ್ವೆಲಿನ್​ಗೆ ಗೊತ್ತಿತ್ತು, ಆದರೂ ರಿಲೇಶನ್​ಶಿಪ್​ನಲ್ಲಿದ್ದರು; ಚಾರ್ಜ್​ಶೀಟ್​​ನಲ್ಲಿ ಅಚ್ಚರಿಯ ಉಲ್ಲೇಖ
Image
‘ವಿಕ್ರಾಂತ್ ರೋಣ’ ಸಿನಿಮಾ ಪ್ರಚಾರದ ಮಧ್ಯೆ ಇಡಿ ವಿಚಾರಣೆ ಎದುರಿಸಿದ ನಟಿ ಜಾಕ್ವೆಲಿನ್ ಫರ್ನಾಂಡಿಸ್​
Image
‘ದುಬೈಗೆ ಹೋಗಿ ಬರುತ್ತೇನೆ, ಅವಕಾಶ ನೀಡಿ’; ಕೋರ್ಟ್ ಮುಂದೆ ಅಲವತ್ತುಕೊಂಡ ಜಾಕ್ವೆಲಿನ್ ಫರ್ನಾಂಡಿಸ್

ತಮ್ಮ ಲೀಗಲ್​ ಟೀಮ್ ಸದಸ್ಯರ ಜೊತೆ ನ್ಯಾಯಾಲಯದಿಂದ ಹೊರಬರುವಾಗ ಜಾಕ್ವಲಿನ್​ ಫರ್ನಾಂಡಿಸ್​ ಅವರನ್ನು ಮಾಧ್ಯಮದವರು ಸುತ್ತುವರಿಸಿದ್ದಾರೆ. ಈ ಬಗ್ಗೆ ಜನಾಕ್ರೋಶ ವ್ಯಕ್ತವಾಗುತ್ತಿದೆ. ‘ಅವರಿಗೆ ಕನಿಷ್ಠ ಉಸಿರಾಡಲು ಬಿಡಿ..’ ಎಂದು ನೆಟ್ಟಿಗರು ಕಮೆಂಟ್​ ಮಾಡಿದ್ದಾರೆ. ವಂಚನೆ ಪ್ರಕರಣದಲ್ಲಿ ತಮ್ಮ ಮೇಲೆ ಕೇಳಿಬಂದಿರುವ ಆರೋಪಗಳು ಆಧಾರ ರಹಿತವಾಗಿವೆ ಎಂದು ಜಾಕ್ವಲಿನ್​ ಫರ್ನಾಂಡಿಸ್​ ವಾದ ಮಂಡಿಸುತ್ತಿದ್ದಾರೆ.

ಸುಕೇಶ್​ ಚಂದ್ರಶೇಖರ್​ ಮತ್ತು ಜಾಕ್ವೆಲಿನ್​ ಫರ್ನಾಂಡಿಸ್​ ಅವರು ತುಂಬ ಆಪ್ತವಾಗಿರುವ ಫೋಟೋಗಳು ಈ ಮೊದಲು ಲೀಕ್​ ಆಗಿದ್ದವು. ಸುಕೇಶ್​ ಅವರಿಂದ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಉಡುಗೊರೆಗಳನ್ನು ಜಾಕ್ವೆಲಿನ್​ ಪಡೆದುಕೊಂಡಿದ್ದರು. ಸುಕೇಶ್​ ನಡೆಸುವ ವ್ಯವಹಾರಗಳ ಬಗ್ಗೆ ನಟಿಗೆ ಮಾಹಿತಿ ಇತ್ತು ಎಂಬ ಆರೋಪ ಕೂಡ ಇದೆ. ಅಂತಿಮವಾಗಿ ಕೇಸ್​ ಏನಾಗಲಿದೆ ಎಂಬ ಕೌತುಕ ನಿರ್ಮಾಣ ಆಗಿದೆ.

ಜಾಕ್ವೆಲಿನ್​ ಫರ್ನಾಂಡಿಸ್​ ಅವರಿಗೆ ಚಿತ್ರರಂಗದಲ್ಲಿ ಸಖತ್​ ಬೇಡಿಕೆ ಇದೆ. ಬಾಲಿವುಡ್​ನಲ್ಲಿ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ‘ವಿಕ್ರಾಂತ್​ ರೋಣ’ ಚಿತ್ರದ ‘ರಾ ರಾ ರಕ್ಕಮ್ಮ..’ ಹಾಡಿಗೆ ಹೆಜ್ಜೆ ಹಾಕುವ ಮೂಲಕ ಕನ್ನಡದ ಪ್ರೇಕ್ಷಕರಿಗೂ ಅವರು ಪರಿಚಿತರಾಗಿದ್ದಾರೆ. ಸದ್ಯ ಅವರ ಕೈಯಲ್ಲಿ ಹಲವು ಆಫರ್​ಗಳಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್